Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮೇಷ ರಾಶಿಯಲ್ಲಿ ಬುಧ ಗೋಚರ : ಈ 4 ರಾಶಿಯವರು ಜಾಗ್ರತೆಯಿಂದಿರಬೇಕು
ಬುಧ ಗ್ರಹವನ್ನು ನಮ್ಮ ಜೀವನದಲ್ಲಿ ತಾರ್ಕಿಕ ಸಾಮರ್ಥ್ಯ, ವ್ಯವಹಾರ ಮತ್ತು ಬುದ್ಧಿವಂತಿಕೆಯ ಅಂಶವೆಂದು ನಂಬಲಾಗಿದೆ. ಹಾಗೂ ಬುಧನನ್ನು ಪ್ರಕೃತಿಯ ಅತ್ಯಂತ ಶಾಂತ ಗ್ರಹವೆಂದು ಪರಿಗಣಿಸಲಾಗುತ್ತದೆ. ಮೇಷ ರಾಶಿಯಲ್ಲಿ ಬುಧವನ್ನು ಗೋಚಾರವಾಗೋದ್ರಿಂದ ಮಿಶ್ರಫಲವನ್ನು ಪಡೆಯಬೇಕಾಗುತ್ತದೆ. ಬುಧನನ್ನು ಆತನ ಸ್ವಭಾವದಲ್ಲಿ ಉಗ್ರ ಗ್ರಹವೆಂದು ಪರಿಗಣಿಸಲಾಗಿದೆ.
ಇದೇ ಮಾರ್ಚ್ 31, 2023 ರಂದು ಬುಧವು ಮೇಷ ರಾಶಿಯಲ್ಲಿ ಉದಯಿಸಲಿದೆ. ಜ್ಯೋತಿಷ್ಯದ ಪ್ರಕಾರ, ರಾಶಿಚಕ್ರದ ಚಿಹ್ನೆಗಳು ಇದರ ಪ್ರಭಾವಕ್ಕೆ ಒಳಗಾಗುತ್ತದೆ. ಅದ್ರಲ್ಲೂ ಈ ನಾಲ್ಕು ರಾಶಿಚಕ್ರದ ಮೇಲೆ ಇದರ ಪರಿಣಾಮವು ಗಂಭಿರವಾಗಿರಲಿದೆ. ಹಾಗಾದ್ರೆ ಆ ಮೂರು ರಾಶಿಗಳು ಯಾವುದು ಅನ್ನೋದನ್ನ ತಿಳಿಯೋಣ.

ವೃಷಭ ರಾಶಿ
ಬುಧನು ಮೇಷ ರಾಶಿಯಲ್ಲಿ ಉಗಮ ಆಗೋದ್ರಿಂದ ವೃಷಭ ರಾಶಿಯವರ ಆರ್ಥಿಕ ಪರಿಸ್ಥಿತಿಯು ಏರುಪೇರಾಗುವ ಸಾಧ್ಯತೆ ಇದೆ. ವ್ಯಾಪಾರಿಗಳು ಈ ಸಮಯದಲ್ಲಿ ಯಾವುದೇ ರೀತಿಯ ಹೊಸ ವ್ಯವಹಾರಕ್ಕೆ ಕೈ ಹಾಕಬಾರದು. ಇನ್ನೂ ಹೂಡಿಕೆ ಮಾಡುವ ಬಗ್ಗೆ ಯೋಚಿಸಲೇಬೇಡಿ. ಪ್ರಯಣದ ಸಮಯದಲ್ಲಿ ನೀವು ಸಣ್ಣ ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು. ಹೀಗಾಗಿ ಆಹಾರದ ಬಗ್ಗೆ ವಿಶೇಷ ಗಮನ ಕೊಡೋದು ಮುಖ್ಯ.
ವೃಶ್ಚಿಕ ರಾಶಿ
ಈ ಸಮಯದಲ್ಲಿ ನೀವು ನಿಮ್ಮ ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾದ ಸಾಧ್ಯತೆಗಳಿದೆ. ಇನ್ನು ನಿಮ್ಮ ವೃತ್ತಿಜೀವನದಲ್ಲಿ ನೀವು ಅನೇಕ ಏರಿಳಿತಗಳನ್ನು ಎದುರಿಸುತ್ತೀರಿ. ಈ ಸಮಯ ಆಟಗಾರರಿಗೆ ಅನುಕೂಲಕರವಾಗಿರುವುದಿಲ್ಲ. ಈ ಸಮಯದಲ್ಲಿ ನೀವು ನಿಮ್ಮ ಖರ್ಚುಗಳನ್ನು ನಿಯಂತ್ರಿಸುವುದು ತುಂಬಾನೇ ಮುಖ್ಯ. ವೆಚ್ಚವನ್ನು ನಿಯಂತ್ರಿಸದಿದ್ದರೆ ಭವಿಷ್ಯದಲ್ಲಿ ನೀವು ನಷ್ಟವನ್ನು ಅನುಭವಿಸಬೇಕಾಗುತ್ತದೆ.
ತುಲಾ ರಾಶಿ
ತುಲಾ ರಾಶಿಯವರು ಆರ್ಥಿಕವಾಗಿ ಮುಂಜಾಗರೂಕರಾಗಿರಬೇಕು. ಈ ಸಮಯದಲ್ಲಿ ನಿಮ್ಮ ಖರ್ಚುಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ. ನೀವು ಖರ್ಚು ಮಾಡಲು ಬಯಸದ ಎಲ್ಲಾ ವಿಷಯಗಳಿಗೆ ನೀವು ಖರ್ಚು ಮಾಡಬೇಕಾಗಿ ಬರಬಹುದು.
ಕುಂಭ ರಾಶಿ
ಕುಂಭ ರಾಶಿಯವರು ಹಣಕಾಸಿನ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಈ ಸಮಯದಲ್ಲಿ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ, ಭವಿಷ್ಯದಲ್ಲಿ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು. ನೀವು ಮೊದಲಿಗೆ ಬಜೆಟ್ ತಯಾರಿಸಿಕೊಂಡು ನಂತರ ಅದಕ್ಕೆ ಅನುಗುಣವಾಗಿ ಖರ್ಚು ಮಾಡಿದರೆ ಉತ್ತಮ.



Click it and Unblock the Notifications
