Latest Updates
-
ಯುಗಾದಿ ದಿನ.. ಪ್ರೇಮ ಜೀವನದಲ್ಲಿ ಯಾರಿಗೆ ಬೇವು? ಯಾರಿಗೆ ಬೆಲ್ಲ? -
March 19 Horoscope: ಯುಗಾದಿ ದಿನ ಯಾರಿಗೆ ಶುಭದಿನ? -
Ugadi Wishes 2026: ಯುಗಾದಿ 2026ರ ಶುಭಾಶಯಗಳು! ಸ್ನೇಹಿತರು, ಕುಟುಂಬದವರಿಗೆ ಕಳುಹಿಸಲು ಇಲ್ಲಿವೆ 50+ ಸಂದೇಶಗಳು -
ಹಬ್ಬಕ್ಕೆ ಮಾಡಿ ಗೋಧಿ ಪಾಯಸ: ಚೂರು ಉಳಿಯದಂತೆ ಖಾಲಿ ಮಾಡೋಡು ಖಚಿತ! -
ಈರುಳ್ಳಿ ಬೇಡ.. ಬೆಳ್ಳುಳ್ಳಿ ಬೇಡ..!! ಬ್ರಾಹ್ಮಣ ಶೈಲಿಯ ವೆಜ್ ಕುರ್ಮಾ ಮಾಡೋದು ಹೇಗೆ? ಇಲ್ಲಿದೆ ಸೀಕ್ರೆಟ್ -
ಯುಗಾದಿ ಹಬ್ಬದಲ್ಲಿ ಮಾಡಿ ಬದನೆಕಾಯಿ ಗೊಜ್ಜು! ಅದ್ಭುತ ರುಚಿ ರೆಸಿಪಿ -
Happy Ugadi 2026: ಯುಗಾದಿ ಶುಭಾಶಯಗಳು! ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಿ ಈ ಹಾರ್ಟ್ ಟಚಿಂಗ್ ಶುಭಾಶಯ, ಮೆಸೇಜ್ಗಳು -
ಮಾರ್ಚ್ 21ಕ್ಕೆ ಶನಿ ನಕ್ಷತ್ರ ಬದಲಾವಣೆ: ಈ 4 ರಾಶಿಯವರ ಜೀವನದಲ್ಲಿ ಬರಲಿದೆ ಬಯಸಿದ ಭಾಗ್ಯ! -
ಯುಗಾದಿಗೆ ಸ್ಪೆಷಲ್.. ತೆಲಂಗಾಣ ಶೈಲಿಯ ಸಾಫ್ಟ್ ನೇತಿ ಒಬ್ಬಟ್ಟು ಮಾಡಿ! ಬಾಯಲ್ಲಿ ಇಟ್ಟರೆ ಕರಗುವ ರುಚಿ -
ಮಾಮೂಲಿ ಅಲ್ಲ ಆಂಧ್ರ ಶೈಲಿಯ ಬೇವು-ಬೆಲ್ಲ ಮಾಡಿ: ಯುಗಾದಿ ಸಂಭ್ರಮ ದುಪ್ಪಟ್ಟಾಗಿಸಿ!
ನಿಮ್ಮ ಯಶಸ್ಸಿನ ರಹಸ್ಯ ಬಿಚ್ಚಿಡುವ 'ರಾಶಿ ಭವಿಷ್ಯ' ಪರಿಶೀಲಿಸಿಕೊಳ್ಳಿ
ರಾಶಿ ಚಕ್ರವು ನಮ್ಮ ಜೀವನದ ಬಗ್ಗೆ ಎಲ್ಲವನ್ನೂ ಬಹಿರಂಗಪಡಿಸುತ್ತದೆ. ಸಾಮಾನ್ಯವಾಗಿ ರಾಶಿ ಚಕ್ರವು ನಮ್ಮ ಭವಿಷ್ಯದ ಬಗ್ಗೆ ಹಾಗೂ ಮುಂಬರುವ ಕಷ್ಟ ನಷ್ಟಗಳ ಬಗ್ಗೆ ಹೇಳುತ್ತದೆ ಎಂದು ನಂಬಲಾಗುತ್ತದೆ. ಆದರೆ ರಾಶಿ ಚಕ್ರ ಎನ್ನುವುದು ನಮ್ಮ ಕಲ್ಪನೆಗೂ ಮೀರಿರುವ ಅನೇಕ ವಿಚಾರಗಳನ್ನು ಹೇಳುತ್ತದೆ. ನಮ್ಮ ಭಾವನೆಗಳು ಹಾಗೂ ಮನಸ್ಸಿನ ಮಾತುಗಳು ರಾಶಿ ಚಕ್ರವನ್ನೇ ಆಧರಿಸಿರುತ್ತದೆ ಎನ್ನುತ್ತದೆ.
ಪ್ರತಿಯೊಂದು ರಾಶಿ ಚಕ್ರವೂ ವಿಭಿನ್ನ ಮನಸ್ಥಿತಿಯನ್ನು ಬಹಿರಂಗ ಪಡಿಸುತ್ತದೆ. ನಿಮ್ಮವರ ಹಾಗೂ ಸ್ನೇಹಿತರ ಮನದಾಳದ ಮಾತುಗಳನ್ನು ರಾಶಿಚಕ್ರದ ಆಧಾರದ ಮೇಲೆ ತಿಳಿದುಕೊಳ್ಳಬಹುದು. ಹೌದು, ರಾಶಿಯು ಮನುಷ್ಯನ ಜೀವನದ ಕುರಿತಾಗಿ ಹಲವಾರು ಪರಿಣಾಮಗಳನ್ನು ಮಾಡುವ ಅಂಶವಾಗಿರುತ್ತದೆ. ಆದ್ದರಿಂದ ರಾಶಿಗೆ ನಾವು ಹೆಚ್ಚಿನ ಮಹತ್ವವನ್ನು ನೀಡುತ್ತೇವೆ. ರಾಶಿ ನೋಡಿ ಭವಿಷ್ಯ ಹೇಳುವುದನ್ನು ನೀವು ತಿಳಿದಿರಬಹುದು. ಆದರೆ ರಾಶಿಯ ಪ್ರಕಾರ ನಿಮ್ಮ ಯಶಸ್ಸಿನ ಸೂತ್ರವನ್ನು ತಿಳಿಯಬಹುದು ಎಂಬುದನ್ನು ನೀವು ಓದಿದರೆ ಖಂಡಿತ ಅಚ್ಚರಿಪಡುತ್ತೀರಿ. ಬನ್ನಿ ನಿಮಗಾಗಿ ಇಂದು ರಾಶಿ ಪ್ರಕಾರ ಯಶಸ್ಸಿನ ಸೂತ್ರಗಳನ್ನು ನಾವು ತಿಳಿಸುತ್ತೇವೆ. ಮುಂದೆ ಓದಿ...

ಮೇಷ
ಇವರು ಸವಾಲುಗಳನ್ನು ಎದುರಿಸುತ್ತಾರೆ ಮತ್ತು ಅದನ್ನು ಮೆಟ್ಟಿ ನಿಲ್ಲುತ್ತಾರೆ. ಅವರು ಜುಗುಪ್ಸೆಯನ್ನು ತಾಳುವ ಅಗತ್ಯವಿರುವುದಿಲ್ಲ. ಇತರರ ದೌರ್ಬಲ್ಯವನ್ನು ಇವರು ತಿಳಿದುಕೊಳ್ಳದೆ ಇರುವುದು ಒಳ್ಳೆಯದು. ಏಕೆಂದರೆ ಇದೇ ಮೇಷ ರಾಶಿಯವರನ್ನು ಅಪಾಯಕ್ಕೆ ತಳ್ಳುತ್ತದೆ. ಇನ್ನು ಈ ರಾಶಿಯವರು ಉತ್ತಮ ಮಾತುಗಾರಿಕೆಯನ್ನು ಹೊಂದಿರುತ್ತಾರೆ. ಇವರಲ್ಲಿ ಮಾತಿನ ಕಲೆ, ಆತ್ಮವಿಶ್ವಾಸ ಮತ್ತು ಹಠಾತ್ ಆಗಿ ನಿರ್ಧಾರಕ್ಕೆ ಬರುವ ಇವರಿಗೆ ಸರಿಯಾಗಿ ಹೊಂದಿಕೊಳ್ಳುವ ಕೆಲಸವೆಂದರೆ ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗ, ಕಾಮಗಾರಿ ವೃತ್ತಿ, ಹೊಟೇಲ್ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಉದ್ಯೋಗವು ಸೂಕ್ತವಾಗಿರುವುದು.

ವೃಷಭ
ಇವರು ತುಂಬಾ ವಿಶ್ವಾಸಾರ್ಹ, ಪ್ರಾಯೋಗಿಕ ಮತ್ತು ಪ್ರಾಮಾಣಿಕ ವ್ಯಕ್ತಿಗಳಾಗಿರುತ್ತಾರೆ. ಅತಿರಂಜಿತ ಜೀವನಶೈಲಿ ಅಥವಾ ಆಧ್ಯಾತ್ಮಿಕತೆಯ ಸೊಬಗು ಇರುವಂತಹ ಉದ್ಯೋಗವನ್ನು ಇವರು ಇಷ್ಟಪಡುತ್ತಾರೆ. ಇವರಿಗೆ ಹೊಂದಿಕೆಯಾಗುವಂತಹ ವೃತ್ತಿಗಳೆಂದರೆ ಹಣಕಾಸು, ಲೆಕ್ಕಪತ್ರ ನಿರ್ವಹಣಿ, ಇಂಟೀರಿಯರ್ ಡಿಸೈನ್, ನರ್ಸಿಂಗ್, ಇಂಜಿನಿಯರಿಂಗ್, ಕಾನೂನು, ಮಾರ್ಕೆಟಿಂಗ್ ಮತ್ತು ಪಿಆರ್ ವೃತ್ತಿ ಮಾಡಬಹುದಾಗಿದೆ.

ಮಿಥುನ
ಇವರು ಹೊಸ ಹೊಸ ವಿಚಾರವನ್ನು ಕಲಿಯುತ್ತಾ ಇರುತ್ತಾರೆ. ಹೊಸ ಹೊಸ ಜಾಗಗಳಿಗೆ ಭೇಟಿ ನೀಡುತ್ತಿರುತ್ತಾರೆ ಮತ್ತು ಹೊಸಬರನ್ನು ಭೇಟಿ ಮಾಡುತ್ತಿರುತ್ತಾರೆ ಆ ಮೂಲಕ ಯಶಸ್ಸನ್ನು ಗಳಿಸುತ್ತಾರೆ. ಅಲ್ಲದೆ ಈ ರಾಶಿಯವರು ತುಂಬಾ ನುರಿತ ಸಂವಹನಕಾರರಾಗಿರುತ್ತಾರೆ. ಚರ್ಚೆ ಮತ್ತು ಆಲೋಚನೆಗಳನ್ನು ಹಂಚಿಕೊಳ್ಳುವುದಲ್ಲಿ ನೈಪುಣ್ಯತೆ ಪಡೆದಿರುತ್ತಾರೆ. ಹುರಿದುಂಬಿಸುವ ಹಾಗೂ ಆಸಕ್ತಿ ಹುಟ್ಟಿಸುವಂತಹ ವೃತ್ತಿ ಅವರಿಗೆ ಬೇಕಾಗಿದೆ. ಈ ರಾಶಿಯವರಿಗೆ ಹೊಂದಿಕೊಳ್ಳುವ ವೃತ್ತಿಗಳೆಂದರೆ ಕಲೆ, ವಿನ್ಯಾಸ, ವಾಸ್ತುಶಿಲ್ಪ, ನರ್ಸಿಂಗ್, ಮಾರಾಟ, ಕಾನೂನು ಜಾರಿ ಮತ್ತು ಅಗ್ನಿಶಾಮಕದಲ್ಲಿ ಕೆಲಸಗಳು.

ಕಟಕ
ಕಟಕ ರಾಶಿ ಇವರು ಹೊಸ ಹೊಸ ಯೋಜನೆ ಕೈಗೊಳ್ಳುವ ಮೊದಲು ಲುಕ್‌ನಲ್ಲಿ ಕಾಣಿಸಿಕೊಳ್ಳುವುದು ಒಳ್ಳೆಯದು. ನಿಮ್ಮ ಲುಕ್ ಬದಲಾದರೆ ಲಕ್ ಸಹ ಬದಲಾಗುತ್ತದೆ. ಯಶಸ್ಸು ಸಹ ಸಿಕ್ಕುತ್ತದೆ ಎಂದು ಹೇಳುತ್ತದೆ ರಾಶಿ ಭವಿಷ್ಯ. ಇನ್ನು ಈ ರಾಶಿಯವರು ಕರಣಾಮಯಿಗಳು, ಕಲಾತ್ಮಕತೆ ಹಾಗೂ ರಕ್ಷಣಾತ್ಮಕವಾಗಿರುವ ವ್ಯಕ್ತಿಗಳಾಗಿರುತ್ತಾರೆ. ಇವರು ಚರ್ಚೆ ಹಾಗೂ ಆಲೋಚನೆಗಳನ್ನು ಹಂಚಿಕೊಳ್ಳುವಲ್ಲಿ ನೈಪುಣ್ಯರು. ಇವರಿಗೆ ಹೊಂದಿಕೆಯಾಗುವ ವೃತ್ತಿಗಳೆಂದರೆ ಸರ್ಕಾರಿ ಕೆಲಸ, ಕಾನೂನು ಸೇವೆ, ಜಾಹೀರಾತು, ಉನ್ನತ ಶಿಕ್ಷಣ, ಯಂತ್ರಗಳ ನಿರ್ವಹಣೆ, ಸಾರಿಗೆ ಮತ್ತು ಸೇನೆ.

ಸಿಂಹ
ಸೃಜನಶೀಲತೆಯನ್ನು ಅಳವಡಿಸಿಕೊಳ್ಳುವ ಮೂಲಕ ನೀವು ಸಹ ಜನಪ್ರಿಯತೆಯನ್ನು ಗಳಿಸಬಹುದು. ಜನರ ನಡುವೆ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಿಕೆ ಇವರಿಗೆ ಜನ್ಮಜಾತವಾಗಿ ಬಂದಿರುತ್ತದೆ. ಇದನ್ನು ಬಳಸಿಕೊಂಡರೆ ಸಾಕು ಇವರು ಯಶಸ್ಸು ಗಳಿಸಬಹುದು. ಅಲ್ಲದೆ ಅಧಿಕಾರ ಹಾಗೂ ನಾಯಕತ್ವದ ನಿಜವಾದ ಅಭಿಲಾಷೆ ಇವರಲ್ಲಿ ಇರುತ್ತದೆ. ಇವರು ತುಂಬಾ ಆತ್ಮವಿಶ್ವಾಸ, ಆಶಾವಾದಿ, ವರ್ಚಸ್ವಿ ಮತ್ತು ಹುಟ್ಟು ಮನೋರಂಜಕರಾಗಿರುತ್ತಾರೆ. ಇವರಿಗೆ ಸರ್ಕಾರಿ ಕೆಲಸ,
ಕಾನೂನು ಸೇವೆ, ಕಲೆ, ವಿನ್ಯಾಸ, ವಾಸ್ತುಶಿಲ್ಲ, ಇಂಜಿನಿಯರಿಂಗ್, ಮನೋರಂಜನೆ, ರಿಯಲ್ ಎಸ್ಟೇಟ್ ಅಥವಾ ಶಿಕ್ಷಣ ಕ್ಷೇತ್ರವು ಹೊಂದಿಕೆಯಾಗುತ್ತದೆ.

ಕನ್ಯಾ
ಕನ್ಯಾ ಇವರು ಕಠಿಣತೆಯನ್ನೇ ಮೈಗೂಡಿಸಿಕೊಂಡಿರುತ್ತಾರೆ. ಯಾವುದಕ್ಕೂ ರಾಜಿಯಾಗುವುದಿಲ್ಲ. ಎಲ್ಲದರ ಮೇಲೆ ನಿಯಂತ್ರಣ ಸಾಧಿಸುವುದನ್ನು ಇವರು ಬಿಡಬೇಕು. ಸ್ವಲ್ಪ ರಿಲ್ಯಾಕ್ಸ್ ಆಗಿದ್ದಲ್ಲಿ ಇವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಅಲ್ಲದೆ ಇವರು ಜ್ಞಾನ ಮತ್ತು ಅರ್ಥದ ಕಡೆ ಆಕರ್ಷಿತರಾಗುವಂತಹ ವ್ಯಕ್ತಿಗಳಾಗಿರುತ್ತಾರೆ. ನಿಖರತೆ, ವಿವರ ಮತ್ತು ಸಂಶೋಧನೆ ಎನ್ನುವುದು ಇವರ ವ್ಯಕ್ತಿತ್ವದಲ್ಲೇ ಇರುತ್ತದೆ. ಇವರಿಗೆ ಹೊಂದಿಕೆಯಾಗುವಂತಹ ಕೆಲಸಗಳೆಂದರೆ ಸಮಾಜ ಸೇವೆ, ಮಾರಾಟ, ಸಂಕಲನ, ಬರಹ ಮತ್ತು ಅಡುಗೆಯಲ್ಲಿ ತೊಡಗಿಕೊಳ್ಳಬಹುದು.

ತುಲಾ
ಇವರು ಕೆಲಸದ ಮೇಲೆ ನಿಗಾವಹಿಸಬೇಕು ಮತ್ತು ಕೆಲಸದ ನಡುವೆ ವಿಶ್ರಾಂತಿಯನ್ನು ಸಹ ಪಡೆಯಬೇಕಾಗುತ್ತದೆ. ವಿಶ್ರಾಂತಿಗಳು ಇವರ ಗಮನವನ್ನು ಗುರಿಯೆಡೆಗೆ ಕೇಂದ್ರೀಕರಿಸಲು ನೆರವಾಗುತ್ತದೆ ಮತ್ತು ಯಶಸ್ಸನ್ನು ಸಹ ನೀಡುತ್ತದೆ. ಒತ್ತಡ ರಹಿತವಾಗಿ ಕೆಲಸ ಮಾಡಿ ಯಶಸ್ಸು ಪಡೆಯಿರಿ. ಈ ರಾಶಿಯವರು ರಾಜತಾಂತ್ರಿಕ ಮತ್ತು ಸ್ನೇಹಪರರಾಗಿರುತ್ತಾರೆ. ವೃತ್ತಿಯಲ್ಲಿ ಇವರಿಗೆ ಸಂತೋಷ ಸಿಗಬೇಕಾದರೆ ಮನುಷ್ಯರೊಂದಿಗೆ ಸಂವಾದ ಮಾಡುತ್ತಾ ಇರಬೇಕು. ಇವರು ತುಂಬಾ ಸಹಕಾರಿಗಳು ಮತ್ತು ಹೊಂದಾಣಿಕೆಯ ಸ್ವಭಾವದವರು. ಇವರಲ್ಲಿ ನ್ಯಾಯ ಹಾಗೂ ನಿಷ್ಠೆಯಿರುತ್ತದೆ. ಇವರಿಗೆ ಸರ್ಕಾರಿ, ಸಾಮಾಜಿಕ ಕೆಲಸ ಮತ್ತು ಕಾನೂನು ಜಾರಿ ವೃತ್ತಿ ಸೂಕ್ತವಾಗಿರುತ್ತದೆ.

ವೃಶ್ಚಿಕ
ಸಂಪನ್ಮೂಲ, ವಿಶ್ಲೇಷಾತ್ಮಕ ಹಾಗೂ ಅರ್ಥಗರ್ಭಿತ ಸ್ವಭಾವದವರು ಇವರಾಗಿರುತ್ತಾರೆ. ಇವರು ಒಳ್ಳೆಯ ಪತ್ತೆದಾರರು ಮತ್ತು ಸತ್ಯವನ್ನು ಹೊರತೆಗೆಯುವ ಸಾಮರ್ಥ್ಯವನ್ನು ಹೊಂದಿರುವವರಾಗಿರುತ್ತಾರೆ. ಇವರಿಗೆ ಹೊಂದಿಕೆಯಾಗುವಂತಹ ಕೆಲಸವೆಂದರೆ ಕಾನೂನು ಸೇವೆ, ಇಂಜಿನಿಯರಿಂಗ್, ವಿಜ್ಞಾನ, ಶಿಕ್ಷಣ ಮತ್ತು ಕಾಮಗಾರಿ.

ಧನು
ಧನುರ್ ರಾಶಿ ಇವರು ಜೀವನದಲ್ಲಿ ತುಂಬಾ ಆಶಾವಾದಿಗಳಾಗಿರುತ್ತಾರೆ ಮತ್ತು ನಿಷ್ಕಪಟ ಮನಸ್ಸಿನವರಾಗಿರುತ್ತಾರೆ. ಇವರು ಜೀವನದಲ್ಲಿ ವಾಸ್ತವ ಗುರಿಗಳನ್ನು ಇರಿಸಿಕೊಂಡು ಅದರತ್ತ ಗಮನಹರಿಸುವುದು ಒಳ್ಳೆಯದು. ಇದರಿಂದ ಮುಂದೆ ಎದುರಾಗುವ ಅಡೆತಡೆಗಳನ್ನು ನಿವಾರಿಸಿಕೊಳ್ಳಬಹುದು. ಜೊತೆಗೆ ಇದರಿಂದ ಇವರ ಧನಾತ್ಮಕ ಮನೋಭಾವ ಮತ್ತು ಶಕ್ತಿ ಸಹ ಉಳಿತಾಯವಾಗುತ್ತದೆ. ಇನ್ನು ಈ ವ್ಯಕ್ತಿಗಳು ಆಧ್ಯಾತ್ಮಿಕ, ಧನಾತ್ಮಕ ಮತ್ತು ನೈತಿಕತೆಯ ಸ್ವಭಾವ ಹೊಂದಿರುವವರಾಗಿರುತ್ತಾರೆ. ಇವರು ಪ್ರವಾಸ ಪ್ರಿಯರು ಮತ್ತು ಯಾವುದೇ ಹುದ್ದೆಗೆ ಬೇಕಾಗುವಂತಹ ಶಿಕ್ಷಣವನ್ನು ಸಂಪಾದಿಸುವವರು. ಇವರಿಗೆ ಹೊಂದಾಣಿಕೆಯಾಗುವ ಕೆಲಸವೆಂದರೆ ಸಂಕಲನ, ಬರಹ, ಮಾರ್ಕೆಟಿಂಗ್, ಮನೋರಂಜನೆ, ಸೇನೆ ಮತ್ತು ಸಾರ್ವಜನಿಕ ಸಂಪರ್ಕ.

ಮಕರ
ಇವರು ಜನ್ಮತಃ ನಾಯಕರಾಗಿರುತ್ತಾರೆ ಆದರೆ ಇವರು ಯಾವಾಗಲೂ ಇತರರಿಗೆ ಉದಾಹರಣೆಯನ್ನು ನೀಡಲು ಹೋಗಿ ಸಮಯ ವ್ಯರ್ಥ ಮಾಡಿಕೊಳ್ಳುತ್ತಾರೆ. ಇದಕ್ಕಾಗಿ ಸ್ವಲ್ಪ ಹಿಂದೆ ನಿಂತು ನೋಡುವುದು ಒಳ್ಳೆಯದು. ಯಾವಾಗಲೂ ಮುನ್ನುಗ್ಗಬೇಡಿ. ತಾಳ್ಮೆ ಇರಲಿ. ಇನ್ನು ಈ ರಾಶಿಯವರು ಹಠ, ಜವಾಬ್ದಾರಿ ಹಾಗೂ ರಾಜತಾಂತ್ರಿಕತೆ ಸ್ವಭಾವ ಹೊಂದಿರುತ್ತಾರೆ. ಇವರು ತಂದೆಯ ಸ್ಥಾನದಲ್ಲಿ ನಿಂತು ಆರೈಕೆಯನ್ನು ಮಾಡುವವರಾಗಿರುತ್ತಾರೆ. ಇವರಿಗೆ ಹೊಂದಿಕೆಯಾಗುವ ವೃತ್ತಿಯೆಂದರೆ ಕಲೆ, ವಿನ್ಯಾಸ, ವಾಸ್ತುಶಿಲ್ಪ, ನರ್ಸಿಂಗ್, ಕೃಷಿ ಮತ್ತು ಅಡುಗೆ.

ಕುಂಭ
ಕುಂಭ ಇವರು ಯಾವಾಗಲು ಪ್ರವಾಸ ಮಾಡುತ್ತಿರುತ್ತಾರೆ. ಇದರಿಂದ ಹಲವಾರು ಜನರನ್ನು ಭೇಟಿ ಮಾಡುತ್ತಾರೆ ಮತ್ತು ದೇಶ ಸುತ್ತಿ ಕಲಿಯುತ್ತಾರೆ. ಇವರ ಪ್ರವಾಸಗಳು ಇವರ ವೃತ್ತಿಗೆ ಸಹಾಯವನ್ನು ಮಾಡುತ್ತದೆ. ಜೊತೆಗೆ ಸೃಜನಶೀಲತೆಯನ್ನು ಸಹ ಹೆಚ್ಚಿಸುತ್ತದೆ ಹಾಗು ಯಶಸ್ಸನ್ನು ನೀಡುತ್ತದೆ. ಇವರು ಮೂಲತಃ ಸಂಶೋಧಕರು ಮತ್ತು ಅಸಂಪ್ರದಾಯಿಕ ಚಿಂತಕರಾಗಿರುತ್ತಾರೆ. ಇವರಿಗೆ ಹೊಸ ತಂತ್ರಜ್ಞಾನವು ಕೊಡುಗೆಯಾಗಿ ಬಂದಿರುತ್ತದೆ. ಇವರಿಗೆ ಹೊಂದಿಕೆಯಾಗುವ ವೃತ್ತಿಗಳೆಂದರೆ ಖಗೋಲಶಾಸ್ತ್ರ, ಫೋಟೋಗ್ರಾಫಿ, ವಾಯುಯಾನ ಮತ್ತು ಕಂಪ್ಯೂಟರ್ ತಂತ್ರಜ್ಞಾನ.

ಮೀನ
ಒಬ್ಬ ಸ್ವಯಂಸೇವಕರಾಗಿ ಜನರಿಗೆ ಸಹಾಯ ಮಾಡುವುದರ ಮೂಲಕ ಇವರ ವ್ಯಕ್ತಿತ್ವ ಪ್ರಕಾಶಮಯವಾಗುತ್ತದೆ. ಹಾಗೆಂದು ಸ್ವಂತ ವಿಚಾರಗಳನ್ನು ಮರೆಯಬೇಡಿ ಎಂದು ನಾವು ಹೇಳುತ್ತಿಲ್ಲ. ಸ್ವಂತ ವಿಚಾರ ಮತ್ತು ಸಮಾಜ ಎರಡನ್ನೂ ಸಮತೋಲನದಿಂದ ನಿಭಾಯಿಸಿದರೆ ಇವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಈ ರಾಶಿಯ ಹೆಚ್ಚಿನವರು ಹುತಾತ್ಮರಾಗುತ್ತಾರೆಂದು ಹೇಳಲಾಗುತ್ತದೆ. ಇವರು ತಮ್ಮ ಅಗತ್ಯತೆಯನ್ನು ಬದಿಗಿಟ್ಟು ಇತರರ ಅಗತ್ಯತೆಗಳನ್ನು ಮೊದಲು ಪೂರೈಸುವವರು. ಇವರಿಗೆ ಹೊಂದಿಕೆಯಾಗುವ ವೃತ್ತಿಯೆಂದರೆ ಆರೋಗ್ಯ, ಆರೈಕೆ, ಸಾಮಾಜಿಕ ಕೆಲಸ ಮತ್ತು ಲೋಕೋಪಕಾರ.



Click it and Unblock the Notifications











