Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರಾಶಿ ಭವಿಷ್ಯ: ರಾಶಿಗೆ ತಕ್ಕಂತೆ ವೃತ್ತಿ-ಯಶಸ್ಸು ಕಟ್ಟಿಟ್ಟ ಬುತ್ತಿ...
ಜ್ಯೋತಿಷ್ಯ ಶಾಸ್ತ್ರವನ್ನು ಹೆಚ್ಚಾಗಿ ನಂಬುವಂತಹ ಭಾರತೀಯರು ಪ್ರತಿಯೊಂದು ಘಳಿಗೆ, ದಿನದ ಫಲಾಫಲಗಳನ್ನು ಇದರ ಮೂಲಕವೇ ತಿಳಿದುಕೊಳ್ಳುತ್ತಾರೆ. ವ್ಯಕ್ತಿಯೊಬ್ಬನ ಜೀವನ, ನಡತೆ ಹಾಗೂ ಇತರ ಕೆಲವೊಂದು ವಿಚಾರಗಳನ್ನು ಕೂಡ ಆತನ ರಾಶಿಯನ್ನು ನೋಡಿ ಹೇಳಬಹುದು.
ಈ ಲೇಖನದಲ್ಲಿ ವ್ಯಕ್ತಿಯೊಬ್ಬ ತನ್ನ ರಾಶಿಗೆ ಅನುಗುಣವಾಗಿ ಯಾವ ಕೆಲಸಗಳನ್ನು ಮಾಡಬಹುದು ಎಂದು ಈ ಮೂಲಕ ಹೇಳಬಹುದು. ರಾಶಿಗೆ ತಕ್ಕಂತೆ ವೃತ್ತಿಯನ್ನು ಆಯ್ಕೆ ಮಾಡಿದರೆ ಅದರಿಂದ ನಿಮಗೆ ಬೇಗನೆ ಯಶಸ್ಸು ಕೂಡ ಸಿಗುವುದು. ಯಾವ ರಾಶಿಯವರು ಯಾವ ಉದ್ಯೋಗವನ್ನು ಮಾಡಬಹುದು ಎಂದು ಮುಂದೆ ಓದುತ್ತಾ ತಿಳಿಯಿರಿ....

ಮೇಷ
ಈ ರಾಶಿಯವರು ಉತ್ತಮ ಮಾತುಗಾರಿಕೆಯನ್ನು ಹೊಂದಿರುತ್ತಾರೆ. ಇವರಲ್ಲಿ ಮಾತಿನ ಕಲೆ, ಆತ್ಮವಿಶ್ವಾಸ ಮತ್ತು ಹಠಾತ್ ಆಗಿ ನಿರ್ಧಾರಕ್ಕೆ ಬರುವ ಇವರಿಗೆ ಸರಿಯಾಗಿ ಹೊಂದಿಕೊಳ್ಳುವ ಕೆಲಸವೆಂದರೆ ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗ, ಕಾಮಗಾರಿ ವೃತ್ತಿ, ಹೊಟೇಲ್ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಉದ್ಯೋಗವು ಸೂಕ್ತವಾಗಿರುವುದು.

ವೃಷಭ
ಇವರು ತುಂಬಾ ವಿಶ್ವಾಸಾರ್ಹ, ಪ್ರಾಯೋಗಿಕ ಮತ್ತು ಪ್ರಾಮಾಣಿಕ ವ್ಯಕ್ತಿಗಳಾಗಿರುತ್ತಾರೆ. ಅತಿರಂಜಿತ ಜೀವನಶೈಲಿ ಅಥವಾ ಆಧ್ಯಾತ್ಮಿಕತೆಯ ಸೊಬಗು ಇರುವಂತಹ ಉದ್ಯೋಗವನ್ನು ಇವರು ಇಷ್ಟಪಡುತ್ತಾರೆ. ಇವರಿಗೆ ಹೊಂದಿಕೆಯಾಗುವಂತಹ ವೃತ್ತಿಗಳೆಂದರೆ ಹಣಕಾಸು, ಲೆಕ್ಕಪತ್ರ ನಿರ್ವಹಣಿ, ಇಂಟೀರಿಯರ್ ಡಿಸೈನ್, ನರ್ಸಿಂಗ್, ಇಂಜಿನಿಯರಿಂಗ್, ಕಾನೂನು, ಮಾರ್ಕೆಟಿಂಗ್ ಮತ್ತು ಪಿಆರ್ ವೃತ್ತಿ ಮಾಡಬಹುದಾಗಿದೆ.

ಮಿಥುನ
ಈ ರಾಶಿಯವರು ತುಂಬಾ ನುರಿತ ಸಂವಹನಕಾರರಾಗಿರುತ್ತಾರೆ. ಚರ್ಚೆ ಮತ್ತು ಆಲೋಚನೆಗಳನ್ನು ಹಂಚಿಕೊಳ್ಳುವುದಲ್ಲಿ ನೈಪುಣ್ಯತೆ ಪಡೆದಿರುತ್ತಾರೆ. ಹುರಿದುಂಬಿಸುವ ಹಾಗೂ ಆಸಕ್ತಿ ಹುಟ್ಟಿಸುವಂತಹ ವೃತ್ತಿ ಅವರಿಗೆ ಬೇಕಾಗಿದೆ. ಈ ರಾಶಿಯವರಿಗೆ ಹೊಂದಿಕೊಳ್ಳುವ ವೃತ್ತಿಗಳೆಂದರೆ ಕಲೆ, ವಿನ್ಯಾಸ, ವಾಸ್ತುಶಿಲ್ಪ, ನರ್ಸಿಂಗ್, ಮಾರಾಟ, ಕಾನೂನು ಜಾರಿ ಮತ್ತು ಅಗ್ನಿಶಾಮಕದಲ್ಲಿ ಕೆಲಸಗಳು.

ಕಟಕ
ಈ ರಾಶಿಯವರು ಕರಣಾಮಯಿಗಳು, ಕಲಾತ್ಮಕತೆ ಹಾಗೂ ರಕ್ಷಣಾತ್ಮಕವಾಗಿರುವ ವ್ಯಕ್ತಿಗಳಾಗಿರುತ್ತಾರೆ. ಇವರು ಚರ್ಚೆ ಹಾಗೂ ಆಲೋಚನೆಗಳನ್ನು ಹಂಚಿಕೊಳ್ಳುವಲ್ಲಿ ನೈಪುಣ್ಯರು. ಇವರಿಗೆ ಹೊಂದಿಕೆಯಾಗುವ ವೃತ್ತಿಗಳೆಂದರೆ ಸರ್ಕಾರಿ ಕೆಲಸ, ಕಾನೂನು ಸೇವೆ, ಜಾಹೀರಾತು, ಉನ್ನತ ಶಿಕ್ಷಣ, ಯಂತ್ರಗಳ ನಿರ್ವಹಣೆ, ಸಾರಿಗೆ ಮತ್ತು ಸೇನೆ.

ಸಿಂಹ
ಅಧಿಕಾರ ಹಾಗೂ ನಾಯಕತ್ವದ ನಿಜವಾದ ಅಭಿಲಾಷೆ ಇವರಲ್ಲಿ ಇರುತ್ತದೆ. ಇವರು ತುಂಬಾ ಆತ್ಮವಿಶ್ವಾಸ, ಆಶಾವಾದಿ, ವರ್ಚಸ್ವಿ ಮತ್ತು ಹುಟ್ಟು ಮನೋರಂಜಕರಾಗಿರುತ್ತಾರೆ. ಇವರಿಗೆ ಸರ್ಕಾರಿ ಕೆಲಸ, ಕಾನೂನು ಸೇವೆ, ಕಲೆ, ವಿನ್ಯಾಸ, ವಾಸ್ತುಶಿಲ್ಲ, ಇಂಜಿನಿಯರಿಂಗ್, ಮನೋರಂಜನೆ, ರಿಯಲ್ ಎಸ್ಟೇಟ್ ಅಥವಾ ಶಿಕ್ಷಣ ಕ್ಷೇತ್ರವು ಹೊಂದಿಕೆಯಾಗುತ್ತದೆ.

ಕನ್ಯಾ
ಇವರು ಜ್ಞಾನ ಮತ್ತು ಅರ್ಥದ ಕಡೆ ಆಕರ್ಷಿತರಾಗುವಂತಹ ವ್ಯಕ್ತಿಗಳಾಗಿರುತ್ತಾರೆ. ನಿಖರತೆ, ವಿವರ ಮತ್ತು ಸಂಶೋಧನೆ ಎನ್ನುವುದು ಇವರ ವ್ಯಕ್ತಿತ್ವದಲ್ಲೇ ಇರುತ್ತದೆ. ಇವರಿಗೆ ಹೊಂದಿಕೆಯಾಗುವಂತಹ ಕೆಲಸಗಳೆಂದರೆ ಸಮಾಜ ಸೇವೆ, ಮಾರಾಟ, ಸಂಕಲನ, ಬರಹ ಮತ್ತು ಅಡುಗೆಯಲ್ಲಿ ತೊಡಗಿಕೊಳ್ಳಬಹುದು.

ತುಲಾ
ಈ ರಾಶಿಯವರು ರಾಜತಾಂತ್ರಿಕ ಮತ್ತು ಸ್ನೇಹಪರರಾಗಿರುತ್ತಾರೆ. ವೃತ್ತಿಯಲ್ಲಿ ಇವರಿಗೆ ಸಂತೋಷ ಸಿಗಬೇಕಾದರೆ ಮನುಷ್ಯರೊಂದಿಗೆ ಸಂವಾದ ಮಾಡುತ್ತಾ ಇರಬೇಕು. ಇವರು ತುಂಬಾ ಸಹಕಾರಿಗಳು ಮತ್ತು ಹೊಂದಾಣಿಕೆಯ ಸ್ವಭಾವದವರು. ಇವರಲ್ಲಿ ನ್ಯಾಯ ಹಾಗೂ ನಿಷ್ಠೆಯಿರುತ್ತದೆ. ಇವರಿಗೆ ಸರ್ಕಾರಿ, ಸಾಮಾಜಿಕ ಕೆಲಸ ಮತ್ತು ಕಾನೂನು ಜಾರಿ ವೃತ್ತಿ ಸೂಕ್ತವಾಗಿರುತ್ತದೆ.

ವೃಶ್ಚಿಕ
ಸಂಪನ್ಮೂಲ, ವಿಶ್ಲೇಷಾತ್ಮಕ ಹಾಗೂ ಅರ್ಥಗರ್ಭಿತ ಸ್ವಭಾವದವರು ಇವರಾಗಿರುತ್ತಾರೆ. ಇವರು ಒಳ್ಳೆಯ ಪತ್ತೆದಾರರು ಮತ್ತು ಸತ್ಯವನ್ನು ಹೊರತೆಗೆಯುವ ಸಾಮರ್ಥ್ಯವನ್ನು ಹೊಂದಿರುವವರಾಗಿರುತ್ತಾರೆ. ಇವರಿಗೆ ಹೊಂದಿಕೆಯಾಗುವಂತಹ ಕೆಲಸವೆಂದರೆ ಕಾನೂನು ಸೇವೆ, ಇಂಜಿನಿಯರಿಂಗ್, ವಿಜ್ಞಾನ, ಶಿಕ್ಷಣ ಮತ್ತು ಕಾಮಗಾರಿ.

ಧನು
ಈ ವ್ಯಕ್ತಿಗಳು ಆಧ್ಯಾತ್ಮಿಕ, ಧನಾತ್ಮಕ ಮತ್ತು ನೈತಿಕತೆಯ ಸ್ವಭಾವ ಹೊಂದಿರುವವರಾಗಿರುತ್ತಾರೆ. ಇವರು ಪ್ರವಾಸ ಪ್ರಿಯರು ಮತ್ತು ಯಾವುದೇ ಹುದ್ದೆಗೆ ಬೇಕಾಗುವಂತಹ ಶಿಕ್ಷಣವನ್ನು ಸಂಪಾದಿಸುವವರು. ಇವರಿಗೆ ಹೊಂದಾಣಿಕೆಯಾಗುವ ಕೆಲಸವೆಂದರೆ ಸಂಕಲನ, ಬರಹ, ಮಾರ್ಕೆಟಿಂಗ್, ಮನೋರಂಜನೆ, ಸೇನೆ ಮತ್ತು ಸಾರ್ವಜನಿಕ ಸಂಪರ್ಕ.

ಮಕರ
ಈ ರಾಶಿಯವರು ಹಠ, ಜವಾಬ್ದಾರಿ ಹಾಗೂ ರಾಜತಾಂತ್ರಿಕತೆ ಸ್ವಭಾವ ಹೊಂದಿರುತ್ತಾರೆ. ಇವರು ತಂದೆಯ ಸ್ಥಾನದಲ್ಲಿ ನಿಂತು ಆರೈಕೆಯನ್ನು ಮಾಡುವವರಾಗಿರುತ್ತಾರೆ. ಇವರಿಗೆ ಹೊಂದಿಕೆಯಾಗುವ ವೃತ್ತಿಯೆಂದರೆ ಕಲೆ, ವಿನ್ಯಾಸ, ವಾಸ್ತುಶಿಲ್ಪ, ನರ್ಸಿಂಗ್, ಕೃಷಿ ಮತ್ತು ಅಡುಗೆ.

ಕುಂಭ
ಇವರು ಮೂಲತಃ ಸಂಶೋಧಕರು ಮತ್ತು ಅಸಂಪ್ರದಾಯಿಕ ಚಿಂತಕರಾಗಿರುತ್ತಾರೆ. ಇವರಿಗೆ ಹೊಸ ತಂತ್ರಜ್ಞಾನವು ಕೊಡುಗೆಯಾಗಿ ಬಂದಿರುತ್ತದೆ. ಇವರಿಗೆ ಹೊಂದಿಕೆಯಾಗುವ ವೃತ್ತಿಗಳೆಂದರೆ ಖಗೋಲಶಾಸ್ತ್ರ, ಫೋಟೋಗ್ರಾಫಿ, ವಾಯುಯಾನ ಮತ್ತು ಕಂಪ್ಯೂಟರ್ ತಂತ್ರಜ್ಞಾನ.

ಮೀನು
ಈ ರಾಶಿಯ ಹೆಚ್ಚಿನವರು ಹುತಾತ್ಮರಾಗುತ್ತಾರೆಂದು ಹೇಳಲಾಗುತ್ತದೆ. ಇವರು ತಮ್ಮ ಅಗತ್ಯತೆಯನ್ನು ಬದಿಗಿಟ್ಟು ಇತರರ ಅಗತ್ಯತೆಗಳನ್ನು ಮೊದಲು ಪೂರೈಸುವವರು. ಇವರಿಗೆ ಹೊಂದಿಕೆಯಾಗುವ ವೃತ್ತಿಯೆಂದರೆ ಆರೋಗ್ಯ, ಆರೈಕೆ, ಸಾಮಾಜಿಕ ಕೆಲಸ ಮತ್ತು ಲೋಕೋಪಕಾರ.



Click it and Unblock the Notifications











