Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ!
ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಯುದ್ಧ ಐದನೇ ದಿನಕ್ಕೆ ಕಾಲಿಟ್ಟಿದೆ. ಹಾಗೆ ಈ ದಾಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗೆ ರಾಜತಾಂತ್ರಿಕವಾಗಿ ಹಲವು ರೀತಿಯ ಸಮಸ್ಯೆಗಳ ನಡುವೆ ಒಂದಿಷ್ಟು ಬದಲಾವಣೆಗಳಿಗೆ ಈಗ ಇಡೀ ಜಗತ್ತು ಸಿದ್ದವಾಗುತ್ತಿದೆ. ಹಾಗೆ ಈ ಯುದ್ದದ ಪರಿಣಾಣವು ಮಧ್ಯಪ್ರಾಚ್ಯ ದೇಶಗಳಿಗೆ ಮಾತ್ರವಲ್ಲದೆ ವಿಶ್ವದ ಹಲವು ದೇಶಗಳ ಆರ್ಥಿಕತೆಯ ಮೇಲೂ ತನ್ನ ಪರಿಣಾಮ ಉಂಟು ಮಾಡುವುದು ನೋಡಬಹುದು.
ಭಾರತಕ್ಕೂ ಕೂಡ ಈ ಯುದ್ಧದ ಬಿಸಿ ತಟ್ಟಲಿದೆ. ಮಧ್ಯಪ್ರಾಚ್ಯ ದೇಶಗಳಿಂದ ಭಾರತ ಹಲವು ವಸ್ತುಗಳ ಆಮದು ಮಾಡಿಕೊಳ್ಳುತ್ತದೆ. ಅದರಲ್ಲೂ ಮುಖ್ಯವಾಗಿ ಕಚ್ಚಾತೈಲಕ್ಕೆ ಹಾಗೆ ಅನಿಲ ಸಂಬಂಧಿತ ವಿಚಾರದಲ್ಲಿ ಭಾರತಕ್ಕೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ. ಹಾಗಾದ್ರೆ ಈ ಮಧ್ಯಪ್ರಾಚ್ಯದಲ್ಲಿನ ಘರ್ಷಣೆಯ ಕಾರಣದಿಂದಾಗಿ ಭಾರತದಲ್ಲಿ ಯಾವೆಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಲಿದೆ ಎಂಬುದನ್ನು ನಾವಿಲ್ಲಿ ತಿಳಿದುಕೊಳ್ಳೋಣ.

ಕಚ್ಚಾ ತೈಲ ಮತ್ತು ತೈಲ ಉತ್ಪನ್ನಗಳು
ಮಧ್ಯಪ್ರಾಚ್ಯ ದೇಶಗಳಿಂದ ಭಾರತ ತೈಲ ಆಮದು ಮಾಡಿಕೊಳ್ಳುತ್ತದೆ. ಈ ಕಚ್ಚಾತೈಲ ದರದಲ್ಲಿ ಏರಿಕೆಯಾಗುವುದು ಹಲವು ಸಂಬಂಧಿತ ದರ ಏರಿಕೆಗೂ ಕಾರಣವಾಗುತ್ತದೆ. ಈಗಾಗಲೇ ಭಾರತದಲ್ಲಿ ತೈಲ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ಹೀಗಾಗಿ ಪೆಟ್ರೋಲ್ ಡೀಸೆಲ್ ಸೇರಿದಂತೆ ಅಡುಗೆ ಅನಿಲ ದರ ಕೂಡ ಏರಿಕೆಯಾಗುವ ಸಾಧ್ಯತೆ ಇರಲಿದೆ.
ದ್ವಿದಳ ಧಾನ್ಯಗಳು
ಭಾರತದಲ್ಲಿ ದ್ವಿದಳ ಧಾನ್ಯಗಳ ದರ ಏರಿಕೆಯಾಗುವುದು ನೋಡಬಹುದು. ಇದೇ ರೀತಿಯ ಸಂಘರ್ಷ ಇನ್ನೊಂದು ವಾರ ಮುಂದುವರೆದರೆ ಭಾರತದಲ್ಲಿ ಎಲ್ಲಾ ದ್ವಿದಳ ಧಾನ್ಯದ ದರ ಏರಿಕೆಯಾಗಲಿದೆ ಎಂದು ಅಖಿಲ ಭಾರತ ದಾಲ್ ಮಿಲ್ ಅಸೋಸಿಯೇಷನ್‌ನ ಅಧ್ಯಕ್ಷ ಸುರೇಶ್ ಅಗರ್ವಾಲ್ ಹೇಳಿದ್ದಾರೆ. ಭಾರತವು ತೊಗರಿ, ಉದ್ದು ಸೇರಿದಂತೆ ಹಲವು ದ್ವಿದಳ ಧಾನ್ಯಗಳನ್ನು ಆಮದು ಮಾಡಿಕೊಳ್ಳುತ್ತದೆ. ಬರೋಬ್ಬರಿ 5ರಿಂದ 6 ಮಿಲಿಯನ್ ಟನ್ ಧಾನ್ಯ ಆಮದು ಮಾಡಿಕೊಳ್ಳಲಾಗುತ್ತದೆ. ಇದು ಚಿಲ್ಲರೆ ಮಾರುಕಟ್ಟೆಯ ಮೇಲೆ ಪ್ರಭಾವ ಉಂಟು ಮಾಡುವುದರಿಂದ ದರ ಏರಿಕೆಯನ್ನು ನೋಡಬಹುದು.
ರಸಗೊಬ್ಬರ
ಹಾರ್ಮುಜ್ ಜಲಸಂಧಿಯ ಮೂಲಕ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗಬಹುದು, ಇದು ಬೆಲೆಗಳ ಹೆಚ್ಚಳಕ್ಕೆ ಕಾರಣವಾಗಲಿದೆ. ಜೂನ್‌ನಲ್ಲಿ ಪ್ರಾರಂಭವಾಗುವ ಭಾರತದ ಖಾರಿಫ್ ಋತುವಿಗೆ ಇರಾನ್ ಯೂರಿಯಾ ಮತ್ತು ಅಮೋನಿಯಾದ ಪ್ರಮುಖ ಉತ್ಪಾದಕ ರಾಷ್ಟ್ರವಾಗಿದೆ. ಹೀಗಾಗಿ ಮುಂದೆ ಈ ರಸಗೊಬ್ಬರ ದರ ಕೂಡ ಏರಿಕೆಯಾಗಬಹುದು. ಇದರಿಂದ ಭಾರತದಲ್ಲಿ ಬೆಳೆಗಳ ಮೇಲೆ ಪ್ರಭಾವ ಉಂಟಾಗುವುದಲ್ಲದೆ ರೈತರಿಗೆ ಸಮಸ್ಯೆ ಎದುರಾಗಬಹುದು ಎಂದು ಅಂದಾಜಿಸಲಾಗಿದೆ.
ಯಾವ ವಸ್ತುಗಳ ದರ ಇಳಿಕೆ
ಮಧ್ಯಪ್ರಾಚ್ಯದಲ್ಲಿನ ಯುದ್ಧದ ಕಾರಣದಿಂದಾಗಿ ಹಲವು ವಸ್ತುಗಳ ದರ ಏರಿಕೆಯಾದರೆ ಕೆಲ ವಸ್ತುಗಳ ದರದಲ್ಲಿ ಇಳಿಕೆಯನ್ನು ಸಹ ಗಮನಿಸಬಹುದು. ರಫ್ತು ಕಡಿಮೆಯಾಗುವ ಕಾರಣದಿಂದ ಉತ್ಪನ್ನಗಳ ಸಂಗ್ರಹ ಹೆಚ್ಚಳವಾಗುವ ಕಾರಣದಿಂದ ದರ ಇಳಿಕೆ ನೋಡಬಹುದು. ಅದ್ರಲ್ಲೂ ಮುಖ್ಯವಾಗಿ ಈರುಳ್ಳಿ ದರ ಈಗಾಗಲೇ ಇಳಿಕೆಯಾಗುತ್ತಿದೆ. ಭಾರತವು ಈರುಳ್ಳಿ ರಫ್ತು ಹೆಚ್ಚಾಗಿ ಮಾಡುತ್ತದೆ. ಆದ್ರೆ ಬಂದರು ಕಾರ್ಯಾಚರಣೆ ಬಂದ್ ಆಗಿದ್ದು, ರಫ್ತು ಮಾರುಕಟ್ಟೆ ಸ್ಥಗಿತಗೊಂಡಿದೆ. ಹೀಗಾಗಿ ಭಾರತದಲ್ಲಿ ಈರುಳ್ಳಿ ಬೆಲೆ ಈಗ ನೆಲಕಚ್ಚಿದೆ. ಇದೇ ರೀತಿಯ ಪರಿಸ್ಥಿತಿ ಮುಂದುವರೆದರೆ ಈರುಳ್ಳಿ ದರ ಪಾತಾಳ ಕಾಣಲಿದೆ. ಹಾಗೆ ಭಾರತದಿಂದ ಮಧ್ಯಪ್ರಾಚ್ಯಕ್ಕೆ ರಫ್ತಾಗುತ್ತಿದ್ದ ಮಸಾಲೆ ಪದಾರ್ಥಗಳಿ, ಜವಳಿ ಉತ್ಪನ್ನಗಳು ದೇಶೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಲಿದೆ.



Click it and Unblock the Notifications
