Latest Updates
-
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ!
ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
ಸದ್ಯ ರಾಜ್ಯದ ಕೆಲವು ಭಾಗದಲ್ಲಿ ವರುಣನ ದರ್ಶನವಾಗಿದೆ. ಮಲೆನಾಡು, ಕರಾವಳಿ, ಸೇರಿ ಪಶ್ಚಿಮ ಘಟ್ಟ ಸಾಲಿನ ಕೆಲವು ಭಾಗದಲ್ಲಿ ಮಳೆಯಾಗಿದೆ. ಇನ್ನು ಬೆಂಗಳೂರು, ಹಳೆ ಮೈಸೂರು ಭಾಗದಲ್ಲಿ ಸಣ್ಣದಾಗಿ ಮಳೆಯಾಗಿದೆ. ಇದು ಬಿಟ್ಟರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಮಾಣ ಕಡಿಮೆಯಾಗಿದೆ.
ಕೆಲವು ಕಡೆ ಮಳೆ ಬಂದರೂ ಬೇಸಿಗೆಯ ಸೆಖೆ ಪ್ರಖರವಾಗಿದ್ದು, ಮತ್ತಷ್ಟು ಉರಿ ಬಿಸಿಲು ಕಾಡುತ್ತಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿಲ್ಲ. ಸುಮಾರು 30ರಿಂದ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇತ್ತ ರಾಜ್ಯದಲ್ಲಿ ಒಣಹವೆ ಮುಂದುವರೆಯುವ ಲಕ್ಷಣ ಸಹ ಕಂಡುಬರುತ್ತಿದೆ.

ಇನ್ನು ಮುಂದಿನ 7 ದಿನಗಳ ಕಾಲ ರಾಜ್ಯದ ಹವಾಮಾನ ಯಾವ ರೀತಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಮುಂದಿನ ಒಂದು ವಾರದಲ್ಲಿ ರಾಜ್ಯದ ಕೆಲ ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 23ರಂದು ಮಂಗಳವಾರ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಜಿಲ್ಲೆಯಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಮಾಹಿತಿ ನೀಡಿದೆ.
ಏಪ್ರಿಲ್ 25ರಂದು ರಾಜ್ಯದ ಕೆಲವ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು ಅಲ್ಲಿಯವರೆಗೆ ಒಣ ಹವೆ ಮುಂದುವರೆಯಲಿದೆ ಎಂದಿದೆ. ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ತಿಳಿಸಿದೆ.
ಇದರ ಜೊತೆ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ರಾಯಚೂರು ಭಾಗದಲ್ಲಿ ಏಪ್ರಿಲ್ 25ರ ಬಳಿಕ ಹಗುರದಿಂದ ಮಳೆಯಾಗುವ ನಿರೀಕ್ಷೆ ಇದ್ದು, ವಾರದ ಕೊನೆಯಲ್ಲಿ ಸಿಡಿಲು ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ. ಕರಾವಳಿ ಭಾಗದಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣ ಇರಲಿದ್ದು, ತಾಪಮಾನ ಏರಿಕೆಯಾಗಲಿದೆ. ಹೀಗಾಗಿ ಬಿಸಿಲು ಹೆಚ್ಚಾಗಲಿದೆ ಎಂದಿದೆ.
ಬೆಂಗಳೂರಲ್ಲಿ ಮಳೆ ಯಾವಾಗ?
ರಾಜ್ಯದ ಬೇರೆಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರಿಗೆ ಮಳೆ ಅಗತ್ಯವಾಗಿದೆ. ಬೆಂಗಳೂರಿಗರು ಸಹ ಮಳೆಗಾಗಿ ಕಾದು ಕುಳಿತ್ತಿದ್ದಾರೆ. ಕಳೆದ ಎರಡು ದಿನದ ಹಿಂದೆ ಕೆಲವು ಭಾಗದಲ್ಲಿ ವರುಣನ ಸಿಂಚನವಾಗಿದ್ದರೂ ಹೇಳಿಕೊಳ್ಳುವಷ್ಟು ಮಳೆ ಬಿದ್ದಿಲ್ಲ. ಹೀಗಾಗಿ ಬೆಂಗಳೂರು ಬಿಸಿಲಿನಿಂದ ಮತ್ತಷ್ಟು ಕೆಂಪಗಾಗಿದೆಯೇ ಹೊರತು ತಂಪಾಗುವ ಲಕ್ಷಣ ಕಾಣುತ್ತಿಲ್ಲ.
ಹೀಗಾಗಿ ಬೆಂಗಳೂರಿಗೆ ಏಪ್ರಿಲ್ ಕೊನೆಯ ವಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಅಶ್ವಿನಿ ಮಳೆ ರಾಜ್ಯದಲ್ಲಿ ಹಲವು ಜಿಲ್ಲೆಗಳಿಗೆ ಕೃಪೆ ತೋರಿದ್ದರೂ ಇನ್ನೂ ಹಲವು ಜಿಲ್ಲೆಗಳು ಮಳೆಗಾಗಿ ಕಾಯುತ್ತಿವೆ. ಏಪ್ರಿಲ್ 27ರಿಂದ ಭರಣಿ ಮಳೆ ಆರಂಭವಾಗಲಿದ್ದು, ಈ ಮಳೆಯ ಮೇಲೆ ನಿರೀಕ್ಷೆ ಇಡಲಾಗಿದೆ.



Click it and Unblock the Notifications
