Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಕರ್ಕ ರಾಶಿಗೆ ಬುಧ ಸಂಚಾರದ ಈ ಅವಧಿಯಲ್ಲಿ 4 ರಾಶಿಯವರೂ ಯಾವುದಕ್ಕೂ ಚಿಂತಿಸಬೇಕಾಗಿಲ್ಲ
ವೈದಿಕ ಶಾಸ್ತ್ರದ ಪ್ರಕಾರ ನಮ್ಮ ಬುದ್ಧಿಶಕ್ತಿ ಹಾಗೂ ತಾರ್ಕಿಕ ಸಾಮರ್ಥ್ಯ ಮೇಲೆ ಪ್ರಭಾವ ಬೀರುವ ಬುಧನು ಕರ್ಕ ರಾಶಿಗೆ ಜುಲೈ 8ರಂದು ಪ್ರವೇಶಿಸಿದೆ. ಈ ಸಂಚಾರದಿಂದ ಕೆಲವು ರಾಶಿಗಳು ತುಂಬಾನೇ ಲಾಭ ಗಳಿಸಲಿದೆ. ಬುಧನ ಈ ಸಂಚಾರ ಆ ರಾಶಿಯವರು ಆರ್ಥಿಕ, ವೃತ್ತಿ ಹಾಗೂ ವೈಯಕ್ತಿಕ ಜೀವನದ ಮೇಲೆ ಧನಾತ್ಮಕ ಪ್ರಭಾವ ಬೀರಿದೆ, ಆ ಅದೃಷ್ಟದ ರಾಶಿಗಳೆಂದರೆ...

ವೃಷಭ ರಾಶಿ
ಬುಧ ಕರ್ಕ ರಾಶಿಗೆ ಪ್ರವೇಶಿಸಿರುವುದರಿಂದ ವೃಷಭ ರಾಶಿಯವರಿಗೆ ಅನುಕೂಲಕರವಾಗಿದೆ, ಈ ಸಮಯದಲ್ಲಿ ವೃತ್ತಿ ಹಾಗೂ ಆರ್ಥಿಕ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ದಿನ ತುಂಬಾ ಒಳ್ಳೆಯದಿದೆ. ವ್ಯಾಪಾರಸ್ಥರರು ಈ ಅವಧಿಯಲ್ಲಿ ಲಾಭ ಗಳಿಸುತ್ತೀರಿ. ನಿಮ್ಮ ವ್ಯಾಪಾರವು ವಿದೇಶದಲ್ಲಿದ್ದರೆ ಈ ಸಾಗಣೆಯು ನಿಮಗೆ ಉತ್ತಮ ಫಲಿತಾಂಶಗಳನ್ನು ನೀಡಲಿದೆ. ಕರ್ಕದಲ್ಲಿ ಬುಧದ ಸಂಚಾರವು ನಿಮ್ಮ ಪ್ರೇಮ ಸಂಬಂಧಕ್ಕೆ ಉತ್ತಮವಾಗಿದೆ. ಈ ಅವಧಿಯಲ್ಲಿ ನಿಮ್ಮ ಪ್ರೀತಿ ಮತ್ತಷ್ಟು ಗಟ್ಟಿಯಾಗಲಿದೆ. ವೃತ್ತಿ ಜೀವನದಲ್ಲಿ ಬಡ್ತಿ ಪಡೆಯುತ್ತಾರೆ, ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಬುಧವು ಕರ್ಕ ರಾಶಿಯವರಿಗೆ ಪ್ರವೇಶಿಸಿರುವುದರಿಂದ ಕನ್ಯಾ ರಾಶಿಯವರಿಗೆ ಅನುಕೂಲಕರವಾಗಿದೆ. ವೃತ್ತಿ ಜೀವನದಲ್ಲಿ ನಿಮ್ಮ ಕೆಲಸದಲ್ಲಿ ತೃಪ್ತಿ ಸಿಗಲಿದೆ. ಈ ಸಮಯದಲ್ಲಿ ನೀವು ಬಯಸಿದ್ದು ನೆರವೇರಲಿದೆ. ವಿದೇಶದಲ್ಲಿ ಉದ್ಯೋಗ ಪಡೆಯಲು ಬಯಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಸ್ಥರಿಗೂ ಈ ಅವಧಿ ತುಂಬಾನೇ ಚೆನ್ನಾಗಿರಲಿದೆ. ಈ ಸಮಯದಲ್ಲಿ ಅಧಿಕ ಲಾಭ ಗಳಿಸುವುದರಿಂದ ಉಳಿತಾಯ ಮಾಡಲು ಸಾಧ್ಯವಾಗುವುದು. ಇನ್ನು ಸಂಗಾತಿ ಹಾಗೂ ನಿಮ್ಮ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ತುಲಾ ರಾಶಿ
ಬುಧದ ಸಂಚಾರವು ತುಲಾ ರಾಶಿಯವರಿಗೆ ಅನುಕೂಲಕರವಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಉದ್ಯೋಗದಲ್ಲಿ ಬದಲಾವಣೆ ಕಾಣುತ್ತೀರಿ. ಈ ಅವಧಿಯಲ್ಲಿ ನೀವು ನಿಮ್ಮ ಕೆಲಸದ ಕಡೆ ಹೆಚ್ಚು ಗಮನ ಕೊಡಲು ಸಾಧ್ಯವಾಗುವುದು. ವೃತ್ತಿ ಜೀವನದ ದೃಷ್ಟಿಯಿಂದ ಅನುಕೂಲಕರವಾಗಿದೆ. ಹೊಸ ಉದ್ಯೋಗಾವಕಾಶಗಳು ಸಿಗುತ್ತವೆ, ಕೆಲಸದಲ್ಲಿ ತುಂಬಾ ತೃಪ್ತರಾಗುತ್ತೀರಿ. ವ್ಯಾಪಾರಿಗಳು ಈ ಸಮಯದಲ್ಲಿ ಒಳ್ಳೆಯ ಲಾಭ ಗಳಿಸುತ್ತೀರಿ. ಹಣವಿದೆ ಎಂದು ದುಂದು ವೆಚ್ಚ ಮಾಡಬೇಡಿ, ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಕರ್ಕಾಟಕ ರಾಶಿಯಲ್ಲಿ ಬುಧದ ಸಂಚಾರವು ಮೀನ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಲಿದೆ. ಈ ಸಮಯದಲ್ಲಿ ನಿಮ್ಮ ವೈಯಕ್ತಿಕ ಜೀವನದಲ್ಲಿ ಹಲವು ಧನಾತ್ಮಕ ಬದಲಾವಣೆಯನ್ನು ಕಾಣುತ್ತೀರಿ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರಯವವರು ಈ ಅವಧಿಯಲ್ಲಿ ಒಳ್ಳೆಯ ಅವಕಾಶವನ್ನು ಪಡೆಯುತ್ತೀರಿ. ವ್ಯಾಪಾರಸ್ಥರು ಸುಲಭವಾಗಿ ಹಣ ಗಳಿಸಬಹುದು. ಅವಾಹಿತರಾಗಿದ್ದು ವಿವಾಹಕ್ಕೆ ಸಂಬಂಧ ನೋಡುತ್ತಿದ್ದರೆ ಮದುವೆ ಬಲ ಕೂಡಿ ಬರಲಿದೆ. ಈ ಸಮಯದಲ್ಲಿ ಆರೋಗ್ಯ ಕೂಡ ಚೆನ್ನಾಗಿರಲಿದೆ.



Click it and Unblock the Notifications
