Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶಿಕ್ಷಕರ ದಿನಾಚರಣೆ 2025: ಶುಭ ಕೋರಲು ಇಲ್ಲಿದೆ ಶುಭ ಸಂದೇಶಗಳು, ಮೆಸೇಜ್, ಇಮೇಜ್
ಕಲ್ಲನ್ನು ಶಿಲೆಯಾಗಿಸುವ ಶಿಲ್ಪಿಯಂತೆ ಮಕ್ಕಳ ಭವಿಷ್ಯಕ್ಕೆ ಸುಂದರ ರೂಪ ನೀಡುತ್ತಿರುವ ಶಿಕ್ಷಕರಿಗೆ ಶಿಕ್ಷಕರ ದಿನದ ಶುಭಾಶಯಗಳು..
ಸೆಪ್ಟೆಂಬರ್ 5 ಶಿಕ್ಷಕರ ದಿನ. 1962ರಿಂದಲೂ ಆಚರಿಸಿಕೊಂಡು ಬರುತ್ತಿರುವ ಈ ದಿನ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಕೊಡುಗೆ ನೀಡಿದ ಶಿಕ್ಷಕ, ದಾರ್ಶನಿಕ, ದೇಶದ ಮೊದಲ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವೂ ಹೌದು. "ಶಿಕ್ಷಕರು ದೇಶದ ಅತ್ಯುತ್ತಮ ಮೆದುಳುಗಳಾಗಬೇಕು" ಎಂದು ಡಾ. ರಾಧಾಕೃಷ್ಣನ್ ಕರೆ ನೀಡಿದ್ದರು.

ಅತ್ಯುತ್ತಮ ಶಿಕ್ಷಕರಾಗಿದ್ದ ಸರ್ವಪಲ್ಲಿ ರಾಧಾಕೃಷ್ಣರವರ ಹುಟ್ಟುಹಬ್ಬದಂದು ವಿದ್ಯಾರ್ಥಿಗಳು ಬಂದು ನಿಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಿದ್ದೇವೆ ಎಂದಾಗ ಅವರು ನನ್ನ ಹುಟ್ಟುಹಬ್ಬವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಿದರೆ ತುಂಬಾ ಸಂತೋಷವಾಗುವುದು ಎಂದರು.
ಈ ದಿನವನ್ನು ದೇಶದ ಭವಿಷ್ಯವಾದ ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರ ದಿನವನ್ನಾಗಿ ಆಚರಿಸುವ ಮೂಲಕ ನಾವೆಲ್ಲರೂ ಶಿಕ್ಷಕರಿಗೆ ನೀಡುವ ಗೌರವವಾಗಿದೆ. ನಾವಿಲ್ಲಿ ಗುರುಗಳಿಗೆ ಕಳುಹಿಸಲು ಶುಭಾಶಯಗಳನ್ನು ನೀಡಿದ್ದೇವೆ ನೋಡಿ:
1. ಗುರುಗಳೇ, ನಿಮಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು
2. ವ್ಯಕ್ತಿಯ ಬದುಕಿನಲ್ಲಿ ಮುಂದೆ ಗುರು ಇರಬೇಕು, ಹಿಂದೆ ಗುರು ಇರಬೇಕು, ಆದರೆ ಮಾತ್ರ ಒಳಿತಾಗುವುದು
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
3. ಸಾವಿರ ದಿನ ಅಧ್ಯಯನದಲ್ಲಿ ತೊಡಗಿರುವುದಕ್ಕಿಂತ ಒಂದು ದಿನ ಒಳ್ಳೆಯ ಗುರುವಿನ ಜೊತೆಯಿದ್ದರೆ ಸಾಕು
-ಜಪಾನಿ ಗಾದೆ
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
4. ಪಠ್ಯವನ್ನು ಅದ್ಭುತವಾಗಿ ಬೋಧಿಸಿ ಕಲಿಕೆಯಲ್ಲಿ ಆಸಕ್ತಿ ಮೂಡಿಸಿದ ನಿಮಗೆ
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
5. ನನಗೆ ಉತ್ತಮ ಮಾರ್ಗದರ್ಶನ ನೀಡಿ, ಗೆಳೆಯನಂತೆಯೇ ನಮ್ಮೊಂದಿಗೆ ಬೆರೆತು, ಜೀವನದಲ್ಲಿ ಶಿಸ್ತನ್ನು ಮೂಡಿಸಿದ ನಿಮಗೆ ನನ್ನ ವಂದನೆಗಳು
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
6. ನಾವು ಇವತ್ತು ಏನಾಗಿದ್ದೆವೋ ಅದಕ್ಕೆ ನಿಮ್ಮ ಕೊಡುಗೆ ಮಹತ್ವವಾದದ್ದು
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
7. ಜೀವನದಲ್ಲಿ ಗುರಿ, ಸಾಧನೆಯ ಹಠ, ಶಿಸ್ತು ಇವೆಲ್ಲಾ ಕಲಿಸಿದ ನಿಮಗೆ
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
8. ನಿಮ್ಮ ವಿಶಿಷ್ಟ ಬೋಧನಾ ಶೈಲಿಯಿಂದ ನಾವೆಲ್ಲಾ ಖುಷಿ-ಖುಷಿಯಾಗಿ ಕಲಿಯುವಂತೆ ಮಾಡಿ, ಪಠ್ಯವನ್ನು ಅರ್ಥ ಮಾಡಿಸುತ್ತಿದ್ದ ನಿಮಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು



Click it and Unblock the Notifications









