Latest Updates
-
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು
Karnataka Rain: ರಾಜ್ಯದಲ್ಲಿ 5 ದಿನ ಭಾರೀ ಮಳೆ: 7 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ.. ಎಲ್ಲೆಲ್ಲಿ?
ರಾಜ್ಯದ ಹಲವಡೆ ಮಳೆಯ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಯ ಕಾರಣದಿಂದ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕಲ್ಲಿ ಜುಲೈ 1ರ ವರೆಗೆ ಮಳೆ ಅಬ್ಬರ (Karnataka Weather) ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಳಗಾವಿ, ಹಾಸನ, ಕೊಡಗು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಹಲವು ನದಿಗಳು ತುಂಬಿ ಹರಿಯುತ್ತಿದೆ. ಧಾರಾಕಾರ ಮಳೆ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ಜೂನ್ 26) ಸಹ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ರಾತ್ರಿಯಿಡೀ ಮಳೆಯಾಗಿದೆ. ಹವಾಮಾನ ಇಲಾಖೆಯು ಬೆಳಗ್ಗೆ 4 ಗಂಟೆಗೆ ನೀಡಿದ ಎಚ್ಚರಿಕೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಯಾ ಜಿಲ್ಲಾಡಳಿತಗಳು ರಜೆ (Holidays For Schools And Colleges) ಘೋಷಣೆ ಮಾಡಿವೆ.

ರಣ ಭಯಂಕರ ಮಳೆ.. ಶಾಲೆಗಳಿಗೆ ರಜೆ ಘೋಷಣೆ
ಕಳೆದೆರಡು ದಿನಗಳಿಂದ ಮಾನ್ಸೂನ್ ಮಳೆಯ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಕೊಡಗಿಗೆ ರೆಡ್ ಅಲರ್ಟ್, ಹಾಸನಕ್ಕೆ ಆರೆಂಜ್ ಅಲರ್ಟ್
ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹಾಸನ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಯಾ ಜಿಲ್ಲಾಡಳಿತಗಳು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿವೆ.
ಬೆಳಗಾವಿ, ಕೊಡಗು, ಹಾಸನದ ಹಲವೆಡೆ ಶಾಲೆಗಳಿಗೆ ರಜೆ
ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ, ಖಾನಾಪುರ ಮತ್ತು ಕಿತ್ತೂರು ತಾಲೂಕುಗಳ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ಜೂನ್ 26 ರಂದು ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಜೂನ್ 26 ರಂದು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿರುವುದರಿಂದ, ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲೂ ಸಹ ಮಳೆಯ ತೀವ್ರತೆ ಹೆಚ್ಚಿರುವ ಕಾರಣ, ಹಾಸನ, ಸಕಲೇಶಪುರ, ಆಲೂರು, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಮತ್ತು ಚಿಕ್ಕಮಗಳೂರಿನಲ್ಲಿ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆಯಲ್ಲಿ, ಜೋಯಿಡಾ ಮತ್ತು ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಮತ್ತು ಎನ್.ಆರ್. ಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 26 ರಂದು ರಜೆ (Schools Holidays) ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ರಜೆ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗ ಹಾಗೂ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಅಂಗನವಾಡಿಯಿಂದ ಪ್ರೌಢಶಾಲೆಯವರೆಗಿನ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಕಾಲೇಜುಗಳು ಎಂದಿನಂತೆ ತೆರೆದಿರುತ್ತವೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಮೂರು ದಿನಗಳ ಕಾಲ ಮಳೆ ಸಾಧ್ಯತೆ
ಧಾರವಾಡ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ನಿನ್ನೆ ಮಧ್ಯಾಹ್ನದಿಂದ ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಧಾರವಾಡ ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ. ಜೂನ್ 26, ಜೂನ್ 27, ಜೂನ್ 28 ಮತ್ತು ಜೂನ್ 29 ರಂದು ಯೆಲ್ಲೊ ಅಲರ್ಟ್ ನೀಡಲಾಗಿದೆ. ಪ್ರವಾಹ ಭೀತಿ ಇರುವ ಸ್ಥಳಗಳಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ನಿನ್ನೆ ಸುರಿದ ಮಳೆಯಿಂದ ಕಲಘಟಗಿ ತಾಲೂಕಿನಲ್ಲಿ 1 ಮನೆ ಹಾಗೂ ಕುಂದಗೋಳ ತಾಲೂಕಿನಲ್ಲಿ 2 ಮನೆಗಳು ಹಾನಿಯಾಗಿವೆ.
ಭಾರೀ ಮಳೆ.. ಶಿಶಿಲೇಶ್ವರ ದೇವಸ್ಥಾನ ಜಲಾವೃತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದರೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ಗ್ರಾಮೀಣ ಭಾಗದ ನದಿಗಳು ಭೋರ್ಗರೆಯುತ್ತಿವೆ. ಬೆಳ್ತಂಗಡಿ ತಾ. ಕಪಿಲಾ ನದಿ ತುಂಬಿ ಹರಿದಿದ್ದು, ಮತ್ರ್ಯ ಕ್ಷೇತ್ರ ಶಿಶಿಲದ ಶಿಶಿಲೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದ್ದು, ಸಂಪರ್ಕ ಸೇತುವೆ ಮುಳುಗಿದೆ. ಧುಮ್ಮಿಕ್ಕಿ ಹರಿಯುವ ನದಿಯ ನೀರಿನೊಂದಿಗೆ ಮರದ ದಿಮ್ಮಿಗಳೂ ತೇಲಿ ಬರುತ್ತಿವೆ. ಮತ್ತಷ್ಟು ಮಳೆಯಾದರೆ ದೇವಸ್ಥಾನ ಸಂಪೂರ್ಣ ಜಲಾವೃತವಾಗುವ ಭೀತಿ ಎದುರಾಗಿದೆ.
ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ: ಈ ಪ್ರವಾಸಿಗರಿಗೆ ನಿರ್ಬಂಧ
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಯಾಗುತ್ತಿದ್ದು, ಕೆಆರ್ ಎಸ್ (KRS) ಡ್ಯಾಂನಲ್ಲಿ ಒಳ ಹರಿವು ಹೆಚ್ಚಾಗಿದೆ. ಇನ್ನು ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸಂಗಮ, ಗೋಸಾಯಿ ಘಾಟ್‌ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಹಾಗೂ ನಿಮಿಷಾಂಭ, ಶ್ರೀರಂಗನಾಥ ದೇವಾಲಯದ ಸ್ನಾನಘಟ್ಟಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ಶಿರಾಡಿಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್
ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದೆ. ಪರಿಣಾಮ ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಸದ್ಯ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಬೆಂಗಳೂರು-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ.
ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ ಸೂಚನೆ
• ಮಳೆ, ಗಾಳಿ, ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಮನೆಯಿಂದ ಹೊರಗೆ ಹೋಗದೆ ಸುರಕ್ಷಿತ ಕಟ್ಟಡದಲ್ಲಿ ವಾಸಿಸಬೇಕು.
• ಮರಗಳ ಕೆಳಗೆ ನಿಲ್ಲಬಾರದು. ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು.
• ಮೀನುಗಾರರು ನದಿ ಮತ್ತು ನೀರಿರುವ ಪ್ರದೇಶಕ್ಕೆ ಇಳಿಯದಂತೆ ಎಚ್ಚರವಹಿಸಬೇಕು.
• ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬಗಳ ಹತ್ತಿರ ಹೋಗಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು.
• ಕೆಲವು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಂಭವ ಹೆಚ್ಚಾಗಿರುತ್ತದೆ. ಆದ್ದರಿಂದ, ಅಂತಹ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತೆ ವಹಿಸಬೇಕು.
• ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಕಂಟ್ರೋಲ್ ರೂಂ ಅನ್ನು 08272-221077/221099 ದೂರವಾಣಿ ಸಂಖ್ಯೆ ಮೂಲಕ ಸಂಪರ್ಕಿಸಬಹುದು.



Click it and Unblock the Notifications

