For Quick Alerts
ALLOW NOTIFICATIONS  
For Daily Alerts

ಶುಕ್ರವಾರದ ದಿನ ಭವಿಷ್ಯ (25-10-2019)

|

ಬದುಕು ಎನ್ನುವುದು ಒಂದು ನದಿ ಇದ್ದ ಹಾಗೆ. ಕೊನೆ ಇಲ್ಲದ ಪಯಣ. ಈ ಪಯಣದ ಮಧ್ಯೆ ಏನೆಲ್ಲಾ ಸಿಗುತ್ತದೆಯೋ ಅದೆಲ್ಲವನ್ನೂ ಜೊತೆಯಲ್ಲಿಯೇ ಕರೆದೊಯ್ಯುತ್ತದೆ. ಹಾಗಂತ ಯಾವುದೂ ಕೊನೆಯವರೆಗೆ ಉಳಿಯುವುದಿಲ್ಲ. ನಿಜ, ಜೀವನದ ಪಯಣದುದ್ದಕ್ಕೂ ಸಿಕಿ ಕಹಿ ಘಟನೆಗಳು ಹಾಗೂ ವ್ಯಕ್ತಿಗಳು ಸಿಗುತ್ತಾರೆ. ಅವು ಯಾವುದೂ ಶಾಶ್ವತವಾಗಿ ನಮ್ಮೊಂದಿಗೆ ಉಳಿಯುವುದಿಲ್ಲ. ನಮ್ಮೊಂದಿಗೆ ಬಂದ ವ್ಯಕ್ತಿಗಳು ಹಾಗೂ ಅನುಭವಿಸಿದ ಸನ್ನಿವೇಶಗಳ ಅನುಭವ ಹಾಗೂ ನೆನಪುಗಳು ಮಾತ್ರವೇ ನಮ್ಮೊಂದಿಗೆ ಉಳಿದುಕೊಳ್ಳುತ್ತವೆ.

ಆ ಅನುಭವಗಳೇ ಜೀವನ ಎಂದರೇನು? ಎನ್ನುವ ಪಾಠವನ್ನು ಹೇಳಿಕೊಡುತ್ತವೆ. ಶುಕ್ರವಾರವಾದ ಈ ಶುಭ ದಿನ ಆ ಮಹಾ ಲಕ್ಷ್ಮಿಯು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಯಾವೆಲ್ಲಾ ಬದಲಾವಣೆಯನ್ನು ತರುತ್ತಾಳೆ? ನಿಮ್ಮ ಜೀವನದ ಪಯಣದಲ್ಲಿ ಯಾವೆಲ್ಲಾ ಘಟನೆಗಳು ನಡೆಯಬಹುದು? ಎನ್ನುವುದನ್ನು ನೀವು ತಿಳಿದು ಕೊಳ್ಳಬೇಕೆಂದುಕೊಂಡಿದ್ದರೆ, ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ಈ ಮುಂದಿನ ರಾಶಿ ಭವಿಷ್ಯವನ್ನು ಪರಿಶೀಲಿಸಿ....

ಮೇಷ: 21 ಮಾರ್ಚ್ - 19 ಏಪ್ರಿಲ್

ಮೇಷ: 21 ಮಾರ್ಚ್ - 19 ಏಪ್ರಿಲ್

ಆರ್ಥಿಕ ವಿಷಯಕ್ಕೆ ಸಂಬಂಧಿಸಿದಂತೆ ಇಂದು ನೀವು ಜಾಗರೂಕರಾಗಿರಬೇಕು. ನಿಮ್ಮ ಆದಾಯ ಹಾಗೂ ಖರ್ಚುಗಳ ನಡುವೆ ಸಮತೋಲನ ಇರುವಂತೆ ನೋಡಿಕೊಳ್ಳಬೇಕು. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷವಿರುತ್ತದೆ. ಸಂಗಾತಿಯೊಂದಿಗೆ ಸಂಬಂಧವು ಉತ್ತಮವಾಗಿರುತ್ತದೆ. ನೀವು ಪ್ರಣಯ ಜೀವನ ಪಡೆದುಕೊಳ್ಳಲು ನಿಮ್ಮ ನಡವಳಿಕೆಯನ್ನು ಸ್ವಲ್ಪ ಬದಲಾಯಿಸಬೇಕು. ಇಲ್ಲದಿದ್ದರೆ ಕಠಿಣ ಪದಗಳನ್ನು ಬಳಸುವುದನ್ನು ತಪ್ಪಿಸಿ. ಅದು ನಿಮ್ಮನ್ನು ಸಂಗಾತಿಯಿಂದ ದೂರ ಇರಿಸುವುದು. ಉದ್ಯಮಿಗಳು ಹಾಗೂ ಉದ್ಯೋಗಿಗಳು ಕೆಲಸವನ್ನು ಬದಲಾಯಿಸಲು ಉತ್ತಮ ಸಮಯವಲ್ಲ. ಸಾಧ್ಯವಾದರೆ, ಕೆಲಸದಿಂದ ವಿರಾಮ ತೆಗೆದುಕೊಂಡು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ಇಂದು ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರುತ್ತೀರಿ.

ಅದೃಷ್ಟ ಬಣ್ಣ: ಕೆಂಪು

ಅದೃಷ್ಟ ಸಂಖ್ಯೆ: 11

ಅದೃಷ್ಟ ಸಮಯ: ಮಧ್ಯಾಹ್ನ 2:00 - ಸಂಜೆ 4:00

ವೃಷಭ: 20 ಏಪ್ರಿಲ್ - 20 ಮೇ

ವೃಷಭ: 20 ಏಪ್ರಿಲ್ - 20 ಮೇ

ಪ್ರಣಯ ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸ ಬಹುದು. ಸಂಗಾತಿಗಳ ನಡುವೆ ಇರುವ ವೈಮನಸ್ಸು ದೂರವಾಗುವುದು. ಉತ್ತಮ ಸಂಭಾಷಣೆಯೊಂದಿಗೆ ಪ್ರೀತಿಯನ್ನು ಗಳಿಸುವಿರಿ. ನವ ವಿವಾಹಿತರು ಸಂಗಾತಿಯೊಂದಿಗೆಶಾಂತಿಯುತವಾದ ದಿನವನ್ನು ಕಳೆಯುವರು. ನೀವು ಇತರರ ಬಳಿ ಮಾತನಾಡುವಾಗ ನಿಮ್ಮ ಮಾತಿನ ಮೇಲೆ ನಿಯಂತ್ರಣ ಇರಬೇಕು. ಇಲ್ಲವಾದರೆ ಮೂರನೇ ವ್ಯಕ್ತಿಗಳೊಂದಿಗೆ ಅನಗತ್ಯ ಜಗಳವಾಡಬೇಕಾಗುವುದು. ಹಣದ ವಿಷಯಗಳು ಉತ್ತಮವಾಗಿರುತ್ತವೆ. ನೀವು ಐಷಾರಾಮಿ ವಸ್ತುಗಳನ್ನು ಖರೀದಿಸಬಹುದು. ವೃತ್ತಿ ಕ್ಷೇತ್ರದಲ್ಲಿ ಕೆಲವು ಅಡೆತಡೆಗಳು ತಲೆದೂರುತ್ತವೆ. ಅವುಗಳನ್ನು ನಿಭಾಯಿಸುವುದು ನಿಮಗೆ ಕಷ್ಟವಾಗುವುದು. ಉದ್ಯಮಿಗಳು ತಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ಮಾಡಬೇಕಾಗಿದೆ. ಆರೋಗ್ಯವು ಉತ್ತಮವಾಗಿರುತ್ತದೆ. ಆದರೆ ನಿರಂತರವಾಗಿ ಕೆಲಸ ಮಾಡುವುದನ್ನು ತಪ್ಪಿಸುತ್ತದೆ.

ಅದೃಷ್ಟ ಬಣ್ಣ: ಹಳದಿ

ಅದೃಷ್ಟ ಸಂಖ್ಯೆ: 20

ಅದೃಷ್ಟ ಸಮಯ: ಬೆಳಿಗ್ಗೆ 8:00 - ಮಧ್ಯಾಹ್ನ 12:30

ಮಿಥುನ: 21 ಮೇ - 20 ಜೂನ್

ಮಿಥುನ: 21 ಮೇ - 20 ಜೂನ್

ವಾಹನ ಸವಾರಿ ಮಾಡುವಾಗ ಜಾಗರೂಕರಾಗಿರಿ. ಆದಷ್ಟು ನಿಧಾನವಾಗಿ ಹೋಗಿ. ಅಪಘಾತ ಉಂಟಾಗುವ ಸಾಧ್ಯತೆಗಳಿವೆ. ಕುಟುಂಬಕ್ಕೆ ಸಂಬಂಧಿಸಿದ ದೊಡ್ಡ ವಿಷಯವನ್ನು ಇಂದು ಪರಿಹರಿಸಲಾಗುವುದು. ನಿಮ್ಮ ಕುಟುಂಬ ಸದಸ್ಯರೊಂದಿಗಿನ ಸಂಬಂಧವು ಸುಧಾರಿಸುತ್ತದೆ. ನೀವು ಎಲ್ಲರೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಸಂಗಾತಿಯೊಂದಿಗೆ ಪ್ರೀತಿ ಮತ್ತು ವಾತ್ಸಲ್ಯ ಉಳಿಯುತ್ತದೆ. ನಿಮ್ಮ ಸ್ವಭಾವದಲ್ಲಿ ಮೃದುತ್ವ ಇರುತ್ತದೆ. ಹಣಕಾಸಿನ ವಿಷಯಗಳು ಮಿಶ್ರ ಫಲಿತಾಂಶಗಳನ್ನು ನೀಡುತ್ತವೆ. ನೀವು ಹಣವನ್ನು ಸ್ವೀಕರಿಸುತ್ತೀರಿ ಆದರೆ ವೆಚ್ಚಗಳು ಸಹ ಹೆಚ್ಚಾಗಿರುತ್ತದೆ. ಹಣಕಾಸಿಗೆ ಸಂಬಂಧಿಸಿದಂತೆ ಸ್ವಂತ ನಿರ್ಣಯ ತೆಗೆದುಕೊಳ್ಳಲು ಪ್ರಯತ್ನಿಸಿ. ಇತರರ ಪ್ರಭಾವದಿಂದ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಲ್ಲ. ಏಕೆಂದರೆ ಅವರು ಶಿಕ್ಷಣದಲ್ಲಿ ಒಂದು ರೀತಿಯ ಅಡಚಣೆಯನ್ನು ಎದುರಿಸಬೇಕಾಗುತ್ತದೆ.

ಅದೃಷ್ಟ ಬಣ್ಣ: ಮರೂನ್

ಅದೃಷ್ಟ ಸಂಖ್ಯೆ: 7

ಅದೃಷ್ಟ ಸಮಯ: ಸಂಜೆ 4:00 - ರಾತ್ರಿ 8:20

ಕರ್ಕ: 21 ಜೂನ್ - 22 ಜುಲೈ

ಕರ್ಕ: 21 ಜೂನ್ - 22 ಜುಲೈ

ಕಚೇರಿಯಲ್ಲಿನ ಕೆಲಸದ ಹೊರೆ ನಿಮಗೆ ತುಂಬಾ ಆಯಾಸವನ್ನುಂಟು ಮಾಡುತ್ತದೆ. ಪಡೆದುಕೊಳ್ಳುವಲ್ಲಿ ನಿರಾಸೆಯನ್ನು ಅನುಭವಿಸುವಿರಿ. ಅದು ನಿಮಗೆ ಹೆಚ್ಚು ದುಃಖವನ್ನು ಉಂಟುಮಾಡುವುದು. ನಿಮ್ಮ ಕಾರ್ಯನಿರತ ವೇಳಾಪಟ್ಟಿಯಿಂದಾಗಿ ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಲು ಸಾಧ್ಯವಾಗುವುದಿಲ್ಲ. ಸರ್ಕಾರಿ ವ್ಯವಹಾರಗಳಲ್ಲಿ ಬುದ್ಧಿವಂತಿಕೆಯಿಂದ ವರ್ತಿಸಿ. ಉನ್ನತ ಅಧಿಕಾರಿಗಳ ಮುಂದೆ ಸರಿಯಾಗಿ ವರ್ತಿಸಿ. ಕೋಪದಿಂದ ಮಾತನಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ ಅದು ನಿಮ್ಮ ಕೆಲಸವನ್ನು ಹಾಳುಮಾಡುವುದು. ನಿಮ್ಮ ಸಂಗಾತಿಯೊಂದಿಗೆ ಕೆಲವು ಸೈದ್ಧಾಂತಿಕ ವ್ಯತ್ಯಾಸಗಳು ಉಂಟಾಗಬಹುದು. ಸಂಜೆಯ ಒಳಗೆ ಎಲ್ಲವೂ ಸಾಮಾನ್ಯ ಸ್ಥಿತಿಗೆ ತಿರುಗುವುದು. ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ಇಂದು ನಿಮ್ಮ ಪ್ರಣಯ ಜೀವನದಲ್ಲಿ ಒಳ್ಳೆಯದು ಸಂಭವಿಸಬಹುದು. ನಿಮ್ಮ ಸಂಗಾತಿಯ ಪ್ರೀತಿ ಮತ್ತು ಬೆಂಬಲವನ್ನು ನೀವು ಪಡೆಯುತ್ತೀರಿ.

ಅದೃಷ್ಟ ಬಣ್ಣ: ಗುಲಾಬಿ

ಅದೃಷ್ಟ ಸಂಖ್ಯೆ: 30

ಅದೃಷ್ಟ ಸಮಯ: ಮಧ್ಯಾಹ್ನ 12:20 - ಮಧ್ಯಾಹ್ನ 3:00

ಸಿಂಹ: 23 ಜುಲೈ - 22 ಆಗಸ್ಟ್

ಸಿಂಹ: 23 ಜುಲೈ - 22 ಆಗಸ್ಟ್

ಇಂದು ನೀವು ಕೆಲಸದ ಸ್ಥಳದಲ್ಲಿ ಕೆಲವು ಸವಾಲುಗಳನ್ನು ಎದುರಿಸಬಹುದು. ಆದರೆ ನಿಮ್ಮ ಆಶಾವಾದಿ ಸ್ವಭಾವ ಮತ್ತು ಸಾಮರ್ಥ್ಯದಿಂದಾಗಿ ಅದನ್ನು ಎದುರಿಸಲು ಸಾಧ್ಯವಾಗುತ್ತದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮತ್ತು ಪ್ರಾಮಾಣಿಕವಾಗಿ ಮಾಡಿ. ಕುಟುಂಬ ಜೀವನದಲ್ಲಿ ಕೆಲವು ಉದ್ವಿಗ್ನತೆ ಉಂಟಾಗಬಹುದು. ನಿರೀಕ್ಷೆಯಂತೆ ನಿಮ್ಮ ಕುಟುಂಬದಿಂದ ಬೆಂಬಲ ಸಿಗದಿದ್ದರೆ ನಿಮ್ಮ ದುಃಖ ಹೆಚ್ಚಾಗುತ್ತದೆ. ಈ ಸಮಸ್ಯೆಗೆ ನೀವು ಪರಿಹಾರವನ್ನು ಬಯಸಿದರೆ, ಮೊದಲು ಸಮಸ್ಯೆಯ ಮೂಲವನ್ನು ಪಡೆಯಿರಿ. ಈ ಸಮಯದಲ್ಲಿ ತಾಳ್ಮೆ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಪೋಷಕರಿಂದ ಆರ್ಥಿಕ ಲಾಭಗಳನ್ನು ಪಡೆಯುವುದರಿಂದ ನೀವು ಹಣದ ವಿಷಯದಲ್ಲಿ ಇಂದು ತುಂಬಾ ಅದೃಷ್ಟಶಾಲಿಯಾಗುತ್ತೀರಿ. ಇಂದು ನೀವು ನಿಮ್ಮ ಆರೋಗ್ಯದ ಬಗ್ಗೆ ಚಿಂತೆ ಮಾಡುತ್ತೀರಿ.

ಅದೃಷ್ಟ ಬಣ್ಣ: ಹಳದಿ

ಅದೃಷ್ಟ ಸಂಖ್ಯೆ: 28

ಅದೃಷ್ಟ ಸಮಯ: ಬೆಳಿಗ್ಗೆ 11:00 - ಮಧ್ಯಾಹ್ನ 12:05

ಕನ್ಯಾ: 23 ಆಗಸ್ಟ್ - 22 ಸೆಪ್ಟೆಂಬರ್

ಕನ್ಯಾ: 23 ಆಗಸ್ಟ್ - 22 ಸೆಪ್ಟೆಂಬರ್

ಕೆಲಸಕ್ಕೆ ಸಂಬಂಧಿಸಿದ ಕೆಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಮತ್ತು ನಿಮ್ಮ ಸಹೋದ್ಯೋಗಿ ನಡುವೆ ಬಿಸಿ ಚರ್ಚೆ ನಡೆಯಬಹುದು. ನೀವು ಯಾರೊಂದಿಗೂ ಅನಗತ್ಯವಾಗಿ ವಾದಿಸಬೇಡಿ. ವಿಷಯವನ್ನು ಶಾಂತಿಯುತವಾಗಿ ಕೊನೆಗೊಳಿಸಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದಿಲ್ಲ. ನಿಮ್ಮ ಹೆಚ್ಚುತ್ತಿರುವ ವೆಚ್ಚಗಳು ಬಜೆಟ್ ಅನ್ನು ಅಸಮತೋಲಿತ ಗೊಳಿಸುತ್ತದೆ. ಅನಿವಾರ್ಯವಲ್ಲದ ವಿಷಯಗಳಿಗೆ ಖರ್ಚು ಮಾಡುವುದನ್ನು ತಪ್ಪಿಸಿ. ಹೀಗೆ ಮುಂದುವರಿದರೆ ಶೀಘ್ರದಲ್ಲೇ ದೊಡ್ಡ ಆರ್ಥಿಕ ಬಿಕ್ಕಟ್ಟು ನಿಮ್ಮ ಮೇಲೆ ಬೀಳಬಹುದು. ವೈವಾಹಿಕ ಜೀವನವು ಆಶೀರ್ವಾದವಾಗಿ ಉಳಿಯುತ್ತದೆ. ಸಂಗಾತಿಯೊಂದಿಗೆ ಪರಸ್ಪರ ತಿಳುವಳಿಕೆ ಉತ್ತಮವಾಗಿರುತ್ತದೆ. ನಿಮ್ಮ ತಂದೆ ನಿಮ್ಮ ಬಗ್ಗೆ ನಿರಾಶೆಗೆ ಒಳಗಾಗಬಹುದು. ಅವರೊಂದಿಗೆ ಬಹಿರಂಗವಾಗಿ ಮಾತನಾಡಿ. ತಪ್ಪು ನಿಮ್ಮದಾಗಿದ್ದರೆ ಕ್ಷಮೆಯಾಚಿಸಿ.

ಅದೃಷ್ಟ ಬಣ್ಣ: ನೇರಳೆ

ಅದೃಷ್ಟ ಸಂಖ್ಯೆ: 19

ಅದೃಷ್ಟ ಸಮಯ: ಬೆಳಿಗ್ಗೆ 9:00 - ಸಂಜೆ 4:00

ತುಲಾ: 23 ಸೆಪ್ಟೆಂಬರ್ - 22 ಅಕ್ಟೋಬರ್

ತುಲಾ: 23 ಸೆಪ್ಟೆಂಬರ್ - 22 ಅಕ್ಟೋಬರ್

ನಿಮ್ಮ ಸಂಗಾತಿಯೊಂದಿಗೆ ನಡೆಯುತ್ತಿರುವ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಇಂದು ಒಳ್ಳೆಯ ದಿನ. ನೀವು ಅವರನ್ನು ಪ್ರೀತಿಯಿಂದ ಬೆಂಬಲಿಸಿದರೆ ನೀವೂ ಸಹ ಅವರ ಪ್ರೀತಿಯ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಪ್ರೇಮಿಗಳಿಗೆ ಇಂದು ಬಹಳ ಮುಖ್ಯವಾದ ದಿನ. ಅವರು ತಮ್ಮ ಸಂಬಂಧದ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು. ಆರ್ಥಿಕ ದೃಷ್ಟಿಯಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ಹಳೆಯ ಆಸ್ತಿಗೆ ಉತ್ತಮ ಖರೀದಿದಾರರು ಸಿಗುವರು. ಕೆಲಸದ ಸ್ಥಳದಲ್ಲಿ ಕೆಲವು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬಹುದು. ಕೆಲಸದ ಹೊರೆಯಿಂದಾಗಿ ನಿಮಗೆ ಒತ್ತಡ ಹೆಚ್ಚಾಗಬಹುದು. ಅಂತಹ ಸಂದರ್ಭಗಳಲ್ಲಿ ತಾಳ್ಮೆಯಿಂದಿರಿ ಮತ್ತು ಶಾಂತ ಮನಸ್ಸಿನಿಂದ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿ.

ಅದೃಷ್ಟ ಬಣ್ಣ: ಕ್ರೀಮ್

ಅದೃಷ್ಟ ಸಂಖ್ಯೆ: 4

ಅದೃಷ್ಟ ಸಮಯ: ಮಧ್ಯಾಹ್ನ 2:30 - ಸಂಜೆ 4:00

ವೃಶ್ಚಿಕ: 23 ಅಕ್ಟೋಬರ್ - 21 ನವೆಂಬರ್

ವೃಶ್ಚಿಕ: 23 ಅಕ್ಟೋಬರ್ - 21 ನವೆಂಬರ್

ಇಂದು ವಿದ್ಯಾರ್ಥಿಗಳಿಗೆ ಶುಭವಾಗಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ಸಿಗಲಿದೆ. ನೀವು ಉನ್ನತ ಶಿಕ್ಷಣವನ್ನು ಪಡೆಯುವ ಪ್ರಯತ್ನ ಮಾಡುತ್ತಿದ್ದರೆ ಇಂದು ಯಶಸ್ವಿಯಾಗುವ ಸಾಧ್ಯತೆಯಿದೆ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಇಂದು ಕೆಲಸ ಮಾಡುವಾಗ ವಿಭಿನ್ನ ರೀತಿಯ ಆನಂದವನ್ನು ಅನುಭವಿಸುವಿರಿ. ನೀವು ಕೆಲವು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಬಹುದು. ಕುಟುಂಬ ಜೀವನವು ಸಂತೋಷವಾಗಿ ಉಳಿಯುತ್ತದೆ. ನಿಮ್ಮ ಹೆತ್ತವರ ಆರೋಗ್ಯವು ತುಂಬಾ ಉತ್ತಮವಾಗಿರುತ್ತದೆ. ನೀವು ಒಟ್ಟಿಗೆ ಸಾಕಷ್ಟು ಸಮಯವನ್ನು ಕಳೆಯುತ್ತೀರಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿಯನ್ನು ನಿರೀಕ್ಷಿಸಬಹುದು. ಸಂಗಾತಿಯು ನಿಮ್ಮ ಬಗ್ಗೆ ತುಂಬಾ ಕಾಳಜಿ ವಹಿಸುತ್ತಾನೆ.

ಅದೃಷ್ಟ ಬಣ್ಣ: ಕಿತ್ತಳೆ

ಅದೃಷ್ಟ ಸಂಖ್ಯೆ: 27

ಅದೃಷ್ಟ ಸಮಯ: ರಾತ್ರಿ 8:40 - ಮಧ್ಯಾಹ್ನ 12:30

ಧನು: 22 ನವೆಂಬರ್ - 21 ಡಿಸೆಂಬರ್

ಧನು: 22 ನವೆಂಬರ್ - 21 ಡಿಸೆಂಬರ್

ಹಣದ ವಿಷಯದಲ್ಲಿ ತೊಂದರೆಗಳು ಉದ್ಭವಿಸಬಹುದು. ಉದ್ಯಮಿಗಳು ಇಂದು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ನೀವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಹಣಕಾಸಿನ ಸಮಸ್ಯೆ ಎದುರಾಗಬಹುದು. ಆದಾಗ್ಯೂ ಅಂತಹ ಪರಿಸ್ಥಿತಿಯು ಹೆಚ್ಚು ಕಾಲ ಉಳಿಯುವುದಿಲ್ಲ. ಆದ್ದರಿಂದ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಕುಟುಂಬ ಜೀವನದಲ್ಲಿ ಉದ್ವಿಗ್ನತೆ ಇರುತ್ತದೆ. ನೀವು ಕುಟುಂಬ ಸದಸ್ಯರೊಂದಿಗೆ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಅದು ನಿಮ್ಮನ್ನು ಖಿನ್ನತೆಗೆ ಒಳಪಡಿಸುತ್ತದೆ. ಸಭ್ಯ ಮತ್ತು ಮೃದು ಹೃದಯದವರಾಗಿರಿ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ಅವರ ಸಮಸ್ಯೆಗಳ ಬಗ್ಗೆ ತಿಳಿಯಿರಿ.

ಅದೃಷ್ಟದ ಬಣ್ಣ: ಗಾಢ ನೀಲಿ

ಅದೃಷ್ಟ ಸಂಖ್ಯೆ: 10

ಅದೃಷ್ಟ ಸಮಯ: ಸಂಜೆ 6:20 - ರಾತ್ರಿ 8:20

ಮಕರ: 22 ಡಿಸೆಂಬರ್ - 19 ಜನವರಿ

ಮಕರ: 22 ಡಿಸೆಂಬರ್ - 19 ಜನವರಿ

ನಿಮ್ಮ ಅನಾರೋಗ್ಯದ ಹೊರತಾಗಿಯೂ ಇಂದು ನೀವು ಎಲ್ಲಾ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ನಿಮ್ಮ ಎಲ್ಲಾ ಶ್ರಮ ಮತ್ತು ಸಮರ್ಪಣೆಯನ್ನು ನೋಡಿ ನಿಮ್ಮ ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ. ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡದಿರಿ. ನಂತರ ತೊಂದರೆ ಗಂಭೀರವಾಗಬಹುದು. ಮನೆಯಲ್ಲಿ ಶಾಂತಿಯುತ ವಾತಾವರಣವು ನಿಮಗೆ ಮಾನಸಿಕ ಸಂತೋಷವನ್ನು ನೀಡುತ್ತದೆ. ಇಂದು ಪ್ರೀತಿಪಾತ್ರರೊಡನೆ ಸಂತೋಷದಿಂದ ಸಮಯ ಕಳೆಯುತ್ತೀರಿ. ಸಂಗಾತಿಯ ಮನಸ್ಥಿತಿಯನ್ನು ಸರಿಪಡಿಸಲು ನೀವು ಇಂದು ಉಡುಗೊರೆಯನ್ನು ಖರೀದಿಸಬಹುದು. ಸಾಧ್ಯವಾದರೆ ಆಶ್ಚರ್ಯಕರ ಭೋಜನವನ್ನು ಯೋಜಿಸಿ ಅದು ನಿಮ್ಮ ಸಂಬಂಧಕ್ಕೆ ಸಂತೋಷವನ್ನು ನೀಡುತ್ತದೆ. ಪ್ರಣಯ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ನಿಕಟತೆ ಹೆಚ್ಚಾಗಬಹುದು. ಇಂದು ನೀವು ನಿಮ್ಮ ಭಾವನೆಗಳನ್ನು ಪರಸ್ಪರ ಬಹಿರಂಗವಾಗಿ ವ್ಯಕ್ತಪಡಿಸುತ್ತೀರಿ. ಹಣ ಇಂದು ಉತ್ತಮ ಸ್ಥಿತಿಯಲ್ಲಿರುತ್ತದೆ.

ಅದೃಷ್ಟ ಬಣ್ಣ: ಕೆಂಪು

ಅದೃಷ್ಟ ಸಂಖ್ಯೆ: 17

ಅದೃಷ್ಟ ಸಮಯ: ರಾತ್ರಿ 9 - ಮಧ್ಯಾಹ್ನ 1:30

ಕುಂಭ: 20 ಜನವರಿ - 18 ಫೆಬ್ರವರಿ

ಕುಂಭ: 20 ಜನವರಿ - 18 ಫೆಬ್ರವರಿ

ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮ ದಿನವನ್ನು ಪೂರ್ಣವಾಗಿ ಆನಂದಿಸುವಿರಿ. ವೈಯಕ್ತಿಕ ಮತ್ತು ವೃತ್ತಿಪರ ಜೀವನ ಉತ್ತಮ ವಾಗಿರುತ್ತದೆ. ನಿಮ್ಮ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದ ಮುಂಭಾಗದಲ್ಲಿ ಯಶಸ್ಸನ್ನು ನಿರೀಕ್ಷಿಸಬಹುದು. ಸಮಯಕ್ಕೆ ಸರಿಯಾಗಿ ಕೆಲಸವನ್ನು ಪೂರ್ಣಗೊಳಿಸುತ್ತೀರಿ. ಉದ್ಯಮಿಗಳು ದೊಡ್ಡ ಆರ್ಥಿಕ ಲಾಭಗಳನ್ನು ಪಡೆಯುವ ಸಾಧ್ಯತೆಯಿದೆ. ಇಂದು ನೀವು ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು. ಆಸ್ತಿಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಯುವುದರಿಂದ ಲಾಭ ಪಡೆದುಕೊಳ್ಳುವಿರಿ. ಆರೋಗ್ಯ ಇಂದು ಉತ್ತಮವಾಗಿರುತ್ತದೆ.

ಅದೃಷ್ಟ ಬಣ್ಣ: ಕೇಸರಿ

ಅದೃಷ್ಟ ಸಂಖ್ಯೆ: 9

ಅದೃಷ್ಟ ಸಮಯ: ರಾತ್ರಿ 8:25 - ಮಧ್ಯಾಹ್ನ 12:55

ಮೀನ: 19 ಫೆಬ್ರವರಿ - 20 ಮಾರ್ಚ್

ಮೀನ: 19 ಫೆಬ್ರವರಿ - 20 ಮಾರ್ಚ್

ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಹೊಸ ಸಂಬಂಧವನ್ನು ಪ್ರಾರಂಭಿಸಲು ಇಂದು ಅತ್ಯುತ್ತಮ ದಿನ. ಪ್ರೀತಿಯ ವಿಷಯಗಳಿಗೆ ದಿನ ಅನುಕೂಲಕರವಾಗಿದೆ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಸಂಗಾತಿಯೊಂದಿಗೆ ಮೃದು ಮತ್ತು ಶಾಂತಯುತವಾದ ಪ್ರವೃತ್ತಿಯನ್ನು ತೋರಿ. ಸಣ್ಣ ವಿಷಯಗಳ ಮೇಲೆ ಕೋಪಗೊಳ್ಳುವುದನ್ನು ತಪ್ಪಿಸಿ. ಏಕೆಂದರೆ ಅದು ನಿಮ್ಮ ಸಂಬಂಧಗಳಲ್ಲಿ ಕಹಿ ಉಂಟುಮಾಡಬಹುದು. ಹಣದ ವಿಷಯದಲ್ಲಿ ದಿನವು ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಇಂದು ನೀವು ಅಧಿಕ ಹಣವನ್ನು ಪಡೆದುಕೊಳ್ಳುವಿರಿ. ಆದರೆ ಹಿಂದಿನ ಸಾಲವನ್ನು ತೀರಿಸಲು ಹಣವನ್ನು ವ್ಯಯಿಸಬೇಕಾಗುವುದು. ಕೆಲಸಕ್ಕೆ ಸಂಬಂಧಿಸಿದಂತೆ ದಿನವು ಸಾಮಾನ್ಯವಾಗಿರುತ್ತದೆ.

ಅದೃಷ್ಟ ಬಣ್ಣ: ಕಂದು

ಅದೃಷ್ಟ ಸಂಖ್ಯೆ: 2

ಅದೃಷ್ಟ ಸಮಯ: ಸಂಜೆ 5:30 - ರಾತ್ರಿ 9:50

English summary

Daily Horoscope 25 Oct 2019 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Friday, October 25, 2019, 4:00 [IST]
X