Latest Updates
-
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ
Karnataka Rains: ರಣಭೀಕರ ಮಳೆ.. ಈ ಜಿಲ್ಲೆಯಲ್ಲಿ ರಜೆ ಘೋಷಣೆ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಎಲ್ಲೆಡೆ ಮುಂಗಾರು ಮಳೆ ಬಿರುಸುಗೊಂಡಿದ್ದು, ಹವಾಮಾನ ಇಲಾಖೆಯು ರಾಜ್ಯಾದ್ಯಂತ ಆಗಸ್ಟ್ 3 ರವರೆಗೆ ಭಾರೀ ಮಳೆಯಾಗಲಿದೆ (Karnataka Weather) ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದ್ದು, ಸಾರ್ವಜನಿಕರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೆಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಿಸಲಾಗಿದೆ. ಇಂದು ಎಲ್ಲೆಲ್ಲಿ ಭಾರೀ ಮಳೆಯಾಗಲಿದೆ (Karnataka Rain) ಮತ್ತು ಯಾವ ಜಿಲ್ಲೆಗಳಿಗೆ ಹೈ ಅಲರ್ಟ್ ಎಂಬುವುದನ್ನು ತಿಳಿಯೋಣ ಬನ್ನಿ.
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಭಾರೀ ಗಾಳಿ, ಮಳೆ ಮತ್ತು ಚಳಿಯಿಂದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೃಷ್ಣಾ, ತುಂಗಭದ್ರಾ, ಕಾವೇರಿ, ಶರಾವತಿ, ಭೀಮಾ ಸೇರಿ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮರದ ಕೊಂಬೆ ಬಿದ್ದು, ರುಕ್ಕಿಣಿ (57) ಎಂಬಾಕೆ ಮೃತಪಟ್ಟಿದ್ದಾರೆ. ತುಂಗಭದ್ರಾ ನದಿಯ ಪ್ರವಾಹದಿಂದಾಗಿ ಹಂಪಿ ಪುರಂದರ ದಾಸರ ಮಂಟಪ, ತುಂಗಾರತಿ ಸ್ಥಳ, ಸ್ನಾನ ಘಟ್ಟ ಮುಳುಗಿದೆ. ದಾವಣಗೆರೆಯ ಉಕ್ಕಡಗಾತ್ರಿ, ನಂಜನಗೂಡಿನ ಸ್ನಾನ ಘಟ್ಟ ಮುಳುಗಡೆಯಾಗಿದೆ. ಶೃಂಗೇರಿ, ಕುಕ್ಕೆಯಲ್ಲೂ ಪ್ರವಾಹ ಸ್ಥಿತಿಯಿದೆ.

ರಣಭೀಕರ ಮಳೆ.. ಈ ಜಿಲ್ಲೆಯಲ್ಲಿ ರಜೆ ಘೋಷಣೆ
ಮುಖ್ಯವಾಗಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ. ಅದರಂತೆ, ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳು ಬಂದ್ ಆಗಲಿವೆ. ಈಗಾಗಲೇ ಜಿಲ್ಲೆಯಾದ್ಯಂತ ವರುಣ ಅಪಾರ ಹಾನಿ ಸೃಷ್ಟಿಸಿದ್ದಾನೆ. ವಿದ್ಯುತ್ ಕಂಬಗಳು, ಮರಗಳು ಮತ್ತು ಮನೆಗಳು ಬಿದ್ದು ಹಾನಿ ಸಂಭವಿಸಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಈ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್?
ಆಗಸ್ಟ್ 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಇರಲಿದೆ. ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ, ರಸ್ತೆ ಸಂಚಾರಕ್ಕೆ ಅಡ್ಡಿ, ಭೂಕುಸಿತದಂತಹ ಸಮಸ್ಯೆಗಳು ಉಂಟಾಗಬಹುದು. ನದಿಪಾತ್ರದ ಜನರು ಎಚ್ಚರದಿಂದಿರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಲ್ಲಿಯೂ ಭಾರೀ ಮಳೆ?
ಆರೆಂಜ್ ಅಲರ್ಟ್ ಹೊರತಾಗಿ, ರಾಜ್ಯದ ಇತರೆ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ವಿಜಯಪುರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾರ್ವಜನಿಕರಿಗೆ ಸಲಹೆ ಏನು?
• ಮಳೆ ಹೆಚ್ಚಿರುವ ಪ್ರದೇಶಗಳಲ್ಲಿ ಅನಗತ್ಯ ಪ್ರಯಾಣ ಬೇಡ
• ನದಿ, ಕೆರೆ ಕಟ್ಟೆಗಳ ಬಳಿ ಹೋಗಬೇಡಿ
• ಮಳೆ ನೀರು ಹರಿಯುವ ತಗ್ಗು ಪ್ರದೇಶಗಳ ಬಗ್ಗೆ ಎಚ್ಚರ ವಹಿಸಿ
• ವಿದ್ಯುತ್ ಕಂಬಗಳು ಮತ್ತು ತಂತಿಗಳಿಂದ ದೂರವಿರಿ
• ಹವಾಮಾನ ಇಲಾಖೆಯ ಸಲಹೆಗಳನ್ನು ಗಮನಿಸಿ ಮತ್ತಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ.
ಒಟ್ಟಾರೆಯಾಗಿ, ರಾಜ್ಯದ ಕೆಲವು ಭಾಗಗಳಲ್ಲಿ ಮುಂಗಾರು ಮಳೆಯು ಉತ್ತಮವಾಗಿದ್ದು, ರೈತರಲ್ಲಿ ಮೊಗದಲ್ಲಿ ಸಂತಸ ತಂದಿದೆ. ಆದರೆ, ಮಳೆಯ ತೀವ್ರತೆ ಹೆಚ್ಚಿರುವ ಕಾರಣ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತಿ ಮುಖ್ಯ.



Click it and Unblock the Notifications












