Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
Karnataka Rains: ಒಂದು ವಾರ ಭಾರೀ ಮಳೆ; ಆರೆಂಜ್, ಯೆಲ್ಲೋ ಅಲರ್ಟ್.. ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆಗಳಲ್ಲಿ ಜುಲೈ 21 ರವರೆಗೂ ಭಾರೀ ಮಳೆಯಾಗಲಿದೆ (Karnataka Weather) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಜುಲೈ 17 ರಿಂದ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರೀ ಮಳೆಯಾಗುವ (Karnataka Rains) ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಹೈ ಅಲರ್ಟ್ ನೀಡಲಾಗಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕೇರಳದಲ್ಲಿ ತೀವ್ರ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನಿರಂತರ ಮಳೆಯ ಕಾರಣದಿಂದ ಬಂಟ್ವಾಳ ತಾಲ್ಲೂಕಿನಲ್ಲಿ ಎಲ್ಲಾ ಶಾಲೆಗಳಿಗೆ ಇಂದು (ಜುಲೈ 15 ರಂದು) ರಜೆ ಘೋಷಿಸಲಾಗಿದೆ. ಭೂ ಕುಸಿತ ಮತ್ತು ಭೂ ಪ್ರವಾಹಕ್ಕೊಳಗಾಗುವ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಈ ಜಿಲ್ಲೆಯಲ್ಲಿ ಶಾಲಾಗಳಿಗೆ ರಜೆ ಘೋಷಣೆ
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಉಳಿದೆಡೆ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಭಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಳಗ್ಗೆ 7 ಗಂಟೆಗೆ ನೌಕಾಸ್ಟ್ ಅಲರ್ಟ್ ಹೊರಡಿಸಿದೆ. ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ.
ಯಾವ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್
ಜುಲೈ 15ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ನೀಡಿದೆ. ಇದೇ ವೇಳೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಜುಲೈ 18 ರವರೆಗೂ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅತಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿ ಭಾರೀ ಮಳೆಯ ಕಾರಣದಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ.
ಜುಲೈ 16 ರಂದು ದಕ್ಷಿಣ ಕನ್ನಡ ಉಡುಪಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಇನ್ನು ಉತ್ತರ ಕನ್ನಡ , ಬೆಳಗಾವಿ, ಶಿವಮೊಗ್ಗ, ಕೊಡಗು, ಮೈಸೂರು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,, ಗದಗ, ಕೊಪ್ಪಳ, ಧಾರವಾಡ, ವಿಜಯಪುರ ಜಿಲ್ಲೆಗಳಿಗೆ ಭಾರಿ ಮಳೆಯ ಹಿನ್ನೆಲೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಸೋಮವಾರ ಕರಾವಳಿಯ ಬಹುತೇಕ ಕಡೆ, ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೋಟಾದಲ್ಲಿ 9 ಸೆಂ.ಮೀ., ಮಂಗಳೂರಿನಲ್ಲಿ 8 ಸೆಂ.ಮೀ., ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ.
ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಜುಲೈ 17 ರಿಂದ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಇಂದು ಮತ್ತು ನಾಳೆ (ಜುಲೈ 16) ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಆಗಾಗ್ಗೆ ನಗರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 7.0 ಮಿಮೀ ಮಳೆಯಾಗಿದೆ.
ಒಟ್ಟಾರೆ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯು ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಸುರಕ್ಷಿತವಾಗಿರುವಂತೆ ಸೂಚನೆ ನೀಡಲಾಗಿದೆ.



Click it and Unblock the Notifications

