For Quick Alerts
ALLOW NOTIFICATIONS  
For Daily Alerts

ಮಂಗಳವಾರದ ದಿನ ಭವಿಷ್ಯ (19-11-2019)

|

ಮಂಗಳವಾರದ ದಿನ ಅಂದರೆ ನವಗ್ರಹಗಳಲ್ಲಿ ಒಬ್ಬರಾದ ಮಂಗಳನ ದಿನ. ಈತನನ್ನೇ ಕುಜ ಎಂದು ಕರೆಯಲಾಗುತ್ತದೆ. ಅಂಗಾರಕನೆಂದು ಈತನನ್ನೇ ಕರೆಯಲಾಗುವುದು.ಪುರಾಣಗಳ ಪ್ರಕಾರ ಕುಜ ಎಂದರೆ ವಿಪತ್ತುಗಳನ್ನು ಉಂಟು ಮಾಡುವನು. ಪುರಾಣಗಳಲ್ಲಿ ವಿಶೇಷವಾದ ಧಾರ್ಮಿಕವಾದ ಪ್ರಾಮುಖ್ಯತೆಯಿದೆ.

Dina Bhavishya

ಮಂಗಳವಾರ ಸಾಮಾನ್ಯವಾಗಿ ಕಾಳಿ, ಗಣಪತಿ,ಆದಿಶಕ್ತಿಯನ್ಶು ಆರಾಧನೆಯನ್ನು ಮಾಡುತ್ತಾರೆ.ಮಂಗಳವಾರದ ದಿನವು ದೈವವನ್ನು ಆರಾಧಿಸುತ್ತಾ ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ದಿನದ ಭವಿಷ್ಯವನ್ನು ತಿಳಿಯೋಣ.

ಮೇಷ ರಾಶಿ

ಮೇಷ ರಾಶಿ

ಇಂದು ನೀವು ಭಾವನಾತ್ಮಕವಾಗಿ ದುರ್ಬಲರಾಗುತ್ತೀರಿ ಮತ್ತು ಸಣ್ಣ ವಿಷಯವೂ ನಿಮ್ಮ ಭಾವನೆಗಳನ್ನು ಘಾಸಿಗೊಳಿಸಬಹುದು. ಆದ್ದರಿಂದ ಭಾವನೆಗಳನ್ನು ನಿಯಂತ್ರಿಸಿ ಇಲ್ಲದಿದ್ದರೆ ದಿನ ವ್ಯರ್ಥವಾಗಬಹುದು. ಕುಟುಂಬಕ್ಕೆ ಸಂಬಂಧಿಸಿದ ನಿರ್ಧಾರವನ್ನು ತೆಗೆದುಕೊಳ್ಳವ ವೇಳೆ ಬಹಳ ಎಚ್ಚರದಿಂದಿರಿ. ಕಾರಣ ಭವಿಷ್ಯದಲ್ಲಿ ಈ ನಿರ್ಧಾರ ನಿಮ್ಮ ಇಡೀ ಕುಟುಂಬದ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಹಣ ದೀರ್ಘಕಾಲ ಸಿಲುಕಿಕೊಂಡಿದ್ದರೆ ಇಂದು ಮರಳಿ ಪಡೆಯುವ ಸಾಧ್ಯತೆಗಳಿವೆ. ಇಂದು ಕಚೇರಿಯಲ್ಲಿ ಒಂದು ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸಲು ನೀವು ಶ್ರಮಿಸಬೇಕಾಗಬಹುದು.

ಅದೃಷ್ಟ ಬಣ್ಣ: ಕಂದು

ಅದೃಷ್ಟ ಸಂಖ್ಯೆ: 29

ಅದೃಷ್ಟ ಸಮಯ: ಸಂಜೆ 5:30 ರಿಂದ 9:50 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ವ್ಯಾಪಾರಿಗಳಿಗೆ ದಿನ ಈ ದಿನ ಬಹಳ ಮುಖ್ಯವಾಗಿರುತ್ತದೆ. ನೀವು ಇತ್ತೀಚೆಗೆ ಕಾನೂನು ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಇಂದು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು, ಸಮಸ್ಯೆಗಳಿಂದ ಹೊರಬರಬಹುದು. ಉದ್ಯೋಗಿಗಳಿಗೆ ದಿನವು ಅಷ್ಟು ಉತ್ತಮವಾಗಿಲ್ಲ, ಸೋಮಾರಿತನದಿಂದಾಗಿ ನಿಮ್ಮ ಕೆಲಸದ ಮೇಲೆ ಗಮನ ಹರಿಸುವುದಿಲ್ಲ. ಇಂತಹ ನಿರ್ಲಕ್ಷ್ಯವನ್ನು ತಪ್ಪಿಸುವುದು ಉತ್ತಮ. ಇಂದು ನಿಮ್ಮ ಗ್ರಹಗಳ ಪುನರಚನೆಯಿಂದಾಗಿ ನಿಮ್ಮ ಮನಸ್ಸು ಆಲೋಚನೆಗಳಿಂದ ತುಂಬಿರುತ್ತದೆ. ಈ ಪರಿಸ್ಥಿತಿಯಲ್ಲಿ, ತಾಳ್ಮೆಯಿಂದ ಕೆಲಸ ಮಾಡಿ. ಆರ್ಥಿಕ ಪರಿಸ್ಥಿತಿಗಳು ಸುಧಾರಿಸುತ್ತವೆ. ಮನೆಯಲ್ಲಿ ವಾತಾವರಣ ಶಾಂತಿಯುತವಾಗಿರುತ್ತದೆ ಮತ್ತು ಕುಟುಂಬ ಸದಸ್ಯರೊಂದಿಗಿನ ಸಂಬಂಧ ಸುಧಾರಿಸುತ್ತದೆ.

ಅದೃಷ್ಟ ಬಣ್ಣ: ಕೇಸರಿ

ಅದೃಷ್ಟ ಸಂಖ್ಯೆ: 9

ಅದೃಷ್ಟ ಸಮಯ: ಬೆಳಿಗ್ಗೆ 8:25 ರಿಂದ ಮಧ್ಯಾಹ್ನ 12:55

ಮಿಥುನ ರಾಶಿ

ಮಿಥುನ ರಾಶಿ

ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇಂದು ಆ ಸಮಸ್ಯೆಗಳನ್ನು ತೊಡೆದುಹಾಕಬಹುದು ಮತ್ತು ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಾಕಷ್ಟು ಸಮಯವನ್ನು ಕಳೆಯಲು ಸಾಧ್ಯವಾಗುತ್ತದೆ. ಕೆಲಸದ ಸ್ಥಳದಲ್ಲಿ ಉದ್ಯೋಗಿಗಳು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿ ಇರುತ್ತದೆ ಮತ್ತು ನಿರೀಕ್ಷೆಯಂತೆ ಸಂಗಾತಿಯಿಂದ ಬೆಂಬಲವನ್ನು ಪಡೆಯುತ್ತೀರಿ, ಅದು ನಿಮಗೆ ಸಂತೋಷವನ್ನು ನೀಡುತ್ತದೆ. ಇಂದು ಸಾಲ ನೀಡುವುದನ್ನು ತಪ್ಪಿಸಿ. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದೀರಿ, ಆದ್ದರಿಂದ ಆರೋಗ್ಯದ ದೃಷ್ಟಿಯಿಂದ ದಿನವು ಒಳ್ಳೆಯದು.

ಅದೃಷ್ಟ ಬಣ್ಣ: ಕೆಂಪು

ಅದೃಷ್ಟ ಸಂಖ್ಯೆ: 17

ಅದೃಷ್ಟ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 1:30 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ದಿನವು ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿಂದ ಕೂಡಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ವಿವಾದಗಳು ಸಮಸ್ಯೆಯನ್ನು ಉಂಟುಮಾಡಬಹುದು ಮತ್ತು ಅವುಗಳನ್ನು ನಿವಾರಿಸಲು ನಿಮಗೆ ತುಂಬಾ ಕಷ್ಟವಾಗುತ್ತದೆ. ನಿರುದ್ಯೋಗಿಗಳಾಗಿದ್ದರೆ ಸಾಕಷ್ಟು ಹೋರಾಟಗಳ ನಂತರ ಇಂದು ಉದ್ಯೋಗ ಪಡೆಯುವ ಸಾಧ್ಯತೆಯಿದೆ. ಉತ್ತಮ ಕಂಪನಿಯಲ್ಲಿ ಉತ್ತಮ ಸ್ಥಾನವನ್ನು ಸಹ ನಿರೀಕ್ಷಿಸಲಾಗಿದೆ. ವ್ಯಾಪಾರಸ್ಥರಾಗಿದ್ದರೆ ಹಣಕಾಸಿನ ಸಮಸ್ಯೆಯಿಂದಾಗಿ ಸಿಲುಕಿಕೊಂಡಿದ್ದ ವಿಷಯಗಳನ್ನು ಇಂದು ಪರಿಹರಿಸಲಾಗುವುದು ಮತ್ತು ನಿಮ್ಮ ಹಣವನ್ನು ಮರಳಿ ಪಡೆಯಬಹುದು. ಆರೋಗ್ಯ ಸಂಬಂಧಿ ಇಂದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪಡೆಯಬಹುದು.

ಅದೃಷ್ಟ ಬಣ್ಣ: ಗಾಢ ನೀಲಿ

ಅದೃಷ್ಟ ಸಂಖ್ಯೆ: 10

ಅದೃಷ್ಟ ಸಮಯ: ಸಂಜೆ 6:20 ರಿಂದ 8:20 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಪ್ರೀತಿಯ ವಿಷಯಗಳಲ್ಲಿ ದಿನವು ತುಂಬಾ ವಿಶೇಷವಾಗಿರುತ್ತದೆ, ನಿಮ್ಮ ಸಂಗಾತಿಯಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ಇದು ನಿಮ್ಮಿಬ್ಬರ ನಡುವಿನ ಬಂಧ ಹೆಚ್ಚಿಸುತ್ತದೆ. ಕೆಲಸದ ಸ್ಥಳದಲ್ಲಿ ನೀವು ಇಂದು ಸ್ವಲ್ಪ ನಿರಾಶೆ ಅನುಭವಿಸಬಹುದು. ಸಾಕಷ್ಟು ಕಠಿಣ ಪರಿಶ್ರಮದ ನಂತರವೂ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತಿಲ್ಲ ಎಂದು ಭಾವಿಸುವಿರಿ. ಇದು ನಿಮ್ಮ ಕೆಲಸವನ್ನು ಬದಲಾಯಿಸಲು ಪ್ರೇರಣೆ ನೀಡಬಹುದು ಆದರೆ ಈ ಪರಿಸ್ಥಿತಿಯಲ್ಲಿ ನೀವು ಶಾಂತವಾಗಿ ಮತ್ತು ಸಕಾರಾತ್ಮಕವಾಗಿರಬೇಕು. ನಿಮ್ಮ ಸಾಮರ್ಥ್ಯವನ್ನು ನಂಬಿರಿ, ಸಕಾರಾತ್ಮಕವಾಗಿ ಯೋಚಿಸಿ ಮತ್ತು ಶ್ರಮವಹಿಸಿ. ಹಣಕಾಸಿನ ಪರಿಸ್ಥಿತಿಗಳು ಸಾಮಾನ್ಯವಾಗಿಯೇ ಇರುತ್ತವೆ. ನಿಮ್ಮ ಬಜೆಟ್ ಅನ್ನು ಅಸಮತೋಲನಗೊಳಿಸುವುದರಿಂದ ಹೆಚ್ಚಿನ ಖರ್ಚು ಮಾಡುವುದನ್ನು ತಪ್ಪಿಸಿ. ನೀವು ಇಂದು ದುರ್ಬಲರಾಗಿರಬಹುದು.

ಅದೃಷ್ಟ ಬಣ್ಣ: ಕ್ರೀಮ್

ಅದೃಷ್ಟ ಸಂಖ್ಯೆ: 4

ಅದೃಷ್ಟ ಸಮಯ: ಮಧ್ಯಾಹ್ನ 2:30 ರಿಂದ 4:00 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ಆರಂಭದಲ್ಲಿ ಮನಸ್ಸಿನಲ್ಲಿ ನಿರಾಶೆಯ ಭಾವನೆಗಳು ಕಂಡುಬರುತ್ತವೆ, ಆದರೆ ಸಮಯ ಕಳೆದಂತೆ ವಿಷಯಗಳು ನಿಮ್ಮ ಪರವಾಗಿರುತ್ತವೆ. ಸಂಗಾತಿಯ ಬುದ್ಧಿವಂತ ನಡವಳಿಕೆಯು ಇಂದು ನಿಮ್ಮನ್ನು ಸಂತೋಷಪಡಿಸುತ್ತದೆ. ಅವರ ಸಹಾಯದಿಂದ ನೀವು ಮನೆಗೆ ಸಂಬಂಧಿಸಿದ ಯಾವುದೇ ಗಂಭೀರ ಸಮಸ್ಯೆಯನ್ನು ಸುಲಭವಾಗಿ ಪರಿಹರಿಸಬಹುದು. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಹಿರಿಯರು ನಿಮ್ಮ ಕೆಲಸದಲ್ಲಿ ತುಂಬಾ ಸಂತೋಷವಾಗುತ್ತಾರೆ. ಉದ್ಯಮಿಗಳಿಗೆ ದಿನ ಸಾಮಾನ್ಯವಾಗಿರಲಿದೆ. ನೀವು ದೊಡ್ಡ ಲಾಭವನ್ನು ಪಡೆಯಲು ಬಯಸಿದರೆ ಕಷ್ಟಪಟ್ಟು ಕೆಲಸ ಮಾಡಿ. ಆರೋಗ್ಯದ ವಿಚಾರಲ್ಲಿ ಇಂದು ನಿದ್ರಾಹೀನತೆಯಿಂದ ಬಳಲಬಹುದು.

ಅದೃಷ್ಟ ಬಣ್ಣ: ಕಿತ್ತಳೆ

ಅದೃಷ್ಟ ಸಂಖ್ಯೆ: 27

ಅದೃಷ್ಟ ಸಮಯ: ಬೆಳಿಗ್ಗೆ 8:40 ರಿಂದ ಮಧ್ಯಾಹ್ನ 12:30 ರವರೆಗೆ

ತುಲಾ ರಾಶಿ

ತುಲಾ ರಾಶಿ

ಹಣಕಾಸಿನ ವಿಷಯಗಳಲ್ಲಿ ದಿನವು ಉತ್ತಮವಾಗಿದೆ. ನಿಮ್ಮ ಕೆಲವು ಪ್ರಯತ್ನಗಳು ಯಶಸ್ವಿಯಾಗಬಹುದು ಅದು ನಿಮಗೆ ಉತ್ತಮ ಪ್ರಯೋಜನವನ್ನು ನೀಡುತ್ತದೆ. ಹಣವನ್ನು ಎಚ್ಚರಿಕೆಯಿಂದ ಬಳಸಿ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಾಮರ್ಥ್ಯವನ್ನು ನೋಡಿ ಹಿರಿಯರು ನಿಮಗೆ ಕೆಲವು ಪ್ರಮುಖ ಕೆಲಸಗಳನ್ನು ವಹಿಸಬಹುದು. ಪೂರ್ಣ ಸಮರ್ಪಣೆಯೊಂದಿಗೆ ಅದನ್ನು ಪೂರ್ಣಗೊಳಿಸಿ ಮತ್ತು ಮುಂದಿನ ದಿನಗಳಲ್ಲಿ ನೀವು ಖಂಡಿತವಾಗಿಯೂ ಪ್ರಗತಿಯನ್ನು ಪಡೆಯುತ್ತೀರಿ. ಉದ್ಯಮಿಗಳು ಸಣ್ಣ ಹೂಡಿಕೆ ಮಾಡಬಹುದು ಮತ್ತು ಲಾಭವನ್ನು ಪಡೆಯಬಹುದು. ಯಾವುದೇ ಕೆಲಸವನ್ನು ಆತುರದಿಂದ ಮಾಡುವುದನ್ನು ತಪ್ಪಿಸಿದರೆ ಒಳ್ಳೆಯದು. ನೀವು ಯಾವುದೇ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಿದರೆ, ಬುದ್ಧಿವಂತಿಕೆಯಿಂದ ವರ್ತಿಸುವಂತೆ ಸೂಚಿಸಲಾಗುತ್ತದೆ.

ಅದೃಷ್ಟ ಬಣ್ಣ: ನೇರಳೆ

ಅದೃಷ್ಟ ಸಂಖ್ಯೆ: 19

ಅದೃಷ್ಟ ಸಮಯ: ಬೆಳಿಗ್ಗೆ 9:00 ರಿಂದ ಸಂಜೆ 4:00 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ನೀವು ವಿದ್ಯಾರ್ಥಿಯಾಗಿದ್ದರೆ ಅಧ್ಯಯನಕ್ಕೆ ವಿಶೇಷ ಗಮನ ಹರಿಸಬೇಕು. ಅಮೂಲ್ಯ ಸಮಯವನ್ನು ಅನಗತ್ಯ ವಿಷಯಗಳಿಗೆ ವ್ಯರ್ಥ ಮಾಡಬೇಡಿ. ಕುಟುಂಬದ ಯಾವುದೇ ಸದಸ್ಯರ ಅನಾರೋಗ್ಯದಿಂದಾಗಿ ಇಂದು ಆಸ್ಪತ್ರೆಗೆ ಹೋಗಬೇಕಾಗಬಹುದು. ಆಸ್ಪತ್ರೆಯ ಖರ್ಚು ಬಜೆಟ್ ಅನ್ನು ಅಸಮತೋಲನಗೊಳಿಸಬಹುದು ಮತ್ತು ನಿಮ್ಮ ಒತ್ತಡವನ್ನು ಹೆಚ್ಚಿಸಬಹುದು. ಇಂದು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮಿಗಳಿಗೆ ದಿನವೂ ಒಳ್ಳೆಯದು. ನಿಮ್ಮ ವ್ಯವಹಾರವು ಮತ್ತಷ್ಟು ಬೆಳೆಯುತ್ತದೆ. ಇಂದು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ.

ಅದೃಷ್ಟ ಬಣ್ಣ: ಹಳದಿ

ಅದೃಷ್ಟ ಸಂಖ್ಯೆ: 28

ಅದೃಷ್ಟ ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 12:05

ಧನು ರಾಶಿ

ಧನು ರಾಶಿ

ದಿನವು ಉತ್ತಮವಾಗಿರುತ್ತದೆ. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮೋಜಿನ ಸಮಯವನ್ನು ಕಳೆಯಲು ಸಾಧ್ಯವಾಗುತ್ತದೆ. ಅದು ಬಹಳ ಸಮಯದ ನಂತರ ಅಂತಹ ಸಂತೋಷವನ್ನು ಪಡೆಯುವುದರಿಂದ ನಿಮಗೆ ಹಿತ ಎನಿಸುತ್ತದೆ. ಇಂದು ನೀವು ಕೆಲವು ಪ್ರಮುಖ ಯೋಜನೆಗಳಲ್ಲಿ ಕೆಲಸ ಮಾಡಬಹುದು. ಯೋಜಿತ ರೀತಿಯಲ್ಲಿ ಮುಂದುವರಿಯಲು ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು. ನಿಮ್ಮ ವೃತ್ತಿಜೀವನದಲ್ಲಿ ಸಕಾರಾತ್ಮಕ ಸುಧಾರಣೆ ಮತ್ತು ಹಣದ ವಿಷಯದಲ್ಲಿ ಉತ್ತಮ ಯಶಸ್ಸನ್ನು ಶೀಘ್ರದಲ್ಲೇ ನೋಡುತ್ತೀರಿ. ಬ್ಯಾಂಕಿನಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರೆ, ಇಂದು ನಿಮಗೆ ಕೆಲವು ಒಳ್ಳೆಯ ಸುದ್ದಿ ಸಿಗಬಹುದು. ಇಂದು ಮಾನಸಿಕ ಶಾಂತಿ ಮತ್ತು ಸ್ಥಿರತೆಯನ್ನು ಅನುಭವಿಸುವಿರಿ.

ಅದೃಷ್ಟ ಬಣ್ಣ: ಗುಲಾಬಿ

ಅದೃಷ್ಟ ಸಂಖ್ಯೆ: 30

ಅದೃಷ್ಟ ಸಮಯ: ಮಧ್ಯಾಹ್ನ 12:20 ರಿಂದ 3:00 ರವರೆಗೆ

ಮಕರ ರಾಶಿ

ಮಕರ ರಾಶಿ

ಇಂದು ನೀವು ಒತ್ತಡದಿಂದ ಮುಕ್ತರಾಗುತ್ತೀರಿ. ಪ್ರತಿಯೊಂದು ಸಂದರ್ಭದಲ್ಲೂ ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುತ್ತೀರಿ. ಕುಟುಂಬದ ಸದಸ್ಯರೊಂದಿಗಿನ ಸಂಬಂಧದಲ್ಲಿ ಸ್ವಲ್ಪ ಕಹಿ ಇದ್ದರೆ ಇಂದು ಎಲ್ಲವೂ ಸಾಮಾನ್ಯವಾಗುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ ಮತ್ತು ಅವರು ಪ್ರತಿ ಕೆಲಸದಲ್ಲೂ ನಿಮ್ಮನ್ನು ಬೆಂಬಲಿಸುತ್ತಾರೆ. ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಬೇಕೆಂದು ಅನಿಸುತ್ತದೆ. ಅನೇಕ ದಿನಗಳಿಂದ ನೀವು ಯಶಸ್ಸನ್ನು ಪಡೆಯುತ್ತಿರಲಿಲ್ಲ ಆದರೆ ಇಂದು, ನಿಮ್ಮ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸಲಾಗುವುದು.

ಅದೃಷ್ಟ ಬಣ್ಣ: ಮರೂನ್

ಅದೃಷ್ಟ ಸಂಖ್ಯೆ: 7

ಅದೃಷ್ಟ ಸಮಯ: ಸಂಜೆ 4:00 ರಿಂದ 8:20 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ವೈವಾಹಿಕ ಜೀವನದಲ್ಲಿ ಘರ್ಷಣೆಗಳು ಉಂಟಾಗಬಹುದು. ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ ಏಕೆಂದರೆ ವಿಷಯಗಳು ಇನ್ನಷ್ಟು ಹದಗೆಡಬಹುದು. ಅಂತಹ ಸಮಸ್ಯೆಗಳು ನಿಮ್ಮ ಮನಸ್ಸಿನ ಶಾಂತಿಯನ್ನು ಕಸಿದುಕೊಳ್ಳಬಹುದು ಮತ್ತು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರಬಹುದು. ಈ ಕಾರಣದಿಂದಾಗಿ, ನೀವು ಇಂದು ಒತ್ತಡಕ್ಕೆ ಒಳಗಾಗುತ್ತೀರಿ ಮತ್ತು ನಿಮ್ಮ ಕೆಲವು ಕೆಲಸಗಳು ಇಂದು ಅಪೂರ್ಣವಾಗಿ ಉಳಿಯಬಹುದು. ತಂದೆಯ ಆರೋಗ್ಯ ಕ್ಷೀಣಿಸಬಹುದು, ಈ ಸಮಯದಲ್ಲಿ ಅವರಿಗೆ ಉತ್ತಮ ಕಾಳಜಿ ಬೇಕು. ಇಂದು ಹೂಡಿಕೆ ಮಾಡಲು ನಿಮಗೆ ಅವಕಾಶ ಸಿಕ್ಕರೆ ನಿಮ್ಮ ಹಣಕಾಸು ಸಲಹೆಗಾರರನ್ನು ಸಂಪರ್ಕಿಸಿದ ನಂತರವೇ ಯಾವುದೇ ನಿರ್ಧಾರ ತೆಗೆದುಕೊಳ್ಳಿ. ಇಂದು ಶೀತವಾಗಬಹುದು ಎಚ್ಚರವಾಗಿರಿ.

ಅದೃಷ್ಟ ಬಣ್ಣ: ಹಳದಿ

ಅದೃಷ್ಟ ಸಂಖ್ಯೆ: 20

ಅದೃಷ್ಟ ಸಮಯ: ಬೆಳಿಗ್ಗೆ 8:00 ರಿಂದ 12:30 ರವರೆಗೆ

ಮೀನ ರಾಶಿ

ಮೀನ ರಾಶಿ

ಕೆಲಸದ ಸ್ಥಳದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ ಮತ್ತು ಹಿರಿಯರು ನಿಮ್ಮ ಕೆಲಸದಲ್ಲಿ ತುಂಬಾ ಸಂತೋಷವಾಗುತ್ತಾರೆ. ವ್ಯಾಪಾರಸ್ಥರು ಶೀಘ್ರದಲ್ಲೇ ಕೆಲವು ಹಳೆಯ ಹೂಡಿಕೆಯ ಲಾಭವನ್ನು ಪಡೆಯಬಹುದು. ನಿಮ್ಮ ವ್ಯವಹಾರ ವಿಸ್ತರಿಸುವ ಕನಸುಗಳು ಈಡೇರಬಹುದು. ಕುಟುಂಬದಲ್ಲಿ ಸ್ವಲ್ಪ ಒತ್ತಡ ಇರುತ್ತದೆ. ಆಸ್ತಿಗೆ ಸಂಬಂಧಿಸಿದ ವಿಷಯಗಳು ಕುಟುಂಬ ಸದಸ್ಯರ ನಡುವೆ ವಿವಾದಗಳಿಗೆ ಕಾರಣವಾಗಬಹುದು. ಈ ಸಮಯದಲ್ಲಿ ನೀವು ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕು ಮತ್ತು ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ಆರೋಗ್ಯದ ವಿಚಾರದಲ್ಲಿ ಮನಸ್ಸು ತೊಂದರೆಗೀಡಾಗುತ್ತದೆ ಅದು ಆರೋಗ್ಯದ ಪರಿಣಾಮ ಬೀರುತ್ತದೆ.

ಅದೃಷ್ಟ ಬಣ್ಣ: ಕೆಂಪು

ಅದೃಷ್ಟ ಸಂಖ್ಯೆ: 8

ಅದೃಷ್ಟ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 3:00 ರವರೆಗೆ

English summary

Daily Horoscope 19 Nov 2019 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Monday, November 18, 2019, 18:04 [IST]
X
Desktop Bottom Promotion