Latest Updates
-
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್!
ಮೂರು ದಿನ ಅತಿ ಭಾರೀ ಮಳೆ! 19 ಜಿಲ್ಲೆಗಳಲ್ಲಿ ಹೈ ಅಲರ್ಟ್.. ಈ ಜಿಲ್ಲೆಯಲ್ಲಿ ರಜೆ ಘೋಷಣೆ
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಆಶ್ಲೇಷಾ ಮಳೆ ಅಬ್ಬರಿಸುತ್ತಿದೆ. ಮುಂದಿನ ಮೂರು ದಿನಗಳಲ್ಲೂ ಭಾರೀ ಮಳೆ (Karnataka Weather) ಮುಂದುವರಿಯುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ವ್ಯಾಪಕ ಮಳೆಯಾಗಿದ್ದು, ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲೂ ಭಾರೀ ಮಳೆಯಾಗಿದೆ. ವ್ಯಾಪಕ ಮಳೆ (Karnataka Rain) ನಿರೀಕ್ಷೆಯಿರುವ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಮತ್ತು ನಾಳೆಯೂ ಸಹ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಬಿರುಗಾಳಿಯೊಂದಿಗೆ ಆಗಸ್ಟ್ 6 ಮತ್ತು 7 ರಂದು ಭಾರೀಯಿಂದ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದ ಹಲೆವೆಡೆ ಇಂದು ಭಾರೀ ಮಳೆಯಾಗುತ್ತಿದೆ. ಇತ್ತ ಕೊಡಗು ಜಿಲ್ಲೆಯಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭೀಕರ ಮಳೆಯಾಗಲಿದೆ ಎಂದು ತಿಳಿಸಿದೆ. ಹೀಗಾಗಿ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಇಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕೊಪ್ಪಳ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವ್ಯಾಪಕ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ಮುಂದಿನ ದಿನಗಳಲ್ಲಿ ತೀವ್ರತೆಯನ್ನು ಹೆಚ್ಚಿಸಬಹುದಾದ ಮಳೆಯ ಮುನ್ಸೂಚನೆಯಾಗಿದೆ.
ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಆಗಸ್ಟ್ 8 ರವರೆಗೂ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ನಂತರ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮಳೆಯೋ ಮಳೆ
ಬೆಂಗಳೂರಿನಲ್ಲಿ ರಾತ್ರಿ ವೇಳೆ ಭಾರೀ ಮಳೆಯಾಗುತ್ತಿದೆ. ಹಗಲಿನಲ್ಲಿ ಬಿಸಿಲಿದ್ದರೂ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ. ಬಳಿಕ ರಾತ್ರಿ ಜೋರು ಮಳೆ ಸುರಿಯುತ್ತಿದೆ. ಇಂದು ಸಹ ಬೆಂಗಳೂರು ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದಲೂ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇನ್ನು ಮೂರು ದಿನ ಮಳೆ ನಿರೀಕ್ಷಿಸಲಾಗಿದೆ.
ನಾಳೆಯೂ ಆರೆಂಜ್ ಅಲರ್ಟ್
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಅದೇ ಸಮಯದಲ್ಲಿ, ದಾವಣಗೆರೆ, ಹಾಸನ, ಹಾವೇರಿ, ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶುಕ್ರವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದೊಂದಿಗೆ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹವಾಮಾನ
• ಎಚ್‌ಎಎಲ್ - ಗರಿಷ್ಠ 29.6°C ಮತ್ತು ಕನಿಷ್ಠ 20.4°C
• ಕಾರವಾರ - ಗರಿಷ್ಠ 31.0°C, ಕನಿಷ್ಠ 26.2°C
• ಕಲಬುರಗಿ - ಗರಿಷ್ಠ 34.1°C, ಕನಿಷ್ಠ 24.4°C
• ರಾಯಚೂರು - ಗರಿಷ್ಠ 34.0°C, ಕನಿಷ್ಠ 24.6°C
• ಹೊನ್ನಾವರ - ಗರಿಷ್ಠ 30.0°C, ಕನಿಷ್ಠ 25.1°C
• ವಿಜಯಪುರ - ಗರಿಷ್ಠ 31.0°C, ಕನಿಷ್ಠ 23.0°C



Click it and Unblock the Notifications
