Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇಷದಲ್ಲಿ ಬುಧ ಅಸ್ತ(ಏ.23-ಮೇ.10): ಈ ರಾಶಿಯರಿಗೆ ಆರ್ಥಿಕವಾಗಿ ಒಳ್ಳೆಯದು
ಬುಧ ಗ್ರಹವು ನಮ್ಮ ಬುದ್ಧಿವಂತಿಕೆ ಹಾಗೂ ತಾರ್ಕಿಕ ಸಾಮರ್ಥ್ಯದ ಮೇಲೆ ಪ್ರಭಾವ ಬೀರುವ ಗ್ರಹವಾಗಿದೆ. ಬುಧನ ಆಶೀರ್ವಾದವಿದ್ದರೆ ಜನರು ತಮ್ಮ ವೃತ್ತಿ ಜೀವನದಲ್ಲಿ, ವ್ಯವಹಾರದಲ್ಲಿ ಪ್ರಗತಿಯನ್ನು ಪಡೆಯುತ್ತಾರೆ. ಏಪ್ರಿಲ್ 23ಕ್ಕೆ ಬುಧ ಮೇಷ ರಾಶಿಯಲ್ಲಿ ಅಸ್ತಂಗತವಾಗಿದೆ. 17 ದಿನಗಳವರೆಗೆ ಅಸ್ತಂಗತವಾಗಿರಲಿದೆ.
ಬುಧ ಅಸ್ತಂಗತವಾದಾಗ ಅದು ಹೆಚ್ಚೇನು ಶುಭ ಪ್ರಭಾವ ಬೀರುವುದಿಲ್ಲ, ಆದರೆ ಅದರ ಸ್ಥಾನ ಬಲದಿಂದಾಗಿ ಈ ಅವಧಿಯಲ್ಲಿ ಕೆಲ ರಾಶಿಯವರು ಪ್ರಯೋಜನವನ್ನು ಪಡೆಯುತ್ತಾರೆ. ಇದೀಗ ಬುಧ ಮೇಷ ರಾಶಿಯಲ್ಲಿ ಅಸ್ತಂಗತವಾಗಿರುವ ಈ ಅವಧಿ ಈ 4 ರಾಶಿಗಳಿಗೆ ತುಂಬಾನೇ ಅನುಕೂಲಕರ ಪ್ರಯೋಜನವನ್ನು ನೀಡಲಿದೆ. ಈ ಪ್ರಭಾವ ಮೇ 10ರವರೆಗೆ ಇರಲಿದೆ.
ಮೇಷ ರಾಶಿ
ಬುಧಗ್ರಹವು ಮೇಷ ರಾಶಿಯವರಿಗೆ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ವ್ಯಾಪರಸ್ಥರಿಗೆ ಉತ್ತಮ ಲಾಭ ಸಿಗಲಿದೆ. ಸರ್ಕಾರಿ ನೌಕರಿಗಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಯಶಸ್ಸು ಸಿಗಲಿದೆ. ಬುಧ ಮೊದಲನೇ ಮನೆಯಲ್ಲಿ ಅಸ್ತಂಗತವಾಗಿರುವುದರಿಂದ ಮೇಷ ರಾಶಿಯವರು ಕೆಲಸದ ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ನೀವು ಕೆಲಸದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ.
ಹಣಕಾಸಿನ ಪರಿಸ್ಥಿತಿಯ ಬಗ್ಗೆ ಹೇಳುವುದಾದರೆ ಈ ಅವಧಿಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಹಣವನ್ನು ಗಳಿಸಲು ಈ ಅವಧಿ ಉತ್ತಮವಾಗಿದೆ. ಈ ಅವಧಿಯಲ್ಲಿ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಅಲ್ಲದೆ ಈ ಅವಧಿಯಲ್ಲಿ ಪ್ರೀತಿ ಜೀವನದಲ್ಲಿ ಯಾವುದೇ ತೊಂದರೆಯಿರಲ್ಲ, ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ.
ಈ ಅವಧಿಯಲ್ಲಿ ನೀವು ಆರೋಗ್ಯದಲ್ಲಿ ಏರಿಳಿತಗಳನ್ನು ಎದುರಿಸಬೇಕಾಗಬಹುದು. ಆರೋಗ್ಯದ ಕಡೆ ಗಮನಹರಿಸಬೇಕಾಗಿದೆ.
ಪರಿಹಾರ: 'ಓಂ ನಮೋ ಭಗವತೇ ವಾಸುದೇವಾಯ' ಮಂತ್ರವನ್ನು ಪ್ರತಿದಿನ 19 ಬಾರಿ ಜಪಿಸಿ.
ಮಿಥುನ ರಾಶಿ
ಮಿಥುನ ರಾಶಿಯವರಲ್ಲಿ 11ನೇ ಮನೆಯಲ್ಲಿ ಅಸ್ತಂಗತವಾಗಲಿದೆ. ಮಿಥುನ ರಾಶಿಯ ಅಧಿಪತಿ ಬುಧ ಗ್ರಹ. ಬುಧದ ಹಿಮ್ಮುಖ ಸ್ಥಾನವು ಮಿಥುನ ರಾಶಿಯವರಿಗೆ ಪ್ರಯೋಜವನ್ನು ನೀಡಲಿದೆ. ಕಚೇರಿಯಲ್ಲಿ ವಾತಾವರಣ ಅನುಕೂಲಕರವಾಗಿರುತ್ತದೆ. ವ್ಯಾಪಾರಸ್ಥರು ಹೊಸ ಯೋಜನೆಯಲ್ಲಿ ಕೆಲಸ ಮಾಡಿದರೆ ಒಳ್ಳೆಯ ಲಾಭ ಗಳಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಬುಧ ಅಸ್ತಂಗತವಾಗಿರುವ ಈ ಅವಧಿ ತುಂಬಾನೇ ಅನುಕೂಲರವಾಗಿದೆ.

ತುಲಾ ರಾಶಿ
ತುಲಾ ರಾಶಿಯವರ 7ನೇ ಮನೆಯಲ್ಲಿ ಬುಧ ಅಸ್ತಂಗತವಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರಯೋಜನ ಪಡೆಯಲು ಸಾಧ್ಯವಾಗುವುದು. ಈ ಅವಧಿಯಲ್ಲಿ, ನೀವು ಧಾರ್ಮಿಕ ತೀರ್ಥಯಾತ್ರೆಗಳಿಗೆ ಸಂಬಂಧಿಸಿದ ಪ್ರಯಾಣಕ್ಕೆ ಹೋಗಬೇಕಾಗಬಹುದು. ವೃತ್ತಿ ಬದುಕಿನಲ್ಲಿ, ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು. ನೀವು ಬಡ್ತಿಗಾಗಿ ಕಾಯುತ್ತಿದ್ದರೆ ಸ್ವಲ್ಪ ಕಾಯಬೇಕಾಗುತ್ತದೆ. ಅದೇ ಸಮಯದಲ್ಲಿ, ಕೆಲವು ಜನರಿಗೆ ವಿದೇಶದಿಂದ ಉದ್ಯೋಗಾವಕಾಶಗಳು ಸಿಗಲಿದೆ.
ಪರಿಹಾರ: "ಓಂ ಶ್ರೀ ದುರ್ಗಾಯ ನಮಃ" ಮಂತ್ರವನ್ನು ಪ್ರತಿದಿನ 11 ಬಾರಿ ಪಠಿಸಿ.
ಕುಂಭ ರಾಶಿ
ಕುಂಭ ರಾಶಿಯವರ 3ನೇ ಮನೆಯಲ್ಲಿ ಅಸ್ತಂಗತವಾಗಿದೆ. ಮೂರನೇ ಮನೆ ಧೈರ್ಯ ಮತ್ತು ಸ್ವ-ಅಭಿವೃದ್ಧಿಯನ್ನು ಪ್ರತಿನಿಧಿಸುತ್ತದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಈ ಸಮಯದಲ್ಲಿ ನೀವು ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತೀರಿ ಅಲ್ಲದೆ ನಿಮ್ಮ ಪ್ರತಿಸ್ಪರ್ಧಿಗಳಿಗೆ ನೀವು ಕಠಿಣ ಸ್ಪರ್ಧೆಯನ್ನು ನೀಡಲು ಸಾಧ್ಯವಾಗುತ್ತದೆ. ಆದರೆ, ಖರ್ಚು ಹೆಚ್ಚಾಗುವ ಸೂಚನೆಗಳಿರುವುದರಿಂದ ನಿಮ್ಮ ಹಣಕಾಸಿನ ಜೀವನದ ಬಗ್ಗೆ ನೀವು ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ಉದ್ಯೋಗದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿದ್ದರೆ ಅವಕಾಶಗಳು ಸಿಗಲಿದೆ. ವ್ಯಾಪಾರಸ್ಥರಿಗೆ ಈ ಅವಧಿ ಫಲಪ್ರದವಾಗಬಹುದು. ಈ ಸಮಯದಲ್ಲಿ ನೀವು ಲಾಭ ಗಳಿಸುವ ಅವಕಾಶಗಳನ್ನು ಪಡೆಯುತ್ತೀರಿ.
ಪರಿಹಾರ: ಪ್ರತಿದಿನ "ಓಂ ಹನುಮತೇ ನಮಃ" ಎಂದು ಜಪಿಸಿ. ಬುಧನ ಹೆಚ್ಚಿನ ಪ್ರಯೋಜನಕ್ಕೆ ಬುಧ ಬೀಜ ಮಂತ್ರ ಪಠಿಸಿ.



Click it and Unblock the Notifications