Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಸಿಂಹ ರಾಶಿಯಲ್ಲಿ ಬುಧ ವಕ್ರೀಯ ಚಲನೆ 2023 : ದ್ವಾದಶ ರಾಶಿಗಳೇ ಈ ಬಗ್ಗೆ ಜಾಗ್ರತೆ
ಬುಧ ಸಿಂಹ ರಾಶಿಯಲ್ಲಿ ಆಗಸ್ಟ್ 24ರಿಂದ ವಕ್ರೀಯ ಚಲನೆ ಮಾಡಲಿದೆ. ಬುಧನ ವಕ್ರೀಯ ಚಲನೆ ಪ್ರತಿಯೊಂದು ರಾಶಿಗಳ ಮೇಲೂ ಕೆಲವೊಂದು ಕೆಟ್ಟ ಪ್ರಭಾವ ಬೀರುವುದು. ಈ ಅವಧಿಯಲ್ಲಿ ಯಾವ ರಾಶಿಯವರು ಯಾವ ರೀತಿ ಜಾಗ್ರತೆವಹಿಸಬೇಕು ಎಂದು ನೋಡೋಣ ಬನ್ನಿ:
ಮೇಷ ರಾಶಿ
ಮೇಷ ರಾಶಿಯವರಿಗೆ ಬುಧ ಮೂರನೇ ಮತ್ತು ಆರನೇ ಮನೆಯ ಅಧಿಪತಿ. ಸಿಂಹ ರಾಶಿಯಲ್ಲಿ ಬುಧ 5ನೇ ಮನೆಯಲ್ಲಿದೆ. ಆಗಸ್ಟ್ 24ರಿಂದ ಬುಧ ವಕ್ರೀಯವಾಗಿ ಚಲಿಸಲಿದೆ. ಸಿಂಹ ರಾಶಿಯಲ್ಲಿ ಬುಧದ ಹಿಮ್ಮುಖ ಚಲನೆ ವಿದ್ಯಾರ್ಥಿಗಳ ಏಕಾಗ್ರತೆಗೆ ತೊಂದರೆಯಾಗಬಹುದು, ಗರ್ಭಿಣಿಯರು ಈ ಅವಧಿಯಲ್ಲಿ ಹೆಚ್ಚಿನ ಜಾಗ್ರತೆವಹಿಸಿ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳಾದರೆ ಸಂಗಾತಿ ಜೊತೆ ಮನಸ್ಸು ಬಿಚ್ಚಿ ಮಾತನಾಡುವ ಮೂಲಕ ಬಗೆಹರಿಸಲು ಪ್ರಯತ್ನಿಸಿ. ಇದರಿಂದ ನಿಮ್ಮಿಬ್ಬರ ನಡುವಿನ ಅಂತರ ಕಡಿಮೆಯಾಗಬಹುದು. ಈ ಅವಧಿಯಲ್ಲಿ ಆರ್ಥಿಕವಾಗಿ ತೊಂದರೆಗಳಾಗಬಹುದು. ಈ ಅವಧಿಯಲ್ಲಿ ಯಾವುದೇ ಹೂಡಿಕೆ ಮಾಡಬೇಡಿ.

ವೃಷಭ ರಾಶಿ
ವೃಷಭ ರಾಶಿಯವರಲ್ಲಿ ಬುಧ ಎರಡನೇ ಮತ್ತು ಐದನೇ ಮನೆಯ ಅಧಿಪತಿ. ನಿಮ್ಮ ನಾಲ್ಕನೇ ಮನೆಯಲ್ಲಿ ಬುಧ ಹಿಮ್ಮುಖವಾಗಿ ಚಲಿಸಲಿದೆ. ಈ ಅವಧಿಯಲ್ಲಿ ವಿದ್ಯುತ್ ಉಪಕರಣಗಳು ಹಾಗೂ ವಾಹನವನ್ನು ಬಳಸುವಾಗ ಜಾಗ್ರತೆವಹಿಸಿ. ಮಾತನಾಡುವಾಗ ಜಾಗ್ರತೆವಹಿಸಿ, ನಿಮ್ಮ ಕಠೋರ ಮಾತುಗಳು ನಿಮ್ಮವರ ಮನಸ್ಸನ್ನು ತುಂಬಾ ನೋಯಿಸಬಹುದು. ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಬಹುದು. ಸಂಗಾತಿಯೊಂದಿಗೆ ಸಂವಹನದಲ್ಲಿನ ಕೊರತೆಯಿಂದಾಗಿ ಸಮಸ್ಯೆ ಹೆಚ್ಚಾಗಬಹುದು. ಮಕ್ಕಳಿದ್ದರೆ ಅವರ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಬುಧ ಲಗ್ನ ಮತ್ತು ನಾಲ್ಕನೇ ಮನೆಯ ಅಧಿಪತಿ. ಬುಧ ಸಿಂಹ ರಾಶಿಯಲ್ಲಿ ಹಿಮ್ಮುಖ ಚಲನೆ ಮಾಡಿದಾಗ ನಿಮ್ಮ ರಾಶಿಯ ಮೂರನೇಯ ಮನೆಯಲ್ಲಿ ಹಿಮ್ಮುಖವಾಗಲಿದೆ, ಈ ಅವಧಿಯು ನಿಮಗೆ ಅನುಕೂಲಕರವಾಗಿಲ್ಲ. ಈ ಸಮಯದಲ್ಲಿ, ನಿಮ್ಮ ಆರೋಗ್ಯ ಕ್ಷೀಣಿಸಬಹುದು. ಬುಧನ ಹಿಮ್ಮುಖ ಚಲನೆ ತಾಯಿಯೊಂದಿಗಿನ ಸಂಬಂಧದಲ್ಲಿ ಸಮಸ್ಯೆ ಉಂಟು ಮಾಡಬಹುದು. ಈ ಅವಧಿಯಲ್ಲಿ ಖರ್ಚು ಹೆಚ್ಚಾಗಲಿದೆ. ಈ ಅವಧಿಯಲ್ಲಿ ಯಾರ ಜೊತೆಗೂ ಅನಗ್ಯತ ಚರ್ಚೆ ಮಾಡಬೇಡಿ.
ಕರ್ಕ ರಾಶಿ
ಕರ್ಕಾಟಕ ರಾಶಿಯವರಿಗೆ ಬುಧ ಹನ್ನೆರಡನೇ ಮತ್ತು ಮೂರನೇ ಮನೆಯ ಅಧಿಪತಿ. ಸಿಂಹ ರಾಶಿಯಲ್ಲಿ ಬುಧ ಹಿಮ್ಮೆಟ್ಟುವಿಕೆಯಲ್ಲಿ ಬುಧ ನಿಮ್ಮ ರಾಶಿಯ 2ನೇ ಮನೆಯಲ್ಲಿ ಹಿಮ್ಮೆಟ್ಟಲಿದೆ. ಈ ಅವಧಿಯು ನಿಮಗೆ ಪ್ರತಿಕೂಲವಾಗಿದೆ . ನಿಮ್ಮ ಆರ್ಥಿಕ ಜೀವನದಲ್ಲಿ ಏರಿಳಿತಗಳು ಇರಬಹುದು. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಹೆಚ್ಚಳ ಅಥವಾ ಭಾರೀ ನಷ್ಟ ಉಂಟಾಗಬಹುದು. ಈ ಅವಧಿಯಲ್ಲಿ ದೀರ್ಘ ಪ್ರಯಾಣ ಮಾಡಬಹುದು. ಈ ಅವಧಿಯಲ್ಲಿ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಕಡಿಮೆಯಾಗಲಿದೆ, ನಿಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸಬೇಕಾಗಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಬುಧನು ಎರಡನೇ ಮತ್ತು ಹನ್ನೊಂದನೇ ಮನೆಯ ಅಧಿಪತಿ. ಇದೀಗ ನಿಮ್ಮ ಲಗ್ನ ಮನೆಯಲ್ಲಿ ಹಿಮ್ಮೆಟ್ಟಲಿದೆ. ಸಿಂಹ ರಾಶಿಯಲ್ಲಿ ಬುಧ ಹಿಮ್ಮೆಟ್ಟುವುದರಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗುವುದು. ಈ ಅವಧಿಯಲ್ಲಿ ಯಾವುದೇ ಹೂಡಿಕೆ ಮಾಡಲು ಹೋಗದಿರುವುದು ಒಳ್ಳೆಯದು. ರಾಜಕಾರಣಿಗಳು, ಪ್ರೇರಕ ಭಾಷಣಕಾರರು, ಹೂಡಿಕೆ ಬ್ಯಾಂಕರ್‌ಗಳು ಅಥವಾ ಯಾವುದೇ ಮಾಧ್ಯಮದ ವ್ಯಕ್ತಿಗಳು ಈ ಅವಧಿಯಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ ಈ ಅವಧಿಯಲ್ಲಿ ಆರೋಗ್ಯದ ಕಡೆಗೆ ಹೆಚ್ಚಿನ ಜಾಗ್ರತೆವಹಿಸಬೇಕಾಗಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ, ಬುಧ ದಶಮ ಮತ್ತು ಲಗ್ನ ಮನೆಯ ಅಧಿಪತಿ. ಇದೀಗ 12ನೇ ಮನೆಯಲ್ಲಿ ಹಿಮ್ಮುಖ ಚಲನೆಯಲ್ಲಿದೆ. ಈ ಅವಧಿಯು ನಿಮಗೆ ಸವಾಲಿನದ್ದಾಗಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಅತ್ಯಂತ ಜಾಗರೂಕರಾಗಿರಬೇಕು. ಆರೋಗ್ಯದ ಕಡೆ ಗಮನಹರಿಸಿ. ವೃತ್ತಿಪರ ಜೀವನದಲ್ಲಿ ಸವಾಲುಗಳು ಎದುರಾಗಬಹುದು. ನಿಮ್ಮ ವೃತ್ತಿಪರ ಜೀವನದಲ್ಲಿ ಆಗಾಗ್ಗೆ ಅಡಚಣೆಗಳು, ಸಂವಹನದಲ್ಲಿ ಗೊಂದಲ ಈ ರೀತಿ ಇರಬಹುದು. ಒಟ್ಟಿನಲ್ಲಿ ಈ ಅವಧಿ ಸವಾಲಿನಿಂದ ಕೂಡಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಬುಧ ಹನ್ನೆರಡನೇ ಮತ್ತು ಒಂಬತ್ತನೇ ಮನೆಯ ಅಧಿಪತಿ. 11ನೇ ಮನೆಯಲ್ಲಿ ಹಿಮ್ಮುಖವಶಗಿ ಚಲಿಸಲಿದೆ. ಈ ಅವಧಿಯಲ್ಲಿ ಯಾವುದೇ ರೀತಿಯ ಹೂಡಿಕೆ ಮಾಡಲು ಹೋಗಬೇಡಿ. ಆರೋಗ್ಯ ಸಮಸ್ಯೆಯಿಂದಾಗಿ ಹೆಚ್ಚಿನ ಹಣ ಖರ್ಚಾಗಬಹುದು.ಈ ಅವಧಿಯಲ್ಲಿ ನೀವು ನಿಮ್ಮ ತಂದೆಯ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು. ಗರ್ಭಿಣಿಯರು ಹೆಚ್ಚಿನ ಜಾಗ್ರತೆವಹಿಸಬೇಕು, ವೈವಾಹಿಕ ಜೀವನದಲ್ಲಿನ ಸಮಸ್ಯೆ ಹೆಚ್ಚಾಗದಂತೆ ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಬುಧನು ಹನ್ನೊಂದು ಮತ್ತು ಎಂಟನೇ ಮನೆಯ ಅಧಿಪತಿ. ಇದೀಗ ನಿಮ್ಮ 10ನೇ ಮನೆಯಲ್ಲಿ ಹಿಮ್ಮುಖ ಚಲನೆಯಲ್ಲಿರಲಿದೆ, ಈ ಸಮಯದಲ್ಲಿ ನೀವು ವೃತ್ತಿ ಕ್ಷೇತ್ರದಲ್ಲಿ ಏರಿಳಿತಗಳನ್ನು ಎದುರಿಸಬೇಕಾಗಬಹುದು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ತಪ್ಪು ತಿಳುವಳಿಕೆ ಉಂಟಾಗಬಹುದು, ಡಾಕ್ಯೂಮೆಂಟ್ ವಿಷಯದಲ್ಲಿ ಈ ಅವಧಿಯಲ್ಲಿ ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ಖರ್ಚು ಅಧಿಕವಿರಲಿದೆ.
ಧನು ರಾಶಿ
ಧನು ರಾಶಿಯವರಿಗೆ ಏಳನೇ ಮತ್ತು ಹತ್ತನೇ ಮನೆಯ ಅಧಿಪತಿ ಬುಧ. ಆಗಸ್ಟ್ 24ರಿಂದ 9ನೇ ಮನೆಯಲ್ಲಿ ಹಿಮ್ಮುಖವಾಗಿ ಚಲಿಸಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಜನರಿಗೆ ಈ ಅವಧಿಯು ಅನುಕೂಲಕರವಾಗಿಲ್ಲ. ತಪ್ಪು ತಿಳುವಳಿಕೆ ಮತ್ತು ಸಮನ್ವಯದ ಕೊರತೆಯಿಂದಾಗಿ ವ್ಯಾಪಾರ ಕ್ಷೇತ್ರದಲ್ಲಿ ಸಮಸ್ಯೆಗಳಿರಬಹುದು. ಯಾವುದೇ ಹೊಸ ವ್ಯವಹಾರ ಈ ಅವಧಿಯಲ್ಲಿ ಮಾಡದಿರಿ. ಈ ಸಂಚಾರ ವೈವಾಹಿಕ ಜೀವನದ ಮೇಲೂ ಪ್ರಭಾವ ಬೀರುವುದು, ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ಮಕರ ರಾಶಿಯವರಿಗೆ ಬುಧ ಆರನೇ ಮತ್ತು ಒಂಬತ್ತನೇ ಮನೆಯ ಅಧಿಪತಿ. ಈ ಅವಧಿಯಲ್ಲಿ 8ನೇ ಮನೆಯಲ್ಲಿ ಹಿಮ್ಮುಖ ಚಲನೆಯಲ್ಲಿರಲಿದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ನೀವು ವಿಶೇಷ ಗಮನ ಹರಿಸಬೇಕು. ರಾಜಕೀಯಕ್ಕೆ ಸಂಬಂಧಿಸಿದವರು ತಮ್ಮ ಹೇಳಿಕೆಗಳಿಂದ ತೊಂದರೆಗೆ ಒಳಗಾಗಬಹುದು. ಈ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಉಳಿದವರು ಕೂಡ ತಾವಾಡುವ ಮಾತಿನ ಕಡೆಗೆ ಗಮನಹರಿಸಬೇಕಾಗಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡೆತಡೆ ಎದುರಿಸಬಹುದು.
ಕುಂಭ ರಾಶಿ
ಕುಂಭ ರಾಶಿಯವರಿಗೆ ಬುಧ ನಿಮ್ಮ ಐದನೇ ಮತ್ತು ಎಂಟನೇ ಮನೆಯ ಅಧಿಪತಿ. ಪ್ರೇಮಿಗಳು ಕುಟುಂಬ ಸದಸ್ಯರಿಂದ ವಿರೋಧವನ್ನು ಎದುರಿಸಬಹುದು. ಸಿಂಹ ರಾಶಿಯಲ್ಲಿ ಬುಧದ ಹಿಮ್ಮೆಟ್ಟುವಿಕೆ ನಿಮಗೆ ಅನುಕೂಲಕರವಾಗಿಲ್ಲ. ಈ ಅವಧಿಯಲ್ಲಿ ವಿವಾಹಿತರು ತಮ್ಮ ವೈವಾಹಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಆದ್ದರಿಂದ ನಿಮ್ಮ ಜೀವನ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಮತ್ತು ನಿಮ್ಮ ಮಾತನ್ನು ನಿಯಂತ್ರಿಸಲು ಸಲಹೆ ನೀಡಲಾಗಿದೆ. ಕುಂಭ ರಾಶಿಯ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮೀನ ರಾಶಿ
ಮೀನ ರಾಶಿಯವರಿಗೆ ಬುಧನು ನಾಲ್ಕನೇ ಮತ್ತು ಏಳನೇ ಮನೆಯ ಅಧಿಪತಿ. ಬುಧ ನಿಮ್ಮ 6ನೇ ಮನೆಯಲ್ಲಿ ಹಿಮ್ಮುಖ ಚಲನೆಯಲ್ಲಿರಲಿದೆ. ಈ ಅವಧಿಯಲ್ಲಿ ಆರೋಗ್ಯ ಕ್ಷೀಣಿಸಬಹುದು. ನೀವು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ವಾಹನಗಳನ್ನು ಎಚ್ಚರಿಕೆಯಿಂದ ಚಲಾಯಿಸಿ. ಈ ಅವಧಿಯಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ಪರಿಹಾರ: ಬುಧ ಗ್ರಹದ ಬೀಜ ಮಂತ್ರವನ್ನು ಪ್ರತಿದಿನ ಜಪಿಸಿ.
ಬುಧವಾರ ಗಣೇಶನಿಗೆ ಗರಿಕೆ ಅರ್ಪಿಸಿ ಪೂಜಿಸಿ
ಬುಧನ ಅಡ್ಡಪರಿಣಾಮವಿದ್ದರೆ ಬುಧ ಯಂತ್ರ ಸ್ಥಾಪಿಸಿ.



Click it and Unblock the Notifications











