Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪ್ರಧಾನಿ ಮೋದಿಗೆ 'ಭಾರತ ಭಾಗ್ಯವಿಧಾತ' ಬಿರುದು! ಸ್ವರ್ಣಲೇಪಿತ ಕನಕನ ಕಿಂಡಿ ಲೋಕಾರ್ಪಣೆ, ಭಗವದ್ಗೀತೆಯ ಶ್ಲೋಕ ಪಠಣ
ಭಗವದ್ಗೀತೆಯ 18ನೇ ಅಧ್ಯಾಯ ಪಠಿಸಿದ ಪ್ರಧಾನಿ ಮೋದಿ! ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ, 'ಭಾರತ ಭಾಗ್ಯವಿಧಾತ' ಎಂಬ ಬಿರುದು ನೀಡಿ ಗೌರವ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಉಡುಪಿಗೆ (Udupi) ಭೇಟಿ ನೀಡಿ ಕೃಷ್ಣಮಠದಲ್ಲಿ (Sri Krishna Matha) ನಡೆದ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದರು.
ಉಡುಪಿಯ ಶ್ರೀ ಕೃಷ್ಣಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (Narendra Modi) ಪಾಲ್ಗೊಂಡರು. ಕೃಷ್ಣಮಠಕ್ಕೆ ಭೇಟಿ ನೀಡಿದ ಬಳಿಕ ಸಭಾಂಗಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಜಗದ್ಗುರು ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅವರಿಗೆ 'ಭಾರತ ಭಾಗ್ಯವಿಧಾತ' ಎಂಬ ಬಿರುದು ನೀಡಿ ಗೌರವಿಸಲಾಯಿತು.

ನಂತರ ಪ್ರಧಾನಿಯವರು ಲಕ್ಷಕಂಠ ಗೀತಾ ಕಾರ್ಯಕ್ರಮದಲ್ಲಿ (Laksha Kantha Gita Parayana) ಭಗವದ್ಗೀತೆಯ 18ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್, ಸಚಿವ ಬೈರತಿ ಸುರೇಶ್, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಉಡುಪಿ-ಬನ್ನಂಜೆಯ ಡಾ. ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿದರು. ಈ ವೇಳೆ ಸಾರ್ವಜನಿಕರು ಹೂಮಳೆ ಸುರಿಸಿ ಪ್ರಧಾನಿಯವರಿಗೆ ಅದ್ಧೂರಿ ಸ್ವಾಗತ ಕೋರಿದರು. ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ಕಾದು ನಿಂತು ಪ್ರಧಾನಿಯವರನ್ನು ಸ್ವಾಗತಿಸಿದರು.
ಸ್ವರ್ಣಲೇಪಿತ ಕನಕನ ಕಿಂಡಿಯನ್ನು ಅನಾವರಣ
ರೋಡ್ ಶೋ ಮೂಲಕ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ ಪ್ರಧಾನಿಗಳು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿಯನ್ನು ಅನಾವರಣಗೊಳಿಸಿದರು. ಕನಕನ ಕಿಂಡಿಯಿಂದ ಉಡುಪಿ ಶ್ರೀಕೃಷ್ಣನನ್ನು ಕಣ್ತುಂಬಿಕೊಂಡ ನಂತರ, ಪ್ರಧಾನಿಯವರು ಮಠದ ಎದುರಿಗಿರುವ ಮಧ್ವ ಸರೋವರಕ್ಕೆ ಭೇಟಿ ನೀಡಿ ತೀರ್ಥ ಸಂಪ್ರೋಕ್ಷಣೆ ಮಾಡಿದರು. ಅಲ್ಲಿಂದ ಜನರತ್ತ ಕೈಬೀಸುತ್ತ ಶ್ರೀ ಕೃಷ್ಣಮಠವನ್ನು ಪ್ರವೇಶಿಸಿದರು.
ಜಪ ಮಾಲೆ ಮತ್ತು ಮುದ್ರೆಗಳ ಗೌರವ
ಮಠದ ಆವರಣವನ್ನು ಪ್ರವೇಶಿಸುತ್ತಿದ್ದಂತೆಯೇ ಪ್ರಧಾನಿ ಮೋದಿಯವರಿಗೆ ಪೂರ್ಣ ಕುಂಭ ಸ್ವಾಗತದೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಅವರಿಗೆ ಶಂಖ, ಚಕ್ರ, ಗದೆ ಮತ್ತು ಪದ್ಮಗಳನ್ನೊಳಗೊಂಡ ಬೆಳ್ಳಿ ಹೊದಿಕೆಯ ತುಳಸಿ ಜಪ ಮಾಲೆ ಮತ್ತು ಮುದ್ರೆಗಳನ್ನು ನೀಡಿ ಗೌರವಿಸಲಾಯಿತು.
ಭಗವದ್ಗೀತೆಯ 18ನೇ ಅಧ್ಯಾಯದ ಶ್ಲೋಕ ಜಪ
ಇವುಗಳನ್ನು ದಕ್ಷಿಣ ಭಾರತದಲ್ಲಿ ಮಾಧ್ವರು ಮತ್ತು ಬ್ರಾಹ್ಮಣ ಸಮುದಾಯಗಳು ತಮ್ಮ ದೈನಂದಿನ ಪೂಜಾ ವಿಧಿಗಳಲ್ಲಿ ಬಳಸುತ್ತಾರೆ. ನಂತರ ಪ್ರಧಾನಿ ಮೋದಿ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೇರಿದಂತೆ ಇತರರ ಜೊತೆಯಲ್ಲಿ ಸಾಮೂಹಿಕವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೆಲವು ಶ್ಲೋಕಗಳನ್ನು ಪಠಿಸಿದರು.
ಮೋದಿಗೆ ಹೂಮಳೆ ಸುರಿಸಿ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ನಂತರ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡಿದರು. ಈ ವೇಳೆ ಕರಾವಳಿ ಜನತೆ ಅದ್ಧೂರಿ ಸ್ವಾಗತ ಕೋರಿದ್ದಾರೆ. ಹೂಮಳೆ ಸುರಿಸಿ ತಮ್ಮ ನೆಚ್ಚಿನ ನಾಯಕನಿಗೆ ಅಭೂತಪೂರ್ವ ಆತಿಥ್ಯ ನೀಡಿದರು. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿ, ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಉಡುಪಿಯ ಹೆಲಿಪ್ಯಾಡ್ ತಲುಪಿದರು. ಹೆಲಿಪ್ಯಾಡ್‌ನಿಂದ ಆರಂಭವಾದ ರೋಡ್‌ಶೋನಲ್ಲಿ ಲಕ್ಷಾಂತರ ಜನರು ಭಾಗವಹಿಸಿ, ಹೂಮಳೆ ಸುರಿಸಿ ಸ್ವಾಗತಿಸಿದರು.
ಉಡುಪಿಯಿಂದ ಕೃಷ್ಣ ಮಠದವರೆಗೂ ನಡೆದ ರೋಡ್‌ಶೋನಲ್ಲಿ ಪ್ರಧಾನಿ ಮೋದಿ ಜನರನ್ನುದ್ದೇಶಿಸಿ ಕೈ ಬೀಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳು ಜೈಘೋಷಗಳನ್ನು ಕೂಗುತ್ತಾ, ಹೂಮಳೆ ಸುರಿಸುತ್ತಾ ತಮ್ಮ ನೆಚ್ಚಿನ ನಾಯಕನನ್ನು ಕಣ್ತುಂಬಿಕೊಂಡರು. ಪ್ರಧಾನಿ ಮೋದಿ ಅವರು ನಿಗದಿತ ಸಮಯಕ್ಕಿಂತ 40 ನಿಮಿಷ ಮುಂಚಿತವಾಗಿ ಆಗಮಿಸಿದರು.
ಸುವರ್ಣ ತೀರ್ಥ ಮಂಟಪ ಉದ್ಘಾಟನೆ
ಚಂದ್ರಶಾಲೆಯಲ್ಲಿ ಪೇಜಾವರ ಶ್ರೀಗಳು ಮತ್ತು ಅಷ್ಟ ಮಠಾಧೀಶರನ್ನು ಮೋದಿ ಭೇಟಿ ಮಾಡಿದರು. ಪರ್ಯಾಯ ಶ್ರೀಗಳ ಸಂನ್ಯಾಸ ದೀಕ್ಷೆಯ 50ನೇ ವರ್ಷಾಚರಣೆಯ ಅಂಗವಾಗಿ ಪುತ್ತಿಗೆ ಮಠದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಿದರು. ನಂತರ, 'ಲಕ್ಷಕಂಠ ಗೀತಾ ಪಾರಾಯಣ' ಸಭಾಂಗಣಕ್ಕೆ ಆಗಮಿಸಿದರು. ಒಂದು ಲಕ್ಷಕ್ಕೂ ಅಧಿಕ ಭಕ್ತರು ಏಕಕಾಲದಲ್ಲಿ ಭಗವದ್ಗೀತೆಯನ್ನು ಪಠಿಸಿದರು. ಈ ಕಾರ್ಯಕ್ರಮದ ಕೊನೆಯಲ್ಲಿ ಮೋದಿ ಅವರು ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ 10 ಶ್ಲೋಕ ಹಾಗೂ ಪುರುಷೋತ್ತಮ ಯೋಗದ ಶ್ಲೋಕಗಳನ್ನು ಪಠಿಸಿದರು.



Click it and Unblock the Notifications