Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬುಧ-ಮಂಗಳನ ರಾಶಿ ಬದಲಾವಣೆ 2023: ಈ 5 ರಾಶಿಯವರಿಗೆ ಸಂಕಷ್ಟ
ಏಪ್ರಿಲ್ 20 ರಂದು ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ಸಮಯದಲ್ಲಿ ಸೂರ್ಯನು ರಾಹು ಮತ್ತು ಬುಧ ಗ್ರಹದ ಜೊತೆಗೆ ಮೇಷ ರಾಶಿಯಲ್ಲಿರುತ್ತಾನೆ. ಮಂಗಳ ಗ್ರಹವನ್ನು ಮೇಷ ರಾಶಿಯ ಅಧಿಪತಿ ಎಂದೂ ಹಾಗೂ ಬುಧನನ್ನು ಮಿಥುನ ರಾಶಿಯ ಅಧಿಪತಿ ಎಂದು ಕರೆಯಲಾಗುತ್ತದೆ. ಸೂರ್ಯಗ್ರಹಣವು 5 ರಾಶಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹಾಗಾದರೆ ಆ ರಾಶಿಗಳು ಯಾವುದು ಅನ್ನೋದನ್ನ ನೋಡೋಣ :

ಮೇಷ ರಾಶಿ
ಮೇಷ ರಾಶಿಯ ಜನರಿಗೆ ಗ್ರಹಗಳ ಬದಲಾವಣೆಯು ಅಶುಭ ಪರಿಣಾಮವನ್ನು ಬೀರುತ್ತದೆ ಎನ್ನಲಾಗುತ್ತದೆ. ಈ ಸಮಯದಲ್ಲಿ ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತೀರಿ. ನಿಮ್ಮ ನೆಚ್ಚಿನ ಕೆಲಸ ಸಿಗದೇ ಇರುವುದರಿಂದ ಮಾನಸಿಕ ಗೊಂದಲಗಳು ಹೆಚ್ಚಾಗುತ್ತವೆ. ಉದ್ಯೋಗ ಅಥವಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ನೀವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಈ ಸಂದರ್ಭದಲ್ಲಿ ಕೆಲಸ ಬದಲಾವಣೆಯ ನಿರ್ಧಾರ ಕೈಗೊಳ್ಳಬೇಡಿ. ಯಾಕಂದ್ರೆ ಆ ನಿರ್ಧಾರ ನಿಮಗೆ ತೊಂದರೆಯುಂಟು ಮಾಡಬಹುದು.
ವೃಷಭ ರಾಶಿ
ಗ್ರಹಗಳ ಬದಲಾವಣೆಯು ವೃಷಭ ರಾಶಿಯವರ ಮೇಲೆ ಕೆಲವೊಂದು ಕೆಟ್ಟ ಪರಿಣಾಮಗಳನ್ನು ಬೀರಲಿದೆ. ನೀವು ವೃತ್ತಿ ಮತ್ತು ಕುಟುಂಬದ ವಿಷಯದಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಕೋಪ ಹೆಚ್ಚಾಗಿ ಇತರರ ಜೊತೆಗೆ ವಾಗ್ವಾದಕ್ಕೆ ಇಳಿಯುತ್ತೀರಿ. ನಿಮ್ಮ ಖರ್ಚುಗಳು ಇದ್ದಕ್ಕಿದ್ದಂತೆ ಹೆಚ್ಚಾಗಬಹುದು. ಮತ್ತು ಅನಗತ್ಯ ವಸ್ತುಗಳನ್ನು ಖರೀದಿಸಲು ಬಹಳಷ್ಟು ಹಣವನ್ನು ಖರ್ಚು ಮಾಡುತ್ತೀರಿ. ಈ ಸಮಯದಲ್ಲಿ ನೀವು ಬೇರೆಯವರಿಗೆ ಸಾಲ ನೀಡಬೇಕಾದ ಪ್ರಸಂಗ ಎದುರಾಗುತ್ತದೆ. ನಿಮ್ಮ ವಾಹನ ಸ್ಥಗಿತದಿಂದಾಗಿ ನಿಮ್ಮ ಖರ್ಚು-ವೆಚ್ಚಗಳು ಹೆಚ್ಚಾಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯ ಜನರು ಮಂಗಳ ಮತ್ತು ಬುಧ ಗ್ರಹಗಳ ಸಂಚಾರದಿಂದ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಈ ಸಮಯದಲ್ಲಿ ಹದಗೆಡುವ ಸಾಧ್ಯತೆಗಳಿದೆ. ಹಳೆಯ ರೋಗ ಮತ್ತೆ ಮರುಕಳಿಸುತ್ತದೆ. ಕುಟುಂಬದಲ್ಲಿ ಸಮಸ್ಯೆ ಹೆಚ್ಚಾಗುತ್ತದೆ. ವ್ಯಾಪಾರ ಮಾಡುತ್ತಿರುವವರು ಎಚ್ಚರಿಕೆಯಿಂದ ಇರಬೇಕು. ಉದ್ಯೋಗಸ್ಥರು ಕೆಲಸದ ಸ್ಥಳದಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ತುಲಾ ರಾಶಿ
ತುಲಾ ರಾಶಿಯವರು ಗ್ರಹಗಳ ಬದಲಾವಣೆಯ ಪರಿಣಾಮದಿಂದಾಗಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕುಟುಂಬದವರ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಹೆಚ್ಚಾಗಿ ಕಾಡುತ್ತದೆ. ಆರ್ಥಿಕ ಸಮಸ್ಯೆಗಳು ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ತಂದೆಯೊಂದಿಗೆ ನಿಮ್ಮ ಸಂಬಂಧ ಹಾಳಾಗುತ್ತದೆ. ಉದ್ಯೋಗದಲ್ಲಿನ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮ ಎಲ್ಲಾ ಯೋಜನೆಯನ್ನು ನಾಶಪಡಿಸಬಹುದು. ಈ ಸಮಯದಲ್ಲಿ ನೀವು ಯಾವುದೇ ಉಳಿತಾಯವನ್ನು ಮಾಡಲು ಸಾಧ್ಯವಾಗುವುದಿಲ್ಲ. ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಮಕರ ರಾಶಿ
ಗ್ರಹಗಳ ಬದಲಾವಣೆಯು ಮಕರ ರಾಶಿಯವರ ಮೇಲೆ ಕೆಟ್ಟ ಪರಿಣಾಮವನ್ನು ಉಂಟುಮಾಡಲಿದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಕೆಲವು ಹಠಾತ್ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಮೇಲಿನ ಅಧಿಕಾರಿಯ ಜೊತೆಗೆ ಸಂಬಂಧ ಹಾಳಾಗುತ್ತದೆ. ಕಛೇರಿಯಲ್ಲಿ ಕೆಲಸ ಮಾಡುವುದು ನಿಮಗೆ ಹೊರೆಯಾಗಲಿದೆ. ತಾಯಿಯ ಆರೋಗ್ಯ ಸಮಸ್ಯೆಯಿಂದ ಮನೆಯಲ್ಲಿ ನಿರಂತರ ತೊಂದರೆಯುಂಟಾಗುತ್ತದೆ. ಅಧಿಕ ಬಿಪಿ ಸಮಸ್ಯೆ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.



Click it and Unblock the Notifications

