Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
Karnataka Rains: ರಾಜ್ಯದಲ್ಲಿ 5 ದಿನ ರಣ ಮಳೆ! ಈ ಜಿಲ್ಲೆಗಳಿಗೆ 'ರೆಡ್' ಅಲರ್ಟ್.. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸಲು ಶುರು ಮಾಡಿದೆ. ಜುಲೈ 24ರ ವರೆಗೂ ಬಹುತೇಕ ಕಡೆ ಮಳೆ ಹೆಚ್ಚಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಂತೆ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 24ರವರೆಗೂ ಭಾರೀ ಮಳೆಯಾಗುವ (Karnataka Rains) ಮುನ್ಸೂಚನೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ಗಂಟೆಯಲ್ಲಿ ಬೆಳಗಾವಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ಎಲ್ಲೆಲ್ಲಿ ಮಳೆಯಾಗಲಿದೆ (Karnataka Weather) ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಆರೆಂಜ್ ಅಲರ್ಟ್, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಭಾರೀ ಮಳೆ.. ಕೊಡಗಿನ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಪರೀತ ಮಳೆಯ ಜೊತೆಗೆ ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣದಿಂದ ಜನರು ಹಾಗೂ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜುಲೈ 22ರ ವರೆಗೂ ವರ್ಷಧಾರೆ.. ಎಲ್ಲೆಲ್ಲಿ?
ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 22 ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ. ನಾಳೆ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ನೀಡಿದೆ. ಇದಲ್ಲದೆ, ಕರ್ನಾಟಕದ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಎಚ್ಚರಿಕೆ ನೀಡಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ,ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಅವಧಿಯಲ್ಲಿ ಕೆಲ ಜಿಲ್ಲೆಗಳಲ್ಲಿ ಮಳೆಗಿಂತ ಗಾಳಿ ವೇಗ ಹೆಚ್ಚಿರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಒಟ್ಟಾರೆಯಾಗಿ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಖ್ಯವಾಗಿ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Click it and Unblock the Notifications
