Latest Updates
-
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ!
ಬೆಂಗಳೂರು ಸೇರಿ 27 ಜಿಲ್ಲೆಗಳಲ್ಲಿ ಭಾರೀ ಮಳೆ! ಮತ್ತೆ ಆರೆಂಜ್ ಅಲರ್ಟ್.. ರಜೆ ಇರುತ್ತಾ?
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉಳಿದ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದೆ. ಹೌದು, ಒಂದು ವಾರದ ಬ್ರೆಕ್ ಬಳಿಕ ಮುಂಗಾರು ಮಳೆ ರಾಜ್ಯದಲ್ಲಿ ಪುನಃ ಸಕ್ರಿಯವಾಗಿದೆ. ಈ ವಾರ ಪೂರ್ತಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮತ್ತೆ ಧಾರಾಕಾರ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಶಾಲಾ-ಕಾಲೇಜುಗಳ ರಜೆ ಘೋಷಣೆ ಬಗ್ಗೆ ವರದಿಯಾಗಿಲ್ಲ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ (ಆಗಸ್ಟ್ 4) ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 10ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದ್ದು, ಕಳೆದ ಎರಡು ದಿನಗಳಿಂದ ಸಂಜೆ ಹೊತ್ತು ಮೋಡ ಕವಿದ ವಾತಾವರಣದೊಂದಿಗೆ ಮಳೆ ಸುರಿಯುತ್ತಿದೆ. ಇದು ಮುಂದುವರಿಯುವ ನಿರೀಕ್ಷೆಯಿದೆ. ಮಳೆಗಾಲ ಮುಗಿದಿದೆ ಎಂದು ಭಾವಿಸಿದ್ದ ಜನರಿಗೆ ಇದು ಅಚ್ಚರಿ ಮೂಡಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಆಗಸ್ಟ್ 5 ರಂದು ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 6 ರಂದು ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಆಗಸ್ಟ್ 10ರವರೆಗೆ ರಾಜ್ಕಯದ 27ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಹೆಚ್ಚಿನ ಮಳೆ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉಳಿದಂತೆ ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದರ ಹೊರತಾಗಿಯೂ ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಮಳೆ ಸುರಿಯುತ್ತಿದ್ದು, ಪ್ರಸ್ತುತ ಮೋಡ ಕವಿದ ವಾತಾವರಣವಿದೆ. ಯಾವುದೇ ಕ್ಷಣದಲ್ಲಿ ಮತ್ತೆ ಮಳೆರಾಯನ ಆಗಮನವಾಗಬಹುದು.
ಇಂದು ಎಲ್ಲೆಲ್ಲಿ ಮಳೆ?
ಇಂದು (ಸೋಮವಾರ) ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಇರಲಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಇರಲಿದೆ. ಒಟ್ಟಾರೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ತಾಪಮಾನ ಹೇಗಿದೆ?
• ಬೆಂಗಳೂರಿನ ಹೆಚ್‌ಎಎಲ್ - ಗರಿಷ್ಠ 29.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.1 ಡಿಗ್ರಿ ಸೆಲ್ಸಿಯಸ್
• ಬೆಂಗಳೂರು ನಗರ - ಗರಿಷ್ಠ 29.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.5 ಡಿಗ್ರಿ ಸೆಲ್ಸಿಯಸ್
• ಕೆಐಎಎಲ್ - ಗರಿಷ್ಠ 30.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್
• ಜಿ.ಕೆ.ವಿ.ಕೆ - ಗರಿಷ್ಠ 30.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.0 ಡಿಗ್ರಿ ಸೆಲ್ಸಿಯಸ್
• ಹೊನ್ನಾವರ - ಗರಿಷ್ಠ 29.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.9 ಡಿಗ್ರಿ ಸೆಲ್ಸಿಯಸ್
• ಬೀದರ್ - ಗರಿಷ್ಠ 31.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್



Click it and Unblock the Notifications
