For Quick Alerts
ALLOW NOTIFICATIONS  
For Daily Alerts

ವಿಶ್ವ ಸ್ನೇಹಿತರ ದಿನ: ಕುತೂಹಲ ಕೆರಳಿಸುವ ಇಂಟರೆಸ್ಟಿಂಗ್ ಕಹಾನಿ!

By manu
|

ನಿಷ್ಕಲ್ಮಷ ಸಂಬಂಧಕ್ಕೆ ಮತ್ತೊಂದು ಹೆಸರೇ ಸ್ನೇಹ. ಯಾವುದೇ ಸಂಬಂಧಗಳು ಮುರಿದು ಬಿದ್ದರೂ ಸ್ನೇಹ ಮಾತ್ರ ಕೊನೇ ತನಕ ಗಟ್ಟಿಯಾಗಿರುತ್ತದೆ. ಅದರ ಶಕ್ತಿಯೇ ಹಾಗೆ. ಸ್ನೇಹಿತರು ಯಾವುದೇ ಕಾರಣಗಳಿಂದ ದೂರಾದರೂ ಯಾವತ್ತಾದರೂ ಅವರ ಸ್ನೇಹ ಮತ್ತೆ ಒಂದಾಗುತ್ತದೆ. ಇಂದಿನ ಆಧುನಿಕ ಯುಗದಲ್ಲಿ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹವು ಚಿರಾಯುವಾಗಿದೆ.

ಸ್ನೇಹಿತರ ಬಗ್ಗೆ ತಮಗಿರುವ ಕಾಳಜಿ ವ್ಯಕ್ತಪಡಿಸುವ ಸಲುವಾಗಿ ವಿಶ್ವದೆಲ್ಲೆಡೆಯಲ್ಲಿ ಸ್ನೇಹಿತರ ದಿನವನ್ನು ಆಚರಿಸಲಾಗುತ್ತದೆ. ಸ್ನೇಹಿತರ ದಿನ, ಅದರ ಮೂಲ, ಅದು ಹೇಗೆ ಆರಂಭವಾಯಿತು, ವಿವಿಧ ದೇಶಗಳಲ್ಲಿ ಅದನ್ನು ಹೇಗೆ ಆಚರಿಸಲಾಗುತ್ತದೆ ಹಾಗೂ ಮತ್ತಿತರ ಕೌತುಕದ ವಿಷಯಗಳನ್ನು ಈ ಲೇಖನವು ನಿಮ್ಮ ಮುಂದಿಡಲಿದೆ. ಸ್ನೇಹದ ಬಗ್ಗೆ ಸಾವಿರಾರು ವರ್ಷಗಳಿಂದ ಚರ್ಚೆ ನಡೆಸಲಾಗುತ್ತಿದೆ.

ನಂಬಿಕೆ, ಪ್ರೋತ್ಸಾಹ, ಸಂವಹನ, ಪ್ರಾಮಾಣಿಕತೆ, ತಿಳುವಳಿಕೆ, ಕರುಣೆಯನ್ನು ಒಳಗೊಂಡಿರುವಂತಹ ಅತ್ಯಂತ ದೃಢ ಸಂಬಂಧವೇ ಸ್ನೇಹ. ಸ್ನೇಹಿತರ ಬಗ್ಗೆ ಕಾಳಜಿ ಮತ್ತು ಪ್ರೀತಿ ವ್ಯಕ್ತಪಡಿಸಲು ಯಾವುದೇ ವಿಶೇಷ ದಿನ ಬೇಕೆಂದಿಲ್ಲ. ಆದರೆ ಸ್ನೇಹಿತರ ದಿನವು ನಿಮ್ಮ ಸ್ನೇಹಿತರ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಗೌರವ ತೋರಿಸುವಂತಹ ಒಂದು ಅವಕಾಶವನ್ನು ಒದಗಿಸುತ್ತದೆ.

Friendship day special: Interesting Facts About Friendship Day

ಈ ಜಗತ್ತಿನಲ್ಲಿ ಇನ್ನೂ ಗಟ್ಟಿಯಾಗಿ ಉಳಿದಿರುವ ಸಂಬಂಧವೆಂದರೆ ಅದು ಸ್ನೇಹ ಮಾತ್ರ. ಇದು ಅತ್ಯಂತ ವಿಶೇಷವಾಗಿರುಂತಹ ಆಕರ್ಷಣೆ ಮತ್ತು ನಂಬಿಕೆಯ ಸಂಬಂಧ. ಸ್ನೇಹವೆಂದರೆ ನಮ್ಮ ಬಗ್ಗೆ ಕಾಳಜಿ ವಹಿಸುವ ಮತ್ತು ಕಷ್ಟದಲ್ಲಿ ಹೆಗಲು ಕೊಡುವಂತಹ ಒಂದು ಅಭೂತಪೂರ್ವ ಸಂಬಂಧ. ಸ್ನೇಹ ಚಿರಂತರವಾಗಿರಲಿ, ಬಾಯಿ ಸಿಹಿ ಮಾಡಿಕೊಳ್ಳಿ

ಸ್ನೇಹಿತರ ದಿನವನ್ನು ಮೊದಲು ಆರಂಭಿಸಿದವರು ಜಾಯ್ಸ್ ಹಾಲ್. 1919ರಲ್ಲಿ ಹಾಲ್ ಮಾರ್ಕ್ ಕಾರ್ಡ್ ಗಳನ್ನು ಸ್ಥಾಪಿಸಿದ ಈತ ಆಗಸ್ಟ್ ತಿಂಗಳ ಮೊದಲ ಭಾನುವಾರವನ್ನು ಜನರು ಸ್ನೇಹಿತರ ದಿನವಾಗಿ ಆಚರಿಸಬೇಕೆಂದು ಬಯಸಿ ಇದನ್ನು ಆರಂಭಿಸಿದ.

1958ರ ಜುಲೈ 20ರಂದು ಡಾ. ಅರ್ಟೆಮಿಯೊ ಬ್ರಾಚೊ ಎಂಬವರು ವಿಶ್ವ ಮಟ್ಟದಲ್ಲಿ ಸ್ನೇಹಿತರ ದಿನವನ್ನು ಆಚರಿಸಬೇಕೆಂಬ ಪ್ರಸ್ತಾಪವನ್ನಿಟ್ಟರು. ಪರಾಗ್ವೆಯ ಅಸುನಸಿಯೊನ್ ನಿಂದ 200 ಕಿ.ಮೀ. ಉತ್ತರದಲ್ಲಿರುವ ಪರಾಗ್ವೆ ನದಿಯ ನಗರದವಾದ ಪುರ್ಟೊ ಪಿನಾಸ್ಕೋದಲ್ಲಿ ತನ್ನ ಸ್ನೇಹಿತರೊಂದಿಗೆ ರಾತ್ರಿಯೂಟವನ್ನು ಮಾಡುತ್ತಿದ್ದ ಸಂದರ್ಭದಲ್ಲಿ ಬ್ರಾಚೋ ಅವರು ಈ ಪ್ರಸ್ತಾವವನ್ನಿಟ್ಟಿದ್ದರು.

2011 ಎಪ್ರಿಲ್ 27ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜುಲೈ 30ನ್ನು ಅಂತಾರಾಷ್ಟ್ರೀಯ ಸ್ನೇಹಿತರ ದಿನವನ್ನಾಗಿ ಅಚರಿಸಬೇಕೆಂಬ ನಿರ್ಣಯ ಕೈಗೊಳ್ಳಲಾಯಿತು.

ದಕ್ಷಿಣ ಅಮೆರಿಕಾದ ದಕ್ಷಿಣಭಾಗದ ಕೆಲವೊಂದು ರಾಷ್ಟ್ರಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಪರಾಗ್ವೆಯಲ್ಲಿ ಇದನ್ನು ಆಚರಿಸಲಾಗುತ್ತದೆ. 1958ರಲ್ಲಿ ಜುಲೈ 30ನ್ನು ವಿಶ್ವ ಸ್ನೇಹಿತರ ದಿನವನ್ನಾಗಿ ಆಚರಿಸಲು ಪರಾಗ್ವೆ ಪ್ರಸ್ತಾವ ಮಾಡಿತ್ತು. ಸಾಂಪ್ರದಾಯಿಕವಾಗಿ ಆಗಸ್ಟ್‌ನ ಮೊದಲ ಭಾನುವಾರವನ್ನು ಸ್ನೇಹಿತರ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ ಕೆಲವೊಂದು ರಾಷ್ಟ್ರಗಳಲ್ಲಿ ಸ್ನೇಹಿತರ ದಿನ ಆಚರಣೆಗೆ ಯಾವುದೇ ನಿಗದಿತ ದಿನವಿಲ್ಲ.

ಗ್ರೀಟಿಂಗ್ ಕಾರ್ಡ್ ಕಂಪೆನಿಗಳಿಂದ ಆರಂಭವಾದಂತಹ ಈ ಆಚರಣೆಯು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಪಡೆದುಕೊಂಡು ರಜಾದಿನವನ್ನು ತುಂಬಾ ಆಸಕ್ತಿಯಿಂದ ಆಚರಿಸಲಾಗುತ್ತಿದೆ. ಅದರಲ್ಲೂ ಭಾರತ, ಬಾಂಗ್ಲಾದೇಶ ಮತ್ತು ಮಲೇಶಿಯಾದಲ್ಲಿ ಇದರ ಬಗ್ಗೆ ಆಸಕ್ತಿ ಬೆಳೆಯುತ್ತಿದೆ. ಸ್ನೇಹಕ್ಕೇಕೆ ಶಾಸ್ತ್ರದ ಹಂಗು !!

ದಕ್ಷಿಣ ಏಶ್ಯಾದಲ್ಲಿ ರಜಾದಿನವನ್ನು ಪ್ರಚುರ ಮಾಡುವವರು 1935ರಲ್ಲಿ ಅಮೆರಿಕಾದಲ್ಲಿ ನೆಲೆಸಿರುವಂತಹ ತಮ್ಮ ಸ್ನೇಹಿತರಿಗಾಗಿ ಈ ದಿನವನ್ನು ಅರ್ಪಿಸುವ ಸಂಪ್ರದಾಯವನ್ನು ಬೆಳೆಸಿಕೊಂಡಿದ್ದಾರೆ. ಆದರೆ ಇದರ ನಿಜವಾದ ವರ್ಷ 1919. ಸ್ನೇಹಿತರ ದಿನದಂದು ಉಡುಗೊರೆ, ಕಾರ್ಡ್ ಮತ್ತು ಕೈಗೆ ರಿಬ್ಬನ್‌ನಂತಹ ಪಟ್ಟಿಗಳನ್ನು ಧರಿಸುವುದು ಸಾಮಾನ್ಯವಾಗಿ ಆಚರಿಸಿಕೊಂಡಿರುವಂತಹ ಸಂಪ್ರದಾಯ.

1935ರಲ್ಲಿ ಅಮೆರಿಕಾದ ಕಾಂಗ್ರೆಸ್ ಆಗಸ್ಟ್ ತಿಂಗಳ ಮೊದಲ ಭಾನುವಾರವನ್ನು ರಾಷ್ಟ್ರೀಯ ಸ್ನೇಹಿತರ ದಿನವನ್ನಾಗಿ ಘೋಷಿಸಿತು. ಸ್ನೇಹಿತರಿಗೆ ಗೌರವ ಸೂಚಿಸುವ ಸಲುವಾಗಿ ರಾಷ್ಟ್ರೀಯ ರಜೆಯನ್ನು ಘೋಷಿಸಿದೆ. ಮಹಿಳೆಯರ ಸ್ನೇಹಿತರ ದಿನವನ್ನು ಸಪ್ಟೆಂಬರ್ ತಿಂಗಳ ಮೂರನೇ ಭಾನುವಾರದಂದು ಆಚರಿಸಲಾಗುತ್ತದೆ.

ಪ್ರತಿಯೊಬ್ಬರು ಸ್ನೇಹಿತರ ದಿನವನ್ನು ಆಚರಿಸಿದರೆ ಬೆಸ್ಟ್ ಫ್ರೆಂಡ್ಸ್ ಅನಿಮಲ್ ಸೊಸೈಟಿಯು ಉತ್ತಮ ಸ್ನೇಹಿತರ ವಾರವನ್ನು ಆಚರಿಸುತ್ತಾ ಬಂದಿದೆ. ಅದು ಪ್ರತೀ ವರ್ಷ ಜೂನ್ 23ರಿಂದ 25ರ ತನಕ. ಇದನ್ನು ಪ್ರಾಣಿಗಳ ರಕ್ಷಣೆ ಮತ್ತು ಹಕ್ಕಿಗಾಗಿ ಆಚರಿಸುತ್ತಾ ಇದೆ. ಈ ವಾರದ ಮೊದಲ ದಿನವನ್ನು ಉತ್ತಮ ಗೆಳೆಯನ ದಿನವೆಂದು ಕರೆಯಲಾಗುತ್ತದೆ.

English summary

Friendship day special: Interesting Facts About Friendship Day

PEOPLE around the world celebrate friendship day to show their care for friends. This article offers interesting facts about friendship day, origin of it, how it started, how it is celebrated in many countried of the world and many more. The concept of friendship has been discussed for thousands of years.
Story first published: Saturday, August 1, 2015, 18:51 [IST]
X
Desktop Bottom Promotion