Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಸ್ವಂತ ಕಾರಿಲ್ಲ..ಮನೆಯೂ ಇಲ್ಲ..! ಯದುವೀರ್ ಆಸ್ತಿ ಘೋಷಣೆ..!
ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗುತ್ತಿದೆ. ಒಂದಕ್ಕಿಂತ ಒಂದು ಕ್ಷೇತ್ರದಲ್ಲಿ ಈ ಬಾರಿ ಪೈಪೋಟಿ ಕಾಣುತ್ತಿದೆ. ಅದರಲ್ಲೂ ರಾಜ್ಯದಲ್ಲಿ ಚುನಾವಣೆಯ ಸಿದ್ಧತೆ ಭರದಿಂದ ಸಾಗಿದೆ. ಅತ್ತ ಇಡೀ ದೇಶ ಮಂಡ್ಯ ಲೋಕಸಭೆ ಕ್ಷೇತ್ರದತ್ತ ದೃಷ್ಟಿ ಹಾಯಿಸಿದರೆ ಇನ್ನೊಂದೆಡೆ ಮೈಸೂರು ಕ್ಷೇತ್ರ ಸಹ ಈ ಬಾರಿ ಸದ್ದು ಮಾಡ್ತಿದೆ.
ಮೈಸೂರು ಕ್ಷೇತ್ರದಿಂದ ಯದುವೀರ್ ಒಡೆಯರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಎಲ್ಲರಲ್ಲೂ ಅಚ್ಚರಿಯ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಇನ್ನೊಂದೆಡೆ ಅವರು ಪ್ರಚಾರದಲ್ಲಿ ತೊಡಗಿದ್ದು, ಗೆಲುವು ಪಡೆಯುವ ವಿಶ್ವಾಸದಲ್ಲಿದ್ದಾರೆ. ಇನ್ನು ಚುನಾವಣೆಯ ಹೊಸ್ತಿಲಲ್ಲಿ ಅಭ್ಯರ್ಥಿಯಾದವರು ತಮ್ಮ ಆಸ್ತಿಯನ್ನು ಘೋಷಿಸಿಕೊಳ್ಳಬೇಕಾಗುತ್ತದೆ.

ಅದರಂತೆ ಮೈಸೂರಿನ ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರು ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಆದ್ರೆ ಅವರ ಆಸ್ತಿ ವಿವರಣೆ ಕೇಳಿದರೆ ನಿಮಗೂ ಅಚ್ಚರಿಯಾಗುವುದು ಸತ್ಯ. ಏಕೆಂದರೆ ರಾಜ ಮನೆತನದಲ್ಲಿ ಹುಟ್ಟಿದವರ ಆಸ್ತಿ ಎಷ್ಟಿರಬಹುದು ಎಂಬ ಊಹೆ ನಿಮ್ಮಲ್ಲಿರಬಹುದು. ಆದರೆ ಇಲ್ಲಿ ನಿಮ್ಮ ಊಹೆ ತಪ್ಪಾಗುವ ಜೊತೆಗೆ ನಿಮಗೆ ಅಚ್ಚರಿ ಮೇಲೆ ಅಚ್ಚರಿ ಕಾದಿದೆ.
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಒಡೆಯವರು ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 01 ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ ಶ್ರೀವತ್ಸ ಜೊತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ಘೋಷಿಸಿದ್ದಾರೆ. ಅವರ ನಾಮಪತ್ರದ ಪ್ರಕಾರ, ಅವರ ಒಟ್ಟು ಆಸ್ತಿ ಕೇವಲ 5 ಕೋಟಿ ರೂಪಾಯಿ ಆಗಿದೆ. ಹೌದು ಅಚ್ಚರಿ ಅನಿಸಿದರು ಇದು ಸತ್ಯ. ರಾಜರ ವಂಶಸ್ಥರಾದ ಅವರ ಆಸ್ತಿ ಕೇವಲ 5 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ.
ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಮತ್ತು ಅವಲಂಬಿತ ವ್ಯಕ್ತಿ ಕ್ರಮವಾಗಿ 1.04 ಕೋಟಿ ಮತ್ತು 3.64 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಇದಕ್ಕಿಂತಲೂ ಅಚ್ಚರಿಯ ವಿಚಾರ ಅಂದರೆ, ಒಡೆಯರ್ ಅವರು 3.39 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಹೊಂದಿದ್ದಾರೆ ಮತ್ತು ಅವರ ಪತ್ನಿ 1.02 ಕೋಟಿ ರೂಪಾಯಿ ಮೌಲ್ಯದ ಅಮೂಲ್ಯ ಚಿನ್ನ-ಬೆಳ್ಳಿ ಹೊಂದಿದ್ದಾರೆ.
ಅವರ ನಾಮಪತ್ರದ ಪ್ರಕಾರ ಅವರು ಸ್ವಂತ ಮನೆ, ಜಮೀನು, ಕಾರು ಸಹ ಹೊಂದಿಲ್ಲವಂತೆ. ಹೌದು ಇದನ್ನು ಕೇಳಿ ನಿಮಗೂ ಅಚ್ಚರಿ ಎನಿಸಬಹುದು. ಅವರ ಹೆಸರಿನಲ್ಲಿ ಯಾವುದೇ ಮನೆಯಿಲ್ಲ, ಜಮೀನು ಇಲ್ಲ ಜೊತೆಗೆ ಕಾರು ಸಹ ಇಲ್ಲ ಎಂದು ಘೋಷಿಸಿಕೊಂಡಿದ್ದಾರೆ.
ಕೈಯಲ್ಲಿ 1 ಲಕ್ಷ ರೂಪಾಯಿ ನಗದು, ಬೇರೆ ಬೇರೆ ಬ್ಯಾಂಕ್ ಖಾತೆಗಳಲ್ಲಿ 1.36 ಕೋಟಿ ರೂಪಾಯಿ ಹಣ, ಇದರ ಜೊತೆಗೆ 3.25 ಕೋಟಿ ಮೌಲ್ಯದ 4 ಕೆಜಿ ಚಿನ್ನ, 14 ಲಕ್ಷ ರೂಪಾಯಿ ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂಪಾಯಿ ಚರಾಸ್ತಿಯನ್ನು ನಾಮಪತ್ರ ಸಲ್ಲಿಕೆ ವೇಳೆ ಯದುವೀರ್ ಘೋಷಿಸಿಕೊಂಡಿದ್ದಾರೆ. ಇನ್ನು ವಿಶೇಷ ಎಂದರೆ ಯದುವೀರ್ ಅವರು ಯಾವುದೇ ರೀತಿಯ ಸ್ಥಿರಾಸ್ತಿ ಹೊಂದಿಲ್ಲ.
ಇನ್ನು ಯದುವೀರ್ ಒಡೆಯರ್ ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್‌ನಿಂದ ಎಂ ಲಕ್ಷ್ಮಣ್ ಕಣಕ್ಕಿಳಿದಿದ್ದು, ಅವರು ಸಹ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಸದ್ಯ ಇಡೀ ದೇಶದ ದೃಷ್ಟಿ ಈ ಕ್ಷೇತ್ರದ ಮೇಲಿದ್ದು, ಮತದಾರ ಪ್ರಭು ಯಾರ ಕೈ ಹಿಡಿಯಲಿದ್ದಾನೆ ಎಂಬುದನ್ನು ಕಾದು ನೋಡಬೇಕಿದೆ.



Click it and Unblock the Notifications