Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ವೃಶ್ಚಿಕದಲ್ಲಿ ಸೂರ್ಯ-ಬುಧನ ಸಂಯೋಗ: ಈ 4 ರಾಶಿಗಳಿಗೆ ಶುಭ ಯೋಗ
ಜ್ಯೋತಿಷ್ಯ ಪ್ರಕಾರ ಈ ನವೆಂಬರ್ ತಿಂಗಳು ವಿಶೇಷವಾದದ್ದು. ನವೆಂಬರ್ ತಿಂಗಳಲ್ಲಿ, ಅತ್ಯಂತ ಮಂಗಳಕರವಾದ ಬುಧಾದಿತ್ಯ ಸಂಭವಿಸಿದೆ. ನವೆಂಬರ್ 21 ರಂದು ಬುಧ ಗ್ರಹವು ವೃಶ್ಚಿಕ ರಾಶಿಯನ್ನು ಪ್ರವೇಶಿಸಿದೆ. ಅದಕ್ಕಿಂತ ಮೊದಲು ನವೆಂಬರ್ 16 ರಿಂದ ಸೂರ್ಯನು ವೃಶ್ಚಿಕ ರಾಶಿಯಲ್ಲಿ ಸಾಗುತ್ತಿದ್ದಾನೆ. ಸೂರ್ಯ ಮತ್ತು ಬುಧದ ಈ ಸಂಯೋಗವನ್ನು ಬುಧಾದಿತ್ಯ ಯೋಗ ಎಂದು ಕರೆಯಲಾಗುತ್ತದೆ. ಡಿಸೆಂಬರ್ 10ರವರೆಗೆ ಈ ಯೋಗ ಇರಲಿದೆ.

ಈ ಯೋಗವು ಎಲ್ಲಾ ರಾಶಿಯ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಕೆಲವೊಂದು ರಾಶಿಗಳಿಗೆ ತುಂಬಾನೇ ಒಳ್ಳೆಯದು. ಯಾವ ರಾಶಿಯವರಿಗೆ ಬುಧಾದಿತ್ಯ ಯೋಗವು ಮಂಗಳಕರವಾಗಿದೆ ಎಂದು ನೋಡೋಣ ಬನ್ನಿ:

ಸಿಂಹ ರಾಶಿ
ಸಿಂಹ ರಾಶಿಯವರಿಗೆ ಬುಧಾದಿತ್ಯ ಯೋಗವು ಶುಭ ಯೋಗವನ್ನುಂಟು ಮಾಡುವುದು. ಸಿಂಹ ರಾಶಿಯವರು ಈ ಯೋಗದಲ್ಲಿ ಉದ್ಯೋಗ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಹೆಚ್ಚಳ ಅಥವಾ ಬಡ್ತಿಯ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಬೆಂಬಲ ಸಿಗುತ್ತದೆ ಮತ್ತು ಆರೋಗ್ಯವೂ ಉತ್ತಮವಾಗಿರುತ್ತದೆ.

ಕನ್ಯಾರಾಶಿ
ಕನ್ಯಾ ರಾಶಿಯವರಿಗೆ ಕೂಡ ಬುಧಾದಿತ್ಯ ಯೋಗ ಮಂಗಳಕರವಾಗಿದೆ. ಈ ಯೋಗದಿಂದ ಕನ್ಯಾ ರಾಶಿಯವರಿಗೆ ಸಂವಹನ ಕೌಶಲ್ಯ ಹೆಚ್ಚಾಗುವುದರಿಂದ ಸಾಮಾಜಿಕ ಮೌಲ್ಯ, ಪ್ರತಿಷ್ಠೆ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸಿನ ಎಲ್ಲಾ ಸಾಧ್ಯತೆಗಳಿವೆ. ನಿಮ್ಮ ಯಶಸ್ಸಿನಲ್ಲಿ ನಿಮ್ಮನ್ನು ಬೆಂಬಲಿಸುವ ಕ್ಷೇತ್ರದಲ್ಲಿ ಹೊಸ ಸಹೋದ್ಯೋಗಿಗಳು ಇರುತ್ತಾರೆ.

ಕುಂಭ ರಾಶಿ
ಬುಧ ಮತ್ತು ಸೂರ್ಯನ ಸಂಯೋಗದ ಈ ಬುಧಾದಿತ್ಯ ಯೋಗವು ಕುಂಭ ರಾಶಿಯವರಿಗೆ ಒಳ್ಳೆಯ ಸುದ್ದಿಯನ್ನೂ ತರುತ್ತಿದೆ. ಕಠಿಣ ಪರಿಶ್ರಮದ ಫಲವನ್ನು ನೀವು ಖಂಡಿತವಾಗಿ ಪಡೆಯುತ್ತೀರಿ, ಕೆಲಸದ ಸ್ಥಳದಲ್ಲಿ ಗೌರವವು ಹೆಚ್ಚಾಗುತ್ತದೆ. ಹಣಕಾಸಿನ ಲಾಭಕ್ಕಾಗಿ ಅವಕಾಶಗಳು ದೊರೆಯುತ್ತವೆ.

ಮೀನ ರಾಶಿ
ಮೀನ ರಾಶಿಯವರಿಗೆ ಬುಧಾದಿತ್ಯ ಯೋಗವು ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ತಂದು ಕೊಡುತ್ತದೆ. ಹೂಡಿಕೆ, ವ್ಯಾಪಾರ, ಉದ್ಯೋಗ ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸು ಸಿಗಲಿದೆ. ಕುಟುಂಬ ಮತ್ತು ವೈವಾಹಿಕ ಸಂಬಂಧಗಳಲ್ಲಿಯೂ ಮಧುರತೆ ಇರುತ್ತದೆ, ಎಲ್ಲರ ಸಹಕಾರ ಸಿಗುತ್ತದೆ.



Click it and Unblock the Notifications
