Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ! ಈ ಸ್ಥಳದ ಬಗ್ಗೆ ಗೊತ್ತಾ?
ಲೋಕಸಭೆ ಚುನಾವಣೆ ಬಿರುಸಿನಿಂದ ಸಾಗುತ್ತಿದ್ದು, ದೇಶದೆಲ್ಲೆಡೆ ಮತದಾನ ಪ್ರಕ್ರಿಯೆಗಳು ಹಂತ ಹಂತವಾಗಿ ನಡೆಯುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸಹ ದೇಶದ ಹಲವು ಭಾಗದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಕಳೆದ 2 ತಿಂಗಳಿನಿಂದ ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ತೊಡಗಿಕೊಂಡಿದ್ದಾರೆ.
ಈ ನಡುವೆ ಅವರು ಎರಡು ದಿನಗಳ ಕಾಲ ಕನ್ಯಾಕುಮಾರಿಗೆ ಭೇಟಿ ನೀಡುತ್ತಿದ್ದಾರೆ. ಮೇ 30 ಹಾಗೂ 31ರಂದು ಎರಡು ದಿನಗಳ ಕಾಲ ಅವರು ಕನ್ಯಾಕುಮಾರಿಯಲ್ಲಿ ನೆಲೆಸಲಿದ್ದಾರೆ. ಜೊತೆಗೆ ಇಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣಾ ಪ್ರಚಾರ ಕಾರ್ಯ ಮುಗಿಯುವಾಗ ಪ್ರಧಾನಿ ಮೋದಿ ಅವರ ಈ ಕಾರ್ಯ ಭಾರೀ ಕುತೂಹಲ ಮೂಡಿಸಿದೆ. ಏಕೆಂದರೆ 2019ರ ಚುನಾವಣೆಯ ಪ್ರಚಾರ ಮುಗಿದ ಬಳಿಕ ಅವರು ಕೇದಾರನಾಥದ ಗುಹೆ ಒಂದರಲ್ಲಿ ಧ್ಯಾನ ಮಾಡಿ ಸುದ್ದಿಯಾಗಿದ್ದರು. ಈಗ ಈ ವಿವೇಕಾನಂದ ರಾಕ್ ಸ್ಮಾರಕ ಆಯ್ಕೆ ಮಾಡಿಕೊಂಡಿದ್ದಾರೆ.
ಏನಿದು ವಿವೇಕಾನಂದ ರಾಕ್ ಸ್ಮಾರಕ?
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಮಿಳುನಾಡಿನ ಕನ್ಯಾ ಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ 48 ಗಂಟೆಗಳ ಧ್ಯಾನವನ್ನು ಕೈಗೊಳ್ಳಲಿದ್ದಾರೆ. 1892 ರಲ್ಲಿ ಸ್ವಾಮಿ ವಿವೇಕಾನಂದರು ಇದೇ ಸ್ಥಳದಲ್ಲಿ ಧ್ಯಾನ ಮಾಡಿದ್ದರು ಎಂಬ ಉಲ್ಲೇಖ ಇತಿಹಾಸದಲ್ಲಿದೆ. ಈಗ ಅದೇ ಸ್ಥಳವಾದ ಧ್ಯಾನ ಮಂಟಪದಲ್ಲಿ ಪ್ರಧಾನಿ ಧ್ಯಾನವನ್ನು ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರಿಗೆ ಗೌರವ ಅರ್ಪಿಸುವ ಸಲುವಾಗಿ ಈ ಸ್ಮಾರಕ ನಿರ್ಮಿಸಲಾಗಿದೆ.
2019ರ ಲೋಕಸಭಾ ಚುನಾವಣಾ ಫಲಿತಾಂಶದ ಮೊದಲು, ಪ್ರಧಾನಿ ಮೋದಿ ಇದೇ ರೀತಿಯ ಧ್ಯಾನ ಕೈಗೊಂಡಿದ್ದರು. ಕೇದಾರನಾಥದ ಬಳಿಯ ಪವಿತ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು.
ಪ್ರಧಾನಿ ಮೋದಿ ಈ ಜಾಗ ಆಯ್ಕೆ ಮಾಡಿದ್ದು ಏಕೆ?
ಚೆನ್ನೈನ ಮೈಲಾಪುರದಲ್ಲಿರುವ ಶ್ರೀ ರಾಮಕೃಷ್ಣ ಮಠದ 125 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರ ಉಲ್ಲೇಖಿಸಿ ಮಾತನಾಡಿದ್ದರು. ಈ ವೇಳೆ ನಮ್ಮ ಆಡಳಿತವು ವಿವೇಕಾನಂದರ ತತ್ವಗಳಿಗೆ ಅನುಸಾರವಾಗಿದೆ. ಅವರಿಂದ ಪ್ರೇರಿತವಾದ ಆಡಳಿತ ನಾವು ನೀಡುತ್ತಿದ್ದೇವೆ. ಸಮಾನತೆಯ ಕನಸು ಕಂಡಿದ್ದ ವಿವೇಕಾನಂದರ ದೃಷ್ಟಿಯೇ ನಮ
ಪ್ರಧಾನಿ ನರೇಂದ್ರ ಮೋದಿ ಅವರ ವಾಸ್ತವ್ಯದ ಸಂದರ್ಭದಲ್ಲಿ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆಯು ಭದ್ರತೆಯ ಮುಂಚೂಣಿಯಲ್ಲಿರಲಿದೆ. ಜೊತೆಗೆ ಪ್ರವಾಸಿಗರು, ಜನರು ಸೇರಿದಂತೆ ಬೋಟ್‌ಗಳನ್ನು ನಿಷೇಧ ಮಾಡಲಾಗಿದೆ.
ಆಧ್ಯಾತ್ಮಿಕ ವಾಸ್ತವ್ಯಕ್ಕಾಗಿ ಮೋದಿ ಮೇ 30ರಂದು ಮಧ್ಯಾಹ್ನ ಕನ್ಯಾಕುಮಾರಿ ತಲುಪಲಿದ್ದಾರೆ. ಇದಾದ ಬಳಿಕ ವಿವೇಕಾನಂದ ರಾಕ್ ಸ್ಮಾರಕಕ್ಕೆ ತೆರಳಲಿದ್ದಾರೆ. ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಮೋದಿ ಧ್ಯಾನ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ.
ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲೆಯ ಪ್ರತಿಮೆಯ ಸಮೀಪದಲ್ಲಿ ಈ ಸ್ಮಾರಕ ನೆಲೆಗೊಂಡಿದೆ, ಈ ಬಂಡೆಯನ್ನು ಪ್ರಾಚೀನ ಕಾಲದಿಂದಲೂ ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಧ್ಯಾನ ಮತ್ತು ಜ್ಞಾನೋದಯಕ್ಕಾಗಿ 1892 ರಲ್ಲಿ ಈ ಸ್ಮಾರಕವನ್ನು ನಿರ್ಮಿಸಿದೆ.



Click it and Unblock the Notifications