Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಆಗಸ್ಟ್ 21ರವರೆಗೆ ಬುಧ-ಆದಿತ್ಯ ಯೋಗ: ಈ 4 ರಾಶಿಯವರು ಈ ಅವಧಿಯಲ್ಲಿ ಮಾಡಿದ ಕಾರ್ಯಕ್ಕೆ ಯಶಸ್ಸು ಖಚಿತ
ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧ-ಆದಿತ್ಯ ಯೋಗವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಈ ಶುಭ ಯೋಗದಲ್ಲಿ ಮಾಡಿದ ಕಾರ್ಯಗಳು ತುಂಬಾ ಫಲವನ್ನು ನೀಡುತ್ತದೆ, ಯಾಕೆಂದರೆ ಇದು ತುಂಬಾ ಶುಭಕರವೆಂಬುವುದು ಜ್ಯೋತಿಷ್ಯ ಶಾಸ್ತ್ರದ ನಂಬಿಕೆ.

ಈ ಸಮಯದಲ್ಲಿ ಮಾಡುವ ಕಾರ್ಯದಲ್ಲಿ ಯಶಸ್ಸು ಸಿಗುವುದು. ಆಗಸ್ಟ್ 1 ಬುಧನು ಸಿಂಹ ರಾಶಿಗೆ ಪ್ರವೇಶಿಸಿದೆ, ಇದೀಗ ಆಗಸ್ಟ್ 17ಕ್ಕೆ ಸೂರ್ಯ ಸಂಚಾರವಾಗಿದೆ. ಬುಧ ದೇವ ಯಾವುದೇ ರಾಶಿಯಲ್ಲಿ ಸೂರ್ಯನೊಂದಿಗೆ ಒಟ್ಟಿಗೆ ಇದ್ದಾಗ, ಆ ಸಂದರ್ಭದಲ್ಲಿ ಬುಧಾದಿತ್ಯ ಯೋಗವು ರೂಪುಗೊಳ್ಳುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಆಗಸ್ಟ್ 17 ರಿಂದ 21 ರವರೆಗೆ ಸಿಂಹ ರಾಶಿಯಲ್ಲಿ ಬುಧಾದಿತ್ಯ ಯೋಗದ ವಿಶೇಷ ಸಂಯೋಜನೆಯು ಸಿಂಹ ರಾಶಿಯಲ್ಲಿ ರೂಪುಗೊಂಡಿದೆ.
ಸಿಂಹ ರಾಶಿಯಲ್ಲಿ ಬುಧ-ಆದಿತ್ಯ ಯೋಗ ಈ ರಾಶಿಗಳಿಗೆ ತುಂಬಾ ಯೋಗಕಾರಕವಾಗಿದೆ, ಈ ಸಮಯದಲ್ಲಿ ನೀವು ಮಾಡಿದ ಕಾರ್ಯದಲ್ಲಿ ಯಶಸ್ಸು ಕಾಣುವಿರಿ:

ಮೇಷ ರಾಶಿ
ಬುಧ-ಆದಿತ್ಯ ಯೋಗವು ಮೇಷ ರಾಶಿಯವರಿಗೆ ವಿಶೇಷವೆಂದು ನಂಬಲಾಗಿದೆ. ಈ ವೇಳೆ ಸ್ಥಗಿತಗೊಂಡಿರುವ ಕೆಲಸದಲ್ಲಿ ಪ್ರಗತಿ ಕಾಣಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನೀವು ಹೊಸ ಉದ್ಯೋಗ ಪ್ರಸ್ತಾಪವನ್ನು ಪಡೆಯಬಹುದು. ಉದ್ಯಮಿ ವ್ಯವಹಾರದಲ್ಲಿ ಲಾಭ ಗಳಿಸಬಹುದು. ಇದರೊಂದಿಗೆ ಬುಧಾದಿತ್ಯ ಯೋಗದಿಂದ ಜೀವನದಲ್ಲಿ ಧನಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ಕರ್ಕ ರಾಶಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ-ಆದಿತ್ಯ ಯೋಗದ ಮಂಗಳಕರ ಪರಿಣಾಮವು ಕರ್ಕ ರಾಶಿಯ ಮೇಲೂ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ನೀವು ಯಾವುದೇ ನಿರ್ದಿಷ್ಟ ಕೆಲಸದಲ್ಲಿ ಯಶಸ್ಸನ್ನು ಪಡೆಯಬಹುದು. ಕೆಲಸದ ಸ್ಥಳದಲ್ಲಿ ಅಧಿಕಾರಿಗಳ ಬೆಂಬಲವು ಸಾಕಷ್ಟು ಇರುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಾಗಬಹುದು.

ಸಿಂಹ ರಾಶಿ
ಉದ್ಯೋಗದಲ್ಲಿ ಹಠಾತ್ ಹಣದ ಲಾಭವಿದೆ. ಬಹಳ ದಿನಗಳಿಂದ ಸ್ಥಗಿತವಾಗಿದ್ದ ವ್ಯಾಪಾರ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ಆರ್ಥಿಕ ಪ್ರಗತಿಗೆ ಹಲವು ಮಾರ್ಗಗಳಿವೆ. ಕೆಲಸದ ಸ್ಥಳದಲ್ಲಿ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಸ್ಥಾಪಿಸಲಾಗುವುದು. ಸಾಮಾಜಿಕ ಪ್ರತಿಷ್ಠೆ ಹೆಚ್ಚಲಿದೆ.

ಮಕರ ರಾಶಿ
ಮಕರ ರಾಶಿಯ ಸ್ಥಳೀಯರು ಬುಧಾದಿತ್ಯ ಯೋಗದಿಂದ ಲಾಭ ಪಡೆಯಬಹುದು. ಈ ಅವಧಿಯಲ್ಲಿ, ನೀವು ಯಾವುದೇ ಹಳೆಯ ವಿವಾದವನ್ನು ತೊಡೆದುಹಾಕಬಹುದು. ಇದರೊಂದಿಗೆ, ಈ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ಹೊಸ ಉದ್ಯೋಗ ಪ್ರಸ್ತಾಪವನ್ನು ಕಾಣಬಹುದು. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಕಂಡುಬರಲಿದೆ.



Click it and Unblock the Notifications
