Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಮೇಷದಲ್ಲಿ ಬುಧ ಉದಯ: ಈ 3 ರಾಶಿಯವರಿಗೆ ಅದೃಷ್ಟದ ಬಲವಿದೆ
ವೈದಿಕ ಜ್ಯೋತಿಷ್ಯದಲ್ಲಿ, ಬುಧವನ್ನು ಗ್ರಹಗಳ ರಾಜಕುಮಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಬುಧ ನಮ್ಮ ಸಂವಹನ ಸಾಮರ್ಥ್ಯ, ನಿರ್ಧಾರ, ಯೋಚನಾ ಸಾಮರ್ಥ್ಯ, ಬರಹ ಹಾಸ್ಯ ಇವುಗಳ ಗ್ರಹವಾಗಿದೆ. ಯಾರ ರಾಶಿಯಲ್ಲಿ ಬುಧ ಉತ್ತಮ ಸ್ಥಾನದಲ್ಲಿರುತ್ತಾನೋ ಅವರು ತುಂಬಾನೇ ಒಳ್ಳೆಯ ಪ್ರಯೋಜನ ಪಡೆಯುತ್ತಾರೆ.

ಅದೇ ಬುಧ ದುರ್ಬಲ ಸ್ಥಾನದಲ್ಲಿದ್ದರೆ ಅವನು ನಮ್ಮ ಯೋಚನಾ ಸಾಮರ್ಥ್ಯದ ಮೇಲೆ ಪ್ರಭಾವ ಬೀರುತ್ತಾನೆ, ಈ ಅವಧಿಯಲ್ಲಿ ಗೊಂದಲ ಮನಸ್ಥಿತಿ ಇರುತ್ತದೆ, ಕೆಲಸ ಕಾರ್ಯಗಳಲ್ಲಿ ಗಮನಹರಿಸಲು ಸಾಧ್ಯವಾಗುವುದಿಲ್ಲ. ಇದೀಗ ಮೇ 10ಕ್ಕೆ ಬುಧ ಮೇಷ ರಾಶಿಯಲ್ಲಿ ಉದಯವಾಗಿದ್ದು ಜೂನ್ 7ರವರೆಗೆ ಇದೇ ರಾಶಿಯಲ್ಲಿ ಇರಲಿದೆ. ಈ ಸಮಯ ಈ 3 ರಾಶಿಯವರಿಗೆ ತುಂಬಾನೇ ಒಳ್ಳೆಯದಿದೆ:
ಮಿಥುನ ರಾಶಿ
ಮಿಥುನ ರಾಶಿಯವರಲ್ಲಿ ಬುಧ 11ನೇ ಮನೆಯಲ್ಲಿ ಇರಲಿದೆ. ಈ ಮನೆಯಲ್ಲಿ ಬುಧದ ಪ್ರಭಾವವು ಹೆಚ್ಚಾಗುವುದರಿಂದ ನೀವು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಿ. ಈ ಸಮಯದಲ್ಲಿ ನಿಮ್ಮ ಕೆಲಸಗಳಿಗೆ ಸ್ನೇಹಿತರ ಸಹಾಯ ದೊರೆಯಲಿದೆ, ಹೀಗಾಗಿ ನೀವು ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು. . ಈ ಸಮಯದಲ್ಲಿ ನೀವು ಹೊಸ ಯೋಜನೆಯನ್ನು ಮಾಡುವಲ್ಲಿ ಯಶಸ್ವಿಯಾಗುತ್ತೀರಿ , ಅದರಿಂದ ನೀವು ಉತ್ತಮ ಪ್ರಯೋಜನಗಳನ್ನು ಸಹ ಪಡೆಯುತ್ತೀರಿ. ಈ ಸಮಯದಲ್ಲಿ, ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಲ್ಲಿ ಬುಧ 9ನೇ ಮನೆಯಲ್ಲಿ ಉದಯವಾಗಿದೆ. ಆದ್ದರಿಂದ ಈ ಸಮಯ ಅದೃಷ್ಟದಿಂದ ಕೂಡಿದೆ. ಈ ಸಮಯದಲ್ಲಿ ನಿಮ್ಮ ಖರ್ಚುಗಳು ಹೆಚ್ಚಾಗುವುದು, ಆದರೆ ಆದಾಯವೂ ಚೆನ್ನಾಗಿರುವುದರಿಂದ ಯಾವುದೇ ಚಿಂತೆಯಿಲ್ಲ. ಈ ಸಮಯದಲ್ಲಿ ನಿಮ್ಮ ತಂದೆಯ ಮಾರ್ಗದರ್ಶನದಲ್ಲಿ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಈ ಸಮಯದಲ್ಲಿ ಧಾರ್ಮಿಕ ಪ್ರಯಾಣದ ಸಾಧ್ಯತೆ ಇದೆ. ಈ ಸಮಯದಲ್ಲಿ, ಬರವಣಿಗೆ ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ಉತ್ತಮ ಖ್ಯಾತಿಯನ್ನು ಪಡೆಯುವ ಸಾಧ್ಯತೆಯಿದೆ.
ಕುಂಭ ರಾಶಿ
ಕುಂಭ ರಾಶಿಯವರಲ್ಲಿ ಬುಧ 3ನೇ ಮನೆಯಲ್ಲಿ ಉದಯವಾಗಿದೆ. ಈ ಮನೆಯಲ್ಲಿ ಬುಧ ಸಂಕ್ರಮಣವು ನಿಮ್ಮ ವಿವೇಚನಾ ಶಕ್ತಿ ಮತ್ತು ವಾಕ್ಚಾತುರ್ಯವನ್ನು ಹೆಚ್ಚಿಸುತ್ತದೆ, ಇದರಿಂದಾಗಿ ಈ ಅವಧಿ ಉತ್ತಮವಾಗಿದೆ. ಬರವಣಿಗೆಗೆ ಸಂಬಂಧಿಸಿದ ಜನರು ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ಈ ಸಮಯದಲ್ಲಿ ನಿಮ್ಮ ಕಾರ್ಯಗಳು ನಿಮ್ಮ ಮಾತಿನ ಬಲದಿಂದ ಯಶಸ್ವಿಯಾಗುತ್ತವೆ. ಈ ಹಿಂದೆ ಮಾಡಿದ ಹೂಡಿಕೆಯಿಂದ ಲಾಭ ಪಡೆಯುತ್ತೀರಿ. ಅದೃಷ್ಟದ ಬಂಬಲವಿರುವುದರಿಂದ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುವುದು. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ.



Click it and Unblock the Notifications