Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
Karnataka Rains: ಇಂದು ಶಾಲಾ-ಕಾಲೇಜುಗಳಿಗೆ ರಜೆ! 1 ವಾರ ಮಳೆ ಆರ್ಭಟ; ಈ ಜಿಲ್ಲೆಗಳಿಗೆ ರೆಡ್ ಅಲರ್ಟ್
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಪ್ರದೇಶಗಳಲ್ಲಿ ಇಂದು (ಜುಲೈ 25) ಸಹ ವ್ಯಾಪಕ ಮಳೆಯಾಗುವ (Karnataka Rain) ಮನ್ಸೂಚನೆ ಇದೆ. ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಉಂಟಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಇಂದಿನಿಂದ ಜುಲೈ 27 ರವರೆಗೆ ಭಾರೀ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಇದರ ಪರಿಣಾಮವಾಗಿ ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಒಂದು ವಾರದವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಭಾರಿ ಮಳೆಯಿಂದಾಗಿ ಮುಲ್ಕಿಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ, ಆದೇಶ ಹೊರಡಿಸಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಬಂಟ್ವಾಳ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲೂ ರಜೆ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು (ಜುಲೈ 25) ಕೆಲವು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿದ್ದಾರೆ. ನದಿ ತೀರ, ತಗ್ಗು ಪ್ರದೇಶ, ಬೆಟ್ಟ ಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ.
ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿಯೂ ಶಾಲೆ ಬಂದ್
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆರಾಯ ಅಬ್ಬರ ಮುಂದುವರಿದಿದೆ. ಈ ಕಾರಣದಿಂದ ಇಂದು (ಜುಲೈ 25) ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ಮಾತ್ರ ರಜೆ ಘೋಷಿಸಿ, ದಂಡಾಧಿಕಾರಿಗಳು ಆದೇಶ ಹೊಡಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತಹಶೀಲ್ದಾರ್ ರಾಮಚಂದ್ರಪ್ಪ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಯಾವ ಜಿಲ್ಲೆಗೆ ರೆಡ್, ಆರೆಂಜ್ ಅಲರ್ಟ್
ಮುಂದಿನ ಒಂದು ವಾರದವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಉಳಿದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಕೆಲ ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಒಟ್ಟಾರೆಯಾಗಿ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯು ಕರಾವಳಿ ಮತ್ತು ಒಳನಾಡು ಸೇರಿದಂತೆ 7 ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.



Click it and Unblock the Notifications

