Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬುಧ ಗೋಚರ : ಲಕ್ಷ್ಮೀ ನಾರಾಯಣ ಯೋಗದಿಂದ ಈ 6 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ!
ಬುಧ ಗ್ರಹವು ಜುಲೈ 25 ರಂದು ಸಿಂಹ ರಾಶಿಯಲ್ಲಿ ಸಾಗಲಿದೆ. ಬುಧನು ಸಿಂಹ ರಾಶಿಯನ್ನು ಪ್ರವೇಶಿಸಿದಾಗ ಲಕ್ಷ್ಮೀ ನಾರಾಯಣ ಯೋಗವು ರೂಪುಗೊಳ್ಳುತ್ತದೆ. ಸಾಮಾನ್ಯವಾಗಿ ಶುಕ್ರ ಮತ್ತು ಬುಧ ಗ್ರಹವು ಒಂದೇ ರಾಶಿಯಲ್ಲಿ ಇದ್ದಾಗ ಲಕ್ಷ್ಮಿ ನಾರಾಯಣ ಯೋಗವು ರೂಪುಗೊಳ್ಳುತ್ತದೆ.
ಬುಧವು ಶಿಕ್ಷಣ, ವ್ಯವಹಾರ, ಆಕರ್ಷಕ ನೋಟ ಮತ್ತು ಬುದ್ಧಿವಂತಿಕೆಯ ಅಂಶವೆಂದು ಪರಿಗಣಿಸಲಾಗಿದೆ. ಯಾರ ಜಾತಕದಲ್ಲಿ ಬುಧನು ಪ್ರಬಲ ಸ್ಥಾನದಲ್ಲಿರುತ್ತಾನೆಯೋ ಆ ವ್ಯಕ್ತಿಯು ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸನ್ನು ಪಡೆಯುತ್ತಾನೆ ಎಂದು ಹೇಳಲಾಗುತ್ತದೆ.

ನಿಮ್ಮ ಜಾತಕದಲ್ಲಿ ಬುಧನ ಸ್ಥಾನ ಬಲವಾಗಿದ್ದರೆ ಆ ವ್ಯಕ್ತಿಯು ಪ್ರತಿಯೊಂದು ಕೆಲಸದಲ್ಲೂ ಯಶಸ್ಸನ್ನು ಪಡೆಯುತ್ತಾನೆ. ಆದರೆ ಬುಧನು ದುರ್ಬಲ ಸ್ಥಾನದಲ್ಲಿದ್ದಾಗ ಒರ್ವ ವ್ಯಕ್ತಿಯ ಜೀವನದಲ್ಲಿ ಅನೇಕ ವೈಫಲ್ಯಗಳು ಎದುರಾಗುತ್ತದೆ. ಹೀಗಾಗಿ ಬುಧನು ಸಿಂಹ ರಾಶಿಯನ್ನು ಪ್ರವೇಶ ಮಾಡಿದ್ರಿಂದಾಗಿ 6 ರಾಶಿಗಳ ವೃತ್ತಿ ಮತ್ತು ಆರ್ಥಿಕ ಸ್ಥಿತಿಯು ತುಂಬಾ ಉತ್ತಮವಾಗಿರುತ್ತದೆ. ಅಷ್ಟಕ್ಕು ಲಕ್ಷ್ಮೀ ನಾರಾಯಣ ಯೋಗದಿಂದ ಯಾವೆಲ್ಲಾ ರಾಶಿಯವರಿಗೆ ಶುಭ ಫಲಿತಾಂಶಗಳಿದೆ ಅನ್ನೋದನ್ನು ತಿಳಿಯೋಣ.
ಮೇಷ ರಾಶಿ
ಮೇಷ ರಾಶಿಯವರು ಈ ಸಮಯದಲ್ಲಿ ಮಾಡಿದ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಕಂಡುಕೊಳ್ಳುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಯ ಉತ್ತಮವಾಗಿರುತ್ತದೆ. ಏಕೆಂದರೆ ಈ ಸಮಯದಲ್ಲಿ ನಿಮ್ಮ ಆಲೋಚನೆ ಮತ್ತು ತಿಳುವಳಿಕೆ ಶಕ್ತಿ ಹೆಚ್ಚಾಗುತ್ತದೆ. ಉದ್ಯೋಗಸ್ಥರು ಕೂಡ ಅನೇಕ ಉತ್ತಮ ಅವಕಾಶಗಳನ್ನು ಪಡೆಯಲಿದ್ದಾರೆ. ಹಿರಿಯ ಅಧಿಕಾರಿಗಳಿಂದ ಬೇಶ್ ಅನ್ನಿಸಿಕೊಳ್ಳುತ್ತೀರಿ. ನೀವು ಈ ಸಮಯದಲ್ಲಿ ಯಾವುದೇ ಕೆಲಸ ಮಾಡಿದರೂ ಕೂಡ ನಿಮ್ಮ ಜೀವನದಲ್ಲಿ ಉತ್ತಮ ಪ್ರಯೋಜನಗಳನ್ನು ತರುತ್ತದೆ. ಉದ್ಯಮಿಗಳಿಗೆ ಈ ಸಮಯವು ತುಂಬಾ ಒಳ್ಳೆಯದು. ನಿಮ್ಮ ವ್ಯವಹಾರ ವಿಸ್ತರಿಸಲು ಇದು ಉತ್ತಮ ಸಮಯ.
ಮಿಥುನ ರಾಶಿ
ಬುಧವು ಮಿಥುನ ರಾಶಿಯ ಅಧಿಪತಿ. ಈ ಸಂಕ್ರಮಣದ ಗರಿಷ್ಠ ಪರಿಣಾಮವು ಮಿಥುನ ರಾಶಿಯವರ ಮೇಲೆ ಇರಲಿದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ನಿಮಗೆ ಅನೇಕ ಪ್ರಯಾಣದ ಅವಕಾಶಗಳಿವೆ. ಸ್ವಲ್ಪ ದೂರದ ಪ್ರವಾಸಕ್ಕೆ ಹೋಗಲು ಯೋಜಿಸಬಹುದು. ಕಾರ್ಯಗಳನ್ನು ಪೂರ್ಣಗೊಳಿಸಲು ಸಹೋದರ ಸಹೋದರಿಯರ ಸಹಕಾರ ಇರುತ್ತದೆ. ಈ ಸಮಯದಲ್ಲಿ ಬರಹಗಾರರು, ಸಾಹಿತಿಗಳು ಮತ್ತು ಸಂಪಾದಕರು ಅದೃಷ್ಟವನ್ನು ಪಡೆಯುತ್ತಾರೆ. ಕ್ರೀಡಾ ಕ್ಷೇತ್ರದಲ್ಲಿ ಇರುವವರಿಗೆ ಇದು ಅನುಕೂಲಕರ ಸಮಯವಾಗಿದೆ.
ಸಿಂಹ ರಾಶಿ
ಈ ಸಂಚಾರವು ಸಿಂಹ ರಾಶಿಯವರಿಗೆ ಧನಲಾಭವನ್ನುಂಟು ಮಾಡುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ತುಂಬಾ ಬಲವಾಗಿರುತ್ತದೆ. ನೀವು ಈ ಹಿಂದೆ ಮಾಡಿದ ಪ್ರಯತ್ನಗಳಿಂದ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಈ ಸಮಯದಲ್ಲಿ ನಿಮ್ಮ ಆತ್ಮವಿಶ್ವಾಸವು ತುಂಬಾ ಹೆಚ್ಚಾಗಿರುತ್ತದೆ. ಇದರಿಂದಾಗಿ ನೀವು ಪ್ರತಿಯೊಂದು ನಿರ್ಧಾರವನ್ನು ತ್ವರಿತವಾಗಿ ತೆಗೆದುಕೊಳ್ಳೋದಕ್ಕೆ ಸಹಾಯವಾಗುತ್ತದೆ.
ಈ ಸಮಯದಲ್ಲಿ ನೀವು ಅನೇಕ ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತೀರಿ. ಮತ್ತು ಜೀವನದಲ್ಲಿ ಅವಕಾಶಗಳನ್ನು ಸಾಧನೆಗಳಾಗಿ ಪರಿವರ್ತಿಸುವ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ. ಈ ಸಮಯದಲ್ಲಿ ನಿಮಗೆ ಮಾನಸಿಕ ಒತ್ತಡ ಉಂಟಾಗುವ ಸಾಧ್ಯತೆಯಿದೆ. ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳು ಕೂಡ ಬರಬಹುದು. ಆದ್ದರಿಂದ ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ತುಲಾ ರಾಶಿ
ಸಿಂಹ ರಾಶಿಯಲ್ಲಿ ಬುಧನ ಸಂಚಾರವು ತುಲಾ ರಾಶಿಯವರಿಗೆ ಪ್ರಯೋಜನಕಾರಿಯಾಗಲಿದೆ. ಈ ಅವಧಿಯಲ್ಲಿ ಉದ್ಯೋಗಿ ವರ್ಗದ ಜನ ಅದೃಷ್ಟಶಾಲಿಯಾಗುತ್ತಾರೆ. ವ್ಯಾಪಾರ ವರ್ಗದ ಜನರು ಸಹ ಉತ್ತಮ ಲಾಭವನ್ನು ಗಳಿಸಲು ಸಾಧ್ಯವಾಗುತ್ತದೆ. ಈ ಸಮಯದಲ್ಲಿ ನೀವು ಕಡಿಮೆ ಶ್ರಮವಹಿಸಿದರೂ ಕೂಡ ನಿಮ್ಮ ಆದಾಯವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಕಲೆ ಮತ್ತು ಸಾಂಸ್ಕೃತಿಕ ವಿಷಯಗಳಿಗೆ ಸಂಬಂಧಿಸಿದಂತೆ ಈ ಸಮಯವು ಮಂಗಳಕರವಾಗಿರುತ್ತದೆ.
ವೃಶ್ಚಿಕ ರಾಶಿ
ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಗತಿಯ ವೇಗವು ಸ್ವಲ್ಪ ನಿಧಾನವಾಗಬಹುದು. ಜೀವನದ ಹಲವು ಹಠಾತ್ ಸಂದರ್ಭಗಳಿಂದಾಗಿ ನಿಮ್ಮ ಉದ್ಯೋಗದಲ್ಲಿ ಕೆಲವೊಂದು ಬದಲಾವಣೆಗಳು ಆಗುವ ಸಾಧ್ಯವಿದೆ. ಉದ್ಯೊಗದಲ್ಲಿ ಬದಲಾವಣೆಯನ್ನು ಬಯಸುವವರಿಗೆ ಈ ಸಮಯವು ಅವರಿಗೆ ಉತ್ತಮವಾಗಿರುತ್ತದೆ. ಸ್ನೇಹಿತರ ಸಹಾಯದಿಂದ ನೀವು ಉತ್ತಮ ಕಂಪನಿಯಲ್ಲಿ ಉದ್ಯೋಗದ ಪ್ರಸ್ತಾಪವನ್ನು ಪಡೆಯಲಿದ್ದೀರಿ. ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ.
ಕುಂಭ ರಾಶಿ
ಸಿಂಹ ರಾಶಿಯಲ್ಲಿ ಬುಧ ಸಂಕ್ರಮಣ ಕುಂಭ ರಾಶಿಯವರಿಗೆ ತುಂಬಾ ಒಳ್ಳೆಯದಾಗಲಿದೆ. ಈ ಸಮಯದಲ್ಲಿ ನಿಮ್ಮ ಪ್ರೀತಿಯ ಜೀವನವು ತುಂಬಾ ಉತ್ತಮವಾಗಿರುತ್ತದೆ. ನೀವು ಪ್ರೀತಿಸಿದವರನ್ನು ಮದುವೆಯಾಗೋದಕ್ಕೆ ಕಾಯುತ್ತಿದ್ದರೆ ಸ್ವಲ್ಪ ಸಮಯ ಕಾಯಬೇಕಾಗಬಹುದು. ಉನ್ನತ ಶಿಕ್ಷಣ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಈ ಸಮಯವು ತುಂಬಾ ಅನುಕೂಲಕರವಾಗಿರುತ್ತದೆ. ಅನೇಕ ವಿವಾಹಿತರು ಮಕ್ಕಳಿಂದ ಸಂತೋಷವನ್ನು ಪಡೆಯುತ್ತಾರೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ. ಇದರಿಂದಾಗಿ ಅಧಿಕಾರಿಗಳು ನಿಮ್ಮನ್ನು ಮುಕ್ತವಾಗಿ ಹೊಗಳುತ್ತಾರೆ. ಈ ಸಮಯವು ಉದ್ಯಮಿಗಳಿಗೆ ತುಂಬಾ ಅನುಕೂಲಕರವಾಗಿರುತ್ತದೆ.



Click it and Unblock the Notifications

