Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮಾಸ ರಾಶಿಫಲ ಪ್ರಕಾರ ಅಕ್ಟೋಬರ್ ತಿಂಗಳು ಕುಂಭ ರಾಶಿಯವರಿಗೆ ಹೇಗಿರಲಿದೆ?
ಅಕ್ಟೋಬರ್ ತಿಂಗಳು ಕುಂಭ ರಾಶಿಯರಿಗೆ ಹೇಗಿರಲಿದೆ? ಈ ತಿಂಗಳಿನಲ್ಲಿ ಗ್ರಹಗಳ ಸ್ಥಾನದಿಂದಾಗಿ ನಿಮ್ಮ ವೃತ್ತಿ ಜೀವನ, ಕುಟುಂಬ ಜೀವನ, ಆರ್ಥಿಕ ಜೀವನ, ಆರೋಗ್ಯದ ಮೇಲೆ ಬೀರುವ ಪ್ರಭಾವವೇನು? ಈ ತಿಂಗಳು ನಿಮ್ಮ ರಾಶಿಯವರಿಗೆ ಹೇಗಿರಲಿದೆ ಎಂದು ನೋಡೋಣ:
ವೃತ್ತಿ ಜೀವನ
ಅಕ್ಟೋಬರ್ ತಿಂಗಳು ವರತ್ತಿ ಜೀವನದಲ್ಲಿ ಹಲವು ಸವಾಲುಗಳು ಎದುರಾಗಬಹುದು. ಶನಿಯು ನಿಮ್ಮ ಲಗ್ನ ಮನೆಯಲ್ಲಿದೆ. ಆದರೆ ಗುರು ಮೂರನೇ ಮನೆಯಲ್ಲಿ ಇರುವುದು ನಿಮಗೆ ಅನುಕೂಲಕರವಾಗಿದೆ. ಶನಿಯು ನಿಮ್ಮ ಮೊದಲ ಮನೆಯಲ್ಲಿ ಇರುವುದರಿಂದ ಕೆಲಸದಲ್ಲಿ ಅತೃಪ್ತಿ ಇರಬಹುದು. ಕೆಲಸದ ಸ್ಥಳದಲ್ಲಿ ಹೆಚ್ಚಿನ ತೊಂದರೆಗಳನ್ನು ಎದುರಿಸಬಹುದು. ನಿಮ್ಮ ಕೆಲಸದಲ್ಲಿ ನೀವು ಬಯಸಿದ ಫಲಿತಾಂಶಗಳನ್ನು ಪಡೆಯದಿರುವ ಸಾಧ್ಯತೆಯೂ ಇರಬಹುದು. ಅತಿಯಾದ ಕೆಲಸದ ಕಾರಣದಿಂದಾಗಿ, ನೀವು ಒತ್ತಡ ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ನೀವು ಎಷ್ಟೇ ಕೆಲಸ ಮಾಡಿದರೂ ನಿಮ್ಮ ಕೆಲಸವನ್ನು ಯಾರೂ ಗುರುತಿಸುತ್ತಿಲ್ಲ ಎಂಬ ಅತೃಪ್ತಿ ನಿಮ್ಮನ್ನು ಕಾಡಬಹುದು. ಅಲ್ಲದೆ ಕೆಲಸಕ್ಕೆ ಸಂಬಂಧಿಸಿದಂತೆ ಅನೇಕ ಪ್ರಯಾಣಗಳನ್ನು ಮಾಡಬಹುದು. ಆದರೆ ಈ ಪ್ರಯಾಣದಿಂದ ಹೆಚ್ಚಿನ ಪ್ರಯೋಜನ ಪಡೆಯಲು ಸಾಧ್ಯವಾಗುವುದು.
ಆದರೆ ಮಂಗಳ ಒಂಭತ್ತನೇ ಮನೆಯಲ್ಲಿ ಇರುವುದರಿಂದ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ಈ ಅವಧಿಯಲ್ಲಿ ಪ್ರಚಾರದ ಸಾಧ್ಯತೆಗಳೂ ಇರಬಹುದು. ಸ್ವಂತ ವ್ಯಾಪಾರ ಹೊಂದಿರುವವರು ಅಪೇಕ್ಷಿತ ಲಾಭಗಳನ್ನು ಪಡೆಯುವ ಸಾಧ್ಯತೆ ಕಡಿಮೆ. ಲಾಭ-ನಷ್ಟ ಇಲ್ಲದ ಪರಿಸ್ಥಿತಿಯೂ ಈ ತಿಂಗಳು ಉಂಟಾಗಬಹುದು. ಈ ತಿಂಗಳು ನೀವು ಪಾಲುದಾರಿಕೆಯಲ್ಲಿ ಹೊಸ ವ್ಯವಹಾರವನ್ನು ಪ್ರಾರಂಭಿಸಲು ಹೋಗಬೇಡಿ
ಆರ್ಥಿಕ ಜೀವನ
ಆರ್ಥಿಕ ಜೀವನದಲ್ಲಿ ಈ ತಿಂಗಳು ನಿಮಗೆ ಕಷ್ಟಕರವಾಗಬಹುದು.ಈ ತಿಂಗಳಿನಲ್ಲಿ ಹಣದ ಕೊರತೆ ಉಂಟಾಗಬಹುದು. ಮೂರನೇ ಮನೆಯಲ್ಲಿ ಗುರುವಿನ ಉಪಸ್ಥಿತಿಯಿಂದಾಗಿ, ಖರ್ಚು ಹೆಚ್ಚಾಗುವುದು, ಈ ತಿಂಗಳಿನಲ್ಲಿ ಹಣ ಗಳಿಕೆ ಸುಲಭವಲ್ಲ. ನೀವು ಹಣದ ವಿಷಯದಲ್ಲಿ ಹೆಚ್ಚು ಗಮನ ಹರಿಸಬೇಕು, ಇಲ್ಲದಿದ್ದರೆ ನಷ್ಟ ಉಂಟಾಗುವುದು. ಇನ್ನು ಸ್ವಂತ ಉದ್ಯಮ ಮಾಡುತ್ತಿರುವವರು ಅಧಿಕ ಶ್ರಮ ಹಾಕಬೇಕಾಗುತ್ತದೆ. ಈ ಸಮಯದಲ್ಲಿ ನೀವು ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು. ವ್ಯವಹಾರದಲ್ಲಿ ಲಾಭ ಗಳಿಸಲು ನಿಮ್ಮ ತಂತ್ರಗಳನ್ನು ಬದಲಾಯಿಸಬೇಕಾಗುತ್ತದೆ.
ಆರೋಗ್ಯ ಜೀವನ
ಆರೋಗ್ಯದ ದೃಷ್ಟಿಯಿಂದ, ಈ ತಿಂಗಳು ನಿಮಗೆ ಹೆಚ್ಚು ಅನುಕೂಲಕರವಾಗಿಲ್ಲ. ಮಾನಸಿಕ ಒತ್ತಡ, ಬೆನ್ನು ನೋವು, ಚಡಪಡಿಕೆ, ಗೊಂದಲ, ಆತಂಕ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ಸಮಸ್ಯೆಗಳನ್ನು ತೊಡೆದುಹಾಕಲು, ನೀವು ಯೋಗ, ಧ್ಯಾನ ಮತ್ತು ಸಮಯಕ್ಕೆ ಆಹಾರವನ್ನು ಸೇವಿಸುವುದರ ಗಮನ ನೀಡುವುದು ಒಳ್ಳೆಯದು. ಶನಿಯ ಅಂಶವು ನಾಲ್ಕನೇ ಮನೆಯ ಅಧಿಪತಿಯಾದ ಶುಕ್ರನ ಮೇಲೆ ಇದೆ, ಇದರಿಂದಾಗಿ ನೀವು ಸೌಕರ್ಯಗಳ ಕೊರತೆಯನ್ನು ಅನುಭವಿಸಬಹುದು.
ಪ್ರೀತಿ, ಮದುವೆ, ಕುಟುಂಬ ಜೀವನ
ಈ ತಿಂಗಳು ನೀವು ಪ್ರೀತಿ, ವೈವಾಹಿಕ ಜೀವನದಲ್ಲೂ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ಅವಾಹಿತರ ಮದುವೆ ಮಾತುಕತೆ ಮತ್ತಷ್ಟು ತರವಾಗಬಹುದು.
ಗುರು ಮೂರನೇ ಮನೆಯಲ್ಲಿ ಸ್ಥಿತರಿರುವುದರಿಂದ ದಾಂಪ್ಯದಲ್ಲಿ ಹೊಂದಾಣಿಕೆಯಲ್ಲಿ ಕೊರತೆ ಉಂಟಾಗಬಹುದು. ಕೌಟುಂಬಿಕ ಜೀವನದ ಬಗ್ಗೆ ಹೇಳುವುದಾದರೆ ಈ ತಿಂಗಳು ಸವಾಲಿನಿಂದ ಕೂಡಿರಬಹುದು. ಅಹಂಕಾರದಿಂದ ವರ್ತಿಸದಿದ್ದರೆ, ಬೇಗನೆ ಕೋಪಗೊಳ್ಳದೆ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ.
ಪರಿಹಾರ
ಪ್ರತಿ ಶನಿವಾರ ಶನಿ ಚಾಲೀಸವನ್ನು ಪಠಿಸಿ.



Click it and Unblock the Notifications
