Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ನವೆಂಬರ್ ತಿಂಗಳು ಈ 4 ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ
ನವೆಂಬರ್ ತಿಂಗಳ ಭವಿಷ್ಯ ನೋಡುವುದಾದರೆ ಕೆಲವೊಂದು ರಾಶಿಗೆ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ, ಈ ತಿಂಗಳಿನಲ್ಲಿ ಹಣಕಾಸಿನ ಸ್ಥಿತಿಯಲ್ಲಿ ತುಂಬಾನೇ ಸುಧಾರಣೆ ಕಂಡು ಬರುವುದು. ಈ ತಿಂಗಳು ಯಾವ ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ ಎಂದು ನೋಡೋಣ ಬನ್ನಿ:
ಸಿಂಹ ರಾಶಿ
ಸಿಂಹ ರಾಶಿಯವರಿಗೆ ನವೆಂಬರ್ ತಿಂಗಳು ಆರ್ಥಿಕವಾಗಿ ಉತ್ತಮವಾಗಿದೆ. ಕೆಲವು ಅಡೆತಡೆಗಳು ಎದುರಾದರೂ ನೀವು ನಿಮ್ಮ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ಕೆಲಸದ ಮೇಲೆ ನೀವು ಸಂಪೂರ್ಣವಾಗಿ ಗಮನಹರಿಸಿದರೆ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ತಿಂಗಳಿನಲ್ಲಿ ನೀವು ಬಜೆಟ್ ಅನ್ನು ಉತ್ತಮವಾಗಿ ನಿರ್ವಹಿಸುವುದರಿಂದ ಉಳಿತಾಯ ಮಾಡಲು ಸಾಧ್ಯವಾಗುವುದು.

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಗ್ರಹಗಳ ಉತ್ತಮ ಸ್ಥಾನವು ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಭದ್ರವಾಗಿಸುತ್ತದೆ. ವ್ಯಾಪಾರಸ್ಥರು ಉತ್ತಮ ಬಡ್ತಿ ಪಡೆಯುತ್ತೀರಿ. ಉದ್ಯೋಗಸ್ಥರು ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ನಿಮ್ಮ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ಹಳೆಯ ಸಾಲ ತೀರಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ತುಂಬಾ ಉತ್ತಮವಾಗಿರಲಿದೆ.
ತುಲಾ ರಾಶಿ
ಮಿಥುನ ರಾಶಿಯವರಿಗೆ ನವೆಂಬರ್ ತಿಂಗಳು ಬಹಳ ಮುಖ್ಯವಾಗಿರುತ್ತದೆ. ಉದ್ಯೋಗಿಗಳು ಕೆಲಸದಲ್ಲಿ ಬಡ್ತಿ ಪಡೆಯಬಹುದು, ಉತ್ತಮ ಪ್ರಗತಿ ಕಾಣುವರಿ. ಈ ಅವಧಿಯಲ್ಲಿ ಕೆಲವರ ಆದಾಯ ಹೆಚ್ಚಾಗಲಿದೆ. ವ್ಯಾಪಾರಸ್ಥರು ಅಪೇಕ್ಷಿತ ಲಾಭವನ್ನು ಪಡೆಯಬಹುದು. ನೀವು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಮಾಡಿದರೆ, ನೀವು ಸೂಕ್ತವಾದ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಹಣಕಾಸಿನ ದೃಷ್ಟಿಯಿಂದ ಈ ಸಮಯವು ನಿಮಗೆ ಉತ್ತಮವಾಗಿರುತ್ತದೆ. ನೀವು ಮಿತವಾಗಿ ಖರ್ಚು ಮಾಡುತ್ತೀರಿ, ಇದರಿಂದ ಉಳಿತಾಯ ಮಾಡಲು ಸಾಧ್ಯವಾಗುವುದು.
ಧನು ರಾಶಿ
ನೀವು ನಿರುದ್ಯೋಗಿಗಳಾಗಿದ್ದರೆ ನವೆಂಬರ್ ತಿಂಗಳು ನಿಮಗೆ ತುಂಬಾ ಶುಭ, ಏಕೆಂದರೆ ಈ ಅವಧಿಯಲ್ಲಿ ನಿಮಗೆ ಒಳ್ಳೆಯ ಕೆಲಸ ಸಿಗಲಿದೆ. ಇನ್ನು ಉದ್ಯೋಗ ಬದಲಾವಣೆಗೆ ಅಥವಾ ಬಡ್ತಿಗೆ ಕಾಯುತ್ತಿರುವವರು ನಿರೀಕ್ಷೆಗೆ ತಕ್ಕ ಫಲ ಪಡೆಯುತ್ತೀರಿ. ನಿಮ್ಮ ಆದಾಯವೂ ತುಂಬಾ ಚೆನ್ನಾಗಿರುವುದರಿಂದ ಸೌಕರ್ಯಗಳು ಹೆಚ್ಚಾಗುವುದು. ವ್ಯಾಪಾರಿಗಳು ವ್ಯಾಪಾರದಲ್ಲಿ ಉತ್ತಮ ಲಾಭ ಕಾಣುತ್ತಾರೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರು ಒಳ್ಳೆಯ ಲಾಭ ಗಳಿಸಬಹುದು. ಹಣದ ವಿಷಯದಲ್ಲಿ ಈ ತಿಂಗಳು ನಿಮಗೆ ತುಂಬಾ ಅದೃಷ್ಟದ ತಿಂಗಳಾಗಿದೆ. ನೀವು ನಿರುದ್ಯೋಗಿಗಳಾಗಿದ್ದರೆ ನವೆಂಬರ್ ತಿಂಗಳು ನಿಮಗೆ ತುಂಬಾ ಆಹ್ಲಾದಕರವಾಗಿರುತ್ತದೆ. ಕೆಲಸದಲ್ಲಿ ಬಡ್ತಿ ಪಡೆಯಬಹುದು, ನಿಮ್ಮ ಆದಾಯವೂ ಹೆಚ್ಚಾಗುತ್ತದೆ.



Click it and Unblock the Notifications
