For Quick Alerts
ALLOW NOTIFICATIONS  
For Daily Alerts

25-5-2019- ಶನಿವಾರದ ದಿನ ಭವಿಷ್ಯ

By Lekhaka
|

ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲ ವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ. ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಜಂನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807

ಮೇಷ( 25 ಮೇ 2019)

ಮೇಷ( 25 ಮೇ 2019)

ನೀವು ಸರ್ಕಾರಿ ಕೆಲಸಕಾರ್ಯದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣ ವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ. ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ನಿಮ್ಮ ಕಾರ್ಯಾನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು. ಅದೃಷ್ಟ ಸಂಖ್ಯೆ:2

ವೃಷಭ

ವೃಷಭ

ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ. ಬೆನ್ನು ನೋವು ಅಥವಾ ಮಂಡಿನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು. ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹು ದೊಡ್ಡ ಆಸ್ತಿ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಮುದವನ್ನುಂಟು ಮಾಡುವುದು. ಅದೃಷ್ಟ ಸಂಖ್ಯೆ:1

ಮಿಥುನ

ಮಿಥುನ

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆದರಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್‍ಸಿ ಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ. ನಿಮ್ಮ ಸೇವೆಯ ರೀತಿ ನೀತಿಗಳಿಂದ ಪ್ರಭಾವಿತರಾದ ಜನರು ನಿಮ್ಮನ್ನೆ ಮುಂದಿನ ಮುಖಂಡನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು. ಅದೃಷ್ಟ ಸಂಖ್ಯೆ:2

ಕಟಕ

ಕಟಕ

ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತೋಷಪಡಿಸಿ. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ. ಅದೃಷ್ಟ ಸಂಖ್ಯೆ:4

ಸಿಂಹ

ಸಿಂಹ

ಅಧಿಕ ಶ್ರಮಕ್ಕೆ ತಕ್ಕಷ್ಟು ಆದಾಯವೂ ಬರುವುದರಿಂದ ಹಣಕಾಸಿನ ತೊಂದರೆ ಇರುವುದಿಲ್ಲ. ಹೊಸದೇನೋ ಒಂದು ನಿಮ್ಮ ಜೀವನವನ್ನು ಪ್ರವೇಶಿಸಲಿದ್ದು, ಇದರಿಂದ ಉತ್ತಮವಾಗುವುದು. ನೆರೆಹೊರೆಯವರೊಂದಿಗೆ ಸ್ನೇಹದಿಂದ ವರ್ತಿಸಿ.ಆರೋಗ್ಯದ ಎಚ್ಚರ ಇದ್ದರೆ ಸಾಕು. ಉಳಿದ ಕಿರಿಕಿರಿಗಳನ್ನು ನಿಯಂತ್ರಿಸ ಬಹುದು. ವಿಷ್ಣು ಸಹಸ್ರನಾಮ ಪಾರಾಯಣದಿಂದ ಸಂಕಷ್ಟ ದೂರವಾಗುವುದು. ಕಾರ್ಯಸಿದ್ಧಿಯ ಭಾವನಾತ್ಮಕ ದುಗುಡತೆ ಯಿಂದ ದೂರ ಉಳಿಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಉತ್ತಮವಾದ ವಿಚಾರದಲ್ಲಿ ಕ್ಲಿಷ್ಟತೆ ಇದ್ದರೂ ಸರಳವಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿಯನ್ನು ಭಗವಂತ ನಿಮಗೆ ಒದಗಿಸಿದ್ದಾನೆ. ನಿಮ್ಮಿಂದ ಮಾರ್ಗದರ್ಶನ ಪಡೆಯುವವರಿಗೆ ಬೇಕಾದ ನಿಮ್ಮ ಸಲಹೆ ಸೂಚನೆಗಳನ್ನು ನೀಡಿ. ಅದೃಷ್ಟ ಸಂಖ್ಯೆ:5

ಕನ್ಯಾ

ಕನ್ಯಾ

ಮಾನಸಿಕ ಖಿನ್ನತೆ ಮೂಡುವುದು. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ.ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿ. ಮನೋಕಾಮನೆಗಳು ಪೂರ್ಣಗೊಳ್ಳುವುದು ಆದಷ್ಟು ತಾಳ್ಮೆಯಿಂದಿರಿ.ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಅದೃಷ್ಟ ಸಂಖ್ಯೆ:6

ತುಲಾ

ತುಲಾ

ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು. ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ:4

ವೃಶ್ಚಿಕ

ವೃಶ್ಚಿಕ

ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನ ವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ. ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ ಅದೃಷ್ಟ ಸಂಖ್ಯೆ:2

ಧನುಸ್ಸು

ಧನುಸ್ಸು

ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ. ಅದೃಷ್ಟ ಸಂಖ್ಯೆ:1

ಮಕರ

ಮಕರ

ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆ ಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು. ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀ ಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.ಮನಸ್ಸನ್ನು ನಿಗ್ರಹಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.

ಅದೃಷ್ಟ ಸಂಖ್ಯೆ:4

ಕುಂಭ

ಕುಂಭ

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಜನರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ. ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವಹಿವಾಟಿಗೆ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ:2

ಮೀನ

ಮೀನ

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು. ಸಂಶೋಧಕರಿಗೆ, ತಾಂತ್ರಿಕ ಪರಿಣಿತರಿಗೆ ಉತ್ತಮ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗುವುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು. ಅದೃಷ್ಟ ಸಂಖ್ಯೆ:1

English summary

your daily horoscope 25 May 2019

Know what astrology and the planets have in store for you today. Choose your zodiac sign and read the details..
Story first published: Saturday, May 25, 2019, 4:01 [IST]
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Boldsky sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Boldsky website. However, you can change your cookie settings at any time. Learn more