Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Karnataka Rain: 7 ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ: ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್.. ಎಲ್ಲೆಲ್ಲಿ?
ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸುತ್ತಿದ್ದಾನೆ. ರಾಜ್ಯದಾದ್ಯಂತ 3 ದಿನಗಳ ಕಾಲ (Karnataka Rain) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೂನ್ 24 ರಂದು 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರವಾಗಿದ್ದು, ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಜೂನ್ 26 ರವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ ಒಂದು ವಾರಗಳ ಕಾಲ ಕರಾವಳಿ ಪ್ರದೇಶಗಳನ್ನು ಹೊರತುಪಡಿಸಿ, ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 23 ರಿಂದ 26 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 27 ಮತ್ತು 28 ರಂದು ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ.

ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್?
ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದೆ ಚ್ಚಾಘಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24 ರಂದು 7 ಜಿಲ್ಲೆಗಳಿಗೆ ಅತಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡಕ್ಕೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆ
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಜೋರು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಸಹ ಕಾರವಾರ ಸೇರಿ ಕರಾವಳಿ ಭಾಗದಲ್ಲಿ ಮಳೆಯೊಂದಿಗೆ ಜೋರಾಗಿ ಗಾಳಿ ಬೀಸಿದೆ. ಗುಡುಗು ಮತ್ತು ಮಿಂಚು ಸಹ ಕಾಣಿಸಿದೆ. ಜೂನ್ 28 ರವರೆಗೂ ಇದೇ ರೀತಿ ವೇಗದ ಗಾಳಿ, ಮಳೆ ಬೀಳಲಿದೆ ಎಂದು ಹೇಳಲಾಗಿದೆ. ಜೂನ್ 26 ರವರೆಗೆ ಗಾಳಿ, ಮಳೆ ಜೊತೆ ಗುಡುಗು, ಮಿಂಚು ಇರಲಿದೆ. ಜೂನ್ 29 ರಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ನಾಳೆ ಎಲ್ಲೆಲ್ಲಿ ಮಳೆ?
ನಾಳೆ ಕರಾವಳಿ ಜಿಲ್ಲೆಗಳು, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು ಕೊಡಗು ಮತ್ತು ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ, ಈ ಮಳೆ ಮುನ್ಸೂಚನೆ ಹಾಗೂ ಯೆಲ್ಲೋ ಅಲರ್ಟ್, ಜೂನ್ 28 ರವರೆಗೂ ಮುಂದುವರಿಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ನಾಳೆಯಿಂದ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ. ನಿನ್ನೆ ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಜೂ.26ರಿಂದ ಮಳೆ ಹೆಚ್ಚಳ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಜೂನ್ 26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. 11 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ, ಗದಗ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲೂ ಮಳೆಯಾಗಲಿದೆ.



Click it and Unblock the Notifications
