Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ಮಾಸ ಭವಿಷ್ಯ: ನವೆಂಬರ್ ತಿಂಗಳು ಮೇಷ ರಾಶಿಯವರಿಗೆ ಹೇಗಿರಲಿದೆ?
ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ಭವಿಷ್ಯ ಹೇಳಲಾಗಿದೆ. ನವೆಂಬರ್ ತಿಂಗಳು ಮೇಷ ರಾಶಿಯವರಿಗೆ ಹೇಗಿರಲಿದೆ? ಈ ತಿಂಗಳು ವೃತ್ತಿ ಜೀವನ, ಆರ್ಥಿಕ ಜೀವನ, ಕೌಟುಂಬಿಕ ಜೀವನ ಹೇಗಿರಲಿದೆ ಎಂದು ಹೇಳಲಾಗಿದೆ ನೋಡಿ:

ವೃತ್ತಿ ಜೀವನ
ಮೇಷ ರಾಶಿಯವರಿಗೆ ಮಂಗಳವು ಏಳನೇ ಮನೆಯಲ್ಲಿ ಅನುಕೂಲಕರ ಸ್ಥಾನದಲ್ಲಿದೆ. ಆದರೆ ಶನಿಯು ಹಿಮ್ಮುಖ ಸ್ಥಿತಿಯಲ್ಲಿರುವುದರಿಂದ ವೃತ್ತಿ ಕ್ಷೇತ್ರದಲ್ಲಿ ಪ್ರಗತಿ ಕಾಣದಿರುವ ಸಾಧ್ಯತೆ ಇದೆ. ಹೀಗಾಗಿ ಮಂಗಳ-ಶನಿಯ ಸ್ಥಾನದಿಂದಾಗಿ ಮಿಶ್ರಫಲ ಸಿಗುವುದು. ವಿದೇಶಕ್ಕೆ ಹೋಗಲು ಬಯಸುವವರಿಗೆ ಅವಕಾಶಗಳು ದೊರೆಯಲಿದೆ. ರಾಹು ಹಾಗೂ ಗುರುವಿನ ಸ್ಥಾನದಿಂದಾಗಿ ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನಿಸಿದರೆ ಫಲಪ್ರದವಾಗುವ ಬಲವಾದ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ಮಿಶ್ರಫಲಿತಾಂಶ.
ಸ್ವಂತ ವ್ಯವಹಾರ ಮಾಡುವವರಿಗೆ ಈ ಸಮಯ ಉತ್ತಮವಾಗಿದೆ. ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಬಯಸುವವರಿಗೆ ಈ ಅವಧಿ ಅನುಕೂಲಕರವಾಗಿದೆ.
ಆರ್ಥಿಕ ಜೀವನ
ಮೇಷ ರಾಶಿಯವರಿಗೆ ಈ ತಿಂಗಳು ಹೆಚ್ಚಿನ ಹಣವನ್ನು ಗಳಿಸಲು ಸಾಧ್ಯವಾಗದಿರುವ ಸಾಧ್ಯತೆಯಿದೆ, ನವೆಂಬರ್ 30 ರವರೆಗೆ ಶುಕ್ರನು ನಿಮ್ಮ ಆರನೇ ಮನೆಯಲ್ಲಿ ಎರಡನೇ ಮನೆಯ ಅಧಿಪತಿಯಾಗಿ ಉಪಸ್ಥಿತನಿದ್ದಾನೆ. ಶುಕ್ರನು ಆರನೇ ಮತ್ತು ಏಳನೇ ಮನೆಯಲ್ಲಿರುವುದರಿಂದ ಜನರು ಈ ತಿಂಗಳು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ಸಮಸ್ಯೆಗಳಿಂದಾಗಿ ಸಾಲದ ಸುಳಿಯಲ್ಲಿ ಸಿಲುಕುವ ಸಂಭವವಿದ್ದು, ಈ ಸಾಲದಿಂದ ಮುಕ್ತಿ ಹೊಂದಲು ಸಾಲವನ್ನು ತೆಗೆದುಕೊಳ್ಳಲು ಯೋಚಿಸಬಹುದು, ಆದರೆ ಈ ಅವಧಿಯಲ್ಲಿ ಸಾಲವನ್ನು ತೆಗೆದುಕೊಳ್ಳಲು ಹೋಗಬೇಡಿ.
ಆರೋಗ್ಯ
ಮೇಷ ರಾಶಿಯವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ನೆರಳು ಗ್ರಹಗಳಾದ ರಾಹು ಮತ್ತು ಕೇತು ಕ್ರಮವಾಗಿ ಐದನೇ ಮತ್ತು ಹನ್ನೊಂದನೇ ಮನೆಯಲ್ಲಿ ಇದ್ದು ಗುರುವು ಮೊದಲ ಮನೆಯಲ್ಲಿದೆ. ಈ ಮನೆಯಲ್ಲಿ ಕೇತುವಿನ ಸ್ಥಾನವು ಜನರಿಗೆ ಧೈರ್ಯವನ್ನು ನೀಡುತ್ತದೆ. ಹನ್ನೆರಡನೇ ಮನೆಯಲ್ಲಿ ರಾಹು ಉಪಸ್ಥಿತಿಯು ಆರೋಗ್ಯ ಸಮಸ್ಯೆ ಉಂಟು ಮಾಡಬಹುದು.
ಪ್ರೀತಿ ಮತ್ತು ಮದುವೆ
ಕುಟುಂಬ ಜೀವನಕ್ಕೆ, ವೈವಾಹಿಕ ಜೀವನಕ್ಕೆ ಈ ತಿಂಗಳು ಅನುಕೂಲಕರವಾಗಿದೆ. ಅವಾಹಿತರು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಸಮಯದಲ್ಲಿ ಸಂಬಂಧ ಕೂಡಿ ಬರಲಿದೆ. ಪ್ರೇಮ ವಿವಾಹವಾಗಲು ಬಯಸುವವರು ಕುಟುಂಬದವರ ಒಪ್ಪಿಗೆ ಪಡೆಯಬಹುದು. ಅಹಂನಿಂದ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ.
ಪರಿಹಾರ:
ಶನಿವಾರ ಶನಿ ದೇವಾಲಯಕ್ಕೆ ಭೇಟಿ ನೀಡಿ



Click it and Unblock the Notifications
