Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಸುಖ, ಶಾಂತಿ, ಸಮೃದ್ಧಿಗಾಗಿ ಈ ವಸ್ತುಗಳನ್ನು ತಪ್ಪದೇ ದೇವರ ಕೋಣೆಯಲ್ಲಿಡಿ
ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜೊತೆಗೆ, ಪೂಜೆಗೆ ಬಳಸುವ ಕೆಲವು ವಸ್ತುಗಳನ್ನು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪೂಜೆಯ ಕೋಣೆಯಲ್ಲಿ ಕೆಲ ವಸ್ತುಗಳನ್ನು ಇಡುವುದರಿಂದ ಧನಾತ್ಮಕ ಶಕ್ತಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೆ, ನಿಮ್ಮ ಸಂತೋಷ ಮತ್ತು ಸಮೃದ್ಧಿಯ ಮಾರ್ಗವು ತೆರೆಯುತ್ತದೆ. ಹಾಗಾದರೆ, ಕಡ್ಡಾಯವಾಗಿ ಇಡಲೇಬೇಕಾದ ಕೆಲವು ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ನೋಡೋಣ.
ಪೂಜೆಯ ಮನೆಯಲ್ಲಿ ಯಾವ ವಸ್ತುಗಳನ್ನು ಇಡುವುದರಿಂದ ಸಂತೋಷ, ಸಮೃದ್ಧಿ ಮತ್ತು ಸಂಪತ್ತು ಹೆಚ್ಚಾಗುತ್ತದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಶಂಖ:
ಪೂಜೆಯ ಕೋಣೆಯಲ್ಲಿ ಶಂಖವನ್ನು ಇಡುವುದು ತುಂಬಾ ಮಂಗಳಕರ. ಸಾಗರ ಮಂಥನದ ಸಮಯದಲ್ಲಿ, ಲಕ್ಷ್ಮಿ ದೇವಿಯ ಜೊತೆಗೆ ಶಂಖವನ್ನು ಸಹ ಹೊರತೆಗೆಯಲಾಯಿತು. ಪೂಜೆಯ ನಂತರ ಶಂಖವನ್ನು ಊದುವುದು ಉತ್ತಮ. ಇದು ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತರುತ್ತದೆ.

ಶಾಲಿಗ್ರಾಮ:
ಶಾಲಿಗ್ರಾಮವು ಭಗವಾನ್ ಶ್ರೀ ವಿಷ್ಣುವಿನ ರೂಪವಾಗಿದೆ. ಅದನ್ನು ಪೂಜಿಸಿದರೆ, ಭಗವಾನ್ ವಿಷ್ಣುವು ಪ್ರಸನ್ನನಾಗುತ್ತಾನೆ. ಶಾಲಿಗ್ರಾಮದ ದೇವತೆಯನ್ನು ತುಳಸಿ ಎಲೆಗಳಿಂದ ಪೂಜಿಸಲಾಗುತ್ತದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಗಂಟೆ/ಜಾಗಟೆ:
ಗಂಟೆಯ ಶಬ್ದವು ಧನಾತ್ಮಕ ಶಕ್ತಿಯನ್ನು ಮನೆಯಲ್ಲಿ ನೆಲಸುವಂತೆ ಮಾಡಿ, ನಕಾರಾತ್ಮಕ ಶಕ್ತಿಯನ್ನು ಹೊರಹಾಕುವುದು. ಜೊತೆಗೆ ನಿತ್ಯವೂ ಗಂಟೆ ಬಾರಿಸುವ ಮನೆಗಳಲ್ಲಿ ಅದರ ಪ್ರತಿಧ್ವನಿ ಕೇಳಿಸುತ್ತದೆ ಎನ್ನುತ್ತಾರೆ. ಆ ಮನೆಯಲ್ಲಿ ಸಕಾರಾತ್ಮಕತೆ ಉಳಿಯುತ್ತದೆ, ದುಷ್ಟ ಶಕ್ತಿಗಳು ದೂರ ಹೋಗುತ್ತವೆ.

ನವಿಲುಗರಿ:
ವಾಸ್ತು ಶಾಸ್ತ್ರದ ಪ್ರಕಾರ, ನವಿಲು ಗರಿಗಳನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಕೃಷ್ಣನ ಕಿರೀಟದಲ್ಲಿಯೂ ನವಿಲು ಗರಿಗಳನ್ನು ಇಡಲಾಗಿದೆ. ನವಿಲು ಗರಿ ಸಂಪತ್ತನ್ನು ತರುತ್ತದೆ. ಇದಲ್ಲದೆ, ಮನೆಯಲ್ಲಿ ಸಂತೋಷ ಮತ್ತು ಶಾಂತಿಯನ್ನು ನೆಲೆಸುವಂತೆ ಮಾಡುವುದು.

ಗಂಗಾಜಲ:
ಯಾವುದೇ ದೇವತೆಯ ಆರಾಧನೆ ಅಥವಾ ಪೂಜೆಗೆ ಗಂಗಾಜಲ ಅವಶ್ಯಕ. ಇದಕ್ಕೆ ವಿಶೇಷ ಮಹತ್ವವಿದೆ. ಹಿತ್ತಾಳೆ ಮತ್ತು ಬೆಳ್ಳಿಯ ಪಾತ್ರೆಗಳಲ್ಲಿ ಗಂಗಾಜಲವನ್ನು ಇಡುವುದರಿಂದ ದೇವಿ ಲಕ್ಷ್ಮಿಯು ಪ್ರಸನ್ನಳಾಗುತ್ತಾಳೆ. ಆದ್ದರಿಂದ ನಿಮ್ಮ ಮನೆಯ ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಡುವುದನ್ನು ಮರೆಯಬೇಡಿ.



Click it and Unblock the Notifications
