Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಗ್ರಾಹಕರ ಹಕ್ಕು ದಿನ 2023: ಗ್ರಾಹಕರ ಈ ಹಕ್ಕುಗಳ ಬಗ್ಗೆ ತಿಳಿದುಕೊಳ್ಳದೇ ಮೋಸ ಹೋಗಬೇಡಿ ಜೋಕೆ!
ಮಾರ್ಚ್ 15 ರಂದು ವಿಶ್ವದಾದ್ಯಂತ ಗ್ರಾಹಕ ಹಕ್ಕು ದಿನವನ್ನು ಆಚರಣೆ ಮಾಡಲಾಗುತ್ತದೆ. ಗ್ರಾಹಕರಿಗೆ ತಮ್ಮ ಹಕ್ಕಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಗ್ರಾಹಕರಿಗೆ ಅವರದ್ದೇ ಆದ ಹಕ್ಕುಗಳು ಇರುತ್ತದೆ. ಆದರೆ ಇದು ಗೊತ್ತಿಲ್ಲದೇ ಅನೇಕ ಬಾರಿ ಮಾರುಕಟ್ಟೆಯಲ್ಲಿ ಗ್ರಾಹಕರು ಮೋಸ ಹೋಗುತ್ತಾರೆ. ಮುಗ್ಧ ಜನರಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ ಈ ದಿನವನ್ನು ಆಚರಣೆ ಮಾಡಲಾಗುತ್ತದೆ.

ಗ್ರಾಹಕ ಹಕ್ಕುಗಳ ಇತಿಹಾಸ
ಆಗಿನ ಅಮೆರಿಕಾದ ಅಧ್ಯಕ್ಷರಾಗಿದ್ದ ಜಾನ್ ಕೆನಡಿಯವರು ಗ್ರಾಹಕ ಹಕ್ಕುಗಳ ಪ್ರಾಮುಖ್ಯತೆಯ ಬಗ್ಗೆ ಮಾತನಾಡುತ್ತಾರೆ. ಗ್ರಾಹಕರ ಹಕ್ಕುಗಳನ್ನು ಬಲಪಡಿಸುವ ಮತ್ತು ರಕ್ಷಿಸುವ ನಿಟ್ಟಿನಲ್ಲಿ 1983 ರಲ್ಲಿ ವಿಶ್ವ ಗ್ರಾಹಕರ ದಿನವನ್ನು ಮೊದಲ ಬಾರಿಗೆ ಗರುತಿಸಲಾಯಿತು. ಹಾಗೂ ಮಾರ್ಚ್ 15 ಅನ್ನು ವಿಶ್ವ ಗ್ರಾಹಕರ ಹಕ್ಕುಗಳ ದಿನವೆಂದು ಆಚರಣೆ ಮಾಡಲಾಯಿತು.
ಇಂದು ವಿಶ್ವ ಗ್ರಾಹಕ ಹಕ್ಕುಗಳ ದಿನವು ವಿಶ್ವಸಂಸ್ಥೆಯಿಂದ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ ಮತ್ತು ಮಾನ್ಯತೆಯನ್ನು ಪಡೆದಿದೆ. ಕಳೆದ 40 ವರ್ಷಗಳಿಂದ ಗ್ರಾಹಕರ ಆಂದೋಲನವನ್ನು ಒಗ್ಗೂಡಿಸಿ, ಅಭಿಯಾನಗಳನ್ನು ನಡೆಸುವ ಮೂಲಕ ಗ್ರಾಹಕರ ಅಂತರರಾಷ್ಟ್ರೀಯ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಗ್ರಾಹಕ ಹಕ್ಕುಗಳ ದಿನದ ಪ್ರಾಮುಖ್ಯತೆ
ಇತ್ತೀಚಿನ ಕೆಲ ವರ್ಷಗಳಿಂದ ಜನ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. ಗ್ರಾಹಕ ಹಕ್ಕುಗಳು ಬಂದ ನಂತರ ಜನ ತಮ್ಮ ದಿನನಿತ್ಯದ ಮಾರುಕಟ್ಟೆ ಚಟುವಟಿಕೆಗಳಲ್ಲಿ ಮೋಸ ಹೋಗುವಂತಹ ಪ್ರಕರಣಗಳು ಕಡಿಮೆ ಆಗುತ್ತಿದೆ. ಪ್ರತಿಯೊಬ್ಬ ಗ್ರಾಹಕನನ್ನು ಮೋಸ, ನಿಂದನೆಯಿಂದ ರಕ್ಷಿಸಬೇಕು ಹಾಗೂ ಆತನನ್ನು ಗೌರವದಿಂದ ಕಾಣಬೇಕು ಎಂಬುವುದೇ ಗ್ರಾಹಕ ಹಕ್ಕುಗಳ ಗುರಿಯಾಗಿದೆ. ಗ್ರಾಹಕರ ಹಕ್ಕುಗಳಲ್ಲಿ ಉಲ್ಲೇಖವಾಗಿರುವ ಅಂಶಗಳೆಂದರೆ ;
1. ಇದು ಗ್ರಾಹಕರ ರಕ್ಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತದೆ
2. ತಮ್ಮ ಹಕ್ಕುಗಳಿಗಾಗಿ ಹೋರಾಡುವಂತೆ ಜನರನ್ನು ಪ್ರೋತ್ಸಾಹಿಸುತ್ತದೆ
3. ವಿಶ್ವ ಗ್ರಾಹಕ ದಿನವು ವ್ಯಾಪಾರಗಳು ಮತ್ತು ಸರ್ಕಾರಗಳಿಗೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ಕೈಗೆಟುಕುವ ಸರಕುಗಳು ಮತ್ತು ಸೇವೆಗಳನ್ನು ಒದಗಿಸುವ ಜವಾಬ್ದಾರಿಯನ್ನು ನೆನಪಿಸುತ್ತದೆ.
4. ಗ್ರಾಹಕರು ತಮ್ಮ ದೂರುಗಳನ್ನು ಸಲ್ಲಿಸಲು ಇದು ಅವಕಾಶವನ್ನು ಒದಗಿಸುತ್ತದೆ
ಅನೇಕ ಜನರು ಈಗಲೂ ಮಾರುಕಟ್ಟೆಯಲ್ಲಿ ಮೋಸ ಹೋಗುತ್ತಿದ್ದಾರೆ. ಇಂತಹದೊಂದು ಹಕ್ಕು ಇರುವುದು ಕೂಡ ಅವರಿಗೆ ಗೊತ್ತಿಲ್ಲ. ಗ್ರಾಹಕ ಹಕ್ಕುಗಳ ಬಗ್ಗೆ ತಿಳಿದುಕೊಂಡರೆ ಇಂತಹ ಮೋಸ, ವಂಚನೆಯಿಂದ ತಪ್ಪಿಸಿಕೊಳ್ಳಬಹುದು.



Click it and Unblock the Notifications

