Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಈ 6 ರಾಶಿಯವರು ನಿಗೂಢತೆಯನ್ನು ಕಾಯ್ದುಕೊಳ್ಳುತ್ತಾರೆ!
ಸಾಮಾನ್ಯವಾಗಿ ನಾವು ಕೆಲವರ ಮುಖ ನೋಡಿದ ತಕ್ಷಣ ಅರ್ಥ ಮಾಡಿಕೊಳ್ಳುತ್ತೇವೆ. ಸದ್ಯ ಅವರ ಪರಿಸ್ಥಿತಿ ಹೇಗಿದೆ ಎಂದು. ಅವರು ಖುಷಿಯಾಗಿದ್ದಾರಾ? ನೋವುನಲ್ಲಿದ್ದಾರಾ? ಬೇಸರದಲ್ಲಿದ್ದಾರಾ ಎಂದು ಅವರ ಮುಖ ನೋಡಿದ ತಕ್ಷಣ ನಮಗೆ ಗೊತ್ತಾಗುತ್ತದೆ. ಆದರೆ ಇನ್ನೂ ಕೆಲವರು ರಹಸ್ಯಗಳನ್ನು ಕಾಯ್ದುಕೊಳ್ಳುತ್ತಾರೆ. ಅವರ ಬದುಕಿನಲ್ಲಿ ಏನಾಗುತ್ತಿದೆ ಎನ್ನುವ ಸಣ್ಣ ಸುಳಿವು ಕೂಡ ನಮಗೆ ಇರೋದಿಲ್ಲ. ಅಂತಹ 6 ನಿಗೂಢ ರಾಶಿಗಳ ಬಗ್ಗೆ ನಾವಿಂದು ತಿಳಿಯೋಣ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರನ್ನು ಸಾಮಾನ್ಯ ಜನರಿಗೆ ಅರ್ಥ ಮಾಡಿಕೊಳ್ಳುವುದು ತುಂಬಾನೇ ಕಷ್ಟ. ಇವರು ತಮ್ಮ ಜೀವನ ರಹಸ್ಯಗಳನ್ನು ಯಾರೊಂದಿಗೂ ಹಂಚಿಕೊಳ್ಳೋದಕ್ಕೆ ಇಷ್ಟ ಪಡೋದಿಲ್ಲ. ಇವರು ಇಡುವ ಪ್ರತಿಯೊಂದು ಹೆಜ್ಜೆಯೂ ಕೂಡ ನಿಗೂಢವಾಗಿ ಇರುತ್ತದೆ. ಇವರ ಬದುಕಿನಲ್ಲಿ ಏನಾಗುತ್ತಿದೆ ಅನ್ನೋದ್ರ ಬಗ್ಗೆ ಯಾರಿಗೂ ಗೊತ್ತಿರೋದಿಲ್ಲ. ಬೇರೆಯವರಿಗೆ ಗೊತ್ತಿಲ್ಲದ ಹಾಗೆ ಒಳಗೊಳಗೆ ಏನನ್ನೋ ನಡೆಸುತ್ತಿರುತ್ತಾರೆ.
ಮೀನ ರಾಶಿ
ಮೀನ ರಾಶಿಯವರು ಕೂಡ ಪ್ರತಿಯೊಂದು ವಿಚಾರವನ್ನು ಗುಟ್ಟಾಗಿ ಇಡುತ್ತಾರೆ. ಇತರರ ಜೊತೆಗೆ ಹಂಚಿಕೊಳ್ಳೋದಕ್ಕೆ ಅವರಿಗೆ ಇಷ್ಟ ಇರೋದಿಲ್ಲ. ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಕೂಡ ಅದನ್ನು ಇತರರ ಮುಂದೆ ಹೇಳೋದಿಲ್ಲ. ಬದಲಾಗಿ ಅದೇ ವಿಚಾರದ ಬಗ್ಗೆ ನೆನೆಯುತ್ತಾ ಕೊರಗುತ್ತಿರುತ್ತಾರೆ. ಭಾವನೆಗಳನ್ನು ಗುಪ್ತವಾಗಿ ಬಚ್ಚಿಡುತ್ತಾರೆ. ಮನಸ್ಸಿನ ನೋವನ್ನು ಬೇರೆಯವರ ಮುಂದೆ ವ್ಯಕ್ತಪಡಿಸದೆ ನಗುತ್ತಾ ಇರುತ್ತಾರೆ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರು ಯಾವಾಗಲೂ ರಹಸ್ಯವಾಗಿ ಕೆಲಸ ಮಾಡುತ್ತಾರೆ. ಪ್ರತಿಯೊಂದು ಕೆಲಸದಲ್ಲೂ ಶಿಸ್ತನ್ನು ಕಾಯ್ದುಕೊಳ್ಳುತ್ತಾರೆ. ಇದೇ ಕಾರಣಕ್ಕೆ ಅವರು ಬೇರೆಯವರಿಂದ ರಹಸ್ಯಗಳನ್ನು ಮುಚ್ಚಿಡುತ್ತಾರೆ. ಏನೇ ಕೆಲಸ ಮಾಡಬೇಕಾದರೂ ಪ್ರೇರಣೆಯನ್ನು ಪಡೆದು ತಮ್ಮ ಗುರಿಯತ್ತ ಕೆಲಸ ಮಾಡುತ್ತಿರುತ್ತಾರೆ. ಕೆಲಸದ ಮೇಲಿನ ಆಸಕ್ತಿ ಎಂದಿಗೂ ಕಡಿಮೆ ಆಗೋದಿಲ್ಲ.
ಕುಂಭ ರಾಶಿ
ಕುಂಭ ರಾಶಿಯವರು ನವೀನ ಚಿಂತನೆಗೆ ಹೆಸರುವಾಸಿಯಾಗಿದ್ದಾರೆ. ಹಾಗೂ ಇವರು ಯಾವಾಗಲೂ ರಹಸ್ಯವನ್ನು ಕಾಯ್ದುಕೊಳ್ಳುತ್ತಾರೆ. ಒಂದು ವಿಚಾರದ ಬಗ್ಗೆ ತುಂಬಾ ಯೋಚಿಸುತ್ತಾರೆ. ಹಾಗೂ ಅದನ್ನು ಬೇರೆಯವರ ಜೊತೆಗೆ ಹಂಚಿಕೊಳ್ಳೋದಕ್ಕೆ ಇಷ್ಟ ಪಡೋದಿಲ್ಲ. ತಮ್ಮ ಆಲೋಚನೆ ಹಾಗೂ ದೃಷ್ಟಿಕೋನಗಳ ಬಗ್ಗೆ ಬೇರೆಯವರು ಏನಂದುಕೊಳ್ಳುತ್ತಾರೆ ಎನ್ನುವ ಭಯ ಕೂಡ ಇವರನ್ನು ಕಾಡುತ್ತದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರು ಕೂಡ ಪ್ರತಿಯೊಂದು ವಿಚಾರದಲ್ಲೂ ರಹಸ್ಯವನ್ನು ಕಾಯ್ದುಕೊಳ್ಳುತ್ತಾರೆ. ಇವರು ಯಾವಾಗಲೂ ಪ್ರಾಯೋಗಿಕವಾಗಿ ಆಲೋಚಿಸುತ್ತಾರೆ. ಯಾರೊಂದಿಗೂ ಹೆಚ್ಚು ಬೆರೆಯೋದಕ್ಕೆ ಇಷ್ಟ ಪಡೋದಿಲ್ಲ. ತಮ್ಮಷ್ಟಕ್ಕೆ ಇದ್ದು ಬಿಡುತ್ತಾರೆ. ಇವರ ಮನಸ್ಸಿನಲ್ಲಿ ಆಗುತ್ತಿರುವ ಗೊಂದಲಗಳನ್ನು ಅಷ್ಟೊಂದು ಸುಲಭವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರು ತಮ್ಮ ಅರ್ಥಗರ್ಭಿತ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದಾರೆ. ನೊಡೋದಕ್ಕೆ ಗಂಭೀರವಾಗಿ ಕಂಡರೂ ಕೂಡ ತುಂಬಾ ಮೃದು ಮನಸ್ಸಿನವರು. ಈ ರಾಶಿಯವರು ತಮ್ಮ ಮನಸ್ಸಿನ ನೋವನ್ನು ಯಾರೊಂದಿಗೂ ಹಂಚಿಕೊಳ್ಳದೇ ಒಳಗೊಳಗೆ ನೊಂದುಕೊಳ್ಳುತ್ತಾರೆ. ಹೆಚ್ಚಿನವರಿಗೆ ಇವರನ್ನು ಅರ್ಥ ಮಾಡಿಕೊಳ್ಳೋದಕ್ಕೆ ಕಷ್ಟ ಆಗುತ್ತದೆ.



Click it and Unblock the Notifications