Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್: ಭಗವದ್ಗೀತೆ ಓದಿದ್ದು ಇಲ್ಲಿ ಕೆಲಸಕ್ಕೆ ಬಂತಂತೆ..!!
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಇಂದು ಶುಭಾರಂಭ ಮಾಡಿದೆ. ಇಂದು ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ ಕಂಚಿನ ಪದಕವನ್ನು ಗೆದ್ದು ಭಾರತದ ಪರ ಹೊಸ ಇತಿಹಾಸ ಬರೆದಿದ್ದಾರೆ. ಮಹಿಳಾ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿದ ಮೊದಲ ಒಲಿಂಪಿಕ್ ಪದಕ ಇದಾಗಿದೆ. ಮೂರನೇ ಸ್ಥಾನದಲ್ಲಿ ಫೈನಲ್‌ಗೆ ಅರ್ಹತೆ ಪಡೆದ ಮನು ಭಾಕರ್, ಅಪಾರ ಒತ್ತಡದಲ್ಲೂ ಸ್ಥಿರ ಪ್ರದರ್ಶನ ನೀಡಿದರು.
ಕೇವಲ 0.1 ಅಂಕಗಳಿಂದ ಅವರು ಬೆಳ್ಳಿ ಪದಕ ಗೆಲ್ಲುವ ಅವಕಾಶ ತಪ್ಪಿಸಿಕೊಂಡರು. 22 ವರ್ಷದ ಮನು ಅವರ ಮೂಲಕ ಭಾರತ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಪದಕ ಬೇಟೆ ಆರಂಭಿಸಿದಂತಾಗಿದೆ. ಮನು ಭಾಕರ್ ಅವರು ಪದಕ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಮೊದಲ ಪದಕ ಗೆದ್ದ ಮನು ಭಾಕರ್ ಅವರಿಗೆ ಅಭಿನಂದನೆಗಳು. ಭಾರತಕ್ಕಾಗಿ ಶೂಟಿಂಗ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ನಂಬಲಾಗದ ಸಾಧನೆ ಎಂದು ಬಣ್ಣಿಸಿದ್ದಾರೆ.

ಈ ಮೊದಲು ವಿಜಯ್ ಕುಮಾರ್ ಮತ್ತು ಗಗನ್ ನಾರಂಗ್ 2012ರ ಶೂಟಿಂಗ್‌ನಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದರು ಆದರೆ ಮಹಿಳಾ ಶೂಟರ್ ಒಬ್ಬರು ಈ ಸಾಧನೆ ಮಾಡಿದ್ದು ಇದೇ ಮೊದಲು. ಮನು ಅವರ ಈ ಸಾಧನೆ ಕುರಿತು ಪದಕ ಸ್ವೀಕರಿಸಿ ಮಾತನಾಡಿದರು. ಈ ವೇಳೆ ಅವರು ಭಾವುಕರಾಗಿದ್ದು ಕಂಡುಬಂತು.
ಅವರ ಸಾಧನೆ ಕುರಿತು ಮಾತನಾಡಿದ ಅವರು, ನಾನು ಭಗವದ್ಗೀತೆಯನ್ನು ಸಾಕಷ್ಟು ಓದಿದ್ದೇನೆ. ನನ್ನ ಮನಸ್ಸಿನಲ್ಲಿ ಏನಾಗುತ್ತಿದೆ ಎಂದರೆ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಬೇಕು. ನಿಮ್ಮ ಹಣೆಬರಹದಲ್ಲಿ ಏನು ಬರೆದಿದೆ ಎಂಬುದನ್ನು ನೀವು ನಿಯಂತ್ರಿಸಲು ಸಾಧ್ಯವಿಲ್ಲ. ಗೀತೆಯಲ್ಲಿ, ಶ್ರೀಕೃಷ್ಣನು ಅರ್ಜುನನಿಗೆ ಹೇಳುತ್ತಾನೆ, ನಿನ್ನ ಕೆಲಸ ನೀನು ಮಾಡು ಫಲಾನು ಫಲ ನನಗೆ ಬಿಡು ಎಂದು, ಅದು ನನ್ನ ತಲೆಯಲ್ಲಿ ಓಡುತ್ತಿತ್ತು. ನಾನು ಸಹ ಅದೇ ರೀತಿ ಯೋಚಿಸಿದೆ. ನಿಮ್ಮ ಕೆಲಸ ಶ್ರದ್ಧೆಯಿಂದ ಮಾಡಿ ಉಳಿದ ಎಲ್ಲವನ್ನು ಬಿಟ್ಟು ಬಿಡಿ ಎಂದು ಮನು ಭಾಕರ್ ಹೇಳಿದ್ದಾರೆ.
ಭಾಕರ್ 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕದ ಅಂಚಿನಲ್ಲಿ ಯಡುವಿದ್ದರು. ಆದರೆ ಈ ಬಾರಿ ಸಂಪೂರ್ಣ ತಯಾರಿಯೊಂದಿಗೆ ಕಣಕ್ಕಿಳಿದಿದ್ದರು. 'ಟೋಕಿಯೊದ ನಂತರ ನಾನು ತುಂಬಾ ನಿರಾಶೆಗೊಂಡೆ. ಅದನ್ನು ಜಯಿಸಲು ನನಗೆ ಬಹಳ ಸಮಯ ಹಿಡಿಯಿತು. ಹಿಂದೆ ಏನು ನಡೆದಿದೆ ಎನ್ನುವುದಕ್ಕಿಂತ ಈಗ ಏನಾಗುತ್ತಿದೆ ಎಂಬುದೇ ಮುಖ್ಯವಾಗಿತ್ತು' ಎಂದು ಅವರು ಹೇಳಿಕೊಂಡಿದ್ದಾರೆ.
2017 ರ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮನು ಭಾಕರ್ ಅವರು ಒಲಿಂಪಿಯನ್ ಮತ್ತು ಮಾಜಿ ವಿಶ್ವದ ನಂ. 1 ಹೀನಾ ಸಿಧು ಅವರನ್ನು ಸೋಲಿಸಿ ಗಮನ ಸೆಳೆದಿದ್ದರು. ಈ ವೇಳೆ ಅವರು 242.3 ಅಂಕ ಪಡೆದಿದ್ದರು. ಅಂದಿನಿಂದ ಇದು ಅತ್ಯಧಿಕ ಅಂಕವಾಗಿ ಇಂದಿಗೂ ಬೋರ್ಡ್ ಮೇಲೆ ಮೆರೆದಾಡುತ್ತಿದೆ. 2017ರಲ್ಲಿ ಏಷ್ಯನ್ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದರು. 2018ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಗೇಮ್‌ನಲ್ಲಿ ಚಿನ್ನದ ಪದಕ ಗೆದ್ದು ಭರವಸೆಯ ಶೂಟರ್ ಎನಿಸಿಕೊಂಡಿದ್ದರು. 2021 ರ ನವದೆಹಲಿ ISSF ವಿಶ್ವಕಪ್‌ನಲ್ಲಿ 10m ಏರ್ ಪಿಸ್ತೂಲ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.



Click it and Unblock the Notifications











