Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಮೈಸುಡಲಿದೆ ಎಚ್ಚರಿಕೆ: ಹವಾಮಾನ ಇಲಾಖೆಯಿಂದ ಅಲರ್ಟ್, ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ತಾಪ!
ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ತಾಪಮಾನ ಏರಿಕೆಯು ನಿರೀಕ್ಷೆ ಮೀರುತ್ತಿದೆ. ಬೇಸಿಗೆಯ ಆರಂಭದಲ್ಲಿ ತಾಪಮಾನ ಏರಿಕೆ ಜನರ ನಿದ್ದೆ ಕೆಡಿಸಲಿದೆ. ಮುಂಬರುವ ದಿನಗಳಲ್ಲಿ ತಾಪಮಾನ ಏರಿಕೆ ದೊಡ್ಡ ಸವಾಲಾಗುತ್ತಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ವಾಡಿಕೆಗಿಂತಲೂ ಹೆಚ್ಚಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಾರ್ಚ್ ಮತ್ತು ಮೇಯಲ್ಲಿ ತಾಪಮಾನ ಏರಿಕೆಯಾಗಲಿದೆ ಎಂದು ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಹೆಚ್ಚಿನ ಒಳನಾಡಿನ ಜಿಲ್ಲೆಗಳಿಗೆ ಇದು ಕಠಿಣ ಬೇಸಿಗೆಯಾಗಲಿದೆ ಮತ್ತು ಹಲವು ಬಾರಿ ಬಿಸಿಗಾಳಿಯ ಹೊಡೆತಕ್ಕೆ ಎದುರಾಗಬೇಕಾಗುತ್ತದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವಾರು ಉತ್ತರ ಒಳನಾಡಿನ ಜಿಲ್ಲೆಗಳು ಈ ಅವಧಿಯಲ್ಲಿ ತೀವ್ರ ಶಾಖದ ಅಲೆಯಂತಹ ಸ್ಥಿತಿಯನ್ನು ಎದುರಿಸುವ ನಿರೀಕ್ಷೆಯಿದೆ.

ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ತಾಪಮಾನ ತೀವ್ರವಾಗಿ ಏರಲಿದೆ. ಮಾರ್ಚ್ ಮತ್ತು ಮೇ 2026 ರ ನಡುವೆ ಕೂಡ ತಾಪಮಾನ ದಿಢೀರ್ ಏರಿಕೆಯಾಗಲಿದೆ. ಹವಾಮಾನ ಮುನ್ಸೂಚನಾ ಸಂಸ್ಥೆಯು ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಿಗೆ ರೆಡ್ ಅಲರ್ಟ್ ಕೂಡ ಘೋಷಿಸಿದೆ. ಮಾರ್ಚ್‌ನಲ್ಲಿ ಈ ತಾಪಮಾನವು ವಾಡಿಕೆಗಿಂತ ಹೆಚ್ಚಾಗುವುದು ನೋಡಬಹುದು. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.
ಮಾರ್ಚ್ ನಿಂದ ಮೇ 2026ರ ವರೆಗೆ ಇಡೀ ಕರ್ನಾಟಕಕ್ಕೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ನಿರೀಕ್ಷಿಸಲಾಗಿದೆ. ಕರಾವಳಿ ಕರ್ನಾಟಕದದಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ನಿರೀಕ್ಷೆಗಳಿವೆ ಎಂದು ಸಹ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಈ ಬೇಸಿಗೆಯ ತಾಪಮಾನ ಗಮನದಲ್ಲಿಟ್ಟುಕೊಂಡು ಮುಂಚಿತವಾಗಿಯೆ ಜನರಿಗೆ ಪೂರ್ವ ತಯಾರಿಗೆ ಸೂಚಿಸಲಾಗಿದೆ.
ಮಾರ್ಚ್ ಮತ್ತು ಮೇ 2026 ರ ನಡುವೆ ಬಿಸಿಗಾಳಿ ಹಾಗೂ ತಾಪಮಾನ ಏರಿಕೆಯ ಕಾರಣಕ್ಕೆ ಒಣ ಹವೆ ಮುಂದುವರೆಯುವುದಿರಿಂದ ಶುಷ್ಕ ವಾತಾವರಣಕ್ಕೆ ಸಿದ್ದರಾಗಬೇಕಿದೆ. ಇದು ಆರೋಗ್ಯದ ಮೇಲೆ ಪರಿಣಾಮ ಉಂಟು ಮಾಡುವ ಮುನ್ನವೇ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದೆ. ಈ ತಾಪಮಾನ ಏರಿಕೆಯ ಪ್ರವೃತ್ತಿ ಈ ಫೆಬ್ರವರಿಯಲ್ಲೇ ಆರಂಭಗೊಂಡಿದೆ.
ಮುಂದಿನ ವಾರದಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31-32 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ. ಕನಿಷ್ಠ ತಾಪಮಾನವು 18 ಡಿಗ್ರಿ ಸೆಲ್ಸಿಯಸ್‌ಗೆ ಹತ್ತಿರದಲ್ಲಿ ಉಳಿಯುವ ಸಾಧ್ಯತೆಯಿದೆ. ಇದು ವಾಡಿಕೆಗಿಂತ ಹೆಚ್ಚಿನ ತಾಪಮಾನ ಎಂದು ಅಂದಾಜಿಸಲಾಗಿದೆ.
ಉತ್ತರ ಕರ್ನಾಟಕದಲ್ಲಿ ಮೈಸುಡಲಿದೆ ಬಿಸಿಲು
ಹಾಗೆ ಮುಂದಿನ ಎರಡು ತಿಂಗಳು ಉತ್ತರ ಒಳನಾಡಿನ ಜನತೆ ಬಿಸಿಲಿಗೆ ಕಂಗೆಡಲಿದ್ದಾರೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಹಾಗೂ ಬಳ್ಳಾರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್‌ನಿಂದ 45 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.
ಹೀಗಾಗಿ ಈ ಸಮಯದಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬಿಸಿಲಿನ ತೀವ್ರತೆ ಗರಿಷ್ಠ ಮಟ್ಟದಲ್ಲಿರುತ್ತದೆ. ಹೀಗಾಗಿ ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ಆದಷ್ಟು ತಪ್ಪಿಸಬೇಕಿದೆ. ಹೆಚ್ಚು ನೀರು ಕುಡಿಯುವುದು, ದ್ರವ ಆಹಾರ ಸೇವಿಸುವುದು, ದೇಹ ಪೂರ್ತಿಯಾಗಿ ಮುಚ್ಚುವಂತಹ ಬಟ್ಟೆಯನ್ನು ಧರಿಸುವುದು ಉತ್ತಮ ಅಭ್ಯಾಸ ಆಗಿರಲಿದೆ. ಇದರಿಂದ ಬಿಸಿಗಾಳಿ ಸಂಬಂಧಿತ ಅನಾರೋಗ್ಯದಿಂದ ನಮ್ಮನ್ನು ಪಾರು ಮಾಡಬಹುದು. ಸದ್ಯ ಬೇಸಿಗೆಯ ಆರಂಭದಲ್ಲಿಯೇ ಈಗ ಜನರಿಗೆ ಸುಡುವ ಬೆಂಕಿಯಂತಹ ಅನುಭವವಾಗುತ್ತಿರುವುದು ಮುಂದಿನ ದಿನಗಳಲ್ಲಿ ಇನ್ನೂ ಸಹ ಹೆಚ್ಚಾಗುವ ಭೀತಿ ಇದೆ.



Click it and Unblock the Notifications
