Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ರಾಜ್ಯದಲ್ಲಿ 10 ದಿನ ಭಾರೀ ಮಳೆ! ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿದೆ. ಮುಂದಿನ 10 ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ಚಾಮರಾಜನಗರದಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಮಳೆ ಚುರುಕುಗೊಳ್ಳಲಿದೆ. ವಿಶೇಷವಾಗಿ, ಇಂದಿನಿಂದ (ಅಕ್ಟೋಬರ್ 22) ರಾಜ್ಯದ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉಳಿದ 24 ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿರುವುದರಿಂದ ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪರಿಣಾಮವಾಗಿ, ಅಕ್ಟೋಬರ್ 29ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ (Karnataka Weather) ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ರಾತ್ರಿ ವೇಳೆ ಈ ಪ್ರದೇಶಗಳಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಡೀ ವಾರ ಗುಡುಗು ಸಹಿತ ಮಳೆ
ಮಲೆನಾಡು ಪ್ರದೇಶಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆ ಇಡೀ ವಾರ ಮುಂದುವರಿಯಲಿದೆ. ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಇರಲಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.
ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ಬೀದರ್‌ನಲ್ಲಿ ವ್ಯಾಪಕ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಮತ್ತು ಮಂಡ್ಯದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆ ಮತ್ತು ಗಾಳಿಯ ಸಾಧ್ಯತೆ ಇದೆ. ಶೇ. 86ರಷ್ಟು ಮಳೆಯಾಗುವ ಸಂಭವವಿದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.
ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಮಳೆಯ ಜೊತೆಗೆ ಹೆಚ್ಚಿನ ವೇಗದ ಗಾಳಿ ಬೀಸುವ ಸಂಭವವಿರುವುದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುಂದಿನ ಮೂರು ದಿನಗಳ ಗ್ರಾಮ ಪಂಚಾಯತ್ ಮಟ್ಟದ ಹವಾಮಾನ ಮುನ್ಸೂಚನೆಯನ್ನು ಟ್ವೀಟ್ ಮಾಡಿದೆ. ಈ ಮುನ್ಸೂಚನೆಯು ಮೋಡ ಕವಿದ ವಾತಾವರಣ, ಸಾಪೇಕ್ಷ ಆರ್ದ್ರತೆ, ಮಳೆ, ತಾಪಮಾನ, ಮತ್ತು ಗಾಳಿಯ ದಿಕ್ಕು ಹಾಗೂ ವೇಗವನ್ನು ಒಳಗೊಂಡಿದೆ.



Click it and Unblock the Notifications
