Latest Updates
-
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಸಂಸದ ತೇಜಸ್ವಿ ಸೂರ್ಯ ಕೈಹಿಡಿದ ಈಕೆ ಯಾರು? ಮೋದಿ ಮೆಚ್ಚಿದ ಗಾಯಕಿ ಶಿವಶ್ರೀ ಕುರಿತ ಮಾಹಿತಿ ಇಲ್ಲಿದೆ!
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಹಲವು ತಿಂಗಳ ಹಿಂದಿನಿಂದಲೂ ಅವರ ವಿವಾಹ ಕುರಿತಂತೆ ಒಂದಿಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಕೊನೆಗೂ ಈಗ ಮದುವೆಯಾಗಿದ್ದಾರೆ. ಅವರು ತಮಿಳುನಾಡು ಮೂಲದ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಅವರ ಕೈ ಹಿಡಿದಿದ್ದಾರೆ. ಇಂದು ಅದ್ದೂರಿ ವಿವಾಹದಲ್ಲು ಗಣ್ಯರು ಭಾಗಿಯಾಗಿ ಯುವ ಜೋಡಿಗೆ ಆಶೀರ್ವಾದ ಮಾಡಿದ್ದಾರೆ.
ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಇಬ್ಬರು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಎರಡು ಕಡೆ ಕುಟುಂಬದವರು ಹಾಗೆ ಕೆಲವೇ ಕೆಲವು ಮಂದಿ ಗಣ್ಯರಿಗೆ ಮಾತ್ರವೇ ಆಹ್ವಾನ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆಯಿಂದ ಹಲವು ಶಾಸ್ತ್ರ, ಸಂಪ್ರದಾಯಗಳು ನೆರವೇರಿವೆ ಎಂದು ತಿಳಿದುಬಂದಿದೆ. ಕಾಶಿಯಾತ್ರೆ, ಜೀರಿಗೆ ಬೆಲ್ಲ ಧಾರೆ, ಹೋಮ ಹೀಗೆ ಹಲವು ಆಚರಣೆ ನೆರವೇರಿದೆ.

ಇಂದು ಬೆಳಗ್ಗೆ 9:30 ರಿಂದ 10:15ರ ನಡುವಿನ ತುಲಾ ಲಗ್ನದಲ್ಲಿ ವಿವಾಹ ನೆರವೇರಿದೆ. ಹಾಗೆ ಗಿರಿ ನಗರದಲ್ಲಿರುವ ತೇಜಸ್ವಿ ಸೂರ್ಯ ಅವರ ನಿವಾಸದಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳು ನೆರವೇರಿವೆ. ಹಾಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಮಾರ್ಚ್ 9ರಂದು ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಮಯದಲ್ಲಿ ರಾಜ್ಯದ ಪ್ರಮುಖ ನಾಯಕರು, ಸಿನಿ ನಟ ನಟಿಯರಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.
ಯಾರು ಈ ಶಿವಶ್ರೀ ಸ್ಕಂದ ಪ್ರಸಾದ್?
ಶಿವಶ್ರೀ ಸ್ಕಂದ ಪ್ರಸಾದ್ ತಮಿಳುನಾಡು ಮೂಲದ ಗಾಯಕಿ ಆಗಿದ್ದಾರೆ. ಹಲವು ಸಿನಿಮಾಗಳಿಗೆ ಅವರು ಹಾಡು ಹಾಡಿದ್ದಾರೆ. ಹಾಗೆ ಅವರು ಭರತನಾಟ್ಯ ಕಲಾವಿದೆಯೂ ಹೌದು. ದೇಶ, ವಿದೇಶದಲ್ಲು ಅವರು ಕಾರ್ಯಕ್ರಮ ನೀಡಿದ್ದಾರೆ. ಇತ್ತೀಚಿಗೆ ಮಣಿರತ್ನಂ ಅವರ ನಿರ್ದೇಶನದ ಪೊನ್ನಿಯಿನ್ ಸೆಲ್ವನ್ 2 ಸಿನಿಮಾದಲ್ಲಿ ಕನ್ನಡ ಹಾಡೊಂದಕ್ಕೆ ಅವರು ಧ್ವನಿಯಾಗಿದ್ದಾರೆ.
ಶಿವಶ್ರೀ ಸ್ಕಂದ ಪ್ರಸಾದ್ ಕೇವಲ ಸಂಗೀತ ಹಾಗೂ ಭರತನಾಟ್ಯ ಮಾತ್ರವಲ್ಲ ಶಿಕ್ಷಣದಲ್ಲೂ ಸಾಧನೆ ಮಾಡಿದ್ದಾರೆ. ಅವರು ಬಿ.ಟೆಕ್ ಪದವಿ ಪಡೆದಿದ್ದಾರೆ. ಬಯೋ ಇಂಜಿನಿಯರಿಂಗ್ ಪದವಿ ಮುಗಿಸಿದ್ದಾರೆ. ಹಾಗೆ ಭರತನಾಟ್ಯದಲ್ಲಿ ಎಂಎ ಹಾಗೂ ಚೆನ್ನೈನ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಭಾಷೆಯಲ್ಲಿ ಪದವಿ ಪಡೆದಿದ್ದಾರೆ.
ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ
ಶಿವಶ್ರೀ ಸ್ಕಂದ ಪ್ರಸಾದ್ ಅವರು ಹಾಡಿದ್ದ ಕನ್ನಡದ ಹಾಡು ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರೇ ಮೆಚ್ಚಿಕೊಂಡಿದ್ದರು. ಶ್ರೀರಾಮನ ಕುರಿತಾಗಿ ಅವರು ಹಾಡಿದ್ದ ಹಾಡಿನ ಕುರಿತು ಪ್ರಧಾನಿ ನರೇಂದ್ಚರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಶಿವಶ್ರೀ ಅವರ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಪೂಜಿಸಲೆಂದೇ ಹೂಗಳ ತಂದೆ ಹಾಡನ್ನು ಶಿವಶ್ರೀ ಅವರು ಸುಮಧುರವಾಗಿ ಹಾಡಿದ್ದರು.
ಶ್ರೀರಾಮನಿಗೆ ಸಂಬಂಧಿಸಿದ್ದ ಈ ಹಾಡನ್ನು ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದರು. ಶಿವಶ್ರೀ ಸ್ಕಂದ ಪ್ರಸಾದ್ ಅವರ ಕನ್ನಡದ ಈ ಗಾಯನವು ಪ್ರಭು ಶ್ರೀ ರಾಮನ ಮೇಲಿನ ಭಕ್ತಿಯ ಮನೋಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಇಂತಹ ಪ್ರಯತ್ನಗಳು ಬಹಳ ದೂರ ಸಾಗುತ್ತವೆ. #ShriRamBhajan" ಎಂದು ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.
ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸತತ 2ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನ ಸಂಸದ ಎಂಬ ಖ್ಯಾತಿಗೂ ಅವರು ಸಾಕ್ಷಿಯಾಗಿದ್ದರು.



Click it and Unblock the Notifications