Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಕನ್ನಡ ರಾಜ್ಯೋತ್ಸವ 2024: ಕನ್ನಡಿಗರೇ, ಕನ್ನಡ ಹಬ್ಬಕ್ಕೆ ಶುಭ ಕೋರಲು ಇಲ್ಲಿವೆ ಶುಭಾಶಯಗಳು
ನವೆಂಬರ್ ತಿಂಗಳೆಂದರೆ ಕನ್ನಡಿಗರಿಗೆ ವಿಶೇಷವಾದ ತಿಂಗಳು. ಈ ವರ್ಷ ನಾವೆಲ್ಲಾ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಿದ್ದೇವೆ.
ಅಲ್ಲಲ್ಲಿ ಚದುರಿದ್ದ ಕನ್ನಡ ಪ್ರಾಂತ್ಯವೆನ್ನೆಲ್ಲಾ ಒಂದು ಗೂಡಿಸಿ ಅದನ್ನು ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಇಂದಿನ ಕರ್ನಾಟಕವನ್ನು ಹಿಂದೆ ಮೈಸೂರು ಪ್ರಾಂತ್ಯವೆಂದು ಕರೆಯಲಾಗಿತ್ತು.
ಕರ್ನಾಟಕದ ಹುಟ್ಟಿಗೆ ಕಾರಣರಾದ ಕನ್ನಡದ ಕುಲಪುರೋಹಿತ ಎಂದೇ ಹೆಸರಾದ ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905ರಲ್ಲಿ ಪ್ರಾರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 1ರಂದು ರಾಜ್ಯಗಳನ್ನು ವಿಂಗಡಿಸಿದರು.

ಅದರಂತೆ ಮದ್ರಾಸ್, ಮುಂಬಯಿ ಮತ್ತು ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳೆಲ್ಲವೂ ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ ಮೈಸೂರು ರಾಜ್ಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಯಿತು. ಅವುಗಳೆಂದರೆ ಉತ್ತರ ಕರ್ನಾಟಕ, ಹಳೆಯ ಮೈಸೂರು ಹಾಗೂ ಮಲೆನಾಡು.
ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.
ನಾವಿಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ, ಮೆಸೇಜ್ ಕಳುಹಿಸಲು ಕೋಟ್ಸ್ ನೀಡಿದ್ದೇವೆ ನೋಡಿ.

ವಿಶ್ 1
1. ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 2
ನವೆಂಬರ್ ಮಾಸಕ್ಕೆ ಮೀಸಲಾಗದಿರಲಿ ಕನ್ನಡ ರಾಜ್ಯೋತ್ಸವ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳಸೋಣ, ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಕನ್ನಡ ರಾಜ್ಯೋತ್ಸ
ನಮ್ಮ ಕನ್ನಡ, ನಮ್ಮ ಹೆಮ್ಮೆ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ4
. ಕನ್ನಡಿಗ ಮನದಲ್ಲಿ ಕನ್ನಡ ಪ್ರೇಮವಿರುವವರಿಗೂ ಯಾವ ಭಾಷೆ ಹೇರಿಕೆ ಬಗೆಯೂ ಹೆದರ ಬೇಕಾಗಿಲ್ಲ. ನಮ್ಮ ಕನ್ನಡವನ್ನು ಬೆಳೆಸೋಣ ಕನ್ನಡಿಗರೇ...
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 5
ನಾವು ಇತರರ ಭಾಷೆ ಕಲಿಯುವ ಆಸಕ್ತಿಯನ್ನು, ಕನ್ನಡವನ್ನು ಇತರರಿಗೆ ಕಲಿಸುವಲ್ಲಿಯೂ ತೋರೋಣ, ಜೈ ಕನ್ನಡಾಂಬೆ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 6
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 7
ಹಚ್ಚೇವು ಕನ್ನಡದ ದೀಪ
ಕರುನಾಡ ದೀಪ ಸಿರಿನುಡಿಯ ದೀಪ
ಒಲವೆತ್ತಿ ತೋರುವ ದೀಪ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 8
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 9
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಕನ್ನಡ ರಾಜ್ಯೋತ್ಸವದ ಶುಭಾಶಯಗಳು



Click it and Unblock the Notifications
