Latest Updates
-
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ?
ಸಂಖ್ಯಾಶಾಸ್ತ್ರ ಪ್ರಕಾರ ಡಿಸೆಂಬರ್ ತಿಂಗಳು ನಿಮಗೆ ಹೇಗಿರಲಿದೆ?
ನಾವಿಲ್ಲಿ ಸಂಖ್ಯಾಶಾಸ್ತ್ರ ಪ್ರಕಾರ ಡಿಸೆಂಬರ್ ತಿಂಗಳು ನಿಮಗೆ ಹೇಗಿರಲಿದೆ ಎಂದು ನೀಡಲಾಗಿದೆ ನೋಡಿ: ನಿಮ್ಮ ಜನ್ಮ ಸಂಖ್ಯೆ ಪ್ರಕಾರ ಸಂಖ್ಯೆ ಬರಲಿದೆ, ಈ ತಿಂಗಳು ನಿಮಗೆ ಹೇಗಿರಲಿದೆ ಎಂದು ನೋಡೋಣ...
ಸಂಖ್ಯೆ 1 ( ಜನ್ಮ ಸಂಖ್ಯೆ1, 10, 19)
ಈ ತಿಂಗಳು ಸಂಬಂಧದ ವಿಷಯದಲ್ಲಿ ಉತ್ತಮವಾಗಿದೆ. ಅಂತಹ ಕೆಲಸ ಮಾಡುವುದರಿಂದ ನಷ್ಟವಾಗುತ್ತದೆ ಎಂದು ಅನಿವಾರ್ಯವಲ್ಲವಾದರೂ, ಈ ತಿಂಗಳು ನೀವು ಲಾಭಕ್ಕಿಂತ ಭಾವನಾತ್ಮಕ ತೃಪ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತೀರಿ. ಈ ತಿಂಗಳು ನೀವು ಸಂಬಂಧಗಳಿಗೆ ಪೂರ್ಣ ಪ್ರಾಮುಖ್ಯತೆ ತುಂಬಾನೇ ನೀಡುತ್ತೀರಿ. ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಸಾಮಾನ್ಯ ಮನೆ, ಕುಟುಂಬ ಮತ್ತು ಆರ್ಥಿಕ ವಿಷಯಗಳಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ.

ಸಂಖ್ಯೆ 2 ( ಜನ್ಮ ಸಂಖ್ಯೆ 2, 11, 20)
ನೀವು ಈ ಹಿಂದೆ ಯಾವುದೇ ಕಠಿಣ ಕೆಲಸವನ್ನು ಮಾಡಿದ್ದರೆ, ಈ ತಿಂಗಳು ಅದರ ಫಲಿತಾಂಶಗಳನ್ನು ಪಡೆಯುವ ಉತ್ತಮ ಸಾಧ್ಯತೆಯಿದೆ. ವೈಯಕ್ತಿಕ ಜೀವನವು ಚೆನ್ನಾಗಿರಲಿದೆ. ನೀವು ಕುಟುಂಬ ಮತ್ತು ಸಾಮಾಜಿಕ ವಿಷಯಗಳಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸಬಹುದು. ಸೃಜನಾತ್ಮಕ ಕೆಲಸಗಳಲ್ಲಿಯೂ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಿರುವಿರಿ. ನೀವು ಯಾವುದೇ ಕೆಲಸದ ಬಗ್ಗೆ ಅತಿಯಾದ ಆತ್ಮವಿಶ್ವಾಸವನ್ನು ತಪ್ಪಿಸಿದರೆ, ನೀವು ಉತ್ತಮ ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುವುದು.
ಸಂಖ್ಯೆ 3 ( ಜನ್ಮ ಸಂಖ್ಯೆ 3,12, 21 )
ಈ ತಿಂಗಳಿನಲ್ಲಿ ಕೆಲವು ಸವಾಲುಗಳನ್ನು ಎದುರಿಸಬಹುದು. ನೀವು ಈ ತಿಂಗಳು ಮಿಶ್ರ ಫಲಿತಾಂಶಗಳನ್ನು ಕಾಣುತ್ತೀರಿ. ಯಾವುದೇ ಕೆಲಸವನ್ನು ಬುದ್ದಿವಂತಿಕೆಯಿಂದ ಯೋಚಿಸಿ ಮಾಡಿದರೆ ಒಳ್ಳೆಯದು. ಈ ತಿಂಗಳಿನಲ್ಲಿ ಕೆಲಸದ ಒತ್ತಡ ಅಧಿಕವಿರಲಿದೆ. ನಿಮ್ಮಿಂದ ಯಾವುದೇ ರೀತಿಯ ತಪ್ಪಾಗದಂತೆ ಜಾಗ್ರತೆವಹಿಸಿ.
ಸಂಖ್ಯೆ 4 (ಜನ್ಮ ಸಂಖ್ಯೆ 4,13, 22)
ಈ ತಿಂಗಳಿನಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳೂ ಇವೆ. ನೀವು ಉದ್ಯಮಿಯಾಗಿದ್ದರೆ, ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಬಯಸಿದರೆ ಈ ತಿಂಗಳು ನಿಮಗೆ ಅನುಕೂಲಕರವಾಗಿರಲಿದೆ. ಈ ತಿಂಗಳು ನೀವು ಕಳೆದ ತಿಂಗಳಿಗಿಂತ ಹೆಚ್ಚು ಅನುಕೂಲಕರವಾಗಿರಲಿದೆ.
ಸಂಖ್ಯೆ 5 ( ಜನ್ಮ ಸಂಖ್ಯೆ 5, 14 , 23 )
ಈ ತಿಂಗಳು ನಿಮ್ಮ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಅನುಕೂಲತೆ ಕಾಣಬಹುದು. ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ. ಅವಾಹಿತರು ಮದುವೆಗಾಗಿ ಪ್ರಯತ್ನಿಸುತ್ತಿದ್ದರೆ ಈ ತಿಂಗಳು ಉತ್ತಮವಾಗಿದೆ. ಮನೆಯ ಪರಿಸ್ಥಿತಿ ಚೆನ್ನಾಗಿರಲಿದೆ, ಈ ತಿಂಗಳು ಒಟ್ಟಿನಲ್ಲಿ ನಿಮಗೆ ಅನುಕೂಲಕರವಾಗಿರಲಿದೆ.
ಸಂಖ್ಯೆ 6 ( ಜನ್ಮ ಸಂಖ್ಯೆ 6, 15, 24 )
ಈ ತಿಂಗಳು ನಿಮಗೆ ಉತ್ತಮವಾಗಿದೆ. ಈ ತಿಂಗಳು ನೀವು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ತಿಂಗಳು ನೀವು ಆಧ್ಯಾತ್ಮಿಕ ವಿಷಯಗಳ ಕಡೆ ಹೆಚ್ಚಿನ ಗಮನ ಹರಿಸುತ್ತೀರಿ.ನೀವು ವ್ಯಾಪಾರದಲ್ಲಿ ಹೂಡಿಕೆ ಮಾಡುವುದಾದರೆ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ.
ಸಂಖ್ಯೆ 7 ( ಜನ್ಮ ಸಂಖ್ಯೆ 7, 16, 25)
ಸಾಮಾನ್ಯವಾಗಿ ಈ ತಿಂಗಳು ನೀವು ಸರಾಸರಿಗಿಂತ ಸ್ವಲ್ಪ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಅಂತಹ ಪರಿಸ್ಥಿತಿಯಲ್ಲಿ, ನೀವು ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗುತ್ತೀರಿ. ನೀವು ವ್ಯಾಪಾರಸ್ಥರಾಗಿದ್ದರೆ ಅಥವಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರೆ, ಈ ತಿಂಗಳು ನೀವು ಕೆಲವು ಉತ್ತಮ ಪ್ರಸ್ತಾಪಗಳನ್ನು ಪಡೆಯಬಹುದು ಅದು ಭವಿಷ್ಯದಲ್ಲಿ ನಿಮಗೆ ಪ್ರಯೋಜನವನ್ನು ನೀಡಲಿದೆ. ಈ ತಿಂಗಳು ವೈಯಕ್ತಿಕ, ಕೌಟುಂಬಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು, ಆದರೆ ನೀವು ಕೆಲಸ, ವ್ಯವಹಾರ ಮತ್ತು ಹಣಕಾಸಿನ ವಿಷಯಗಳಲ್ಲಿ ಸರಾಸರಿಗಿಂತ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.
ಸಂಖ್ಯೆ 8 ( ಜನ್ಮ ಸಂಖ್ಯೆ 8, 17, 26)
ಈ ತಿಂಗಳಿನಲ್ಲಿ ನೀವು ಸಾಮಾನ್ಯ ಫಲಿತಾಂಶ ಪಡೆಯುತ್ತೀರಿ. ಈ ತಿಂಗಳಿನಲ್ಲಿ ನೀವು ಬಾಕಿ ಉಳಿದಿರುವ ಅನೇಕ ಕಾರ್ಯಗಳನ್ನು ನೀವು ಪೂರ್ಣಗೊಳಿಸಬಹುದು. ಅದೇ ಸಮಯದಲ್ಲಿ, ಬಾಕಿ ಉಳಿದಿರುವ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲು ನೀವು ಹೆಚ್ಚಿನ ಶ್ರಮಹಾಕಬೇಕು, ನಿನೀವು ತಾಳ್ಮೆಯಿಂದ ಕೆಲಸ ಮಾಡಿದರೆ, ನಿಮ್ಮ ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳನ್ನು ಸಾಧಿಸಲು ಸಾಧ್ಯವಾಗುತ್ತದೆ, ಕಟುಂಬ ಜೀವನ ಚೆನ್ನಾಗಿರಲಿದೆ.
ಸಂಖ್ಯೆ 9 ( ಜನ್ಮ ಸಂಖ್ಯೆ9,18, 27)
ಈ ತಿಂಗಳು ಕೆಲವು ಹೊಸ ಕೆಲಸಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಕೆಲವು ಹೊಸ ಜನರೊಂದಿಗೆ ಸಂಪರ್ಕ ಸಾಧಿಸುವ ಮೂಲಕ ನೀವು ಹೊಸದನ್ನು ಮಾಡಲು ಯೋಚಿಸಬಹುದು. ಈ ತಿಂಗಳು ಶಕ್ತಿಯ ದುರುಪಯೋಗವಾಗದಂತೆ ನೋಡಿಕೊಳ್ಳುವುದು ಮುಖ್ಯ. ಇದರೊಂದಿಗೆ ಮಾನಸಿಕ ನೆಮ್ಮದಿಯನ್ನೂ ಬೆಳೆಸಿಕೊಳ್ಳಬೇಕು. ಅನಗತ್ಯ ವಿಷಯಗಳಿಗೆ ಹಣ ವ್ಯಯವಾಗದಂತೆ ಎಚ್ಚರಿಕೆ ವಹಿಸುವುದು ಮುಖ್ಯ. ರಾಜಕೀಯದ ಹೆಸರಿನಲ್ಲಿ ಯಾರೊಂದಿಗೂ ಸಂಬಂಧವನ್ನು ಹಾಳು ಮಾಡಬೇಡಿ. ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ತುಲನಾತ್ಮಕವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಈ ತಿಂಗಳು ವೈಯಕ್ತಿಕ ಸಂಬಂಧಗಳಲ್ಲಿ ಉತ್ತಮ ಫಲಿತಾಂಶ ಕಾಣುವಿರಿ.



Click it and Unblock the Notifications