Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ವಾರಭವಿಷ್ಯ(ಮೇ 7-13): ಈ 4 ರಾಶಿಯವರಿಗೆ ಈ ವಾರ ಅದೃಷ್ಟಕರವಾಗಿದೆ
ವೈದಿಕ ಶಾಸ್ತ್ರದ ಪ್ರಕಾತ ಮೇ 7-13ರವರೆಗಿನ ವಾರ ಭವಿಷ್ಯ ನೋಡುವುದಾದರೆ ಈ ನಾಲ್ಕು ರಾಶಿಗಳಿಗೆ ತುಂಬಾನೇ ಅದೃಷ್ಟಕರವಾಗಿದೆ ನೋಡಿ.
ಕರ್ಕ ರಾಶಿ
ಈ ವಾರ ಕರ್ಕ ರಾಶಿಗಳಿಗೆ ತುಂಬಾ ಒಳ್ಳೆಯದಿದೆ. ಈ ವಾರ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಉದ್ಯಮಿಗಳಿಗೆ ಈ ವಾರ ಫಲಪ್ರದವಾಗಿದೆ. ನಿಮ್ಮ ಅಪೂರ್ಣವಾಗಿದ್ದ ಕೆಲಸ ಪೂರ್ಣವಾಗಲಿದೆ. ವ್ಯಾಪಾರಿಗಳು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಕೆಲಸದ ಹೊರೆ ಅಧುಕವಿದ್ದರೂ ಅದನ್ನು ನೀವು ಸಮರ್ಥವಾಗಿ ಮಾಡಿ ಮುಗಿಸುತ್ತೀರಿ. ಈ ವಾರ ಹಣಕಾಸು ಉತ್ತಮವಾಗಿದೆ ಎಂದು ಅತಿಯಾಗಿ ಖರ್ಚು ಮಾಡಲು ಹೋಗಬೇಡಿ. ಆರೋಗ್ಯದ ಬಗ್ಗೆ ನೋಡುವುದಾದರೆ ಈ ವಾರ ಯಾವುದೇ ದೊಡ್ಡ ಸಮಸ್ಯೆಯಿಲ್ಲ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಒಳ್ಳೆಯದಿದೆ. ವೃತ್ತಿ ಜೀವನದಲ್ಲಿ ನೀವು ಎದುರಿಸುತ್ತಿರುವ ಸಮಸ್ಯೆಗಳು ಕೊನೆಯಾಗಲಿದೆ. ಈ ವಾರ ನಿಮ್ಮ ಕೆಲಸದ ಕಡೆ ಗಮನಹರಿಸಲು ಸಾಧ್ಯವಾಗುವುದು. ಅಲ್ಲದೆ ನೀವು ತೆಗೆದುಕೊಳ್ಳುವ ನಿರ್ಧಾರಗಳಿಂದಾಗಿ ಪ್ರಯೋಜನ ಪಡೆಯುತ್ತೀರಿ. ವಿದೇಶಿ ಕಂಪನಿಯೊಂದಿಗೆ ವ್ಯವಹಾರ ಮಾಡುವವರು ಈ ವಾರ ಉತ್ತಮ ಲಾಭ ಗಳಿಸಬಹುದು. ವ್ಯಾಪಾರಸ್ಥರು, ಚಿಲ್ಲರೆ ವ್ಯಾಪಾರಿಗಳು ನಿರೀಕ್ಷಿಸಿದ ಲಾಭ ಪಡೆಯುವಿರಿ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಮನೆಯಲ್ಲಿ ನೀವು ಶುಭ ಕಾರ್ಯ ಮಾಡಲು ಆಲೋಚಿಸಬಹುದು. ಆದಾಯ ಚೆನ್ನಾಗಿರಲಿದೆ, ಅಲ್ಲದೆ ವಾರಾಂತ್ಯದಲ್ಲಿ ಪ್ರಯಾಣ ಮಾಡಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಯಾವುದೇ ಸಮಸ್ಯೆಯಿಲ್ಲ ಹಾಗಂತ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯಿರಿ.

ಧನು ರಾಶಿ
ಧನು ರಾಶಿಯವರಿಗೆ ಮೇ ತಿಂಗಳ ಎರಡನೇ ವಾರ ಅನುಕೂಲಕರವಾಗಿದೆ. ಉದ್ಯಮಿಗಳು ದೊಡ್ಡ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ, ಈ ಸಮಯದಲ್ಲಿ ನೀವು ಒಳ್ಳೆಯ ಅವಕಾಶವನ್ನು ಪಡೆಯಬಹುದು. ಆದರೆ ಹೂಡಿಕೆ ಮಾಡುವ ಮುನ್ನ ಚೆನ್ನಾಗಿ ಆಲೋಚಿಸಿ, ಅಗ್ಯತಬಿದ್ದರೆ ಪರಿಣಿತರಿಂದ ಸಲಹೆ ಪಡೆದ ಬಳಿಕ ಹೂಡಿಕೆ ಮಾಡಿ, ಆತುರದ ನಿರ್ಧಾರ ಮುಂದೆಕ್ಕೆ ಅಪಾಯ ಉಂಟು ಮಾಡಬಹುದು. ಈ ಸಮಯದಲ್ಲಿ ಹಣಕಾಸಿನ ತೊಂದರೆಯಿಲ್ಲ, ಆದರೆ ಸ್ವಲ್ಪ ಜಾಗ್ರತೆವಹಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಆರೋಗ್ಯಕರ ದಿನಚರಿಯತ್ತ ಗಮನಹರಿಸಿ.
ಮೀನ ರಾಶಿ
ಮೀನ ರಾಶಿಯವರಿಗೆ ಆರ್ಥಿಕ ದೃಷ್ಟಿಯಿಂದ ಈ ವಾರ ಉತ್ತಮವಾಗಿದೆ. ಆಸ್ತಿಯನ್ನು ಖರೀದಿಸಲು ಅಥವಾ ಮಾರಲು ಪ್ರಯತ್ನಿಸುತ್ತಿದ್ದರೆ ಈ ವಾರ ಲಾಭದಾಯಕವಾಗಲಿದೆ. ಈ ಸಮಯವು ಹೋಟೆಲ್‌ಗಳು ಅಥವಾ ರೆಸ್ಟೋರೆಂಟ್‌ಗಳ ಉದ್ಯಮಿಗಳಿಗೆ ಲಾಭದಾಯಕವಾಗಿದೆ, ಅಲ್ಲಿ ಕೆಲಸ ಮಾಡುವವರು ಲಾಭ ಗಳಿಸುವಿರಿ. ಉದ್ಯೋಗಸ್ಥರು ತಮ್ಮ ವೃತ್ತಿ ಜೀವನದಲ್ಲಿ ಪ್ರಗತಿ ಕಾಣುವಿರಿ. ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಕೆಲಸ ಸಿಗಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಕುಟುಂಬ ಜೀವನದ ಬಗ್ಗೆ ಹೇಳುವುದಾದರೆ ಸಂಗಾತಿ ಭಾವನೆ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿದರೆ ಯಾವುದೇ ಸಮಸ್ಯೆಯಿಲ್ಲ.



Click it and Unblock the Notifications
