Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
Karnataka Rain: ಮುಂದಿನ 4 ದಿನ ಭಾರೀ ಮಳೆ: 14 ಜಿಲ್ಲೆಗಳಿಗೆ ಹೈ ಅಲರ್ಟ್.. ಎಲ್ಲೆಲ್ಲಿ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ. ಹವಾಮಾನ ಇಲಾಖೆಯಿಂದ 14 ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ. ಹೌದು, ರಾಜ್ಯದಲ್ಲಿ (Karnataka Rain) ಕಳೆದ ಕೆಲವು ದಿನಗಳಿಂದ ನೈಋುತ್ಯ ಮುಂಗಾರು ಚುರುಕಾಗಿದೆ. ಕರಾವಳಿ ಮತ್ತು ಪಶ್ಚಿಮ ಘಟ್ಟಗಳ 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹೈ ಅಲರ್ಟ್ ನೀಡಿದೆ. ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕರ್ನಾಟಕದಾದ್ಯಂತ ಮಳೆ ಮತ್ತು ಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ, ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಅದೇ ರೀತಿ, ಬೆಂಗಳೂರು ನಗರ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ (Karavali) ಜಿಲ್ಲೆಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರ್ಭಟಿಸುತ್ತಿದೆ. ಹವಾಮಾನ ಇಲಾಖೆಯು ಬೆಳಗ್ಗೆ 4.30ರ ವೇಳೆಗೆ 8 ಜಿಲ್ಲೆಗಳಿಗೆ ಭಾರೀ ಗಾಳಿ ಮಳೆಯ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ 14 ಜಿಲ್ಲೆಗಳಿಗೆ ಹೈ ಅಲರ್ಟ್
ಈಗಾಗಲೇ ಮಳೆರಾಯನ ಆರ್ಭಟ ಶುರುವಾಗಿದ್ದು, ಕುಂಭದ್ರೋಣ ಮಳೆಗೆ ಕರಾವಳಿ ಜನ ಹೈರಾಣಾಗಿದ್ದಾರೆ. ಇತ್ತ ಹವಾಮಾನ ಇಲಾಖೆ ರಾಜ್ಯದ 14 ಜಿಲ್ಲೆಗಳಿಗೆ ಅಲರ್ಟ್ ಕೊಟ್ಟಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಹೈ ಅಲರ್ಟ್ ನೀಡಿದೆ. ಜೂನ್ 17 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.
ರೆಡ್ ಅಲರ್ಟ್ ಜಿಲ್ಲೆಗಳು
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ. ಈ ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಆರೆಂಜ್ ಅಲರ್ಟ್ ಜಿಲ್ಲೆಗಳು
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ ಮತ್ತು ಮೈಸೂರು. ಈ ಜಿಲ್ಲೆಗಳ ಹಲವು ಭಾಗಗಳಲ್ಲಿ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು
ಮಂಡ್ಯ, ಕೊಪ್ಪಳ, ಕಲಬುರಗಿ ಮತ್ತು ಬೀದರ್. ಈ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಶಾಲಾ ಕಾಲೇಜು ರಜೆ?
ಕರಾವಳಿ ಮತ್ತು ಮಲೆನಾಡ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ, ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್ ಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು (ಜೂ.16) ಎಲ್ಲಾ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಈ ಜಿಲ್ಲೆಯಲ್ಲೂ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಆಗುತ್ತಿರುವುದರಿಂದ ಈಗಾಗಲೇ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗು ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ ಆದೇಶದಲ್ಲಿ ತಿಳಿಸಿದ್ದಾರೆ. ರಜಾದಿನದಲ್ಲಿನ ತರಗತಿ ಪಠ್ಯವನ್ನು ಮುಂದಿನ ಅವಧಿಯಲ್ಲಿ ಸರಿದೂಗಿಸುವಂತೆ ತಿಳಿಸಿದೆ ಸಾಗರ ತಹಶೀಲ್ದಾರರು ಸೂಚಿಸಿದ್ದಾರೆ. ಇನ್ನೂ, ಉಡುಪಿ ಜಿಲ್ಲೆಯಲ್ಲೂ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಣೆ ಮಾಡಿದ್ದಾರೆ.



Click it and Unblock the Notifications

