ಸಂಖ್ಯಾಶಾಸ್ತ್ರ: ಜೂನ್11-17ರವರೆಗಿನ ವಾರ ಭವಿಷ್ಯ ಹೇಗಿರಲಿದೆ ನೋಡಿ

ಸಂಖ್ಯಾ ಶಾಸ್ತ್ರದಲ್ಲಿ ನಮ್ಮ ಜನ್ಮ ದಿನಾಂಕದಲ್ಲಿ 1-9 ಸಂಖ್ಯೆಗಳು ಬರುವುದು, ಉದಾಹರಣೆಗೆ ನಿಮ್ಮ ದಿನಾಂಕ 10 ಆದರೆ ನಿಮ್ಮ ಸಂಖ್ಯೆ 1+0=1 ಆಗಿದೆ. ಸಂಖ್ಯಾಶಾಸ್ತ್ರ ಪ್ರಕಾರ ನಿಮ್ಮ ಜನ್ಮ ದಿನಾಂಕಕ್ಕೆ ಅನುಸಾರ ಜೂನ್ 11-17ರವರೆಗಿನ ವಾರ ಭವಿಷ್ಯ ಹೇಗಿರಲಿದೆ ಎಂದು ನೋಡೋಣ ಬನ್ನಿ:

ಸಂಖ್ಯೆ 1 (ಜನ್ಮ ದಿನಾಂಕ 1,10,19,28)

ಈ ವಾರ ನಿಮ್ಮ ಸಂಖ್ಯಾಶಾಸ್ತ್ರ ವಾರ ಭವಷ್ಯ ಪ್ರಕಾರನಿಮ್ಮ ಜೀವನದಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ. ಅದು ಉದ್ಯೋಗ ಆಗಿರಬಹುದು, ವ್ಯಾಪಾರ ಆಗಿರಬೇಕು. ಈ ವಾರ ನಿಮ್ಮ ಕನಸು ನೆರವೇರಲು ಅವಕಾಶಗಳು ಹೆಚ್ಚಾಗಿ ಸಿಗಲಿದೆ, ಆರೋಗ್ಯದ ಕಡೆಗೆ ಕೂಡ ಗಮನ ಹರಿಸುತ್ತೀರಿ. ಈ ವಾರ ನಿಮಗೆ ತುಂಬಾ ಒಳ್ಳೆಯದಾಗಲಿದೆ. ಈ ಸಮಯದಲ್ಲಿ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯಬಹುದು. ನೀವು ವ್ಯಾಪಾರಸ್ಥರಾಗಿದ್ದರೆ ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನೀವು ಹೂಡಿಕೆ ಮಾಡಲು ಈ ಸಮಯ ಅನುಕೂಲಕರವಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ.

Numerology Prediction From June 11 To June 17 In Kannada

ಸಂಖ್ಯೆ 2 ( ಜನ್ಮ ದಿನಾಂಕ 2,11,20,29)

ಈ ವಾರ ತುಂಬಾ ಲವಲವಿಕೆಯಿಂದಿ ಇರುತ್ತೀರಿ. ನಿಮ್ಮ ಬುದ್ಧಿವಂತಿಕೆ ಹಾಗೂ ಪ್ರಯತ್ನದಿಂದ ನೀವು ಯಾವುದೇ ಸವಾಲನ್ನು ಜಯಿಸಬಹುದು. ಕೆಲಸದ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಕಾರ್ಯನಿರತವಾಗಿರಲಿದೆ. ಈ ಸಮಯದಲ್ಲಿ ಜವಾಬ್ದಾರಿ ಹೆಚ್ಚಾಗಲಿದೆ. . ಆದಾಗ್ಯೂ, ನಿಮ್ಮ ಎಲ್ಲಾ ಕೆಲಸಗಳನ್ನು ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಪೂರ್ಣಗೊಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಹಣಕಾಸಿನ ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಈ ಅವಧಿಯಲ್ಲಿ ಹಣಕಾಸಿನ ಲಾಭದ ಸಾಧ್ಯತೆ ಇದೆ.

ಸಂಖ್ಯೆ 3 (ಜನ್ಮ ದಿನಾಂಕ 3,12,21,30) )

ವ್ಯಾಪಾರಸ್ಥರಿಗೆ ಈ ವಾರ ತುಂಬಾ ಅನುಕೂಲಕರವಾಗಿರಲಿದೆ. ನೀವು ಹಿಂದೆ ಮಾಡಿದ ಹೂಡಿಕೆಯ ದುಪ್ಪಟ್ಟು ಲಾಭವನ್ನು ಪಡೆಯಬಹುದು. ಈ ಸಮಯದಲ್ಲಿ ಕೆಲವು ದೊಡ್ಡ ಸಮಸ್ಯೆಯನ್ನು ಪರಿಹರಿಸುವ ಸಾಧ್ಯತೆಯಿದೆ. ಪೂರ್ವಿಕರ ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಬಹುದು. ತಂದೆಯೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಬಲವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಪ್ರೀತಿ ಇನ್ನಷ್ಟು ಆಳವಾಗಿರುತ್ತದೆ.

ಸಂಖ್ಯೆ 4 (ಜನ್ಮ ದಿನಾಂಕ 4,13,22,31) )

ಈ ವಾರ ಕುಟುಂಬದೊಂದಿಗೆ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ಪ್ರೀತಿಪಾತ್ರರ ಜೊತೆ ಪ್ರಯಾಣ ಮಾಡಬಹುದು. ನಿಮ್ಮ ಈ ಪ್ರಯಾಣ ತುಂಬಾ ವಿಶೇಷವಾಗಿರುತ್ತದೆ. ಈ ಸಮಯದಲ್ಲಿ, ನಿಮ್ಮ ಮನಸ್ಥಿತಿಯು ತುಂಬಾ ಚೆನ್ನಾಗಿರುತ್ತದೆ. ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ಖರ್ಚಿನ ಬಗ್ಗೆ ಗಮನ ಹರಿಸಿ, ಆದಾಯಕ್ಕೆ ಕೊರತೆಯಿಲ್ಲ ಆದರೆ ಮಿತಿಯಲ್ಲಿ ಖರ್ಚು ಮಾಡಿದರೆ ಒಳ್ಳೆಯದು. ಅನಗ್ಯತ ಚಿಂತೆ ಬೇಡ, ವಾರದ ಕೊನೆ ನಿಮಗೆ ಉತ್ತಮವಾಗಿರಲಿದೆ.

ಸಂಖ್ಯೆ 5 (ಜನ್ಮ ದಿನಾಂಕ 5, 14, 23)

ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನವು ಮತ್ತಷ್ಟು ಬಲವಾಗಲಿದೆ. ನಿಮ್ಮ ಕೆಲಸದಿಂದ ಗಮನ ಸೆಳೆಯಲು ಸಾಧ್ಯವಾಗುವುದು. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನೀವು ತುಂಬಾ ಸಮಯದಿಂದ ಪ್ರಗತಿಗಾಗಿ ಶ್ರಮಿಸುತ್ತಿದ್ದರೆ ಈ ವಾರ ನೀವು ಫಲಿತಾಂಶವನ್ನು ಪಡೆಯುತ್ತೀರಿ. ಸಂಗಾತಿಗೆ ಅವಮಾನ ಮಾಡುವ ಕೆಲಸ ಮಾಡದಿರಿ, ಹೀಗೆ ಮಾಡಿದರೆ ನಿಮ್ಮಿಬ್ಬರ ನಡುವೆ ಅಂತರ ಹೆಚ್ಚಾಗಲಿದೆ. ಈ ಸಮಯದಲ್ಲಿ, ಮನಸ್ಸಿನಲ್ಲಿ ಹಲವಾರು ರೀತಿಯ ಆಲೋಚನೆಗಳು ಮೂಡಬಹುದು. ನಿಮ್ಮ ಮನಸ್ಸನ್ನು ಆಪ್ತರೊಂದಿಗೆ ಹಂಚಿಕೊಂಡರೆ ಉತ್ತಮ. ಹೆಚ್ಚು ತಾಳ್ಮೆಯಿಂದಿರಿ, ಸಾಧ್ಯವಾದರೆ ನಿಮ್ಮ ಮನಸ್ಸನ್ನು ಆಪ್ತರೊಂದಿಗೆ ಹಂಚಿಕೊಳ್ಳಿ.

ಸಂಖ್ಯೆ 6 (ಜನ್ಮ ದಿನಾಂಕ 6, 15, 24)

ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ, ನಿಮ್ಮ ವೃತ್ತಿಜೀವನವು ಹೊಸ ತಿರುವು ಪಡೆದುಕೊಳ್ಳಬಹುದು, ಅನುಭವಿ ವ್ಯಕ್ತಿಯ ಮಾರ್ಗದರ್ಶನದಿಂದ ವೃತ್ತಿ ಜೀವನದಲ್ಲಿ ಒಳಿತಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಬಲವಿರುತ್ತದೆ. ನೀವು ಹೊಸ ಆಸ್ತಿ ಇತ್ಯಾದಿಗಳನ್ನು ಸಹ ಖರೀದಿಸಬಹುದು. ದಾಂಪತ್ಯ ಜೀವನದಲ್ಲಿ ಖುಷಿ ಇರಲಿದೆ, ಸಂಗಾತಿಯೊಂದಿಗೆ ತುಂಬಾ ಸಮಯ ತೊಳೆಯುತ್ತೀರಿ. ಒಟ್ಟಿನಲ್ಲಿ ಈ ವಾರ ಉತ್ಸಾಹದಿಂದ ಕೂಡಿರುತ್ತೀರಿ.

ಸಂಖ್ಯೆ 7( ಜನ್ಮ ದಿನಾಂಕ 7, 16, 25)

ಹಣಕಾಸಿನ ವಿಷಯಗಳಲ್ಲಿ, ನೀವು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ನೀವು ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಈ ಸಮಯದಲ್ಲಿ ನೀವು ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕೆಲವು ಪ್ರಮುಖ ಕೆಲಸಗಳು ಮಧ್ಯದಲ್ಲಿ ಸಿಕ್ಕಿಹಾಕಿಕೊಳ್ಳುವುದರಿಂದ ನೀವು ಸಮಸ್ಯೆ ಎದುರಿಸಬಹುದು. ಈ ಅವಧಿಯಲ್ಲಿ ನಿಮ್ಮ ಕೋಪವನ್ನು ನಿಯಂತ್ರಿಸಿ.

ಸಂಖ್ಯೆ 8 (ಜನ್ಮ ದಿನಾಂಕ 8, 17, 26)

ಈ ವಾರ ನೀವು ಆರ್ಥಿಕ ಲಾಭಗಳನ್ನು ಪಡೆಯಬಹುದು, ಇದೆಲ್ಲವೂ ನಿಮ್ಮ ಶ್ರಮದ ಫಲ. ಕೆಲಸದ ಸ್ಥಳದಲ್ಲಿ ಅತ್ಯಂತ ಸಮತೋಲಿತವಾಗಿ ವರ್ತಿಸಲು ನಿಮಗೆ ಸಲಹೆ ನೀಡಲಾಗುವುದು. ನಿಮ್ಮ ಮಾತುಗಳನ್ನು ಬಹಳ ಚಿಂತನಶೀಲವಾಗಿ ಬಳಸಿ, ವಿಶೇಷವಾಗಿ ಮೇಲಾಧಿಕಾರಿ ಜೊತೆ ನಿಮ್ಮ ಅಭಿಪ್ರಾಯ ತಿಳಿಸುವಾಗ ಆಲೋಚಿಸಿ ತಿಳಿಸಿ. ಈ ವಾರ ಕೆಲಸದ ವಿಷಯಕ್ಕೆ ಪ್ರಯಾಣಿಸಬಹುದು. ನೀವು ನಿಮ್ಮ ಆರೋಗ್ಯದ ಬಗ್ಗೆ ನೀವು ಸಂಪೂರ್ಣ ಕಾಳಜಿ ವಹಿಸಬೇಕು. ನಿರ್ಲಕ್ಷ್ಯವು ದುಬಾರಿಯಾಗಬಹುದು, ಜಾಗ್ರತೆ.

ಸಂಖ್ಯೆ 9 (9, 18, 27)

ಪ್ರೇಮಿಗಳಿಗೆ ಪ್ರಣಯ ಜೀವನದಲ್ಲಿ ಏರಿಳಿತದ ಪರಿಸ್ಥಿತಿ ಇರಲಿದೆ. ನಿಮ್ಮ ಸಂಗಾತಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂಬ ಭಾವನೆ ನಿಮ್ಮಲ್ಲಿ ಉಂಟಾಗಬಹುದು. ಆದರೆ ನಿಮ್ಮ ನಡುವೆ ಭಿನ್ನಾಭಿಪ್ರಾಯ, ಸಮಸ್ಯೆ ಉಂಟಾದರೆ ಅವರ ಜೊತೆ ಮಾತನಾಡುವ ಮೂಲಕ ಅವರ ಮನಸ್ಸನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರೆ ಉತ್ತಮ. ಕಚೇರಿಯಲ್ಲಿ ಹೊಸ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡಲು ನಿಮಗೆ ಉತ್ತಮ ಅವಕಾಶ ಸಿಗಲಿದೆ. ಈ ಅವಧಿಯಲ್ಲಿ ಆರೋಗ್ಯದ ಕಡೆ ಗಮನಹರಿಸಿ.

English summary

Numerology Prediction From June 11 To June 17 In Kannada

Here are numerlogy prediction from June 11 To June 17, read on.
Story first published: Saturday, June 10, 2023, 18:00 [IST]
X
Desktop Bottom Promotion