Latest Updates
-
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI!
ವಿಶ್ವ ತಂಬಾಕು ರಹಿತ ದಿನ: ದಿನಾಂಕ, ಇತಿಹಾಸ, ಥೀಮ್ ಹಾಗೂ ಪ್ರಾಮುಖ್ಯತೆಯ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
ಧೂಮಪಾನ ಅಥವಾ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಸ್ವತಃ ಧೂಮಪಾನ ಮಾಡುವವರಿಗೂ ಗೊತ್ತು. ಆದರೆ ಏನು ಮಾಡೋದು? ಒಮ್ಮೆ ಕೆಟ್ಟ ಚಟಕ್ಕೆ ಬಿದ್ದರೆ, ನೀವು ಬಿಡಬೇಕೆಂದರೂ ಅದು ನಿಮ್ಮನ್ನು ಬಿಡಲಾರದು. ಇದರಿಂದ ಜೀವ ಕಳೆದುಕೊಂಡವರು ಅದೆಷ್ಟೋ ಮಂದಿ.
ಆರೋಗ್ಯಕ್ಕೆ ದುಷ್ಪರಿಣಾಮ ಬೀರುವ ತಂಬಾಕು ಮತ್ತು ಸಿಗರೇಟ್ ಸೇವನೆಯ ಕುರಿತಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಪ್ರತೀ ವರ್ಷ ಆಚರಿಸಲಾಗುತ್ತದೆ. ಈ ದಿನವನ್ನು ಯಾವಾಗ ಆಚರಿಸುತ್ತಾರೆ? ಈ ವರ್ಷದ ಥೀಮ್ ಹಾಗೂ ಪ್ರಾಮುಖ್ಯತೆ ಏನು ಎಂಬುದನ್ನು ಈ ಲೇಖನದಲ್ಲಿ ನೋಡೋಣ.
ವಿಶ್ವ ತಂಬಾಕು ರಹಿತ ದಿನದ ಸಂಪೂರ್ಣ ಮಾಹಿತಿ ಈ ಕೆಳಗಿದೆ:

ಇಂದು ವಿಶ್ವತಂಬಾಕು ರಹಿತ ದಿನ:
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ತಂಬಾಕು ಬಳಕೆಯು ವಿಶ್ವದಾದ್ಯಂತ 8 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಧೂಮಪಾನ ತ್ಯಜಿಸಿದರೆ ಆದಷ್ಟು ಬೇಗ ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣಬಹುದು. ಆದ್ದರಿಂದ ತಂಬಾಕು ಮತ್ತು ಧೂಮಪಾನ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಮೇ 31 ರಂದು ವಿಶ್ವದಾದ್ಯಂತ ತಂಬಾಕು ರಹಿತ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಮೂಲಕ ಆರೋಗ್ಯದ ಮೇಲೆ ತಂಬಾಕಿನ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಲು ಹಲವಾರು ಅಭಿಯಾನಗಳು, ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ.

ವಿಶ್ವ ತಂಬಾಕು ರಹಿತ ದಿನದ ಈ ವರ್ಷದ ಥೀಮ್:
ಪ್ರತಿವರ್ಷ ವಿಭಿನ್ನ ಆಲೋಚನೆಯೊಂದಿಗೆ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ವರ್ಷದ ವಿಶ್ವ ತಂಬಾಕು ರಹಿತ ದಿನದ ಥೀಮ್ ಏನೆಂದರೆ "ಕಮಿಟ್ಸ್ ಟು ಕ್ವಿಟ್" ಅಂದರೆ ತ್ಯಜಿಸಲು ಬದ್ಧರಾಗಿರಿ ಎಂಬ ಅರ್ಥವನ್ನು ನೀಡುತ್ತದೆ. ಕೊರೊನಾ ಸೋಂಕು ಹರಡುವಿಕೆಯಿಂದಾಗಿ ಲಕ್ಷಾಂತರ ಜನರು ಧೂಮಪಾನ ಮತ್ತು ತಂಬಾಕು ಸೇವನೆಯನ್ನು ತ್ಯಜಿಸಲು ಬದ್ಧರಾಗಿದ್ದಾರೆ ಎಂಬ ಅರ್ಥವನ್ನು ನೀಡುತ್ತದೆ.

ವಿಶ್ವ ತಂಬಾಕು ರಹಿತ ದಿನದ ಇತಿಹಾಸ
ಕನಿಷ್ಟ 24 ಗಂಟೆಗಳ ಕಾಲವಾದರೂ ತಂಬಾಕು ಸೇವನೆಯನ್ನು ತಡೆಯಲು ವಿಶ್ವ ಸಂಸ್ಥೆ ಮೇ 1988 ರಂದು ವಿಶ್ವ ತಂಬಾಕು ರಹಿತ ದಿನವನ್ನು ಜಾರಿಗೆ ತರುವ ಮೂಲಕ ಪ್ರತಿವರ್ಷ ಆಚರಣೆಗೆ ಕರೆ ನೀಡಿತು. ಇದೇ ಬೆನ್ನಲ್ಲಿ ವಿಶ್ವ ಆರೋಗ್ಯ ಸಂಸ್ಥೆ 2008ರಲ್ಲಿ ತಂಬಾಕಿನ ಕುರಿತಾದ ಜಾಹಿರಾತುಗಳನ್ನು ನಿಷೇಧಿಸಿತು.

ತಂಬಾಕು ರಹಿತ ದಿನದ ಪ್ರಾಮುಖ್ಯತೆ:
ಈ ವಾರ್ಷಿಕ ಆಚರಣೆಯು ನಾಗರಿಕರು ತಂಬಾಕು ಬಳಕೆ ಮಾಡುವುದರಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸದ್ಯ ಇರುವ ಕೊರೋನಾ ಪರಿಸ್ಥಿತಿಯಲ್ಲೂ ಇದು ತಂಬಾಕು ಸೇವನೆಯ ತ್ಯಜಿಸುವಿಕೆ ತುಂಬಾ ಅಗತ್ಯವಾಗಿದೆ. ಏಕೆಂದರೆ ಧೂಮಪಾನ ಅಥವಾ ತಂಬಾಕು ಬಳಕೆದಾರರಿಗೆ ಕೊರೊನಾ ಹೆಚ್ಚು ಅಪಾಯವನ್ನುಂಟು ಮಾಡುತ್ತದೆ. ಆರೋಗ್ಯಕರ ಜೀವನ ಮತ್ತು ಭವಿಷ್ಯದ ಪೀಳಿಗೆಗಳನ್ನು ರಕ್ಷಿಸಲು ಈ ದಿನ ಹೆಚ್ಚು ಪ್ರಾಮುಖ್ಯತೆ ಪಡೆದಿದೆ.



Click it and Unblock the Notifications
