Latest Updates
-
ಶನಿ ಕೃಪೆ ಶುರು.. ಹಣ, ಯಶಸ್ಸು, ಶುಭ ಸುದ್ದಿ! ಯುಗಾದಿ ಬಳಿಕ ಈ 3 ರಾಶಿಗಳಿಗೆ ಭಾರೀ ಅದೃಷ್ಟ -
ಯುಗಾದಿಗೆ ಸ್ಪೆಷಲ್ ಹೊಸ ರೀತಿಯ ಕ್ಯಾರೆಟ್ ಒಬ್ಬಟ್ಟು: ಬಾಯಲ್ಲಿ ನೀರು ತರಿಸುವ ಸಿಹಿ -
ಅಕ್ಕಿ ನೆನೆಸುವಂತೆಯೇ ಇಲ್ಲ! ಸೌತೆಕಾಯಿಯಿಂದ ಮಾಡಿ ರುಚಿಕರ ಇಡ್ಲಿ.. ಹೊಟ್ಟೆ ತುಂಬುತ್ತೆ, ತೂಕ ಇಳಿಯುತ್ತೆ -
March 17 Horoscope: ಕುಟುಂಬದಲ್ಲಿ ಸಂತಸ ಅನುಭವಿಸುವ ದಿನವಿದು! -
ಕೌಟುಂಬಿಕ ಸುಖ & ಸಂಬಂಧಗಳಲ್ಲಿ ಮಧುರತೆ ಹೆಚ್ಚಳ! ಸಂಗಾತಿಯಿಂದ ಸಂಪೂರ್ಣ ಬೆಂಬಲ -
ಯುಗಾದಿ ಮಂತ್ರಗಳು: ಹಬ್ಬದಲ್ಲಿ ಈ ಮಂತ್ರ ಪಠಿಸಿದ್ರೆ ಕಷ್ಟಗಳು ದೂರಾಗುತ್ತೆ, ಅದೃಷ್ಟ ನಿಮ್ಮದಾಗುತ್ತೆ! -
ಯುಗಾದಿ ಹಬ್ಬದಲ್ಲಿ ಸಿಹಿಯೊಂದಿಗೆ ಬೇಬಿ ಕಾರ್ನ್ 65 ಸಹ ಮಾಡಿ! ಅದ್ಭುತ ರುಚಿಯ ತಿಂಡಿ ಇದು! -
Ugadi 2026: ಬೇವಿನ ಕಹಿ ಇರಲಿ, ಬೆಲ್ಲದ ಸಿಹಿ ಇರಲಿ! ನಿಮ್ಮ ಆತ್ಮೀಯರಿಗೆ ಈ ರೀತಿ ವಿಶೇಷ ಶುಭಾಶಯ ಕಳಿಸಿ -
ರವೆ ಮತ್ತು ತುಪ್ಪ ಬಳಸಿ ಸ್ಪಂಜಿನಂಥ ಕೇಕ್ ಮಾಡಿ! ಬಾಯಲ್ಲಿ ಇಟ್ಟರೆ ಕರಗುವ ರುಚಿ.. ಓವನ್ ಇಲ್ಲದೆ ಮಾಡಬಹುದು -
ಯುಗಾದಿ ಭವಿಷ್ಯ: ಹಬ್ಬದ ಬಳಿಕ ಈ ರಾಶಿಯವರಿಗೆ ಲಕ್ಷ್ಮಿ ಆಶೀರ್ವಾದ, ಆರ್ಥಿಕ ಲಾಭ!
7-2-2019: ಗುರುವಾರದ ದಿನ ಭವಿಷ್ಯ
ಸಂಬಂಧಗಳು ಸುಂದರವಾಗಿದ್ದಾಗ ನಾವು ಮಾಡಿದ್ದು, ಆಡಿದ್ದು ತಪ್ಪೇ ಆಗಿದ್ದರೂ ಅವೆಲ್ಲವೂ ಸರಿಯಾಗಿಯೇ ಕಾಣಿಸುತ್ತವೆ. ಅದೇ ಸಂಬಂಧಗಳು ಹಳಸಿರುವಾ ಅಥವಾ ಹಾಳಾಗಿದ್ದಾಗ ನಾವು ಮಾಡಿದ್ದು, ಹೇಳಿದ್ದು ಸರಿಯಾಗಿಯೇ ಇದ್ದರೂ ಕೂಡ ಅದು ತಪ್ಪಾಗಿ ಕಾಣಿಸುತ್ತವೆ ಎನ್ನುವ ಮಾತಿದೆ. ಹೌದು, ನಾವು ಏನನ್ನು ಮಾಡುತ್ತೇವೆ? ಏನನ್ನು ನೋಡುತ್ತೇವೆ? ಎನ್ನುವುದೆಲ್ಲವೂ ನಮ್ಮ ಭಾವನೆಯ ಮೇಲೆ ಆಧರಿಸಿಕೊಂಡಿರುತ್ತದೆ. ಹಾಗಾಗಿ ಪ್ರೀತಿಯಲ್ಲಿದ್ದಾರೆ ಎಂದ ಮಾತ್ರಕ್ಕೆ ಇಲ್ಲ ಸಲ್ಲದ ಮಾತುಗಳನ್ನು ಆಡುವುದು ಅಥವಾ ದ್ವೇಷದಲ್ಲಿದ್ದೇವೆ ಎಂದ ಮಾತ್ರಕ್ಕೆ ನಿಂದನೆ ಮಾಡುವ ಕೆಲಸಕ್ಕೆ ಹೋಗಬಾರದು.
ನಮ್ಮಲ್ಲಿ ವಿಶಾಲ ಭಾವನೆ ಇರಬೇಕು. ಪ್ರತಿಯೊಬ್ಬರ ತಪ್ಪಿಗೂ ಕ್ಷಮಿಸುವ ಗುಣವನ್ನು ರೂಢಿಸಿಕೊಳ್ಳಬೇಕು. ಒಬ್ಬರನ್ನು ಅತಿಯಾಗಿ ಹೊಗಳುವುದು, ಇನ್ನೊಬ್ಬರನ್ನು ಅತಿಯಾಗಿ ದೂರುವ ಕೃತ್ಯ ಎಸಗಬಾರದು. ಸನ್ನಿವೇಶಗಳನ್ನು ಪರಾಮರ್ಶಿಸುವ ಸಾಮಥ್ರ್ಯದಿಂದ ಎಲ್ಲವನ್ನೂ ಅರಿತುಕೊಳ್ಳಬೇಕು. ಆಗ ಜೀವನ ಸಾರ್ಥಕ ಎನಿಸಿಕೊಳ್ಳುವುದು. ಸಮಾಜವೂ ನಮ್ಮನ್ನು ಗೌರವಿಸುವುದು. ಗುರುವಾರವಾದ ಇಂದು ಗುರು ರಾಯರ ಸ್ಮರಣೆಯಿಂದ ದಿನವನ್ನು ಆರಂಭಿಸಿ. ಈ ದಿನದಲ್ಲಿ ಉಂಟಾಗುವ ಆಗುಹೋಗುಗಳು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರಲಿವೆ? ಎನ್ನುವುದನ್ನು ತಿಳಿಯಲು ಮುಂದೆ ಓದಿ

ಮೇಷ (7 ಫೆಬ್ರವರಿ 2019)
ಸಾಮಾಜಿಕವಾಗಿ ವಿಶೇಷವಾದುದನ್ನು ಸಾಧಿಸಿ ಪ್ರಶಂಸೆ ಗಳಿಸಲು ಗ್ರಹಗಳು ಸಹಕಾರ ನೀಡುವವು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ನೆರವು ವಿವಿಧ ಮೂಲಗಳಿಂದ ಬರುವುದು. ಅವಸರದ ನಿರ್ಣಯ ತೆಗೆದುಕೊಂಡು ನಂತರ ಕೈ ಕೈ ಹಿಸುಕಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಕಾರ್ಯ ಮಾಡುವ ಮುನ್ನ ಎರಡು ಬಾರಿ ಚಿಂತಿಸಿ. ಸ್ವಯಂಕೃತ ಅಪರಾಧದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ.9845743807 ಅದೃಷ್ಟ ಸಂಖ್ಯೆ:2

ವೃಷಭ
ವಿವೇಕದ ಮಾತುಗಳನ್ನು ಆಡಿದಾಗಲೂ ಅಹಂಕಾರ ತೋರುವ ಜನರನ್ನು ನಿರ್ದಾಕ್ಷಿಣ್ಯವಾಗಿ ದೂರವಿಡಿ. ಇದರಿಂದ ನಿಮ್ಮ ಕಾರ್ಯ ಸಾಧುವಾಗುವುದು. ಹಣಕಾಸಿನ ಸ್ಥಿತಿ ಸದ್ಯಕ್ಕೆ ಉತ್ತಮವಾಗಿಲ್ಲ.ನಿಮ್ಮ ನಿರೀಕ್ಷೆ ಮೀರಿ ಹೆಚ್ಚಿನ ಲಾಭ ಬರುವ ಉತ್ತಮ ಅವಕಾಶ ನಿಮಗೆ ದೊರೆಯಲಿದೆ. ಇದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ನಿವಾರಣೆಯಾಗುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:1

ಮಿಥುನ
ವಿನಾಕಾರಣ ನಿಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡುವ ಜನರು ನಿಮಗೆ ತಲೆನೋವು ತರುವ ಸಾಧ್ಯತೆ ಇದೆ. ಅವರನ್ನು ಜಾಣ್ಮೆಯಿಂದ ಸಾಗ ಹಾಕಿ. ಸಮಾಜದಲ್ಲಿ ನಿಮಗೆ ಉತ್ತಮ ಗೌರವ ಆದರಗಳು ದೊರೆಯುವವು. ಪ್ರವಾಸದ ಸಂದರ್ಭದಲ್ಲಿ ನಡೆಸಿದ ಮಾತುಕತೆಗೆ ವ್ಯತಿರಿಕ್ತವಾಗಿ ವರ್ತಿಸಿದವರನ್ನು ನಿರ್ಲಕ್ಷಿಸಿ ಮತ್ತು ಅವರನ್ನು ದೂರ ಇಡಿ. ಬಹುದಿನದ ಬಯಕೆ ಈಡೇರುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ನೀಡಿ.9845743807 ಅದೃಷ್ಟ ಸಂಖ್ಯೆ:4

ಕಟಕ
ವಾಯುಪ್ರಕೋಪ, ಇಲ್ಲವೆ ಮಿತಿ ಮೀರಿದ ಅಲರ್ಜಿ ತೊಂದರೆ ನಿಮ್ಮನ್ನು ಕಾಡುವ ಸಾಧ್ಯತೆ ಇದೆ. ಆದಷ್ಟು ಊಟ ಉಪಚಾರಗಳಲ್ಲಿ ನಿಯಮ ಕಾಪಾಡಿಕೊಳ್ಳಿ.ಮಾತನಾಡುವುದು ಅನಿವಾರ್ಯ ಆದಾಗಲೂ ಮೌನದಿಂದ ಇರಲು ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಸಾಕಷ್ಟು ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳು ಕಡಿಮೆ ಆಗುವವು. ಪ್ರಯಾಣ ಕಾಲದಲ್ಲಿ ಎಚ್ಚರ ಅಗತ್ಯ. ಸಾಧ್ಯವಾದಲ್ಲಿ 18 ಉದ್ದಿನಕಾಳುಗಳನ್ನು ಜೇಬಿನಲ್ಲಿಟ್ಟುಕೊಳ್ಳಿ.9845743807 ಅದೃಷ್ಟ ಸಂಖ್ಯೆ:6

ಸಿಂಹ
ಅನ್ಯರ ಮಾತು ಕೇಳಿ ನಿಮಗೆ ತೊಂದರೆ ಕೊಡುತ್ತಿರುವ ಮೇಲಧಿಕಾರಿಗೆ ತಪ್ಪಿನ ಅರಿವಾಗಲಿದೆ. ಈ ಬಗ್ಗೆ ಅವರು ತಮ್ಮ ಬಳಿ ಕ್ಷ ಮೆಯಾಚಿಸುವ ಸಾಧ್ಯತೆ ಇದೆ. ಹಾಗಂತ ನೀವು ಅಹಂಕಾರ ಪಡುವುದು ಸೂಕ್ತವಲ್ಲ. ಆಂಜನೇಯ ಸ್ವಾಮಿ ಮಂತ್ರ ಜಪಿಸಿ. ದೂರದ ಬೆಟ್ಟ ನುಣ್ಣಗೆ ಎಂಬುದು ತಿಳಿದಿದ್ದರೂ ಪುನಃ ಪುನಃ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡು ಸೋಲನ್ನು ಅನುಭವಿಸುವಿರಿ. ಸದ್ಯದ ಪರಿಸ್ಥಿತಿಯಲ್ಲಿ ಈಗಿರುವ ಕೆಲಸವನ್ನೇ ಮುಂದುವರಿಸಿಕೊಂಡು ಹೋಗುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:4

ಕನ್ಯಾ
ನಿಮ್ಮ ಬುದ್ಧಿಮತ್ತೆ ಎಲ್ಲೆಡೆ ಚರ್ಚೆಗೆ ಒಳಪಡುವುದು ಮತ್ತು ಈ ವಿಷಯದಲ್ಲಿ ಹಲವು ರೀತಿಯ ಸದವಕಾಶಗಳು ನಿಮಗೆ ಬರಲಿದ್ದು ನೀವು ಇನ್ನೂ ಎತ್ತರಕ್ಕೆ ಏರಲು ಅನುಕೂಲವಾಗುವುದು. ಪರರ ಮಾತುಗಳನ್ನು ಕೇಳಿ ನಿರ್ಧಾರ ಕೈಗೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ. ಆದಷ್ಟು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಿ. ಒಳಿತಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:8

ತುಲಾ
ನಿಮ್ಮ ಬಳಿ ಹಲವು ವಿಚಾರಗಳನ್ನು ತಿಳಿಯಲು ಬರುವ ಜನರು ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ. ಮಾತಾ ದುರ್ಗಾದೇವಿಯನ್ನು ನೆನೆದು ಅವರಿಗೆ ಸೂಕ್ತ ಉತ್ತರವನ್ನು ಪರಿಹಾರ ರೂಪದಲ್ಲಿ ನೀಡುವಿರಿ. ಇದರಿಂದ ಜನರು ಸಂತುಷ್ಟರಾಗುವರು.ಸದಾ ನಕಾರಾತ್ಮಕ ಚಿಂತನೆಯಿಂದ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದಲ್ಲದೆ ಮನೆಯ ಇತರ ಸಮಸ್ಯೆಗೂ ಕಾರಣರಾಗುವಿರಿ. ಆದಷ್ಟು ಒಳಿತನ್ನು ಚಿಂತಿಸಿ. ಇದರಿಂದ ಒಳಿತಾಗುವುದು. ಆಶಾವಾದಿಗೆ ಜೀವನ ನಿರಾಶಾವಾದಿಗೆ ಅಲ್ಲ ಎನ್ನುವ ತತ್ವವನ್ನು ತಿಳಿಯಿರಿ.9845743807 ಅದೃಷ್ಟ ಸಂಖ್ಯೆ:6

ವೃಶ್ಚಿಕ
ದೈವಬಲ ಕಡಿಮೆ ಆಗಿದೆ. ನಿಮ್ಮ ಮುಂದೆ ಹಲವು ದಾರಿಗಳು ಗೋಚರಿಸುತ್ತಿವೆ. ಯಾವ ಮಾರ್ಗದಲ್ಲಿ ಹೋದರೆ ಸೂಕ್ತ ಎಂಬ ಗೊಂದಲ ಉಂಟಾಗುವುದು. ಹಾಗಾಗಿ ಒಂದೇ ಮನಸ್ಸಿನಿಂದ ಕುಲದೇವರನ್ನು ಸ್ಮರಣೆ ಮಾಡಿ. ಉತ್ತಮ ಮಾರ್ಗ ತೋರುವುದು. ಏಕಕಾಲದಲ್ಲಿ ಎರಡೂ ಕಡೆಯಿಂದ ಉತ್ತಮ ಅವಕಾಶಗಳು ಬರಲಿದ್ದು ಎರಡು ಅವಕಾಶಗಳಲ್ಲಿ ಒಂದನ್ನು ಶುದ್ಧ ಮನಸ್ಸಿನಿಂದ ಆಯ್ದುಕೊಳ್ಳಿ. ಇಲ್ಲವೆ ಎರಡು ದೋಣಿಗಳಲ್ಲಿ ಕಾಲಿಟ್ಟು ಪ್ರಯಾಣ ಬೆಳೆಸಿದರೆ ಇಚ್ಛಿತ ಗುರಿಯನ್ನು ತಲುಪಲಾರಿರಿ. 9845743807 ಅದೃಷ್ಟ ಸಂಖ್ಯೆ:2

ಧನುಸ್ಸು
ಸದ್ಯದ ಪರಿಸ್ಥಿತಿಯಲ್ಲಿ ಎಲ್ಲವೂ ಕನ್ನಡಿಯ ಗಂಟಿನಂತೆ ತೋರುತ್ತಿದ್ದರೂ ಅದನ್ನು ಬಳಸಿಕೊಳ್ಳಲು ಆಗುತ್ತಿಲ್ಲ. ಹಿರಿಯರ ಅಶೀರ್ವಾದವನ್ನು ಪಡೆಯಿರಿ. ಅವರ ಆಶೀರ್ವಾದದಿಂದ ಉತ್ತಮ ಫಲವನ್ನು ಕಾಣುವಿರಿ. ನಿಮ್ಮಿಂದ ದೂರವಾಗಿದ್ದ ವ್ಯಕ್ತಿಗಳೇ ನಿಮ್ಮ ಬಳಿ ಪುನಃ ಬಂದು ಸ್ನೇಹದ ಹಸ್ತವನ್ನು ಚಾಚುವರು. ಅವರ ಅಂತರಂಗದ ಭಾವನೆಗಳು ಶುದ್ಧವೆಂದು ಕಂಡುಬಂದಲ್ಲಿ ಅವರ ಸಖ್ಯವನ್ನು ಬೆಳೆಸಿ. ಹಣಕಾಸು ಸ್ಥಿತಿ ಉತ್ತಮವಾಗುವುದು.9845743807 ಅದೃಷ್ಟ ಸಂಖ್ಯೆ:9

ಮಕರ
ಪರರು ನಿಮ್ಮ ಮೇಲೆ ಅಪನಂಬಿಕೆ ಇಟ್ಟಿರುವ ವಿಚಾರ ನಿಮಗೆ ತಿಳಿದೇ ಇದೆ. ಆದರೆ ಅವರ ಅಪನಂಬಿಕೆಯು ದೂರವಾಗುವಂತಹ ಒಂದು ಪ್ರಮುಖ ಘಟನೆಯು ಜರುಗುವುದು. ಇದರಿಂದ ಒಳಿತಾಗುವುದು. ಕೆಲವೊಂದು ವಿಚಾರ ವ್ಯವಹಾರಗಳನ್ನು ನೇರಾನೇರ ಮುಖಕೊಟ್ಟು ಮಾಡುವುದು ಒಳ್ಳೆಯದು. ಇದರಿಂದ ನಿಮ್ಮ ಬಗ್ಗೆ ಹೆಚ್ಚಿನ ಗೌರವ ಮೂಡುವುದು. ವ್ಯಾಪಾರ, ವ್ಯವಹಾರದಲ್ಲಿ ಅಧಿಕ ಲಾಭವುಂಟಾಗುವುದು.9845743807 ಅದೃಷ್ಟ ಸಂಖ್ಯೆ:5

ಕುಂಭ
'ಮಾತು ಬೆಳ್ಳಿ ಮೌನ ಬಂಗಾರ' ಜನ್ಮಸ್ಥ ಶನಿಯು ಕೆಲವೊಮ್ಮೆ ಸುಳ್ಳುಗಳನ್ನು ನುಡಿಸುವನು. ಇದರಿಂದ ಸುತ್ತಲಿನ ಪರಿಸರದ ಮೇಲೆ ಪರಿಣಾಮ ಬೀರುವುದು. ಹಾಗಾಗಿ ಮೌನ ವಹಿಸುವುದು ಒಳ್ಳೆಯದು. ಹಣಕಾಸಿನ ವಿಚಾರದಲ್ಲಿ ಎಚ್ಚರ ಇರಲಿ. ಅಗತ್ಯಕ್ಕಿಂತಲೂ ಹೆಚ್ಚು ಖರ್ಚು ಮಾಡುವ ಸಂದರ್ಭ ಎದುರಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಇರಲಿ. ಮನದಲ್ಲಿ ದುರ್ಗಾ ದೇವಿ ಜಪ ಮಾಡಿ.9845743807 ಅದೃಷ್ಟ ಸಂಖ್ಯೆ:2

ಮೀನ
ಹಲವು ವಿಚಾರಗಳಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸಬೇಕಾಗುವುದು. ಆದಾಗ್ಯೂ ಕರ್ತವ್ಯದಲ್ಲಿನ ನಿಮ್ಮ ನಿಷ್ಠೆಯು ಸಾಮಾಜಿಕವಾಗಿ ಗೌರವಿಸಲ್ಪಡುವುದು. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ.
ಅಲೆದಾಡುವ ಶ್ರಮವೇ ಜಾಸ್ತಿ. ಆದರೂ ನಿರಾಶಾರಾಗದಿರಿ. ಇದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವುದು. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ನಿಮಗೆ ಅನುಕೂಲವಾಗುವುದು.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ, ಕುಜದೋಷಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp



Click it and Unblock the Notifications











