For Quick Alerts
ALLOW NOTIFICATIONS  
For Daily Alerts

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಈ ದಿನದ ಇತಿಹಾಸ ಮತ್ತು ಮಹತ್ವ

|

ಪ್ರತೀ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಮಕ್ಕಳ ದಿನವನ್ನು ಆಚರಿಸಲಾಗುವುದು. ಹೆಣ್ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಅವರ ಶಿಕ್ಷಣ, ಆರೋಗ್ಯ, ಪೋಷಕಾಂಶಕ್ಕೆ ಪ್ರಾ,ಮುಖ್ಯತೆ ನೀಡುವುದು ಈ ಆಚರಣೆಯ ಹಿಂದಿರುವ ಉದ್ದೇಶವಾಗಿದೆ.

National Girl Child Day 2022 Date

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ ಇತಿಹಾಸ:
ಈ ಸಮಾಜದಲ್ಲಿ ಹೆಣ್ಣು ಹಲವು ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾಳೆ, ಅವುಗಳನ್ನು ತಡೆಗಟ್ಟಲು ಹೆಣ್ಣಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. 2008ರಲ್ಲಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜನವರಿ 24ರಂದು ರಾಷ್ಟ್ರೀಯ ಹೆಣ್ಮಕ್ಕಳ ದಿನವನ್ನು ಘೋಷಿಸಿತ್ತು. ಈ ದಿನ ಹೆಣ್ಮಕ್ಕಳಿಗೆ ತಮ್ಮ ಹಕ್ಕುಗಳೇನು, ಶೋಷಣೆ ಉಂಟಾಗದಂತೆ ಮುನ್ನೆಚ್ಚರಿಕೆವಹಿಸುವುದು ಹೇಗೆ ಎಂಬೆಲ್ಲಾ ಕುರಿತು ಅನೇಕ ಕಾರ್ಯಕ್ರಮಗಲನ್ನು ಮಾಡಲಾಗುವುದು.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ 2023ರ ಧ್ಯೇಯ

2019ರಿಂದ ಪ್ರತೀವರ್ಷ ಈ ದಿನವನ್ನು ಒಂದೇ ಧ್ಯೇಯ ಇಟ್ಟುಕೊಂಡು ಆಚರಿಸಲಾಗುತ್ತಿದೆ. 'ನಾಳೆಯ ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳನ್ನು ಸಬಲೀಕರಣ ಮಾಡುವುದು' ಎಂಬುವುದೇ ಆ ಧ್ಯೇಯವಾಗಿದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಮುಖ ಉದ್ದೇಶಗಳು

* ಹೆಣ್ಣು ಮಕ್ಕಳು ಎದುರಿಸುತ್ತಿರುವ ಶೋಷಣೆ ಬಗ್ಗೆ ಜಾಗೃತಿ ಮೂಡಿಸುವುದು
* ಅವರ ಹಕ್ಕುಗಳ ಬಗ್ಗೆ ಜಗೃತಿ ಮೂಡಿಸುವುದು
* ಹೆಣ್ಣುಮಕ್ಕಳ ಶಿಕ್ಷಣ, ಆರೋಗ್ಯ ಇವುಗಳ ಪ್ರಾಮುಖ್ಯತೆ ಬಗ್ಗೆ ತಿಳಿಸುವುದು
* ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು
* ಕುಟುಂಬ, ಕೆಲಸದ ಸ್ಥಳ, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು

English summary

National Girl Child Day 2023 Date, History, Significance in Kannada

National Girl Child Day 2022 Date, History, Significance.....
X
Desktop Bottom Promotion