Latest Updates
-
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್
ನಾಗರ ಪಂಚಮಿ 2023: ಈ 4 ರಾಶಿಯವರಿಗೆ ಚಿನ್ನದ ಯೋಗ!
ಆಷಾಢ ಮಾಸ ಕಳೆದ ಮೇಲೆ ಶ್ರಾವಣದಲ್ಲಿ ಬರುವ ಮೊದಲ ಹಬ್ಬವೇ ಪಂಚಮಿ. ನಾಗರ ಪಂಚಮಿ ಎಂದರೆ ಜನರಿಗೆ ಎಲ್ಲಿಲ್ಲದ ಸಂಭ್ರಮ. ಮೊದಲ ಹಬ್ಬವಾಗಿರೋದ್ರಿಂದ ಬಹಳ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ಬಾರಿ ಆಗಸ್ಟ್ 21 ರಂದು ಪಂಚಮಿ ಹಬ್ಬವನ್ನು ಆಚರಣೆ ಮಾಡಲಾಗ್ತಿದ್ದು, ಈ ಶುಭ ಗಳಿಗೆಯಲ್ಲಿ ಕೆಲವು ರಾಶಿಯವರಿಗೆ ಇದ್ರಿಂದ ತುಂಬಾನೇ ಒಳ್ಳೆಯದಾಗಲಿದೆ. ಅಷ್ಟಕ್ಕೂ ಯಾವೆಲ್ಲಾ ರಾಶಿಯವರಿಗೆ ಪಂಚಮಿಯು ಶುಭ ಯೋಗವನ್ನು ಹೊತ್ತು ತರಲಿದೆ ಅನ್ನೋದನ್ನು ತಿಳಿಯೋಣ.

ಧನು ರಾಶಿ
ಧನು ರಾಶಿಯವರು ನಾಗ ಪಂಚಮಿಯಂದು ಶಿವನ ವಿಶೇಷ ಅನುಗ್ರಹವನ್ನು ಪಡೆಯುತ್ತಾರೆ. ಕೆಲಸದಲ್ಲಿ ಸಹೋದ್ಯೋಗಿಗಳ ಬೆಂಬಲ ಸಿಗುತ್ತದೆ. ಮತ್ತು ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ನೀವು ಆರ್ಥಿಕ ರಂಗದಲ್ಲಿ ಲಾಭ ಪಡೆಯಲಿದ್ದೀರಿ. ಸಂಪತ್ತು ಹೆಚ್ಚಾಗುವ ಸಾಧ್ಯತೆಗಳಿವೆ. ಅದೃಷ್ಟ ನಿಮ್ಮೊಂದಿಗೆ ಇರುತ್ತದೆ.
ಕುಂಭ ರಾಶಿ
ನಾಗಪಂಚಮಿಯ ದಿನದಂದು ಕುಂಭ ರಾಶಿಯವರಿಗೆ ಹಣದ ವಿಷಯದಲ್ಲಿ ಲಾಭ ದೊರೆಯುತ್ತದೆ. ಕೆಟ್ಟ ವಿಚಾರಗಳೆಲ್ಲಾ ದೂರವಾಗಲಿದೆ. ನಾಗದೇವರ ಕೃಪೆಯಿಂದ ಜೀವನದಲ್ಲಿ ಸುಖ ಶಾಂತಿ ನೆಲೆಸಲಿದೆ. ನೀವು ಸಾಲ ಪಡೆದಿದ್ದರೆ ಈ ಸಮಯದಲ್ಲಿ ನೀವು ಅದನ್ನು ಮರುಪಾವತಿಸಲು ಸಾಧ್ಯವಾಗುತ್ತದೆ. ಉದ್ಯೋಗಿಗಳಿಗೆ ಈ ಸಮಯ ಅನುಕೂಲಕರವಾಗಿದೆ. ಹೊಸ ಉದ್ಯೋಗ ದೊರೆಯುವ ಸಾಧ್ಯತೆಗಳಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಉದ್ಯಮಿಗಳಿಗೆ ನಾಗ ಪಂಚಮಿಯಂದು ಒಳ್ಳೆಯ ಸುದ್ದಿ ಸಿಗಲಿದೆ. ಹೊಸ ಒಪ್ಪಂದವು ಹೊಸ ಲಾಭವನ್ನು ನೀಡುತ್ತದೆ. ಹೂಡಿಕೆಗೆ ಈ ಸಮಯ ಉತ್ತಮವಾಗಿದೆ. ಕೆಲಸ ಮತ್ತು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. ನಾಗದೇವತೆಯನ್ನು ಪೂಜಿಸುವುದರಿಂದ ಶನಿದೋಷ, ಕಲಸರ್ಪ ದೋಷಗಳಿಂದ ಮುಕ್ತಿ ದೊರೆಯುತ್ತದೆ.
ಮಕರ ರಾಶಿ
ನಾಗರ ಪಂಚಮಿಯ ಶುಭ ದಿನವು ಮಕರ ರಾಶಿಯ ಜನರ ಜೀವನದಲ್ಲಿ ಉತ್ತಮ ಬದಲಾವಣೆಯನ್ನು ತರಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಇದ್ದ ಒತ್ತಡ ದೂರವಾಗುತ್ತದೆ. ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಯೋಜನೆಗಳು ಯಶಸ್ವಿಯಾಗುತ್ತವೆ. ಮಗು ತನ್ನ ವೃತ್ತಿಜೀವನದಲ್ಲಿ ಪ್ರಗತಿಯನ್ನು ಪಡೆಯುವ ಬಲವಾದ ಅವಕಾಶಗಳಿವೆ.
ನಾಗ ಪಂಚಮಿ 2023 ಪೂಜಾ ಮುಹೂರ್ತ :
ಶ್ರಾವಣ ಶುಕ್ಲ ಪಂಚಮಿ ಪ್ರಾರಂಭ - 21 ಆಗಸ್ಟ್ 2023, ಬೆಳಗ್ಗೆ 12.21 ಕ್ಕೆ
ಶ್ರಾವಣ ಶುಕ್ಲ ಪಂಚಮಿ ಮುಕ್ತಾಯ - 22 ಆಗಸ್ಟ್ 2023, ಮಧ್ಯಾಹ್ನ 02 ರವರೆಗೆ
ಪೂಜೆ ಮುಹೂರ್ತ - ಬೆಳಗ್ಗೆ 05.33 ರಿಂದ 08.30 ರವರೆಗೆ



Click it and Unblock the Notifications