Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
Karnataka Rain: ರಾಜ್ಯದಲ್ಲಿ 7 ದಿನ ಮಳೆ ಅಬ್ಬರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್, 3 ಜಿಲ್ಲೆಗಳಲ್ಲಿ ಶಾಲೆ ಬಂದ್
ರಾಜ್ಯದಲ್ಲಿ ಮುಂಗಾರ ಮಳೆ ಅಬ್ಬರ ಜೋರಾಗಿದೆ. ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಕರ್ನಾಟಕದಲ್ಲಿ ಮುಂದಿನ ಏಳು ದಿನ ವ್ಯಾಪಕ ಮಳೆಯಾಗುವ (Karnataka Weather) ಮುನ್ಸೂಚನೆ ನೀಡಿದ್ದು, ಕರಾವಳಿ ಸೇರಿದಂತೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಎರಡು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದ್ದು, ಮಳೆ ಆರ್ಭಟ (Karnataka Rain) ಕಾರಣದಿಂದ ಹಲವು 3 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇಂದು (ಜುಲೈ 4 ರಂದು) ರಾಜ್ಯದ 6 ಜಿಲ್ಲೆಗಳಿಗೆ ಅತ್ಯಂತ ಭಾರೀ ಮಳೆಯಾಗುವುದರಿಂದ ಹವಾಮಾನ ಇಲಾಖೆಯು ರೆಡ್ ಅಲರ್ಟ್ ನೀಡಿದೆ. ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕೆಲವು ಪ್ರದೇಶಗಳಲ್ಲಿ ಬಲವಾದ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.

ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಆರ್ಭಟ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇಂದು 6 ಜಿಲ್ಲೆಗಳಿಗೆ ಅತ್ಯಂತ ಭಾರೀ ಮಳೆಯಾಗಲಿರುವ ಹಿನ್ನೆಲೆ ರೆಡ್ ಅಲರ್ಟ್ ಕೊಡಲಾಗಿದೆ. ಎರಡು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಹಲವು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕು ಹಾಗೂ ಉತ್ತರ ಕನ್ನಡದ ಕೆಲವು ತಾಲೂಕುಗಳು ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಎಲ್ಲೆಲ್ಲಿ ರೆಡ್ ಅಲರ್ಟ್?
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಬಂಟ್ವಾಳ ತಾಲೂಕು ತಹಶೀಲ್ದಾರರು ಘೋಷಿಸಿದ್ದಾರೆ.
ಅಲ್ಲದೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ತಾಲೂಕುಗಳ ಅಂಗನವಾಡಿ, ಶಾಲೆ, ಪ್ರೌಢಶಾಲೆಗೆ ರಜೆ ಕೊಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರದಲ್ಲಿ ನಿರಂತರ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಇಂದು ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ ಎಲ್ಲಾ ಶಾಲಾ, ಕಾಲೇಜು ಮತ್ತು ಅಂಗನವಾಡಿಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ಚಿಕ್ಕಮಂಗಳೂರು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂಟ್ವಾಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರದ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಎಲ್ಲೆಲ್ಲಿ ಭಾರೀ ಮಳೆ
ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಕೊಪ್ಪ, ಕಮ್ಮರಡಿ, ಆಗುಂಬೆ, ಕದ್ರಾ, ಸಿದ್ದಾಪುರ, ಎನ್ಆರ್ಪುರ, ಬೆಳ್ತಂಗಡಿ, ಅಂಕೋಲಾ, ಮೂಡುಬಿದಿರೆ, ಕಾರವಾರ, ಧರ್ಮಸ್ಥಳ, ಶಿರಾಲಿ, ಸೋಮವಾರಪೇಟೆ, ಭಾಗಮಂಡಲ, ಪುತ್ತೂರು, ಕಳಸ, ಕಾರ್ಕಳ, ಕುಮಟಾ, ಬನವಾಸಿಯಲ್ಲಿ ಜೋರು ಮಳೆಯಾಗಿದೆ. ಮುಲ್ಕಿ, ಉಡುಪಿ, ಮಂಗಳೂರು, ಮಾಣಿ, ಕುಂದಾಪುರ, ಬಂಟವಾಳ, ಖಾನಾಪುರ, ಹುಂಚದಕಟ್ಟೆ, ತ್ಯಾಗರ್ತಿ, ಚಿಕ್ಕಬಳ್ಳಾಪುರ, ದಾವಣಗೆರೆ, ಪೊನ್ನಂಪೇಟೆ, ಕೋಟಾ, ಹಿರೆಕೆರೂರು, ಸರಗೂರು, ಹೊನ್ನಾವರ, ಸಂಕೇಶ್ವರ, ಕಿತ್ತೂರು, ಕುಷ್ಟಗಿ, ಮುದಗಲ್, ಮಾನ್ವಿ, ಹಳಿಯಾಳ, ಮುಂಡಗೋಡ, ಚನ್ನಗಿರಿ, ನಾಯಕನಹಟ್ಟಿ, ಹಗರಿಬೊಮ್ಮನಹಳ್ಳಿ, ಬರಗೂರು, ಕುಶಾಲನಗರ, ಕೋಲಾರ, ಬೇಳೂರು, ಅಜ್ಜಂಪುರ, ಪರಶುರಾಂಪುರದಲ್ಲಿ ಸಹ ಮಳೆಯಾಗಿದೆ.
ನಾಳೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ಮುಂದಿನ ಎರಡು ದಿನವೂ ಭಾರೀ ಮಳೆಯಾಗಲಿದೆ. ಭಾನುವಾರದವರೆಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ನಾಳೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬೀ ಸಮುದ್ರದ ಮಹಾರಾಷ್ಟ್ರ ಹಾಗೂ ಕರಾವಳಿ ತೀರಗಳಲ್ಲಿ ದಟ್ಟಮೋಡ ನಿರ್ಮಾಣ ಆಗಿರುವುದರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Click it and Unblock the Notifications












