Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
Karnataka Rains: ಈ 14 ಜಿಲ್ಲೆಗಳಲ್ಲಿ ಭಾರೀ ಮಳೆ; ಜು.22 ರವರೆಗೂ ಹೈ ಅಲರ್ಟ್.. ರಜೆ ಘೋಷಣೆ ಸಾಧ್ಯತೆ
ರಾಜ್ಯದಲ್ಲಿ ಇಂದಿನಿಂದ ಜುಲೈ 22 ರವರೆಗೂ ಭಾರೀ ಮಳೆಯಾಗಲಿದೆ. ಶಾಲೆಗಳಿಗೆ ರಜೆ ಘೋಷಣೆ ಸಾಧ್ಯತೆಯಿದೆ. ಬೆಂಗಳೂರು ಸೇರಿ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ (Karnataka Rains) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಎರಡು ಪಟ್ಟು ಹೆಚ್ಚು ಮಳೆಯಾಗಿದೆ. ಈಗಾಗಲೇ 10ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಇಂದು ಎಲ್ಲೆಲ್ಲಿ ಮಳೆಯಾಗಲಿದೆ (Karnataka Weather) ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಕಾರಣದಿಂದ ಹವಾಮಾನ ಇಲಾಖೆಯು ಜುಲೈ 22 ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ಬೆಳಗಾವಿ, ಶಿವಮೊಗ್ಗ, ಕೊಡಗಿನಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಮತ್ತು ಮಲೆನಾಡು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳೂರಿನಲ್ಲಿ ಅಧಿಕ ಮಳೆಯಾಗಿದ್ದು, ಮೂಲ್ಕಿ ತಾಲೂಕಿನಲ್ಲಿ ಸ್ವಲ್ಪ ಹಾನಿ ಸಂಭವಿಸಿದೆ. ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

14 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ
ರಾಜ್ಯದ 14 ಜಿಲ್ಲೆಗಳಲ್ಲಿ ಜುಲೈ 22ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಇರಲಿದೆ. ಇನ್ನು ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಹವಾಮಾನ ಇಲಾಖೆಯು ಇಂದು (ಜುಲೈ 16) ಮತ್ತು ನಾಳೆ (ಜುಲೈ 17) ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 18 ಮತ್ತು 19 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 20 ರಿಂದ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್
ಬೆಳಗಾವಿ ಜಿಲ್ಲೆಯಲ್ಲಿ ಇಂದು ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಾಳೆ (ಜುಲೈ 17 ರಂದು) ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದಿನಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 18 ಹಾಗೂ 19 ರಂದು ಅತಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ
ಭಾರೀ ಮುನ್ಸೂಚನೆ ಇರುವುದರಿಂದ ಮುಂದಿನ ಹಲವು ದಿನಗಳವರೆಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಕೆದಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಕೆಲವು ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ 54.2 ಮಿ.ಮೀ ಮಳೆಯಾಗಿದೆ. ಕಳೆದ ಎರಡು ದಿನಗಳಲ್ಲಿ ಸುರಿದ ಮಳೆ, ಕಳೆದ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಅರಬ್ಬಿ ಸಮುದ್ರದಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಕಡಲು ಪ್ರಕ್ಷುಬ್ಧವಾಗಿರುವ ಕಾರಣದಿಂದ ಮುಂದಿನ ನಾಲ್ಕೈದು ದಿನಗಳ ಕಾಲ ಜಿಲ್ಲೆಯ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಈ ರಾಜ್ಯಗಳಲ್ಲಿಯೂ ಮಳೆಯ ಅಬ್ಬರ
ಇಂದು (ಜುಲೈ 16) ಹಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಉತ್ತರ ಛತ್ತೀಸ್‌ಗಢ, ಮಧ್ಯಪ್ರದೇಶ, ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ, ಕೊಂಕಣ ಮತ್ತು ಗೋವಾ, ಕರಾವಳಿ ಕರ್ನಾಟಕ ಮತ್ತು ಕೇರಳದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.



Click it and Unblock the Notifications